top of page
News Articles
Sathyapatha News Plus


ಮೀಸಲು ಕ್ಷೇತ್ರದ ಅಂಬೇಡ್ಕರ್ ಭವನ ಅನೈತಿಕ ಚಟುವಟಿಕೆಗಳಿಗೆ ಮೀಸಲೇ?
ಹೌದು, ಸುಳ್ಯ ವಿಧಾನಸಭಾ ಕ್ಷೇತಮೀಸಲುಕ್ಷೇತ್ರ.ಹಾಗೆಯೇ ಸುಳ್ಯತಾಲ್ಲೂಕುಅಭಿವೃದ್ಧಿವಿಚಾರದಲ್ಲಿ ಬಹಳ ಹಿಂದಿನಿಂದಲೂ ಹಿಂದೆ ಉಳಿದಿದೆ ಎನ್ನುವುದಕ್ಕೆ ಇಲ್ಲಿನ ಅಂಬೇಡ್ಕರ್ ಭವನ ಸಾಕ್ಷಿ. .. ಸುಮಾರು 16 ವರ್ಷಗಳ ಹಿಂದೆ ಶಂಕುಸ್ಥಾಪನೆಗೊಂಡ ಅಂಬೇಡ್ಕರ್ ಭವನ ಇನ್ನು ಪೂರ್ಣಗೊಳ್ಳಲಿಲ್ಲ ಎನ್ನುವುದು ವಿಪರ್ಯಾಸವೇ ಸರಿ. ಸುಳ್ಯದ ಅಂಬೇಟಡ್ಕ ಬಳಿಯಲ್ಲಿ ಹಲವಾರು ಕೋಟಿ ರೂಪಾಯಿಯ ಯೋಜನೆ ಇನ್ನೂ ಪೂರ್ಣಗೊಳ್ಳಲಿಲ್ಲ. ಜನಸಾಮಾನ್ಯರ ತೆರಿಗೆಯ ಕೋಟಿ ಕೋಟಿ ರೂಪಾಯಿ ಅನೈತಿಕ ಚಟುವಟಿಕೆಗಳಿಗೆ ಉಪಯೋಗವಾಗುತ್ತಿದೆ. ಬಹಳ ದೊಡ್ಡಮಟ್ಟದ ಕಟ್ಟಡ ಕೇವಲ ಒಂದು ಹಂತದಲ್ಲಿ ನಿರ್ಮಾಣಗೊಂಡಿದೆ. ದೊಡ್ಡ ದೊಡ್ಡ ಪಿ
Aug 231 min read


ಪುತ್ತೂರಿನಲ್ಲಿ ಅಕ್ರಮ ಗೋ ಸಾಗಾಟ ಪತ್ತೆ: ಪಿಕ್ಅಪ್ ವಾಹನ ತಡೆದು ಓರ್ವ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಭಜರಂಗದಳ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಜಿಡೆಕಲ್ಲು ಬಳಿ ಮುಂಜಾನೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಪಿಕ್ಅಪ್ ವಾಹನವನ್ನು ತಡೆದು, ಮೂರು ಹಸುಗಳು ಹಾಗೂ ಒಂದು ಹೋರಿಯನ್ನು ರಕ್ಷಿಸಲಾಗಿದೆ. ಖಚಿತ ಮಾಹಿತಿ ಆಧರಿಸಿ ಭಜರಂಗದಳದ ಕಾರ್ಯಕರ್ತರು ಜಿಡೆಕಲ್ಲು ಬಳಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಗೋವುಗಳನ್ನು ವಾಹನದಲ್ಲಿ ಕ್ರೂರ ಹಾಗೂ ಅಮಾನುಷ ರೀತಿಯಲ್ಲಿ ಸಾಗಿಸುತ್ತಿದ್ದದ್ದು ಪತ್ತೆಯಾಗಿದೆ ಎನ್ನಲಾಗಿದೆ. ವಾಹನದಲ್ಲಿದ್ದ ಮೂವರು ಆರೋಪಿಗಳ ಪೈಕಿ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದು, ಓರ್ವನನ್ನು ಭಜರಂಗದಳದ ಕಾರ್ಯಕರ್ತರು ಹಿಡಿದು ಪೊಲೀಸರಿಗ
Aug 231 min read


ಕಲ್ಲೇಗ ಕೊಲೆ ಪ್ರಕರಣ: ಪ್ರಮುಖ ಆರೋಪಿ ಚೇತನ್ಗೆ ಹೈಕೋರ್ಟ್ ಜಾಮೀನು
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥರಾಗಿದ್ದ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣದಲ್ಲಿ ಪ್ರಥಮ ಆರೋಪಿ ಕೃಷ್ಣನಗರದ ಚೇತನ್ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಜಾಮೀನು ದೊರೆಯುತ್ತಿರುವುದು ಮಹತ್ವದ ಬೆಳವಣಿಗೆಯಾಗಿದೆ. 2023ರ ನವೆಂಬರ್ 6ರಂದು ರಾತ್ರಿ ನೆಹರುನಗರದಲ್ಲಿ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆ ಮಾಡಲಾಗಿತ್ತು. ಘಟನೆಗೆ ಸಂಬಂಧಿಸಿ ಕೃಷ್ಣನಗರದ ಚೇತನ್, ಪಡೀಲು ನಿವಾಸಿ ಮನೀಷ್, ಬನ್ನೂರಿನ ಮಂಜುನಾಥ್ ಯಾನೆ ಹರಿ ಹಾಗೂ ಕೇಶವ ಪಡೀಲ್ ಅವರನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣದಲ್ಲಿ ಸುಮಾರು ಮೂರು ವರ್ಷಗಳ ಬಳಿಕ ಪ್ರಥಮ ಆರೋಪಿ ಚೇತನ್
Aug 231 min read


ಪುತ್ತೂರು: ಡಿಜಿಟಲ್ ಸೇವಾ ಕೇಂದ್ರದಲ್ಲಿ ದಾಖಲೆ ವಿವಾದಕ್ಕೆ ಗಲಾಟೆ; ಓರ್ವನ ಬಂಧನ, ಮೂರು ಪ್ರಕರಣ ದಾಖಲು
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ದರ್ಬೆ ಪ್ರದೇಶದಲ್ಲಿರುವ ಡಿಜಿಟಲ್ ಸೇವಾ ಕೇಂದ್ರವೊಂದರಲ್ಲಿ ದಾಖಲೆಗಳಿಗೆ ಸಂಬಂಧಿಸಿದ ವಿವಾದ ವಿಕೋಪಕ್ಕೆ ತಿರುಗಿ ಎರಡು ಗುಂಪುಗಳ ನಡುವೆ ಭೀಕರ ಗಲಾಟೆ ನಡೆದಿದೆ. ತಾಂತ್ರಿಕ ದೋಷದಿಂದ ಕೆಲವು ಪ್ರಮುಖ ದಾಖಲೆಗಳು ಹಾನಿಗೊಳಗಾದ ವಿಚಾರವಾಗಿ ಆರಂಭವಾದ ವಾಗ್ವಾದವು ಅಂತಿಮವಾಗಿ ಪರಸ್ಪರ ಹಲ್ಲೆ ಮತ್ತು ಕ್ರಿಮಿನಲ್ ಬೆದರಿಕೆಗೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಮಹಿಳೆಯೊಬ್ಬರು ನೀಡಿದ ದೂರಿನನ್ವಯ, ಹಾನಿಗೊಳಗಾದ ದಾಖಲೆಗಳನ್ನು ಸರಿಪಡಿಸಿಕೊಡಲು ಅಥವಾ ₹300 ವೆಚ್ಚ ಪಾವತಿಸಲು ಕೋರಿದಾಗ ಅಂಗಡಿ ಮಾಲೀಕರು ತಮ್ಮ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹ
Aug 231 min read


ದರ್ಶನ್ಗೆ ಮಾಫಿ ಸಾಕ್ಷಿ ಸಂಕಷ್ಟ? ದೈವದ ಮೊರೆ ಹೋದ ವಿಜಯಲಕ್ಷ್ಮಿ
ಮಂದಾರಬೈಲು ಶ್ರೀರಕ್ತೇಶ್ವರಿ–ಗುಳಿಗ ದೈವ ಸನ್ನಿಧಿಯಲ್ಲಿ ವಿಶೇಷ ಕೋಲ ಸೇವೆ ಮಂಗಳೂರಿನ ಶ್ರೀಕ್ಷೇತ್ರ ಮಂದಾರಬೈಲು ಶ್ರೀರಕ್ತೇಶ್ವರಿ ಮಂತ್ರದೇವತೆ ಹಾಗೂ ಗುಳಿಗ ದೈವದ ಸನ್ನಿಧಿಯಲ್ಲಿ ವಿಜಯಲಕ್ಷ್ಮಿ ವಿಶೇಷ ಕೋಲ ಸೇವೆ ಸಲ್ಲಿಸಿದ್ದಾರೆ. ದೈವದ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿ, ಹರಕೆ ಸಲ್ಲಿಸಿರುವ ವಿಜಯಲಕ್ಷ್ಮಿ, ಕುಟುಂಬದ ಸಂಕಷ್ಟಗಳು ದೂರವಾಗಲಿ ಎಂದು ಪ್ರಾರ್ಥನೆ ಮಾಡಿದ್ದಾರೆ. ದರ್ಶನ್ ಪ್ರಕರಣದಲ್ಲಿ ಪ್ರದೋಷ್ ಮಾಫಿ ಸಾಕ್ಷಿಯಾಗುವ ಸಾಧ್ಯತೆ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ವಿಜಯಲಕ್ಷ್ಮಿ ದೈವದ ಮೊರೆ ಹೋಗಿರುವುದು ಗಮನ ಸೆಳೆದಿದೆ. ಪ್ರಕರಣದ ಮುಂದಿನ ಬೆಳವಣಿಗೆಗಳ ನಡುವ
Aug 231 min read


ಮುಂಬೈನಲ್ಲಿ ಗಣೇಶ ಮೂರ್ತಿ ಕುಸಿದು ದುರಂತ: ಇಬ್ಬರು ಸಾವು, ಐವರಿಗೆ ಗಾಯ
ಮುಂಬೈನ ಭುಲೇಶ್ವರ ಪ್ರದೇಶದ ಜೈ ಅಂಬೆ ಚೌಕ್ನಲ್ಲಿ ಶನಿವಾರ ರಾತ್ರಿ 'ಭುಲೇಶ್ವರಚ ರಾಜ' ಗಣೇಶ ಮೂರ್ತಿಯ ಆಗಮನ ಮೆರವಣಿಗೆಯ ವೇಳೆ 22 ಅಡಿ ಎತ್ತರದ ಬೃಹತ್ ವಿಗ್ರಹ ಏಕಾಏಕಿ ಕುಸಿದು ಬಿದ್ದು ಭೀಕರ ಅಪಘಾತ ಸಂಭವಿಸಿದೆ. ಮೆರವಣಿಗೆ ವಾಹನದಲ್ಲಿ ವಿಗ್ರಹವನ್ನು ಭದ್ರಪಡಿಸಿದ್ದ ಬೋಲ್ಟ್ಗಳಲ್ಲಿ ತಾಂತ್ರಿಕ ದೋಷ ಉಂಟಾಗಿದ್ದೇ ಈ ದುರಂತಕ್ಕೆ ಮುಖ್ಯ ಕಾರಣ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ತಿಳಿಸಿದೆ. ಈ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಂಕೇತ್ ನೆವ್ಶೆ (33) ಮತ್ತು ಬ್ರಿಜೇಶ್ ಹೇಮಂತ್ ಜೋಶಿ (30) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗಾಯಗೊಂಡ
Aug 231 min read


500 ಸರ್ಕಾರಿ ಶಾಲೆಗಳು ಕೆಪಿಎಸ್ಗಳಾಗಿ ಅಭಿವೃದ್ಧಿ: ಎಡಿಬಿಯಿಂದ ₹1,750 ಕೋಟಿ ನೆರವು
ಬೆಂಗಳೂರು: ರಾಜ್ಯದ 500 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ (ಕೆಪಿಎಸ್) ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ (ಎಡಿಬಿ) ₹1,750 ಕೋಟಿ ಆರ್ಥಿಕ ನೆರವು ನೀಡಲಿದೆ. ಈ ಸಂಬಂಧ ರಾಜ್ಯ ಸರ್ಕಾರ ಮತ್ತು ಎಡಿಬಿ ನಡುವೆ ಮಹತ್ವದ ಒಪ್ಪಂದಕ್ಕೆ ಶುಕ್ರವಾರ ವಿಧಾನಸೌಧದಲ್ಲಿ ಸಹಿ ಹಾಕಲಾಯಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಸಮ್ಮುಖದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಎಡಿಬಿ ಅಧಿಕಾರಿಗಳು ಒಪ್ಪಂದಕ್ಕೆ ಸಹಿ ಹಾಕಿದರು. ಮುಂದಿನ ನಾಲ್ಕು ವರ್ಷಗಳಲ್ಲಿ ರಾಜ್ಯ ಸರ್ಕಾರ ಒಟ್ಟು ₹2,500 ಕೋಟಿ ವ
Aug 221 min read


ದೈವಾರಾಧನೆಯ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಹಿಂದಿನಂತೆ ಅವಕಾಶ ನೀಡುವಂತೆ: ಯು.ಟಿ. ಖಾದರ್ಗೆ ಮನವಿ
ಶಾಸಕ ಅಶೋಕ್ ಕುಮಾರ್ ನೇತೃತ್ವದಲ್ಲಿ ಉಸ್ತುವಾರಿ ಸಚಿವ ಯು.ಟಿ. ಖಾದರ್ಗೆ ಮನವಿ ಸಲ್ಲಿಕೆ ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕ ದೈವಾರಾಧನೆಯ ಅಂಗವಾಗಿ ನಡೆಯುವ ಕೋಳಿ ಅಂಕವನ್ನು ಈ ಹಿಂದೆ ನಡೆಯುತ್ತಿದ್ದ ರೀತಿಯಲ್ಲೇ ಮುಂದುವರಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿ ಸಾಂಪ್ರದಾಯಿಕ ಆಚರಣೆ ಹಿತರಕ್ಷಣಾ ವೇದಿಕೆಯ ಪದಾಧಿಕಾರಿಗಳು ಬೆಂಗಳೂರಿನ ವಿಧಾನಸೌಧದಲ್ಲಿ ಮನವಿ ಸಲ್ಲಿಸಿದರು. ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರನ್ನು ಭೇಟಿಯಾದ ವೇದಿಕೆಯ ಪದಾಧಿಕಾರಿಗಳು, ಕರಾವಳಿಯ ಸಾಂಪ್ರದಾಯಿಕ ಆಚರ
Aug 221 min read


ರಾಜ್ಯದಲ್ಲಿ ಕೃತಕ ಪನ್ನೀರ್ಗೆ ಒಂದು ವರ್ಷದ ನಿಷೇಧ: ಆಹಾರ ಇಲಾಖೆ ಮಹತ್ವದ ಆದೇಶ
ಬೆಂಗಳೂರು: ರಾಜ್ಯದಲ್ಲಿ ಕೃತಕ ಪನ್ನೀರ್ ಬಳಕೆ ಹಾಗೂ ಮಾರಾಟಕ್ಕೆ ಒಂದು ವರ್ಷದವರೆಗೆ ನಿಷೇಧ ಹೇರಲಾಗಿದೆ. ಗ್ರಾಹಕರಿಗೆ ಕೃತಕ ಪನ್ನೀರ್ ನೀಡಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಈ ಕ್ರಮ ಕೈಗೊಂಡಿದೆ. ಹೋಟೆಲ್, ರೆಸ್ಟೋರೆಂಟ್ ಸೇರಿದಂತೆ ಆಹಾರ ವಲಯದಲ್ಲಿ ಪನ್ನೀರ್ ಬಳಸುವವರು ಕೇವಲ ಗುಣಮಟ್ಟದ ಹಾಲು ಹಾಗೂ ಹಾಲಿನ ಉತ್ಪನ್ನಗಳಿಂದ ತಯಾರಿಸಿದ ನೈಸರ್ಗಿಕ ಪನ್ನೀರ್ನ್ನೇ ಬಳಸಬೇಕು ಎಂದು ಇಲಾಖೆ ಸೂಚಿಸಿದೆ. ಕೃತಕ ಪನ್ನೀರ್ ಎಂದರೆ ನೈಸರ್ಗಿಕ ಹಾಲಿನ ಪನ್ನೀರ್ಗೆ ಬದಲಾಗಿ ಸಸ್ಯಜನ್ಯ ಎಣ್ಣೆ, ಪಿಷ್ಟ, ಕೃತಕ ಬಣ್ಣಗಳು ಅಥವಾ ಇತರೆ ಪದಾರ್ಥಗಳನ್ನ
Aug 221 min read


ಮಂಗಳೂರು ರೈಲ್ವೆ ಮೈಸೂರು ವಿಭಾಗಕ್ಕೆ: ಅಕ್ಟೋಬರ್ 1ರಿಂದ ಹೊಸ ವ್ಯವಸ್ಥೆ ಜಾರಿ
ಮಂಗಳೂರು: ಕರಾವಳಿ ಕರ್ನಾಟಕದ ರೈಲ್ವೆ ಸಂಪರ್ಕಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಇದುವರೆಗೆ ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲ್ವೆ ಪ್ರದೇಶವನ್ನು ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ವರ್ಗಾಯಿಸಲು ರೈಲ್ವೆ ಮಂಡಳಿ ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ. ಈ ಬದಲಾವಣೆ 2026ರ ಅಕ್ಟೋಬರ್ 1ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ಇದರೊಂದಿಗೆ ಮಂಗಳೂರು ಸೇರಿದಂತೆ ಉಳ್ಳಾಲ ರೈಲ್ವೆ ನಿಲ್ದಾಣದವರೆಗಿನ ಪ್ರದೇಶವು ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಆಡಳಿತ ವ್ಯಾಪ್ತಿಗೆ ಬರಲಿದೆ. ಇದುವರೆಗೆ ಪಾಲಕ್ಕಾಡ್ ಮತ್ತು ಮೈಸೂರು ವಿಭಾಗಗಳ ನಡು
Aug 211 min read


ಪಶ್ಚಿಮ ಘಟ್ಟಗಳ ಕಸ್ತೂರಿರಂಗನ್ ವರದಿ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ
ಪಶ್ಚಿಮ ಘಟ್ಟಗಳ ಕಸ್ತೂರಿರಂಗನ್ ವರದಿ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ ಬೆಂಗಳೂರು: ಪಶ್ಚಿಮ ಘಟ್ಟಗಳ ಸಂರಕ್ಷಣೆ ಹೆಸರಿನಲ್ಲಿ ಕೇಂದ್ರ ಸರ್ಕಾರ ಹೊರಡಿಸಿರುವ ಕಸ್ತೂರಿರಂಗನ್ ವರದಿಯ ಏಳನೇ ಕರಡು ಅಧಿಸೂಚನೆಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರ ನೀಡಿರುವ 60 ದಿನಗಳ ಅವಧಿಯೊಳಗೆ ರಾಜ್ಯದ ಪರವಾಗಿ ಪ್ರಬಲ ಆಕ್ಷೇಪಣಾ ವರದಿಯನ್ನು ಸಲ್ಲಿಸಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶಾಸಕರಾದ ಎ.ಎಸ್. ಪೊನ್ನಣ್ಣ ಹಾಗೂ ಎಚ್.ಡಿ. ತಮ್ಮಣ್ಣ ಅವರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಕೇಂದ್ರ ಪರಿಸ
Aug 211 min read


ಉಡುಪಿಯಲ್ಲಿ 10.8 ಟನ್ ರಾಸಾಯನಿಕ ಬಳಸಿಹಣ್ಣಾಗಿಸಿದ್ದ ಬಾಳೆಹಣ್ಣುಗಳ ವಶ
ರಾಸಾಯನಿಕ ಬಳಸಿ ಹಣ್ಣಾಗಿಸಿದ್ದ 10.89 ಟನ್ ಬಾಳೆಹಣ್ಣು ಉಡುಪಿಯಲ್ಲಿ ವಶ ಉಡುಪಿ: ಜಿಲ್ಲೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ, ರಾಸಾಯನಿಕ ಬಳಸಿ ಹಣ್ಣಾಗಿಸಲಾಗಿದೆ ಎಂದು ಶಂಕಿಸಲಾದ 10,890 ಕೆ.ಜಿ. ಬಾಳೆಹಣ್ಣುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲೆವೂರು, ಕೆಮ್ತೂರು ಹಾಗೂ ದುಗ್ಗಲಿಪಾಡವು ಪ್ರದೇಶಗಳಲ್ಲಿರುವ ಬಾಳೆಹಣ್ಣು ಮಾರಾಟದ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ಹೆಚ್ಚಿನ ಪ್ರಮಾಣದ ಬಾಳೆಹಣ್ಣುಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿದೆ. ಅಧಿಕಾರಿಗಳ ಪ್ರಕಾರ, ಬಾಳೆಹಣ್ಣುಗಳನ್ನು ನೈಸರ್ಗಿಕವಾಗಿ ಹಣ್ಣಾಗಿಸುವ ಬದಲು ರಾಸಾಯನಿ
Aug 201 min read


ಪೋಷಕರಿಗೆ ದೂರು ನೀಡುವ ಭಯ: ತರಗತಿ ಶಿಕ್ಷಕಿಯನ್ನೇ ಸಂಚು ರೂಪಿಸಿ ಕೊಂದ 10ನೇ ತರಗತಿ ವಿದ್ಯಾರ್ಥಿಗಳು!
ತೆಲಂಗಾಣದ ನಲ್ಗೊಂಡ ಜಿಲ್ಲೆಯ ಕೊಂಡಮಲ್ಲೇಪಲ್ಲಿಯಲ್ಲಿ ದುಬಾರಿ ಜೀವನಶೈಲಿಯ ಆಸೆಗೆ ಬಿದ್ದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು, ತಮ್ಮ ಬಳಿಯಿದ್ದ ಅಕ್ರಮ ಹಣ ಮತ್ತು ಮೊಬೈಲ್ ವಿಚಾರವನ್ನು ಪೋಷಕರಿಗೆ ತಿಳಿಸುವುದಾಗಿ ಎಚ್ಚರಿಸಿದ ರೂಪಾ ರೆಡ್ಡಿ ಎಂಬ ಶಿಕ್ಷಕಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಹಾಸ್ಟೆಲ್ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದ ವಿದ್ಯಾರ್ಥಿಗಳು, ಶಿಕ್ಷಕಿಯ ವಿರುದ್ಧ ದ್ವೇಷ ಸಾಧಿಸಿ ವಾರದ ಹಿಂದೆಯೇ ಕೊಲೆಗೆ ಸಂಚು ರೂಪಿಸಿದ್ದರು. ಚಾಕು, ಮುಖವಾಡ ಧರಿಸಿ ಮನೆಯೊಳಗೆ ನುಗ್ಗಿ ಈ ಕೃತ್ಯ ಎಸಗಿದ್ದಾರೆ. ಕೊನೆಯದಾಗಿ ಶಿಕ್ಷಕಿ ಫೋನ್ನಲ್ಲಿ ಮಾತನಾಡುತ್ತಿದ್ದಾಗ 'ಬಾಬು' ಎಂದು ಉಚ್ಚರಿಸಿ
Aug 201 min read


ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗಗಳ ಭರ್ಜರಿ ಅವಕಾಶ: 16 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ, ಅರ್ಜಿ ಸಲ್ಲಿಕೆಗೆ ವಿವಿಧ ಗಡುವು
ಬೆಂಗಳೂರು: ಸರ್ಕಾರಿ ಉದ್ಯೋಗಕ್ಕಾಗಿ ಸಿದ್ಧತೆ ನಡೆಸುತ್ತಿರುವ ಕರ್ನಾಟಕದ ಅಭ್ಯರ್ಥಿಗಳಿಗೆ ಹಲವು ಇಲಾಖೆಗಳು ಮತ್ತು ಜಿಲ್ಲಾ ನ್ಯಾಯಾಲಯಗಳಿಂದ ನೇಮಕಾತಿ ಅವಕಾಶಗಳು ಲಭ್ಯವಾಗಿವೆ. VAO, Land Surveyor, KAS, ಶಿಕ್ಷಕರು, ಅರಣ್ಯ ವೀಕ್ಷಕರು, ನ್ಯಾಯಾಲಯದ ಸಿಬ್ಬಂದಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ, ಪಿಯುಸಿ, ಡಿಪ್ಲೊಮಾ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಹತೆಗೆ ಅನುಗುಣವಾಗಿ ಅರ್ಜಿ ಸಲ್ಲಿಸಬಹುದಾಗಿದೆ. VAO ಹುದ್ದೆಗಳಿಗೆ 572 ಅವಕಾಶ ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ನೇಮಕಾತಿಯಲ್ಲಿ ಒಟ್ಟು
Aug 202 min read


ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್ಲೈನ್ ಕೋಚಿಂಗ್: ಯೋಜನೆ ಜಾರಿಗೆ ಕೇಂದ್ರದ ಮಹತ್ವದ ಹೆಜ್ಜೆ
ನವದೆಹಲಿ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ದೇಶದ ಯುವಕರಿಗೆ ಉಚಿತ ಆನ್ಲೈನ್ ತರಬೇತಿ ಒದಗಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉಪಕ್ರಮವನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಅವರ ನೇತೃತ್ವದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆದಿದ್ದು, ಯೋಜನೆಯ ಅನುಷ್ಠಾನದ ಕುರಿತು ಸಮಗ್ರ ಚರ್ಚೆ ನಡೆಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಉಚಿತ ಆನ್ಲೈನ್ ತರಬೇತಿ ಉಪಕ್ರಮವನ್ನು ಘೋಷಿಸಿದ್ದರು. ಇದೀಗ ಘೋಷಣೆಯಾದ ಕೆಲವೇ ದಿ
Aug 201 min read


ಕಲುಷಿತ ನೀರಿನಲ್ಲಿ ಶುಂಠಿ ತೊಳೆಯುತ್ತಿದ್ದ ವ್ಯಾಪಾರಿ: ಕ್ರಮಕ್ಕೆ ಆಗ್ರಹ
ಮಂಗಳೂರು: ಬಿಕರ್ನಕಟ್ಟೆ–ಕೈಕಂಬ ರಸ್ತೆಯ ಬದಿಯಲ್ಲಿ ಶುಂಠಿ ಮಾರಾಟ ಮಾಡುತ್ತಿದ್ದ ವ್ಯಾಪಾರಿಯೊಬ್ಬರು ರಸ್ತೆ ಬದಿಯ ಹೊಂಡದಲ್ಲಿ ಸಂಗ್ರಹವಾಗಿದ್ದ ಕಲುಷಿತ ನೀರಿನಲ್ಲಿ ಶುಂಠಿಯನ್ನು ತೊಳೆದು ಸ್ವಚ್ಛಗೊಳಿಸಿದ ಘಟನೆ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ರಸ್ತೆ ಬದಿಯ ಹೊಂಡದಲ್ಲಿ ನಿಂತಿದ್ದ ಕೆಸರು ನೀರನ್ನು ಬಳಸಿ ವ್ಯಾಪಾರಿ ಶುಂಠಿಯನ್ನು ತೊಳೆದು ಬಳಿಕ ಮಾರಾಟಕ್ಕೆ ಇಡುತ್ತಿರುವುದು ಕಂಡುಬಂದಿದೆ. ಈ ದೃಶ್ಯವನ್ನು ಗಮನಿಸಿದ ವಾಹನ ಸವಾರರು ಹಾಗೂ ಪಾದಾಚಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಆಹಾರ ಪದಾರ್ಥಗಳ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ನಿಂ
Aug 191 min read


ಇನ್ಸ್ಟಾಗ್ರಾಂ ರೀಲ್ಸ್ ನಂಬಿ 16 ವರ್ಷದ ಬಾಲಕನ ಹತ್ಯೆ; ‘ಮಾನವ ವೃಷಣ’ ಮಾರಾಟದ ಸುಳ್ಳು ಸುದ್ದಿ ನಂಬಿ ಭೀಕರ ಕೃತ್ಯ!
ಭೋಪಾಲ್: ಇನ್ಸ್ಟಾಗ್ರಾಂನಲ್ಲಿ ಹರಿದಾಡಿದ ಸುಳ್ಳು ರೀಲ್ಸ್ಗಳನ್ನು ನಂಬಿದ 20 ವರ್ಷದ ಬಿಬಿಎ ವಿದ್ಯಾರ್ಥಿಯೊಬ್ಬ, ಗಲ್ಫ್ ರಾಷ್ಟ್ರಗಳಲ್ಲಿ ಮಾನವ ವೃಷಣಗಳಿಗೆ ₹1ರಿಂದ ₹1.5 ಕೋಟಿ ವರೆಗೆ ಬೆಲೆ ಇದೆ ಎಂದು ಭಾವಿಸಿ, ಇತರರನ್ನು ನಂಬಿಸಿ 16 ವರ್ಷದ ಬಾಲಕನ ಹತ್ಯೆಗೆ ಕಾರಣನಾದ ಆರೋಪ ಕೇಳಿಬಂದಿದೆ. ಭೋಪಾಲ್ನ ಜೋಹೆಬ್ ಖಾನ್ ಎಂಬ ಬಿಬಿಎ ವಿದ್ಯಾರ್ಥಿ ಇನ್ಸ್ಟಾಗ್ರಾಂನಲ್ಲಿ ಮಾನವ ವೃಷಣಗಳು ಗಲ್ಫ್ ರಾಷ್ಟ್ರಗಳಲ್ಲಿ ಕೋಟ್ಯಂತರ ರೂಪಾಯಿಗೆ ಮಾರಾಟವಾಗುತ್ತವೆ ಎಂಬ ರೀಲ್ಸ್ಗಳನ್ನು ನೋಡಿದ್ದಾನೆ ಎನ್ನಲಾಗಿದೆ. ಇದೇ ರೀತಿಯ ಮತ್ತಷ್ಟು ರೀಲ್ಸ್ಗಳು ಆತನಿಗೆ ಕಾಣಿಸಿಕೊಂಡ ಪರಿಣಾಮ, ಈ ಸುಳ್ಳು ಮಾಹಿತಿಯನ
Aug 191 min read


ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಕರಾವಳಿ ಅಭಿವೃದ್ಧಿಗೆ ಮಹತ್ವದ ನಿರ್ಧಾರ
ಬೆಂಗಳೂರು: ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮಂಗಳವಾರ ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು. ಕೇರಳ ಮತ್ತು ಗೋವಾ ರಾಜ್ಯಗಳು ತಮ್ಮ ಕರಾವಳಿ ಪ್ರದೇಶಗಳನ್ನು ಪ್ರವಾಸೋದ್ಯಮಕ್ಕೆ ಪರಿಣಾಮಕಾರಿಯಾಗಿ ಬಳಸಿಕೊಂಡಿರುವ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಪ್ರತ್ಯೇಕ ಪ್
Aug 191 min read


ಬಸ್ಸಿನಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯ ಬಂಧನ
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದ ಮೇಲೆ ಕೊಂಡಗಾಯಿ ನಿವಾಸಿ ಉಮೇಶ್ (53) ಎಂಬಾತನನ್ನು ವಿಟ್ಲ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಆಗಸ್ಟ್ 15 ರಂದು ಸಂತ್ರಸ್ತ ಬಾಲಕನು ಅಳಿಕೆಯಿಂದ ಪುತ್ತೂರಿಗೆ ಬಸ್ಸಿನಲ್ಲಿ ಹೋಗುತ್ತಿದ್ದಾಗ, ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸನ್ನೇರಿದ ಆರೋಪಿಯು ಬಾಲಕನ ಪಕ್ಕದಲ್ಲಿ ಕುಳಿತು ಅನುಚಿತವಾಗಿ ವರ್ತಿಸಿದ್ದನು. ಇಷ್ಟಕ್ಕೇ ನಿಲ್ಲಿಸದ ಆರೋಪಿಯು, ಬಾಲಕನು ಮನೆಗೆ ತೆರಳಿದಾಗ ಆತನನ್ನು ಹಿಂಬಾಲಿಸಿಕೊಂಡು ಮನೆಗೇ ಬಂದು ಲೈಂಗಿಕ ಕಿರು
Aug 191 min read


ಉದ್ಯೋಗ ಮಾಹಿತಿಗಾಗಿ ‘ಯುವಸೇತು’ ಯೋಜನೆ: ಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಖಾಸಗಿ ವಲಯದಲ್ಲಿ ಲಭ್ಯವಿರುವ ಉದ್ಯೋಗಾವಕಾಶಗಳ ಮಾಹಿತಿಯನ್ನು ಯುವಕರಿಗೆ ತಲುಪಿಸುವ ಉದ್ದೇಶದಿಂದ ‘ಯುವಸೇತು’ ಎಂಬ ಹೊಸ ಯೋಜನೆ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ವಿಶ್ವ ಯುವ ಕೌಶಲ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವಜನತೆ ವಿದ್ಯೆಯ ಜೊತೆಗೆ ಕೌಶಲ್ಯವನ್ನೂ ಬೆಳೆಸಿಕೊಳ್ಳಬೇಕು. ಕೌಶಲ್ಯವನ್ನು ಯಾರಿಂದಲೂ ಕದಿಯಲು ಸಾಧ್ಯವಿಲ್ಲ. ಕೌಶಲ್ಯ ಇದ್ದರೆ ಎಲ್ಲಿ ಬೇಕಾದರೂ ಬದುಕು ಕಟ್ಟಿಕೊಳ್ಳಬಹುದು ಎಂದು ಹೇಳಿದರು. ಖಾಸಗಿ ಕ್ಷೇತ್ರದ ಉದ್ಯೋಗದಾತರು ತ
Aug 181 min read
Archive
bottom of page



