top of page
News Articles
Sathyapatha News Plus


ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ 'ಗಿಲ್ಲಿ' ನಟ: ಕಾವೇರಿ ನಿವಾಸದಲ್ಲಿ ಸನ್ಮಾನ
ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋ ಮುಗಿದ ನಂತರವೂ 'ಗಿಲ್ಲಿ' ನಟನ ಜನಪ್ರಿಯತೆ ಕುಗ್ಗಿಲ್ಲ. ಹೋದ ಕಡೆಯೆಲ್ಲಾ ಅಭಿಮಾನಿಗಳ ಪ್ರೀತಿ ಹಾಗೂ ಸನ್ಮಾನಗಳಿಗೆ ಪಾತ್ರರಾಗುತ್ತಿರುವ ನಟ, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ನಗರದ ಕಾವೇರಿ ನಿವಾಸದಲ್ಲಿ ನಡೆದ ಈ ಭೇಟಿಯಲ್ಲಿ, ಸಿಎಂ ಅವರು ನಟನಿಗೆ ಗಂಧದ ಹಾರ ಹಾಕಿ ಆತ್ಮೀಯವಾಗಿ ಸನ್ಮಾನಿಸಿದರು. ನಟನ ಭುಜದ ಮೇಲೆ ಕೈ ಹಾಕಿ ಬೆನ್ನು ತಟ್ಟಿದ ಸಿದ್ದರಾಮಯ್ಯ, ಅವರ ಮುಂದಿನ ವೃತ್ತಿಜೀವನಕ್ಕೆ ಶುಭ ಹಾರೈಸಿದರು. ಎಂದಿನಂತೆ ಸರಳ ಶರ್ಟ್ ಧರಿಸಿದ್ದ ಗಿಲ್ಲಿ ನಟ ಸಿಎಂ ಅವರೊಂದಿಗೆ ಕೆಲ ಹೊತ್ತು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ನ
4 hours ago1 min read


ಪುತ್ತೂರು ‘ಲವ್-ಸೆಕ್ಸ್-ಧೋಖಾ’ ಪ್ರಕರಣ: ಜನವರಿ 31ರೊಳಗೆ ಮದುವೆಯಾಗದಿದ್ದರೆ ಸಂಧಾನವಿಲ್ಲ - ಪ್ರತಿಭಾ ಕುಳಾಯಿ ಎಚ್ಚರಿಕೆ
ಮಂಗಳೂರು: ಪುತ್ತೂರಿನಲ್ಲಿ ಸಂಚಲನ ಮೂಡಿಸಿರುವ 'ಲವ್-ಸೆಕ್ಸ್-ಧೋಖಾ' ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಧಾನ ಪ್ರಕ್ರಿಯೆಗೆ ಜನವರಿ 31ರ ಗಡುವು ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ತಿಳಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅವಧಿಯೊಳಗೆ ಮದುವೆ ನಡೆಯದಿದ್ದರೆ ಫೆಬ್ರವರಿ 7ರಂದು ಮಗುವಿನ ನಾಮಕರಣ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಿ, ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು. ಆರೋಪಿ ಕೃಷ್ಣ ಜೆ. ರಾವ್ ಕುಟುಂಬದವರು ಮದುವೆಗೆ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ, ಜ. 24ಕ್ಕೆ ನಿಗದ
5 hours ago1 min read


ಪುತ್ತೂರು ಕೋರ್ಟ್ನಲ್ಲಿ ಹೈಡ್ರಾಮ: ನ್ಯಾಯಾಧೀಶರ ಮುಂದೆಯೇ ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನ!
ಪುತ್ತೂರು: ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ವ್ಯಕ್ತಿಯೊಬ್ಬ ನ್ಯಾಯಾಧೀಶರ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆತಂಕಕಾರಿ ಘಟನೆ ನಡೆದಿದೆ. ಕಾವು ನಿವಾಸಿ ರವಿ (35) ಎಂಬಾತನೇ ಈ ಕೃತ್ಯ ಎಸಗಿದವನು. ತಕ್ಷಣವೇ ಆತನನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಘಟನೆಯಿಂದ ಕೋರ್ಟ್ ಸಂಕೀರ್ಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
5 hours ago1 min read


ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಸಂಘರ್ಷ: ವಿಧಾನಸಭೆಯಲ್ಲಿ ಹೈಡ್ರಾಮ!
ನರೇಗಾ ಯೋಜನೆ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿರುವುದನ್ನು ವಿರೋಧಿಸಿ ರಾಜ್ಯ ಸರ್ಕಾರ ಕರೆದಿದ್ದ ವಿಶೇಷ ಅಧಿವೇಶನವು, ರಾಜ್ಯಪಾಲರು ಮತ್ತು ಸರ್ಕಾರದ ನಡುವಿನ ಸಂಘರ್ಷಕ್ಕೆ ವೇದಿಕೆಯಾಯಿತು. ಬುಧವಾರ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಲು ಆಗಮಿಸಿದ ರಾಜ್ಯಪಾಲ ಥಾವರ್ಚಂದ್ರ ಗೆಹ್ಲೋಟ್ ಅವರು, ಸರ್ಕಾರ ಸಿದ್ಧಪಡಿಸಿದ್ದ ಭಾಷಣದ ಪ್ರತಿಯನ್ನು ಓದದೆ ಕೇವಲ ಒಂದೆರಡು ವಾಕ್ಯಗಳಲ್ಲಿ ಶುಭಾಶಯ ತಿಳಿಸಿ ನಿರ್ಗಮಿಸಿದರು. ಸರ್ಕಾರದ ಭಾಷಣದಲ್ಲಿದ್ದ 11 ಅಂಶಗಳನ್ನು ತೆಗೆದುಹಾಕುವಂತೆ ರಾಜ್ಯಪಾಲರು ನೀಡಿದ್ದ ಸೂಚನೆಯನ್ನು ಸರ್ಕಾರ ನಿರಾಕರಿಸಿದ್ದೇ ಈ ಬಿಕ್ಕಟ್ಟಿಗೆ ಕಾರಣ ಎನ್ನಲಾಗಿದೆ. ರಾಜ್ಯಪಾಲರು
7 hours ago1 min read


ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ,ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ/ಡಾ|| ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 2026-27ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರವು ಸ್ಥಾಪಿಸಿರುವ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಡಾ|| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 6 ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲ
10 hours ago1 min read


ಆದಾಯ ತೆರಿಗೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ
ನವದೆಹಲಿ: ಭಾರತೀಯ ಆದಾಯ ತೆರಿಗೆ ಇಲಾಖೆಯು ವಿವಿಧ ನಿರ್ದೇಶಕ ಮಟ್ಟದ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರು ಸೇರಿದಂತೆ ಹೈದರಾಬಾದ್, ನಾಗ್ಪುರ, ಭೋಪಾಲ್ ಮತ್ತು ನವದೆಹಲಿಯ ವಿವಿಧ ಕೇಂದ್ರಗಳಲ್ಲಿ ಒಟ್ಟು 11 ಹುದ್ದೆಗಳು ಲಭ್ಯವಿವೆ. ಕೇಂದ್ರ ಸರ್ಕಾರಿ ಸೇವೆಯಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಆಯ್ಕೆಯಾದವರಿಗೆ ಮಾಸಿಕ ₹15,600 ರಿಂದ ₹39,100 ವರೆಗೆ ವೇತನ ದೊರೆಯಲಿದೆ. ಈ ನೇಮಕಾತಿಯಡಿ ನಿರ್ದೇಶಕರು (ವ್ಯವಸ್ಥೆಗಳು), ಹೆಚ್ಚುವರಿ ನಿರ್ದೇಶಕರು ಹಾಗೂ ಉಪ ನಿರ್ದೇಶಕರು ಎಂಬ ಮೂರು ವರ್ಗದ ಹುದ್ದೆ
10 hours ago1 min read


ಸುಳ್ಳು ವಿಡಿಯೋ ಪ್ರಕರಣ : ವ್ಯಕ್ತಿಯ ಆತ್ಮಹತ್ಯೆಗೆ ಕಾರಣವಾದ ಶಿಂಜಿತಾ ಮುಸ್ತಫಾ ಬಂಧನ
ತಿರುವನಂತಪುರಂ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಪಡೆಯಲು ಬಸ್ಸಿನಲ್ಲಿ ವ್ಯಕ್ತಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೊಂಡು, ಅವರ ಸಾವಿಗೆ ಕಾರಣವಾದ ಆರೋಪದಡಿ ಶಿಂಜಿತಾ ಮುಸ್ತಫಾ ಎಂಬಾಕೆಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ದೀಪಕ್ ಎಂಬುವವರು ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಶಿಂಜಿತಾ ವಿಡಿಯೋ ಮಾಡಿ ವೈರಲ್ ಮಾಡಿದ್ದಳು. ಇದರಿಂದ ಮನನೊಂದ ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದರು. ತನಿಖೆಯ ವೇಳೆ ಬಸ್ ಚಾಲಕ ಮತ್ತು ಕಂಡಕ್ಟರ್ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಸಾಕ್ಷ್ಯ ನೀಡಿದ್ದಾರೆ. ದೀಪಕ್
11 hours ago1 min read


ಇಂದಿನಿಂದ ವಿಧಾನಸಭೆ ವಿಶೇಷ ಅಧಿವೇಶನ
ಕೇಂದ್ರ ಸರ್ಕಾರ ನರೇಗಾ ಯೋಜನೆಯ ಹೆಸರನ್ನು ಬದಲಾಯಿಸಿ ವಿಬಿ ಜಿ ರಾಮ್ ಜಿ ಎಂದು ಮರು ನಾಮಕರಣ ಮಾಡಿರುವುದರ ವಿರುದ್ಧ ನಿರ್ಣಯ ಕೈಗೊಳ್ಳಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ವಿಶೇಷ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಇದೀಗ ರಾಜ್ಯಪಾಲರು ನಿರಾಕರಿಸಿದ್ದಾರೆ. ಹೀಗಾಗಿ ಅಧಿವೇಶನಕ್ಕೆ ಗೈರಾಗುತ್ತಾರೆಯೇ ಎಂಬ ಪ್ರಶ್ನೆಯೂ ಮೂಡಿದೆ. ಒಂದು ವೇಳೆ ಗೈರಾದರೆ ಸುಪ್ರೀಂ ಕೋರ್ಟ್ ಮೊರೆ ಹೋಗಲು ಸರ್ಕಾರ ಸಿದ್ಧತೆ ಮಾಡಿದೆ.ಅಧಿವೇಶನಕ್ಕೆ ಹಾಜರಾಗಿಯೇ ಸರ್ಕಾರಕ್ಕೆ ಚೆಕ್ ಮೇಟ್ ಇಡ್ತಾರಾ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಎಂಬ ಪ್ರಶ್ನೆಮೂಡಿದೆ.
13 hours ago1 min read


ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲು
ಪುತ್ತೂರು: ಖಾಸಗಿ ಕಾಲೇಜೊಂದರಲ್ಲಿ ಕೋಮು ಭಾವನೆ ಕೆರಳಿಸುವ ಹಾಗೂ ಹಿಂಸೆಗೆ ಪ್ರಚೋದಿಸುವ ಭಾಷಣ ಮಾಡಿದ ಆರೋಪದಡಿ ಡಾ. ಕಲ್ಲಡ್ಕ ಪ್ರಭಾಕರ್ ಭಟ್, ಕಾರ್ಯಕ್ರಮ ಆಯೋಜಕರು ಮತ್ತು ಯುಟ್ಯೂಬ್ ಚಾನೆಲ್ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮಚಂದ್ರ ಕೆ. ನೀಡಿದ ದೂರಿನನ್ವಯ ಪೊಲೀಸರು ಬಿಎನ್ಎಸ್ ವಿವಿಧ ಸೆಕ್ಷನ್ಗಳಡಿ ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
13 hours ago1 min read


ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ
ಮೈಸೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ವೈದ್ಯಕೀಯ ಮತ್ತು ನರ್ಸಿಂಗ್ ಅಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಆಸಕ್ತರು ಜನವರಿ 27ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಭರ್ತಿ ಮಾಡಿ. ಮೈಸೂರಿನಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸುವರ್ಣಾವಕಾಶ. ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10, 12ನೇ ತರಗತಿ, ಡಿಪ್ಲೊಮಾ, GNM, ANM, MPW, DMLT, MLT, B.Sc, BDS, ಪದವಿ,
1 day ago1 min read


ಇಂದಿನ ಮಾರುಕಟ್ಟೆಯ ಪ್ರಮುಖ ಮುಖ್ಯಾಂಶಗಳು
1. ಮಾರುಕಟ್ಟೆ ಸೂಚ್ಯಂಕಗಳ ಕುಸಿತ SENSEX: ಸುಮಾರು 550 ಅಂಕಗಳಿಗಿಂತ ಹೆಚ್ಚು ಕುಸಿದು 81,630 ಮಟ್ಟಕ್ಕೆ ತಲುಪಿದೆ. NIFTY 50: ಸುಮಾರು 160 ಅಂಕಗಳಿಗಿಂತ ಹೆಚ್ಚು ಇಳಿಕೆಯಾಗಿ 25,070 ರ ಹತ್ತಿರ ವಹಿವಾಟು ನಡೆಸುತ್ತಿದೆ. ಇದು ನಿರ್ಣಾಯಕ 25,000 ಮಟ್ಟಕ್ಕೆ ಹತ್ತಿರದಲ್ಲಿದೆ. 2. ಕುಸಿತಕ್ಕೆ ಪ್ರಮುಖ ಕಾರಣಗಳು ಟ್ರಂಪ್ ಅವರ ಸುಂಕದ ಭೀತಿ (Tariff Threats): ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆಲವು ದೇಶಗಳ ಮೇಲೆ 10% ರಿಂದ 25% ರವರೆಗೆ ಸುಂಕ ವಿಧಿಸುವ ಎಚ್ಚರಿಕೆ ನೀಡಿರುವುದು ಜಾಗತಿಕವಾಗಿ ಮಾರುಕಟ್ಟೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ. ವಿದೇಶಿ ಹೂಡಿಕೆದಾರರ ಹೊ
1 day ago1 min read


ಮೈಸೂರು: ಫೈನಾನ್ಸ್ ದಂಧೆ ವಿರೋಧಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ
ಮೈಸೂರು: ಫೈನಾನ್ಸ್ ಹಾವಳಿ ವಿರೋಧಿಸಿದ ಹಿನ್ನೆಲೆಯಲ್ಲಿ ವೆಲ್ಡಿಂಗ್ ಶಾಪ್ ಮಾಲೀಕ ಶಹಬಾಜ್ (26) ಎಂಬ ಯುವಕನನ್ನು ಲಾಂಗು-ಮಚ್ಚುಗಳಿಂದ ಅಟ್ಟಾಡಿಸಿ ಕೊಲೆ ಮಾಡಿರುವ ಭೀಕರ ಘಟನೆ ನಗರದ ಉದಯಗಿರಿ ಬೀಡಿ ಕಾಲೋನಿಯಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಜುಬೇರ್ ಹಾಗೂ ಆತನ ಸ್ನೇಹಿತರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಗಳು ಏರಿಯಾದಲ್ಲಿ ನಡೆಸುತ್ತಿದ್ದ ಮೀಟರ್ ಬಡ್ಡಿ ದಂಧೆ ಹಾಗೂ ಅಕ್ರಮ ಆಟೋ ಪಾರ್ಕಿಂಗ್ ವಸೂಲಿಯನ್ನು ಶಹಬಾಜ್ ವಿರೋಧಿಸಿದ್ದರು. ಅಲ್ಲದೆ, ಈ ಬಗ್ಗೆ ಪೊಲೀಸರಿಗೂ ದೂರು ನೀಡಿದ್ದರು. ಇದೇ ಹಳೆ ವೈಷಮ್ಯದಿಂದಾಗಿ, ರಾತ್ರಿ ಅಂಗಡಿ ಮುಂದೆ ಕುಳಿತಿದ್ದ ಶಹಬಾಜ್ ಮೇಲೆ ಏಕಾಏಕ
1 day ago1 min read


ಚಿನ್ನ, ಬೆಳ್ಳಿ ದರ ಸಾರ್ವಕಾಲಿಕ ದಾಖಲೆ: ಕೆಜಿ ಬೆಳ್ಳಿಗೆ 3.20 ಲಕ್ಷ ರೂ.!
ಬೆಂಗಳೂರು: ಜಾಗತಿಕ ಮಾರುಕಟ್ಟೆಯಲ್ಲಿನ ಏರಿಳಿತದ ಪರಿಣಾಮವಾಗಿ ಚಿನ್ನ ಮತ್ತು ಬೆಳ್ಳಿ ದರಗಳು ಗಗನಕ್ಕೇರಿವೆ. ಮಂಗಳವಾರ ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ ಕಂಡುಬಂದಿದ್ದು, ಬೆಂಗಳೂರಿನಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ 3.20 ಲಕ್ಷ ರೂಪಾಯಿ ತಲುಪಿದೆ. ದೆಹಲಿಯಲ್ಲಿ ಒಂದೇ ದಿನ 20,400 ರೂ. ಏರಿಕೆ ಕಾಣುವ ಮೂಲಕ ಬೆಲೆ 3.23 ಲಕ್ಷ ರೂ.ಗೆ ಏರಿದೆ. ಚಿನ್ನದ ಬೆಲೆಯೂ ಹಿಂದೆ ಬಿದ್ದಿಲ್ಲ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 1,49,780 ರೂ. ತಲುಪಿದ್ದರೆ, ದೆಹಲಿಯಲ್ಲಿ ಇದು 1.53 ಲಕ್ಷ ರೂ. ದಾಟಿದೆ. ಅಮೆರಿಕ-ಯುರೋಪ್ ನಡುವಿನ ತೆರಿಗೆ ಸಮರ ಹಾಗೂ ಇರಾನ್ ಮೇಲಿನ ಯುದ್ಧದ ಭೀತಿಯ
1 day ago1 min read


ಸಂತ ಅಲೋಶಿಯಸ್ ಕಾಲೇಜಿನ ಮಾಜಿ ರೆಕ್ಟರ್ ಫಾ. ಲಿಯೋ ಡಿಸೋಜ ನಿಧನ
ಮಂಗಳೂರು: ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ಮಾಜಿ ರೆಕ್ಟರ್ ಹಾಗೂ ಪ್ರಾಂಶುಪಾಲ ಫಾ. ಲಿಯೋ ಡಿಸೋಜ (93) ಮಂಗಳವಾರ ನಿಧನರಾದರು. ಮಂಗಳೂರಿನಲ್ಲಿ ಜನಿಸಿ, ಅಲೋಶಿಯಸ್ ಸಂಸ್ಥೆಯಲ್ಲೇ ಶಿಕ್ಷಣ ಪಡೆದಿದ್ದ ಇವರು, ದಶಕಗಳ ಕಾಲ ಅದೇ ಸಂಸ್ಥೆಯ ಬೆಳವಣಿಗೆಗೆ ಶ್ರಮಿಸಿದ್ದರು. ಪ್ರಾಂಶುಪಾಲರಾಗಿ ಮತ್ತು ರೆಕ್ಟರ್ ಆಗಿ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಅವರು, ಹಿರಿಯ ಶಿಕ್ಷಣ ತಜ್ಞರಾಗಿ ಗುರುತಿಸಿಕೊಂಡಿದ್ದರು. ಅವರ ನಿಧನಕ್ಕೆ ಶಿಕ್ಷಣ ಪ್ರೇಮಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.
2 days ago1 min read


ಪುತ್ತೂರು: 53 ಲಕ್ಷ ಮೌಲ್ಯದ 106 ಕೆಜಿ ಗಾಂಜಾ ಜಪ್ತಿ; ಇಬ್ಬರು ಆರೋಪಿಗಳ ಬಂಧನ
ಪುತ್ತೂರು: ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣದ ಗುರಿ ಹೊಂದಿರುವ ಪುತ್ತೂರು ಪೊಲೀಸರು ಭಾನುವಾರ ಸಂಜೆ ಭರ್ಜರಿ ಕಾರ್ಯಾಚರಣೆ ನಡೆಸಿ, 53 ಲಕ್ಷ ರೂಪಾಯಿ ಮೌಲ್ಯದ 106 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಪಡುವನ್ನೂರು ಗ್ರಾಮದ ಸಜಂಕಾಡಿ ಎಂಬಲ್ಲಿ ಸಿನಿಮೀಯ ಮಾದರಿಯಲ್ಲಿ ನಡೆದ ಈ ದಾಳಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಬೆಳ್ತಂಗಡಿಯ ರಫೀಕ್ (37) ಮತ್ತು ಅಬ್ದುಲ್ ಸಾದಿಕ್ (37) ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸ್ಐ ಗುಣಪಾಲ ಜೆ. ನೇತೃತ್ವದ ತಂಡ, ಕಾರು ಮತ್ತು ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ 73 ಕಟ್ಟುಗಳ ಗಾಂಜಾವನ್ನು ಜ
2 days ago1 min read


ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ
ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) 12ನೇ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಜೆ.ಪಿ. ನಡ್ಡಾ ಅವರ ಅಧಿಕಾರ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ನಡೆದ ಸಾಂಸ್ಥಿಕ ಚುನಾವಣೆಯಲ್ಲಿ 45 ವರ್ಷದ ನಬಿನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿ ಕೆ. ಲಕ್ಷ್ಮಣ್ ಅವರು ನಬಿನ್ ಅವರ ಆಯ್ಕೆಯನ್ನು ಘೋಷಿಸಿ ಪ್ರಮಾಣಪತ್ರ ಹಸ್ತಾಂತರಿಸಿದರು. ಈ ಹಿಂದೆ ಪಕ್ಷದ ಕಾರ್ಯಾಧ್ಯಕ್ಷರಾಗಿ ಜವಾಬ್ದಾರಿ ನಿಭಾಯಿಸಿದ್ದ ನಬಿನ್, ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಮುನ್ನ ಬಿಹಾರ ಸರ್ಕಾರದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 1980ರಲ
2 days ago1 min read


ಮತ್ತೆ ಗಗನಕ್ಕೆ ಏರಿದ ಚಿನ್ನದ ಬೆಲೆ
ಜನವರಿ 13, 2026ರ ಮಂಗಳವಾರದಂದು ಕರ್ನಾಟಕದಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಏರಿಕೆ ಕಂಡಿದೆ. ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರಗಳು ಈ ಕೆಳಗಿನಂತಿವೆ: 22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): 1 ಗ್ರಾಂ: ₹13,065 10 ಗ್ರಾಂ: ₹1,30,650 (ನಿನ್ನೆಗಿಂತ ₹350 ಏರಿಕೆ) 24 ಕ್ಯಾರೆಟ್ ಚಿನ್ನ (ಅಪರಂಜಿ ಚಿನ್ನ): 1 ಗ್ರಾಂ: ₹14,253 10 ಗ್ರಾಂ: ₹1,42,530 (ನಿನ್ನೆಗಿಂತ ₹380 ಏರಿಕೆ) 18 ಕ್ಯಾರೆಟ್ ಚಿನ್ನ: 1 ಗ್ರಾಂ: ₹10,690 ಬೆಳ್ಳಿ ದರ: ಬೆಳ್ಳಿಯ ಬೆಲೆಯೂ ಸಹ ಇಂದು ಹೊಸ ದಾಖಲೆ ಬರೆದಿದ್ದು, ಪ್ರತಿ ಕೆ.ಜಿ ಬೆಳ್ಳಿಯ ಬೆಲೆ ₹2,75,000 ತಲುಪಿದೆ. ನಿನ್ನೆಗಿಂತ ಬೆಳ್ಳಿ ಬೆಲೆಯಲ್ಲಿ ಸ
2 days ago1 min read


ಶಾಲಾ ಮಕ್ಕಳಿಗೆ ಶೂ ಬದಲು ಪಾದರಕ್ಷೆ? ಶಿಕ್ಷಣ ಇಲಾಖೆಯಿಂದ ಮಹತ್ವದ ಬದಲಾವಣೆ ಸಾಧ್ಯತೆ
ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನೀಡಲಾಗುವ ಶೂ ಹಾಗೂ ಸಾಕ್ಸ್ ವಿತರಣಾ ಯೋಜನೆಯಲ್ಲಿ ಈ ಬಾರಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆಯಿದೆ. ಹವಾಮಾನ ವೈಪರೀತ್ಯ ಹಾಗೂ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕೆಲವು ಜಿಲ್ಲೆಗಳಲ್ಲಿ ಶೂಗಳ ಬದಲಿಗೆ ಚಪ್ಪಲಿ ಅಥವಾ ಸ್ಯಾಂಡಲ್ಗಳನ್ನು ನೀಡಲು ಶಿಕ್ಷಣ ಇಲಾಖೆ ಗಂಭೀರ ಚಿಂತನೆ ನಡೆಸಿದೆ. ಮಳೆಗಾಲದಲ್ಲಿ ಶೂ ಮತ್ತು ಸಾಕ್ಸ್ಗಳು ಒದ್ದೆಯಾಗಿ ಒಣಗಲು ವಿಳಂಬವಾಗುವುದರಿಂದ ಕೆಟ್ಟ ವಾಸನೆ ಹಾಗೂ ಚರ್ಮದ ಸೋಂಕುಗಳು ಕಾಣಿಸಿಕೊಳ್ಳುತ್ತಿವೆ. ಅಲ್ಲದೆ, ಬೇಸಿಗೆಯಲ್ಲಿ ದೀರ್ಘಕಾಲ ಶೂ ಧರಿಸುವುದರಿಂದ ಪಾದಗಳಲ್ಲಿ ಬೆವರು
2 days ago1 min read


ವಿಶ್ವದಾಖಲೆ: ಬಿಹಾರದಲ್ಲಿ ಜಗತ್ತಿನ ಅತಿದೊಡ್ಡ ಏಕಶಿಲಾ ಶಿವಲಿಂಗ ಪ್ರತಿಷ್ಠಾಪನೆ!
ಮೋತಿಹರಿ: ಭಾರತದ ಆಧ್ಯಾತ್ಮಿಕ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆಯಲಾಗಿದ್ದು, ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಕೈಟ್ವಾಲಿಯಾ ಗ್ರಾಮದಲ್ಲಿ ವಿಶ್ವದ ಅತಿದೊಡ್ಡ ಏಕಶಿಲಾ ಶಿವಲಿಂಗವನ್ನು ಅಧಿಕೃತವಾಗಿ ಪ್ರತಿಷ್ಠಾಪಿಸಲಾಗಿದೆ. ನಿರ್ಮಾಣ ಹಂತದಲ್ಲಿರುವ ಭವ್ಯ 'ವಿರಾಟ್ ರಾಮಾಯಣ ದೇವಾಲಯ' ಸಂಕೀರ್ಣದಲ್ಲಿ ಈ ಐತಿಹಾಸಿಕ ಘಟನೆ ನಡೆದಿದೆ. ವಾರಣಾಸಿ ಮತ್ತು ಅಯೋಧ್ಯೆಯ ವಿದ್ವಾಂಸರು ವೇದಘೋಷಗಳೊಂದಿಗೆ ಪ್ರಾಣ ಪ್ರತಿಷ್ಠೆ ನೆರವೇರಿಸಿದರು. ಈ ಸಂಭ್ರಮದ ವೇಳೆ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಮಾಡಲಾಯಿತು. ಕೇವಲ ಗ್ರಾನೈಟ್ ಶಿಲೆಯಿಂದ ಕೆತ್ತಲ್ಪಟ್ಟಿರುವ ಈ ಶಿವಲಿಂಗವು 33 ಅಡಿ ಎತ್ತರ ಹೊಂದಿದ್ದು, ಸುಮಾ
2 days ago1 min read


ಬೆಳ್ಳಾರೆ: ಬೈಕ್ ಮೋರಿಗೆ ಬಿದ್ದು ಮಗ ಸಾವು, ತಂದೆಗೆ ಗಂಭೀರ ಗಾಯ
ಬೆಳ್ಳಾರೆ: ಇಲ್ಲಿನ ಸಮೀಪದ ಕಲ್ಲೋಣಿ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ಮೋರಿಯಿಂದ ಕೆಳಗೆ ಬಿದ್ದ ಭೀಕರ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಕಡಬದ ಮರ್ದಾಳ ನಿವಾಸಿ ಎಂದು ಗುರುತಿಸಲಾಗಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಶಬರಿಮಲೆ ಪ್ರಸಾದವನ್ನು ಸುಳ್ಯಕ್ಕೆ ತಲುಪಿಸಲು ತಂದೆ-ಮಗ ಬೈಕಿನಲ್ಲಿ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮಗ ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಳ್ಳಾರೆ ಸಮೀಪದ ಕಲ್ಲೋಣಿಯಲ್ಲಿ ನಡೆದಿದೆ. ಮರ್ದಾಳ ಸಮೀಪದ ಕೊಲ್ಯ ನಿವಾಸಿ ನಿಶಾಂತ್ ಮೃತಪಟ್ಟ ದುರ್ದೈವಿ ಯುವಕ. ಇವರ ತಂದೆ ಮೋನಪ್ಪ ಅವರು ಅಪಘಾತದಲ್ಲಿ
2 days ago1 min read
Archive
bottom of page

