top of page
News Articles
Sathyapatha News Plus


ದೇವರಕೊಲ್ಲಿ ಬಳಿ ಭೀಕರ ಅಪಘಾತ: ಟಿಟಿ ಮೇಲೆ ಮಗುಚಿದ ಲಾರಿ; ಹಲವರಿಗೆ ಗಂಭೀರ ಗಾಯ
ದೇವರಕೊಲ್ಲಿ: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಅಬ್ಬಿಕೊಲ್ಲಿ ಬಳಿ ಇಂದು ಸಂಜೆ ಭೀಕರ ಅಪಘಾತ ಸಂಭವಿಸಿದೆ. ಟೆಂಪೋ ಟ್ರಾವೆಲ್ಲರ್ (ಟಿಟಿ) ವಾಹನದ ಮೇಲೆ ಲಾರಿಯೊಂದು ಮಗುಚಿ ಬಿದ್ದಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅಪಘಾತದ ಬಳಿಕ ಟಿಟಿ ವಾಹನದೊಳಗೆ ಕೆಲವರು ಸಿಲುಕಿಕೊಂಡಿದ್ದರು. ಕ್ರೇನ್ ಮೂಲಕ ಲಾರಿಯನ್ನು ಮೇಲಕ್ಕೆತ್ತಿ ರಕ್ಷಣಾ ಕಾರ್ಯ ನಡೆಸಲಾಗಿದ್ದು, ಗಾಯಾಳುಗಳನ್ನು ಮೂರು ಅಂಬ್ಯುಲೆನ್ಸ್ಗಳ ಮೂಲಕ ಕೆವಿಜಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನೆಯಲ್ಲಿ ಸಾವು ಸಂಭವಿಸಿರುವ ಶಂಕೆಯೂ ವ್ಯಕ್ತವಾಗಿದ್ದು, ಈ ಕುರಿತು ಅಧಿಕೃತ ಮಾಹಿತಿ ಇನ್ನಷ್ಟೇ ಲ
Aug 261 min read


ಸೌಜನ್ಯಾ ಮನೆಗೆ ಆರ್ಎಸ್ಎಸ್ ಹಿರಿಯ ಮುಖಂಡ ಪ್ರಭಾಕರ ಭಟ್ ಕಲ್ಲಡ್ಕ ಭೇಟಿ
ಬೆಳ್ತಂಗಡಿ: 13 ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಹತ್ಯೆಯಾಗಿದ್ದ ಉಜಿರೆ ಎಸ್ಡಿಎಂ ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅವರ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಕ್ಕೆ ಆರ್ಎಸ್ಎಸ್ನ ಹಿರಿಯ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಆಗಸ್ಟ್ 26ರಂದು ಭೇಟಿ ನೀಡಿದರು. ಈ ವೇಳೆ ಸೌಜನ್ಯ ಅವರ ತಾಯಿ ಕುಸುಮಾವತಿ ಚಂದಪ್ಪ ಗೌಡ ಅವರೊಂದಿಗೆ ಪ್ರಭಾಕರ ಭಟ್ ಕಲ್ಲಡ್ಕ ಮಾತುಕತೆ ನಡೆಸಿದರು. ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ವಿವಿಧ ವಿಚಾರಗಳ ಕುರಿತು ಮಾತುಕತೆ ನಡೆದಿರುವುದಾಗಿ ತಿಳಿದುಬಂದಿದೆ. ಭೇಟಿಯ ಸಂದರ್ಭದಲ್ಲಿ ಉದ್ಯಮಿ ಸದಾನಂದ ನಾವರ, ಪುರಂದರ, ಮೋಹನ್ ಶೆಟ್ಟಿ ಉಜಿರೆ ಸೇರಿದಂತೆ ಮತ್ತಿತ
Aug 261 min read


ಪುತ್ತೂರು ದರ್ಬೆ ಬೈಪಾಸ್ನಲ್ಲಿ ಬ್ರೇಕ್ ವೈಫಲ್ಯ; ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ಗೆ ಡಿಕ್ಕಿ
ಪುತ್ತೂರು: ದರ್ಬೆ ಬೈಪಾಸ್ನ ಅಶ್ವಿನಿ ಸರ್ಕಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಮನೆಯ ಕಾಂಪೌಂಡ್ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಬಸ್ಸಿನಲ್ಲಿ ಬ್ರೇಕ್ ವೈಫಲ್ಯ ಉಂಟಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿಯಲ್ಲಿದ್ದ ಮನೆಯ ಕಾಂಪೌಂಡ್ಗೆ ನುಗ್ಗಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾಂಪೌಂಡ್ಗೆ ಹಾನಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
Aug 261 min read


ಕಡಬ: ಅಂಬೇಡ್ಕರ್ ಭವನದಲ್ಲಿ ಅಕ್ರಮ ಮನಿ ಸರ್ಕ್ಯುಲೇಷನ್ ಜಾಲ ಪತ್ತೆ, 8 ಜನರ ವಿರುದ್ಧ ಎಫ್ಐಆರ್
ಕಡಬ ಪೇಟೆಯ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರಿಗೆ ಆಮಿಷವೊಡ್ಡಿ ನಿಷೇಧಿತ ಮನಿ ಸರ್ಕ್ಯುಲೇಷನ್ ಯೋಜನೆ ನಡೆಸುತ್ತಿದ್ದ ಜಾಲವನ್ನು ಕಡಬ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಸಂಸ್ಥೆಯ ಮಾಲೀಕರು ಹಾಗೂ ಸ್ಥಳೀಯ ಏಜೆಂಟರು ಸೇರಿದಂತೆ ಒಟ್ಟು 8 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ದಿನಾಂಕ 23.08.2026 ರಂದು ಸಿಕ್ಕ ಗುಪ್ತಚರ ಮಾಹಿತಿ ಆಧರಿಸಿ ಕಡಬ ಪೊಲೀಸರು ದಾಳಿ ನಡೆಸಿದಾಗ, ಹಾವೇರಿ ಮೂಲದ 'ಕಿಂಗ್ಸ್ ಬಜಾರ್' (KINGS Bazaar) ಹೆಸರಿನಲ್ಲಿ ಸಾರ್ವಜನಿಕರನ್ನು ಸೇರಿಸಿ ಸಭೆ ನಡೆಸುತ್ತಿರುವುದು ಕಂಡುಬಂದಿದೆ. "ಕಂಪನಿಗೆ ಹಣ ತೊಡಗಿಸಿದರೆ ಶೀಘ್ರವಾಗಿ ಭಾರಿ ಲಾಭ ಗಳಿಸಬಹುದು, ರಿಯಾಯಿತಿ ದರದಲ
Aug 261 min read


ಹಬ್ಬದ ಸಂಭ್ರಮಕ್ಕೆ ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ
ಮಂಗಳೂರು: ಹಬ್ಬದ ಕಾರ್ಯಕ್ರಮಗಳು ಹಾಗೂ ಮೆರವಣಿಗೆಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಪೊಲೀಸರು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಕಾರ್ಯಕ್ರಮ ಆಯೋಜಕರು ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು. ಖಾಸಗಿ ಜಾಗದಲ್ಲಿ ಕಾರ್ಯಕ್ರಮ ನಡೆಸುವುದಾದರೆ ಜಾಗದ ಮಾಲೀಕರಿಂದ ಎನ್ಒಸಿ ಪಡೆಯುವುದು ಕಡ್ಡಾಯವಾಗಿದೆ. ಡಿಜೆ ಹಾಗೂ ಅತಿಯಾದ ಶಬ್ದದ ಸ್ಪೀಕರ್ಗಳ ಬಳಕೆಗೆ ಸಂಪೂರ್ಣ ನಿಷೇಧವಿದ್ದು, ಅನುಮತಿಯೊಂದಿಗೆ ಬಳಸುವ ಧ್ವನಿವರ್ಧಕಗಳನ್ನು ರಾತ್ರಿ 10 ಗಂಟೆಯೊಳಗೆ ಬಂದ್ ಮಾಡಬೇಕು. ಮೆರವಣಿಗೆಗಳನ್ನು ರಾತ್ರಿ 11.30ರೊಳಗೆ ಮುಕ್ತಾಯಗೊಳಿಸಬೇಕು. ನಿಗದಿತ ಮಾರ್ಗ ಅಥವಾ ಸ್ಥಳವನ್ನು ಬದಲಾಯಿಸಿ
Aug 251 min read


ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮೇಘಸ್ಫೋಟದಂತಹ ಮಳೆ ಉಕ್ಕಿ ಹರಿದ ದರ್ಪಣ ತೀರ್ಥ ನದಿ ಹಲವು ಕಡೆಗಳಿಗೆ ನುಗ್ಗಿದ ನೀರು
ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ ನದಿ, ಹಲವು ಕಡೆಗಳಿಗೆ ನುಗ್ಗಿದ ನೀರು ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಪರಿಸರದಲ್ಲಿ ಇಂದು ಮೇಘಸ್ಫೋಟದಂತಹ ಭಾರೀ ಮಳೆಯಾಗಿದ್ದು, ನದಿಗಳು ಉಕ್ಕಿ ಹರಿದಿವೆ. ನಿರಂತರ ಮಳೆಯಿಂದಾಗಿ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಬಳಿಯ ದರ್ಪಣ ತೀರ್ಥ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿ ಪ್ರವಾಹ ಸದೃಶ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರೀ ಮಳೆಯಿಂದಾಗಿ ದೇವಸ್ಥಾನದ ಸುತ್ತಮುತ್ತಲ ಪ್ರದೇಶ ಸೇರಿದಂತೆ ವಿವಿಧೆಡೆ ಮಳೆ ನೀರು ನುಗ್ಗಿದೆ. ನೀರಿನ ಪ್ರವಾಹದಿಂದ ದೇವರಗದ್ದೆ, ಕುಲ್ಕುಂದ ಸೇರಿದಂತೆ ಹಲವು ಪ್ರದೇಶಗಳಲ್ಲಿ ರಸ್ತೆಗಳು
Aug 251 min read


ಬಿಜೆಪಿಗೆ ಆಘಾತ: ಕಾಂಗ್ರೆಸ್ ಸೇರಿದ ನೆರಿಯಾ ಮಾಜಿ ಗ್ರಾ.ಪಂ. ಸದಸ್ಯೆ ಮರಿಯಮ್ಮ
ಬೆಳ್ತಂಗಡಿ: ತಾಲೂಕಿನ ನೆರಿಯಾ ಗ್ರಾಮ ಪಂಚಾಯತ್ನ ಮಾಜಿ ಬಿಜೆಪಿ ಬೆಂಬಲಿತ ಸದಸ್ಯೆಯಾಗಿದ್ದ ಮರಿಯಮ್ಮ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಪಕ್ಷದ ತತ್ವ, ಸಿದ್ಧಾಂತ ಹಾಗೂ ಜನಪರ ಕಾರ್ಯವೈಖರಿಯನ್ನು ಮೆಚ್ಚಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಮರಿಯಮ್ಮ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಿತ್ ಶಿವರಾಂ, "ಕಾಂಗ್ರೆಸ್ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡುವ ಪಕ್ಷವಾಗಿದೆ. ಮರಿಯಮ್ಮ ಅವರ ಸೇರ್ಪಡೆಯಿಂದ ನೆರಿಯಾ ಭಾಗದಲ್ಲಿ ಪಕ್ಷದ ಸಂಘಟನೆ ಇನ
Aug 251 min read


ಸುಳ್ಯದಲ್ಲಿ ಧರ್ಮಸ್ಥಳಕ್ಕೆ ಸೇರಿದ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಆರೋಪ; ವಿಹೆಚ್ಪಿ–ಬಜರಂಗದಳ ಸ್ಥಳ ಪರಿಶೀಲನೆ, ತೆರವು ಕಾರ್ಯಾಚರಣೆ
ಸುಳ್ಯ: ಆಲೆಟ್ಟಿ ಕ್ರಾಸ್ನ ಗುರುಂಪು ಬಳಿ ಧರ್ಮಸ್ಥಳಕ್ಕೆ ಸಂಬಂಧಿಸಿದ ಜಾಗದಲ್ಲಿ ಅನುಮತಿ ಇಲ್ಲದೆ ಕಟ್ಟಡ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದೀಗ ಕಟ್ಟಡ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಗುರುಂಪು ಬಳಿಯ ಸರ್ವೇ ನಂಬರ್ 263-6ರ ಜಾಗದಲ್ಲಿ ಸ್ಥಳೀಯ ಅನ್ಯಮತೀಯ ವ್ಯಕ್ತಿಯೊಬ್ಬರು ಕೆಲವೇ ದಿನಗಳಲ್ಲಿ ಕಟ್ಟಡ ನಿರ್ಮಿಸಿ, ಗೋಡೆ ಹಾಗೂ ಕಬ್ಬಿಣದ ಛಾವಣಿ ಅಳವಡಿಸಿ ಬಾಡಿಗೆಗೆ ನೀಡಲು ಸಿದ್ಧತೆ ನಡೆಸಿದ್ದರು ಎನ್ನಲಾಗಿದೆ. ಈ ಕುರಿತು ಧರ್ಮಸ್ಥಳದ ಆಡಳಿತಕ್ಕೆ ಮಾಹಿತಿ ತಲುಪಿದ ಬಳಿಕ, ಕೆಲವು ದಿನಗಳ ಹಿಂದೆ ಧರ್ಮಸ್ಥಳದ ವ್ಯವಸ್ಥಾಪಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ
Aug 251 min read


ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಗಸ್ಟ್ 23ರ ರಾತ್ರಿ ಕಾರ್ಯಕ್ರಮವೊಂದರಿಂದ ಬಾಲಕಿಯನ್ನು ಮನೆಗೆ ತಲುಪಿಸುವ ನೆಪದಲ್ಲಿ ಆರೋಪಿ ಅದ್ದು ಪಡೀಲ್ ತನ್ನ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುವಾಗ ದಾರಿಮಧ್ಯೆ ಈ ಕೃತ್ಯ ಎಸಗಿದ್ದಾನೆ ಎಂದು ದೂರಲ್ಲಿ ತಿಳಿಸಲಾಗಿದೆ. ಬಾಲಕಿಯ ತಾಯಿ ನೀಡಿದ ದೂರಿನನ್ವಯ ಪೊಲೀಸರು ಬಿಎನ್ಎಸ್ ಕಲಂ 75 ಹಾಗೂ ಪೋಕ್ಸೋ ಕಾಯ್ದೆಯಡಿ (ಅ.ಕ್ರ. 46/2026) ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.
Aug 241 min read


MRPLನಲ್ಲಿ 26 ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳ ನೇಮಕಾತಿ: ಆಕರ್ಷಕ ವೇತನ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರದ ಅಧೀನದಲ್ಲಿರುವ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಸಂಸ್ಥೆಯು ಮ್ಯಾನೇಜ್ಮೆಂಟ್ ಕೇಡರ್ನ (ಇ-2 ಗ್ರೇಡ್) ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ (Advt. No. 94/2026) ಹೊರಡಿಸಿದೆ. ಕೆಮಿಕಲ್, ಮೆಕ್ಯಾನಿಕಲ್ ಹಾಗೂ ಎಲೆಕ್ಟ್ರಿಕಲ್ ವಿಭಾಗಗಳಲ್ಲಿ ಒಟ್ಟು 26 ಹುದ್ದೆಗಳು ಲಭ್ಯವಿದ್ದು, ಗೇಟ್-2026 (GATE 2026) ಸ್ಕೋರ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಖಾಲಿ ಹುದ್ದೆಗಳಲ್ಲಿ ಭಾಗ 'ಎ' ಅಡಿಯಲ್ಲಿ ಮೆಕ್ಯಾನಿಕಲ್ (08) ಮತ್ತು ಎಲೆಕ್ಟ್ರಿಕಲ್ (03) ಹುದ್ದೆಗಳನ್ನು ಎಸ್ಸಿ, ಎಸ್
Aug 241 min read


ಉಡುಪಿ, ದ.ಕ. ಜಿಲ್ಲೆಯಲ್ಲಿ ನಾಳೆ (ಆಗಸ್ಟ್ 25) ಈದ್ ಮಿಲಾದ್ ಸಾರ್ವತ್ರಿಕ ರಜೆ ಘೋಷಣೆ
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಈ ಹಿಂದೆ ನಿಗದಿಯಾಗಿದ್ದ ದಿನಾಂಕ 26-08-2026ರ ಬದಲಾಗಿ, ನಾಳೆ ಅಂದರೆ ದಿನಾಂಕ 25-08-2026ರ ಮಂಗಳವಾರದಂದು ಸಾರ್ವತ್ರಿಕ ರಜೆಯನ್ನು ಘೋಷಿಸಿ ಜಿಲ್ಲಾಡಳಿತ ಅಧಿಕೃತ ಆದೇಶ ಹೊರಡಿಸಿದೆ. ನಿರೀಕ್ಷಿತ ಚಂದ್ರ ದರ್ಶನದ ಆಧಾರದ ಮೇಲೆ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 25 ರಂದೇ ಹಬ್ಬವನ್ನು ಆಚರಿಸಲಾಗುತ್ತಿರುವುದರಿಂದ ಸ್ಥಳೀಯ ಮುಸ್ಲಿಂ ಒಕ್ಕೂಟಗಳು ಮತ್ತು ಜಿಲ್ಲಾಧಿಕಾರಿಗಳ ಕೋರಿಕೆಯಂತೆ ಸರ್ಕಾರವು ಈ ಬದಲಾವಣೆಗೆ ಅಸ್ತು ಎಂದಿದೆ. ಸರ್ಕಾರದ ಆದೇಶದನ್ವಯ ಆಗಸ್ಟ್ 25ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ
Aug 241 min read


ಪುತ್ತೂರು ದರ್ಬೆ ಗಲಾಟೆ: ಹಿಂದೂ ಜಾಗರಣ ವೇದಿಕೆಯಿಂದ ನಾಳೆ ಸ್ವಯಂಪ್ರೇರಿತ ಬಂದ್ಗೆ ಕರೆ
ಪುತ್ತೂರು: ನಗರದ ದರ್ಬೆಯಲ್ಲಿ ವರ್ತಕರ ಮೇಲೆ ನಡೆದ ದಾಳಿಯನ್ನು ಖಂಡಿಸಿ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯವನ್ನು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಆಗಸ್ಟ್ 25ರಂದು ಪುತ್ತೂರು ನಗರದಲ್ಲಿ ಸ್ವಯಂಪ್ರೇರಿತ ಬಂದ್ಗೆ ಕರೆ ನೀಡಿದೆ. ಘಟನೆಯನ್ನು ಖಂಡಿಸಿ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಆಗಸ್ಟ್ 25ರಂದು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ನೀಡುವಂತೆ ಹಿಂದೂ ಜಾಗರಣ ವೇದಿಕೆ ಮನವಿ ಮಾಡಿದೆ. ದರ್ಬೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ.
Aug 241 min read


ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಆ.25ರಂದು ಈದ್ ಮಿಲಾದ್ ಸಾರ್ವತ್ರಿಕ ರಜೆ
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ (ಮೀಲಾದುನ್ನೆಬಿ) ಅಂಗವಾಗಿ ಆಗಸ್ಟ್ 25ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಚಂದ್ರ ದರ್ಶನದ ಆಧಾರದ ಮೇಲೆ ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ರಜೆ ನೀಡುವಂತೆ ಮುಸ್ಲಿಂ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರಿಗೆ ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಪರಿಗಣಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 25ರಂದು ಈದ್ ಮಿಲಾದ್ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
Aug 241 min read


ಉಡುಪಿ: ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಮಗ!
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬೈಕಾಡಿ ಗ್ರಾಮದಲ್ಲಿ ಅತ್ಯಂತ ಭೀಕರ ಹಾಗೂ ಆಘಾತಕಾರಿ ಘಟನೆಯೊಂದು ನಡೆದಿದೆ. ಬೈಕಾಡಿಯ ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಹಾಗೂ ಸಂಶದ್ ಬೇಗಂ ದಂಪತಿಯನ್ನು ಅವರ ಸ್ವಂತ ಮಗನೇ ಸುತ್ತಿಗೆಯಿಂದ ಕ್ರೂರವಾಗಿ ಹೊಡೆದು ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಆರೋಪಿಯನ್ನು 31 ವರ್ಷದ ಶಾಹಿದ್ ಅಲಿ ಎಂದು ಗುರುತಿಸಲಾಗಿದೆ. ಮನೆಯಲ್ಲಿದ್ದ ಸುತ್ತಿಗೆಯಿಂದ ಹೆತ್ತವರ ತಲೆಗೆ ತೀವ್ರವಾಗಿ ಹಲ್ಲೆ ನಡೆಸಿದ್ದರಿಂದ, ತಂದೆ ಮತ್ತು ತಾಯಿ ಇಬ್ಬರೂ ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆ ತಿಳಿದ ತಕ್ಷಣ ಬ್ರಹ್ಮಾವರ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸ
Aug 241 min read


ಕಬಕ ಪುತ್ತೂರು ನಿಲ್ದಾಣದಲ್ಲಿ ವಂದೇ ಭಾರತ್ ನಿಲುಗಡೆಗೆ ಆಗ್ರಹ: ಸಹಿ ಅಭಿಯಾನಕ್ಕೆ ಭರ್ಜರಿ ಬೆಂಬಲ
ಪ್ರಸ್ತಾವಿತ ಮಂಗಳೂರು-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ನಿಲುಗಡೆ ನೀಡಬೇಕು ಎಂದು ಆಗ್ರಹಿಸಿ ಆರಂಭಿಸಲಾದ ಆನ್ಲೈನ್ ಸಹಿ ಅಭಿಯಾನಕ್ಕೆ ಸಾರ್ವಜನಿಕರಿಂದ ಭರ್ಜರಿ ಸ್ಪಂದನೆ ವ್ಯಕ್ತವಾಗಿದೆ. ಸ್ಥಳೀಯ ಪ್ರಯಾಣಿಕರ ಹಿತದೃಷ್ಟಿಯಿಂದ ಆರಂಭಗೊಂಡ ಈ ಅಭಿಯಾನದಲ್ಲಿ ಸಾವಿರಾರು ಜನರು ಉತ್ಸಾಹದಿಂದ ಭಾಗವಹಿಸಿ ಸಹಿ ಹಾಕುವ ಮೂಲಕ ತಮ್ಮ ಬೆಂಬಲ ಸೂಚಿಸುತ್ತಿದ್ದಾರೆ. ಈ ಅಭಿಯಾನವು ಸಾರ್ವಜನಿಕ ವಲಯದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಭಾನುವಾರ ಸಂಜೆಯ ವೇಳೆಗೆ 2,500ಕ್ಕೂ ಅಧಿಕ ಮಂದಿ ಸಹಿ ಮಾಡಿ ತಮ್ಮ ಆಗ್ರಹವನ್ನು ರೈಲ್ವೆ ಇಲಾಖೆಗೆ ಮುಟ್ಟಿಸುವ ಪ
Aug 241 min read


‘ಬುದ್ಧಿವಂತರ ಜಿಲ್ಲೆಗೆ ಕೆಟ್ಟ ಹೆಸರು ತರಬೇಡಿ’: ಪುತ್ತೂರು ಶಾಂತಿ ಸಭೆಯಲ್ಲಿ ಎಸಿ ಸ್ಟೆಲ್ಲಾ ವರ್ಗೀಸ್ ಕರೆ
ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ಪ್ರಕರಣಗಳನ್ನು ದಾಖಲಿಸಿಕೊಂಡು ಅತ್ಯಂತ ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆ ನಡೆಸುತ್ತಿದೆ ಎಂದು ಪುತ್ತೂರು ಡಿವೈಎಸ್ಪಿ ಪ್ರಮೋದ್ ಕುಮಾರ್ ತಿಳಿಸಿದ್ದಾರೆ. ಪುತ್ತೂರು ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆಯ ವತಿಯಿಂದ ಕೋ-ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು. ಹಬ್ಬಗಳ ಸಂದರ್ಭದಲ್ಲಿ ಮನಸ್ಸಿನಲ್ಲಿ ಯಾವುದೇ ದ್ವೇಷವಿಟ್ಟುಕೊಳ್ಳದೆ, ಎಲ್ಲರೂ ಕಾನೂನಿನ ಮೇಲೆ ನಂಬಿಕೆಯಿಟ್ಟು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಬೇಕು ಎಂದು ಅವರು ಕರೆ ನೀಡಿದರು. ಇತ್ತೀಚಿನ ಘಟನೆಯ ಹಿನ್ನೆಲೆಯಲ್ಲಿ ಜಿಲ್
Aug 241 min read


ಕೋಳಿ ಫಾರ್ಮ್ ಹೆಸರಿನಲ್ಲಿ ಡ್ರಗ್ಸ್ ತಯಾರಿಕೆ: ಮಹಾರಾಷ್ಟ್ರದಲ್ಲಿ ಇಬ್ಬರು ಕನ್ನಡಿಗರು ಸೇರಿ ಏಳು ಮಂದಿಯ ಬಂಧನ
ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಗಡ ತಾಲೂಕಿನ ರಾಜಗೋಳಿ ಗ್ರಾಮದಲ್ಲಿ ಕೋಳಿ ಫಾರ್ಮ್ ಹೆಸರಿನಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಎಂಡಿಎಂಎ (MDMA) ಮಾದಕ ವಸ್ತು ತಯಾರಿಕಾ ಫ್ಯಾಕ್ಟರಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ ಮಾದಕ ವಸ್ತು ವಿರೋಧಿ ಟಾಸ್ಕ್ ಫೋರ್ಸ್ (Anti-Narcotics Task Force) ನಡೆಸಿದ ಈ ಭಾರಿ ಕಾರ್ಯಾಚರಣೆಯಲ್ಲಿ ಬೆಳಗಾವಿಯ ಇಬ್ಬರು ಆರೋಪಿಗಳು ಸೇರಿದಂತೆ ಒಟ್ಟು ಏಳು ಜನರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ ಸುಮಾರು 1.13 ಕೋಟಿ ರೂಪಾಯಿ ಮೌಲ್ಯದ 208 ಗ್ರಾಂ ತೂಕದ ಎಂಡಿಎಂಎ ಡ್ರಗ್ಸ್, ಮಾದಕ ದ್ರವ್ಯ ತಯಾರಿಕೆಗೆ ಬಳಸುತ್ತಿದ್ದ ರಾಸಾಯನಿಕ ವಸ್
Aug 241 min read


ಮಂಡ್ಯದಲ್ಲಿ ಭಿಕ್ಷುಕಿ ಸಾವು ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ: ಸಾವಿನ ಬಳಿಕ ಹೊರಬಿತ್ತು ಅಚ್ಚರಿಯ ಸತ್ಯ!
ಮಂಡ್ಯದಲ್ಲಿ ಭಿಕ್ಷೆ ಬೇಡಿ ಬದುಕಿದ್ದ ವೃದ್ಧೆ ಸಾವು; ಮನೆಯಲ್ಲಿ ₹8 ಲಕ್ಷಕ್ಕೂ ಅಧಿಕ ಹಣ ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟ ಬಳಿಕ, ಅವರ ಮನೆಯಲ್ಲಿ ಮೂಟೆಗಟ್ಟಲೆ ನಾಣ್ಯಗಳು ಹಾಗೂ ಕರೆನ್ಸಿ ನೋಟುಗಳು ಪತ್ತೆಯಾಗಿರುವ ಘಟನೆ ಮಂಡ್ಯ ನಗರದ ಗುತ್ತಲು ಬಡಾವಣೆಯಲ್ಲಿ ನಡೆದಿದೆ. ಮೃತ ವೃದ್ಧೆಯನ್ನು ನೂರ್ ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ಆಸರೆ ಇಲ್ಲದೆ ಹಲವು ವರ್ಷಗಳಿಂದ ನಗರದ ವಿವಿಧೆಡೆ ಭಿಕ್ಷಾಟನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಅವರು, ವಯೋಸಹಜ ಕಾಯಿಲೆಯಿಂದ ನಿನ್ನೆ ಮೃತಪಟ್ಟಿದ್ದಾರೆ. ನೂರ್ ಅವರ ನಿಧನದ ಬಳಿಕ ಸಂಬಂಧಿಕರು ಹಾಗೂ ಸ್ಥಳೀ
Aug 241 min read


ತುಳು ನಾಡಿಗೆ ಒಲಿದ ಸಂಗೀತ ಸರಸ್ವತಿ: ‘ಸರಿಗಮಪ ಲಿಟಲ್ ಚಾಂಪ್ಸ್’ನಲ್ಲಿ ಮಂಗಳೂರಿಗೆ ಡಬಲ್ ಧಮಾಕಾ!
ಮಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ಸಂಗೀತ ರಿಯಾಲಿಟಿ ಶೋ ‘ಸರಿಗಮಪ ಲಿಟಲ್ ಚಾಂಪ್ಸ್’ನ ಅದ್ದೂರಿ ಫಿನಾಲೆ ತೆರೆ ಕಂಡಿದ್ದು, ಮಂಗಳೂರಿನ ಇಬ್ಬರು ಬಾಲಪ್ರತಿಭೆಗಳು ವಿನ್ನರ್ ಹಾಗೂ ಮೊದಲ ರನ್ನರ್ ಅಪ್ ಸ್ಥಾನ ಪಡೆದು ತುಳು ನಾಡಿನ ಕೀರ್ತಿ ಹೆಚ್ಚಿಸಿದ್ದಾರೆ. ಮಂಗಳೂರಿನ ಅಶ್ಮಿತ್ ಈ ಬಾರಿಯ ‘ಸರಿಗಮಪ ಲಿಟಲ್ ಚಾಂಪ್ಸ್’ನ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಗಾಯಕಿ ಇಂದು ನಾಗರಾಜ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದ ಅಶ್ಮಿತ್ಗೆ ವಿಜೇತ ಟ್ರೋಫಿಯೊಂದಿಗೆ ₹20 ಲಕ್ಷ ನಗದು ಬಹುಮಾನ ದೊರೆತಿದೆ. ಗಾಯನದ ಜೊತೆಗೆ ವಯೊಲಿನ್ ವಾದನದಲ್ಲೂ ಗಮನ ಸೆಳೆದ ಅಶ್ಮಿತ್, ಫಿನಾಲೆ
Aug 231 min read


ಕೋಲ್ಚಾರು: ಶ್ರೀ ಭಗವತಿ ಸೇವಾ ಸಮಿತಿ ಇದರ ವತಿಯಿಂದ 24ನೇ ವರ್ಷದ ಅದ್ದೂರಿ ಓಣಂ ಆಚರಣೆ
ಕೋಲ್ಚಾರಿನಲ್ಲಿ 24ನೇ ವರ್ಷದ ಅದ್ದೂರಿ ಓಣಂ ಆಚರಣೆ ಕೋಲ್ಚಾರು: ಶ್ರೀ ಭಗವತಿ ಸೇವಾ ಸಮಿತಿ, ಕೋಲ್ಚಾರು ಇದರ ವತಿಯಿಂದ ಇಂದು, ಆಗಸ್ಟ್ 23ರಂದು 24ನೇ ವರ್ಷದ ಓಣಂ ಆಚರಣೆಯನ್ನು ಸಂಭ್ರಮ, ಸಡಗರದಿಂದ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳಿಗಾಗಿ ವಿಶೇಷವಾಗಿ ತಿರುವಾದಿರ ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಮಹಿಳೆಯರು ಹಾಗೂ ಮಕ್ಕಳಿಗಾಗಿ ಹಲವು ಬಗೆಯ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಭಾಗವಹಿಸಿದವರು ಉತ್ಸಾಹದಿಂದ ಪಾಲ್ಗೊಂಡರು. ಆಚರಣೆಯ ಪ್ರಮುಖ ಆಕರ್ಷಣೆಯಾಗಿದ್ದ ಅದ್ಭುತ ಓಣಂ ಸದ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಸಾಂಪ್ರದಾಯಿ
Aug 231 min read
Archive
bottom of page



