top of page
News Articles
Sathyapatha News Plus


MRPL ಸ್ಫೋಟ ದುರಂತ: ಮುಲ್ಕಿ ಮೂಲದ 23 ವರ್ಷದ ಮನೀಶ್ ಕರ್ಕೇರಾ ಮೃತ್ಯು
ಮಂಗಳೂರು: ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಘಟಕದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭಾರೀ ಸ್ಫೋಟ ಹಾಗೂ ಬೆಂಕಿ ಅವಘಡದಲ್ಲಿ ಗುತ್ತಿಗೆ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಮುಲ್ಕಿ ಮೂಲದ 23 ವರ್ಷದ ಮನೀಶ್ ಕರ್ಕೇರಾ ಎಂದು ಗುರುತಿಸಲಾಗಿದೆ. ಸ್ಫೋಟ ಸಂಭವಿಸಿದ ಬಳಿಕ ತಾನು ಕೆಲಸ ಮಾಡುತ್ತಿದ್ದ ಪ್ರದೇಶದಲ್ಲಿ ಮನೀಶ್ ನಾಪತ್ತೆಯಾಗಿದ್ದರು. ರಕ್ಷಣಾ ತಂಡಗಳು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಅವಶೇಷಗಳ ನಡುವೆ ಸುಟ್ಟ ಸ್ಥಿತಿಯಲ್ಲಿದ್ದ ಅವರ ಮೃತದೇಹ ಪತ್ತೆಯಾಗಿದೆ. ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಘಟನೆಯಲ್ಲಿ ಓ
Sep 301 min read


MRPL ಘಟಕದಲ್ಲಿ ಸ್ಫೋಟ: ಓರ್ವನಿಗೆ ಗಂಭೀರ ಸುಟ್ಟ ಗಾಯ, ಆರು ಮಂದಿಗೆ ಸಣ್ಣಪುಟ್ಟ ಗಾಯ
ಮಂಗಳೂರು: ನಗರದ ಹೊರವಲಯದ ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಆವರಣದಲ್ಲಿರುವ CHT (Hydrogen Sulphur Treatment) ಘಟಕದಲ್ಲಿ ಬುಧವಾರ (ಸೆ.30) ಸ್ಫೋಟ ಸಂಭವಿಸಿ ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಸ್ಫೋಟದ ಬಳಿಕ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ದಟ್ಟ ಹೊಗೆ ಆವರಿಸಿತ್ತು. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟಕದಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ ಬ್ಯಾಪ್ಟಿಸ್ಟ್ ಅವರಿಗೆ ಸುಮಾರು 35% ಸುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗ
Sep 301 min read


ಕಲ್ಲಡ್ಕ ಫ್ಲೈಓವರ್ನಲ್ಲಿ ಲಾರಿ ತಡೆ: 6ಕ್ಕೂ ಅಧಿಕ ದನಗಳ ರಕ್ಷಣೆ, ಚಾಲಕ ಎಸ್ಕೇಪ್
ಬಂಟ್ವಾಳ: ದನಗಳನ್ನು ಸಾಗಿಸಲಾಗುತ್ತಿದೆ ಎನ್ನಲಾದ ಲಾರಿಯನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಕಲ್ಲಡ್ಕ ಫ್ಲೈಓವರ್ನಲ್ಲಿ ತಡೆದು ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಬುಧವಾರ ಮುಂಜಾನೆ ನಡೆದಿದೆ. ಮಾಣಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯನ್ನು ತಡೆದು ಪರಿಶೀಲಿಸಿದಾಗ, ಲಾರಿಯಲ್ಲಿ ಆರುಕ್ಕೂ ಅಧಿಕ ದನಗಳು ಪತ್ತೆಯಾಗಿವೆ ಎನ್ನಲಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಬಂದ ಬಂಟ್ವಾಳ ನಗರ ಠಾಣೆ ಪೊಲೀಸರು ದನಗಳನ್ನು ರಕ್ಷಿಸಿ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಲಾರಿ ಚಾಲಕ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ
Sep 301 min read


ನಿಂತಿಕಲ್ಲಿನ ಅಜಯ್ ಫೂಟ್ವೇರ್ ಮಾಲೀಕ ಅಜಯ್ ನಿಧನ : ಹೊಟ್ಟೆನೋವಿಗೆ ಚಿಕಿತ್ಸೆ ಪಡೆಯಲು ತೆರಳಿದ್ದ ಆಸ್ಪತ್ರೆಯಲ್ಲಿ ಮೃತ್ಯು
ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ 25 ವರ್ಷದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ. ಐವತ್ತೊಕ್ಲು ಗ್ರಾಮದ ಕಂರ್ಬು ನಿವಾಸಿಗಳಾದ ಸೀತಾರಾಮ ಗೌಡ ಮತ್ತು ಉಮಾವತಿ ದಂಪತಿಯ ಪುತ್ರ ಅಜಯ್ (25) ಮೃತ ಯುವಕ. ಅಜಯ್ ಅವರು ಸೆಪ್ಟೆಂಬರ್ 29ರಂದು ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಸ್ಪಂದಿಸದೆ ಅದೇ ರಾತ್ರಿ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅಜಯ್ ಅವರು ನಿಂತಿಕಲ್ಲಿನಲ್ಲಿ ‘ಅಜಯ್ ಫೂಟ್ವೇರ್’ ಅಂಗಡಿ ನಡೆಸುತ್ತಿದ್ದರು.
Sep 301 min read


ಅಕ್ಟೋಬರ್ 1ರಿಂದ ಬದಲಾಗಲಿದೆ ಈ 10 ಪ್ರಮುಖ ನಿಯಮಗಳು: ಸಾರ್ವಜನಿಕರೇ ಗಮನಿಸಿ!
ಬೆಂಗಳೂರು: ಅಕ್ಟೋಬರ್ 1, 2026ರಿಂದ ದೇಶದ ಜನರ ದೈನಂದಿನ ಜೀವನ ಮತ್ತು ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದಂತೆ ಹಲವು ಪ್ರಮುಖ ಬದಲಾವಣೆಗಳು ಜಾರಿಗೆ ಬರಲಿವೆ. ಎಲ್ಪಿಜಿ ಸಿಲಿಂಡರ್ ದರದಿಂದ ಹಿಡಿದು ಬ್ಯಾಂಕಿಂಗ್, ಎಫ್ಡಿ, ಟಿಡಿಎಸ್ ಹಾಗೂ ಬ್ಯಾಂಕ್ ರಜೆಗಳವರೆಗೆ ಹಲವು ನಿಯಮಗಳಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ. 1. ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಬದಲಾವಣೆ ಪ್ರತಿ ತಿಂಗಳ ಮೊದಲ ದಿನ ತೈಲ ಮಾರುಕಟ್ಟೆ ಕಂಪನಿಗಳು ಎಲ್ಪಿಜಿ ಸಿಲಿಂಡರ್ ದರಗಳನ್ನು ಪರಿಷ್ಕರಿಸುತ್ತವೆ. ಹೀಗಾಗಿ ಅಕ್ಟೋಬರ್ 1ರಂದು ಗೃಹಬಳಕೆ ಮತ್ತು ವಾಣಿಜ್ಯ ಸಿಲಿಂಡರ್ಗಳ ಬೆಲೆಯಲ್ಲಿ ಬದಲಾವಣೆ ಆಗುವ ಸಾಧ್ಯತೆಯಿದೆ. 2. ಎಲ್
Sep 302 min read


ಗೃಹಲಕ್ಷ್ಮಿಯರಿಗೆ ನವರಾತ್ರಿ ಗುಡ್ನ್ಯೂಸ್; 33ನೇ ಕಂತಿನ ಹಣ ಬಿಡುಗಡೆಗೆ ಗ್ರೀನ್ ಸಿಗ್ನಲ್
ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಯೋಜನೆಯ 33ನೇ ಕಂತಿನ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲು ಆರ್ಥಿಕ ಇಲಾಖೆ ಅನುಮತಿ ನೀಡಿದೆ ಎಂದು ತಿಳಿದುಬಂದಿದೆ. ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಹಣ ಬಿಡುಗಡೆಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ. ಇದರೊಂದಿಗೆ ಈಗಾಗಲೇ ಯೋಜನೆಗೆ ಅರ್ಹರಾಗಿರುವ ಮಹಿಳೆಯರಿಗೆ 33ನೇ ಕಂತಿನ ಹಣ ಖಾತೆಗೆ ಜಮೆಯಾಗುವ ನಿರೀಕ್ಷೆ ಮೂಡಿದೆ. ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ₹2,000 ನೇರವಾಗಿ ಬ್ಯಾಂಕ್ ಖಾತೆಗೆ ವರ
Sep 291 min read


ವೃದ್ಧ ತಾಯಿಗೆ ಆಸರೆಯಾಗಬೇಕಿದ್ದ ಮಗನೇ ರಸ್ತೆಯಲ್ಲಿ ಬಿಟ್ಟು ಹೋದ! ಉಡುಪಿಯಲ್ಲಿ ಅಮಾನವೀಯ ಘಟನೆ
ಉಡುಪಿ: ಬ್ರಹ್ಮಾವರದ ಎಸ್.ಎಂ.ಎಸ್. ಆಂಗ್ಲ ಮಾಧ್ಯಮ ಶಾಲೆ ಬಳಿ 70 ವರ್ಷದ ವೃದ್ಧೆಯೊಬ್ಬರು ದಿಕ್ಕು ತೋಚದೆ ನಿಂತಿದ್ದ ಘಟನೆ ನಡೆದಿದೆ. ಶಾಲಾ ಬಸ್ ಚಾಲಕ ರಾಮನಾಥ್ ಶೆಣೈ ಅವರು ವೃದ್ಧೆಯನ್ನು ಗಮನಿಸಿ ಸಮಾಜ ಸೇವಾ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿದ ನಿತ್ಯಾನಂದ ಒಳಕಾಡು ಅವರು 112 ತುರ್ತು ಪೊಲೀಸ್ ಸಹಾಯವಾಣಿ ಸಿಬ್ಬಂದಿಯ ನೆರವಿನಿಂದ ವೃದ್ಧೆಯನ್ನು ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ವೃದ್ಧೆ ತನ್ನ ಹೆಸರು ಸರಸ್ವತಿ (70) ಎಂದು ಹಾಗೂ ತಮಿಳುನಾಡಿನ ತಿರುವಳ್ಳುವೂರು ನಿವಾಸಿ ಎಂದು ತಿಳಿಸಿದ್ದಾರೆ. ತನ್ನ ಮಗ ಕಾರಿನಲ್ಲಿ
Sep 281 min read


ಬ್ಯಾಂಕ್ ಮುಷ್ಕರ ರದ್ದು; ಎಂದಿನಂತೆ ಕಾರ್ಯನಿರ್ವಹಿಸಲಿವೆ ಬ್ಯಾಂಕ್ಗಳು
ನವದೆಹಲಿ: ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಸೆಪ್ಟೆಂಬರ್ 28ರಿಂದ 30ರವರೆಗೆ ಕರೆ ನೀಡಿದ್ದ ಮೂರು ದಿನಗಳ ದೇಶವ್ಯಾಪಿ ಬ್ಯಾಂಕ್ ಮುಷ್ಕರವನ್ನು ರದ್ದುಗೊಳಿಸಿದೆ. ಒಕ್ಕೂಟಗಳು ದಿಢೀರ್ ಈ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಬ್ಯಾಂಕ್ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ವಾರಾಂತ್ಯದ ರಜೆಗಳೊಂದಿಗೆ ಸತತ ಮೂರು ದಿನಗಳ ಮುಷ್ಕರ ನಡೆದರೆ ಸಾರ್ವಜನಿಕರಿಗೆ ಬ್ಯಾಂಕಿಂಗ್ ಸೇವೆಗಳಲ್ಲಿ ನಿರಂತರ ವ್ಯತ್ಯಯ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 27ರ ಭಾನುವಾರದಂದು ಸಾರ್ವಜನಿಕ ವಲಯದ ಬ್ಯಾಂಕ್ಗಳು ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳು (RRB) ಸಹ..
Sep 281 min read


ಮಂಗಳೂರು: ಬಾಲ್ಕನಿ ತಡೆಗೋಡೆ ಕುಸಿತ; ಗಂಭೀರ ಗಾಯಗೊಂಡಿದ್ದ 16 ವರ್ಷದ ವಿದ್ಯಾರ್ಥಿ ಸಾವು
ಮಂಗಳೂರು ನಗರದ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್ನಲ್ಲಿ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸೇಂಟ್ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿಯನ್ನು ಹಳೆಅಂಗಡಿ ನಿವಾಸಿ ಮೊಹಮ್ಮದ್ ಶಮಾಜ್ (16) ಎಂದು ಗುರುತಿಸಲಾಗಿದೆ. ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಶಮಾಜ್ ನೆಲ ಮಹಡಿಯಲ್ಲಿ ನಿಂತಿದ್ದಾಗ ಮೇಲಿನಿಂದ ತಡೆಗೋಡೆಯ ಒಂದು ಭಾಗ ಕುಸಿದು ಅವರ ಮೇಲೆ ಬಿದ್ದಿತ್ತು ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿ
Sep 271 min read


ಮಂಗಳೂರು: ವೆನ್ಲಾಕ್ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ: 400 ಹೆಚ್ಚುವರಿ ಹಾಸಿಗೆಗಳ ಬಲ!
ಮಂಗಳೂರು: ಕರಾವಳಿ ಕರ್ನಾಟಕ ಹಾಗೂ ನೆರೆಯ ಕೇರಳದ ರೋಗಿಗಳಿಗೆ ಆಸರೆಯಾಗಿರುವ ಮಂಗಳೂರಿನ ಪ್ರಸಿದ್ಧ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಸಾಮರ್ಥ್ಯ ಹೆಚ್ಚಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆಸ್ಪತ್ರೆಗೆ ಒಟ್ಟು 400 ಹೆಚ್ಚುವರಿ ಹಾಸಿಗೆಗಳನ್ನು ಕಲ್ಪಿಸಲು ಸರ್ಕಾರ ಅನುಮೋದನೆ ನೀಡಿದ್ದು, ಮೊದಲ ಹಂತದಲ್ಲಿ 200 ಹಾಸಿಗೆಗಳನ್ನು ಸೇರ್ಪಡೆಗೊಳಿಸಲು ಆರೋಗ್ಯ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 18ರ ಸಂಪುಟ ಸಭೆಯ ತೀರ್ಮಾನದಂತೆ ಸೆಪ್ಟೆಂಬರ್ 25ರಂದು ಈ ಆದೇಶ ನೀಡಲಾಗಿದೆ. ಮೊದಲ ಹಂತದ 200 ಹಾಸಿಗೆಗಳಲ್ಲಿ 50 ಹಾಸಿಗೆಗಳನ್ನು ಐಸಿಯು (30 ವೆಂಟಿಲೇಟರ್, 20 ಸ್ಟೆಪ್-ಡೌನ್), 10 ಹಾಸಿಗೆಗಳ
Sep 261 min read


ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಘೋಷಣೆ: ಆರು ಮಂದಿ ಸಾಧಕರು ಆಯ್ಕೆ
ಬೆಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು 2025 ಮತ್ತು 2026ರ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಘೋಷಿಸಿದೆ. ತುಳು ಸಾಹಿತ್ಯ, ಸಂಶೋಧನೆ, ಜಾನಪದ ಕಲೆ, ರಂಗಭೂಮಿ ಹಾಗೂ ಸಿನಿಮಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಆರು ಮಂದಿ ಹಿರಿಯ ಸಾಧಕರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಕುರಿತು ಮಾಹಿತಿ ನೀಡಿದ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ಪ್ರಶಸ್ತಿಯು ತಲಾ 50,000 ರೂಪಾಯಿ ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಅಕ್ಟೋಬರ್ 4 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ ಎಂದು ತಿಳಿಸಿದರು. ಪ್ರಶಸ್ತಿ
Sep 261 min read


ಮಂಗಳೂರು: ಎಮ್ಮೆಕೆರೆಯಲ್ಲಿ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ
ಮಂಗಳೂರು: ನಗರದ ಎಮ್ಮೆಕೆರೆ ಕ್ರಾಸ್ನ ರಾಮ ಲಕ್ಷ್ಮಿ ಹಾಲ್ನಲ್ಲಿ ನಡೆದ ಪದಾಧಿಕಾರಿಗಳ ಕಾರ್ಯಕ್ರಮದ ವೇಳೆ ಗೋಡೆ ಕುಸಿದು ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅತಿಯಾದ ಜನಸಂದಣಿಯಿಂದಾಗಿ ಹೊರಭಾಗದ ಕಾರಿಡಾರ್ನಲ್ಲಿ ನಿಂತಿದ್ದ ವಿದ್ಯಾರ್ಥಿಗಳು ಆಧಾರ ಗೋಡೆಗೆ ಒರಗಿಕೊಂಡಾಗ, ದುರ್ಬಲವಾಗಿದ್ದ ಗೋಡೆ ಏಕಾಏಕಿ ಕುಸಿದು ಈ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಹೈಲ್ಯಾಂಡ್ ಆಸ್ಪತ್ರೆಗೆ ಸೇರಿಸಲಾಗಿದೆ. ಗಾಯಗೊಂಡವರಲ್ಲಿ ಮಹಮ್ಮದ್ ಶಮಾಜ್ (16) ಅವರ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿದ್ದಾರೆ. ಉಳಿದಂತೆ ಮಹಮ್ಮದ್ ಶನಾನ್ ಅಹಮ್ಮದ್ (18), ಹನೀಫ್ (23), ದವೂದ್ ಫರ್ಸಿನ್ ಅಹಮ್ಮದ
Sep 261 min read


ಆಲಂಕಾರು ಥಾರ್ ಡಿಕ್ಕಿಗೆ ಬೈಕ್ ಸವಾರ ಸಾವು; ಅಪಘಾತದ ಬಳಿಕ ಚಾಲಕ ಪರಾರಿ
ಕಡಬ: ಆಲಂಕಾರು ಗ್ರಾಮದ ಆಚಾರಿಕೊಟ್ಟದಲ್ಲಿ ಮಹೀಂದ್ರಾ ಥಾರ್ ವಾಹನವು ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೆ.25ರ ರಾತ್ರಿ ನಡೆದಿದೆ. ಮೃತರನ್ನು ಆಲಂಕಾರು ನಾಡ್ತಿಲ ನಿವಾಸಿ ಲೋಕೇಶ್ ನಾಡ್ತಿಲ (42) ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು 9.45ಕ್ಕೆ ಲೋಕೇಶ್ ಅವರು ಟಿವಿಎಸ್ ವಿಕ್ಟರ್ ಬೈಕ್ನಲ್ಲಿ ಪೇಟೆಯಿಂದ ಆಚಾರಿಕೊಟ್ಟ ಕಡೆಗೆ ತೆರಳುತ್ತಿದ್ದಾಗ, ಹಿಂದಿನಿಂದ ಬಂದ ಮಹೀಂದ್ರಾ ಥಾರ್ (KA-21-MB-0233) ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ಪರಿಣಾಮ ಗಂಭೀರವಾಗಿ ಗಾಯಗೊಂಡ ಲೋಕೇಶ್ ಅವರನ್ನು ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಗೆ ದಾಖಲಿಸಿ, ಬಳಿಕ
Sep 261 min read


ಬಂಟ್ವಾಳ: ಕೊಲೆಯತ್ನ ಪ್ರಕರಣದ ಮೂವರು ಆರೋಪಿಗಳ ಬಂಧನ, ಪೊಲೀಸ್ ಕಸ್ಟಡಿಗೆ
ಬಂಟ್ವಾಳ: ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ತಲವಾರು ಹಾಗೂ ಕಬ್ಬಿಣದ ರಾಡ್ನಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆಯತ್ನ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಮ್ಮುಂಜೆ ನಿವಾಸಿ ಪ್ರಶಾಂತ್ (38), ತೆಂಕಬೆಳ್ಳೂರು ನಿವಾಸಿ ರಾಮದಾಸ್ (43) ಹಾಗೂ ಬಡಗಬೆಳ್ಳೂರು ನಿವಾಸಿ ಶಂಕರ (45) ಬಂಧಿತ ಆರೋಪಿಗಳು. ತೆಂಕಬೆಳ್ಳೂರು ಗ್ರಾಮದ ಪ್ರಶಾಂತ್ ಬೆಳ್ಳಾಡ್ (41) ಹಲ್ಲೆಗೊಳಗಾದವರಾಗಿದ್ದಾರೆ. ಸೆಪ್ಟೆಂಬರ್ 20 ರಂದು ಸಂಜೆ ಪ್ರಶಾಂತ್ ಬೆಳ್ಳಾಡ್ ಅವರು ಕಮ್ಮಾಜೆಯಲ್ಲಿದ್ದಾಗ, ಆಟೋರಿಕ್ಷಾದಲ್ಲಿ ಬ
Sep 261 min read


ಬರ ಪರಿಹಾರ ಸಾಕಾಗುವುದಿಲ್ಲ, ರೈತರ ಸಾಲಮನ್ನಾ ಮಾಡಿ: ಸರ್ಕಾರಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ಒತ್ತಾಯ
ಬರಪೀಡಿತ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ತಲಾ ರೂ. 2,500 ಇನ್ಪುಟ್ ಸಬ್ಸಿಡಿ ತೀರಾ ಕಡಿಮೆಯಾಗಿದ್ದು, ಕೂಡಲೇ ರೈತರ ಸಾಲಮನ್ನಾ ಮಾಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಒತ್ತಾಯಿಸಿದ್ದಾರೆ. ಈ ಕುರಿತು ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ಅವರು, ಪ್ರಸ್ತುತ ಕಾರ್ಮಿಕರ ದಿನಗೂಲಿಯೇ ರೂ. 1,000ಕ್ಕೂ ಹೆಚ್ಚಿದೆ. ಇಂತಹ ಸಂದರ್ಭದಲ್ಲಿ ನಷ್ಟದಲ್ಲಿರುವ ರೈತರಿಗೆ ಕೇವಲ ರೂ. 2,500 ಪರಿಹಾರ ನೀಡಿದರೆ ನ್ಯಾಯ ಸಿಗುವುದಿಲ್ಲ. ಹೀಗಾಗಿ ಸರ್ಕಾರ ತಕ್ಷಣವೇ ಸಾಲಮನ್ನಾ ಘೋಷಿಸಿ ಸಂಕಷ್ಟದಲ್ಲಿರುವ ಅನ್ನದಾತರ ನೆರವಿಗೆ ಬರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುರುವಾರ ವಿ
Sep 261 min read


ಆಸ್ತಿ ಮತ್ತೊಬ್ಬರ ಪಾಲಾಗುವ ಭಯ; ₹6 ಲಕ್ಷಕ್ಕೆ ತಂದೆಯ ಹತ್ಯೆಗೆ ಪುತ್ರನಿಂದ ಸುಪಾರಿ?
ಕಾನ್ಪುರ: ತಂದೆಯ ಆಸ್ತಿ ಮತ್ತೊಬ್ಬ ಮಹಿಳೆಯ ಹೆಸರಿಗೆ ವರ್ಗಾವಣೆಯಾಗಬಹುದು ಎಂಬ ಭಯ ಹಾಗೂ ₹40 ಲಕ್ಷಕ್ಕೂ ಅಧಿಕ ಸಾಲದ ಹಿನ್ನೆಲೆ 60 ವರ್ಷದ ಔಷಧ ವ್ಯಾಪಾರಿ ತಂದೆಯನ್ನು ಕೊಲ್ಲಲು ಪುತ್ರನೇ ಸಂಚು ರೂಪಿಸಿದ್ದಾನೆ ಎಂದು ಕಾನ್ಪುರ ಪೊಲೀಸರು ತಿಳಿಸಿದ್ದಾರೆ. ಬಿರ್ಹಾನಾ ರಸ್ತೆಯಲ್ಲಿ ಔಷಧ ವ್ಯಾಪಾರ ನಡೆಸುತ್ತಿದ್ದ ವಿನೀತ್ ಮನೋಚಾ ಅವರನ್ನು ಸೆ.5ರಂದು ಕಲ್ಯಾಣಪುರದ ರತನ್ ಆರ್ಬಿಟ್ ಅಪಾರ್ಟ್ಮೆಂಟ್ನಲ್ಲಿ ಇರಿದು ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಪುತ್ರ ಸುಬ್ರತ್ ಮನೋಚಾನನ್ನು ಬುಧವಾರ ರಾತ್ರಿ ಬಂಧಿಸಿ, ಗುರುವಾರ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ತನಿಖೆಯಲ್ಲಿ ಸುಬ್ರತ್ಗೆ ಜೂಜು ಹಾಗ
Sep 251 min read


ಸೌಜನ್ಯ ಕೊಲೆ ಪ್ರಕರಣಕ್ಕೆ ಕೊನೆಗೂ ಬಿಗ್ ಟ್ವಿಸ್ಟ್: ಮರುತನಿಖೆಗೆ ಎಸ್ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಬೆಳ್ತಂಗಡಿಯ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪ್ರಕರಣದ ಮರುತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಿ ಅಧಿಕೃತ ಆದೇಶ ಹೊರಡಿಸಿದೆ. ಸುಪ್ರೀಂ ಕೋರ್ಟ್ ನೀಡಿರುವ ಸ್ಪಷ್ಟ ನಿರ್ದೇಶನದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಐಜಿಪಿ ಎನ್. ಶಶಿಕುಮಾರ್ ಅವರ ನೇತೃತ್ವದಲ್ಲಿ ಈ ಎಸ್ಐಟಿ ಕಾರ್ಯನಿರ್ವಹಿಸಲಿದ್ದು, ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಐಪಿಎಸ್ ಅಧಿಕಾರಿಗಳಾದ ನಿಶಾ ಜೇಮ್ಸ್, ಲೋಕೇಶ್ ಹಾಗೂ ಎಎಸ
Sep 251 min read


ಬಂಟ್ವಾಳ: ಹೆಜ್ಜೇನು ದಾಳಿಗೆ ವೃದ್ಧೆ ಬಲಿ
ಬಂಟ್ವಾಳ: ಇಲ್ಲಿನ ಕಸಬಾ ಗ್ರಾಮದ ಕೆಮ್ಮಟ್ಟೆ ಗುಡ್ಡೆಯಲ್ಲಿ ಹೆಜ್ಜೇನು ದಾಳಿಗೆ ಒಳಗಾಗಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ. ಕೆಮ್ಮಟ್ಟೆ ಗುಡ್ಡೆ ನಿವಾಸಿ ಕಮಲಾ (74) ಮೃತಪಟ್ಟ ದುರದೃಷ್ಟಕರ ಮಹಿಳೆ. ಸೆಪ್ಟೆಂಬರ್ 23ರಂದು ಬೆಳಿಗ್ಗೆ ಕಮಲಾ ಅವರು ಮನೆಯ ಬಳಿಯ ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ದಿಢೀರನೆ ದಾಳಿ ಮಾಡಿದ ಹೆಜ್ಜೇನುಗಳು ಅವರ ಮುಖ, ಬೆನ್ನು ಹಾಗೂ ಕಾಲುಗಳಿಗೆ ತೀವ್ರವಾಗಿ ಕಚ್ಚಿದ್ದವು. ಮನೆಗೆ ಬಂದ ಅವರು ಘಟನೆಯನ್ನು ಮಗ ದಿನೇಶ್ ಅವರಿಗೆ ತಿಳಿಸಿದ್ದರು. ಕೂಡಲೇ ಅವರನ್ನು ಖಾಸಗಿ ಕ್ಲಿನಿಕ್ಗೆ ಕರೆದೊಯ್ದು ಪ್ರಥಮ ಚಿಕಿತ್ಸ
Sep 251 min read


ಬೆಳ್ತಂಗಡಿ: ಪತ್ನಿ ಶವ ಕೆರೆಯಲ್ಲಿ ಪತ್ತೆಯಾದ ಬೆನ್ನಲ್ಲೇ ಪತಿಯೂ ಆತ್ಮಹತ್ಯೆಗೆ ಶರಣು - ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ: ತಾಲೂಕಿನ ಶಿಶಿಲ ಗ್ರಾಮದ ಗುಂಡಿಕ್ಕಾಡಿನಲ್ಲಿ ಅತ್ಯಂತ ಆಘಾತಕಾರಿ ಹಾಗೂ ನಿಗೂಢ ಘಟನೆಯೊಂದು ಸಂಭವಿಸಿದ್ದು, ಪತ್ನಿಯ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಬೆನ್ನಲ್ಲೇ ಆಕೆಯ ಪತಿಯೂ ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುಂಡಿಕ್ಕಾಡು ನಿವಾಸಿ ತನಿಯಪ್ಪ ಗೌಡ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಳೆದ ಎರಡು-ಮೂರು ದಿನಗಳಿಂದ ತನಿಯಪ್ಪ ಗೌಡ ಅವರು ಯಾರಿಗೂ ಕಾಣಿಸದೆ ನಾಪತ್ತೆಯಾಗಿದ್ದರು. ಇದರಿಂದ ಅನುಮಾನಗೊಂಡ ಸ್ಥಳೀಯ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ತೀವ್ರ ಶೋಧ ಕಾರ್ಯ ನಡೆಸಿದಾಗ, ತನಿಯಪ್ಪ ಗೌಡ ಅವರು ತಮ್ಮ ನಿವಾಸದ ಒಳಗಡೆಯೇ ನೇಣು
Sep 241 min read


ಗ್ರೇಟರ್ ನೋಯ್ಡಾದಲ್ಲಿ ಭೀಕರ ದುರಂತ: ಚಲಿಸುತ್ತಿದ್ದ ಸ್ಲೀಪರ್ ಬಸ್ಗೆ ಬೆಂಕಿ, 9 ಮಂದಿ ಸಜೀವ ದಹನ
ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್ಪ್ರೆಸ್ವೇನಲ್ಲಿ ಚಲಿಸುತ್ತಿದ್ದ ಸ್ಲೀಪರ್ ಬಸ್ನಲ್ಲಿ ಏಕಾಏಕಿ ಭೀಕರ ಬೆಂಕಿ ಕಾಣಿಸಿಕೊಂಡು 9 ಮಂದಿ ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ. ಸುಮಾರು 40 ರಿಂದ 50 ಮಂದಿ ಇದ್ದ ಈ ಬಸ್ನಲ್ಲಿ ಬೆಂಕಿ ವೇಗವಾಗಿ ಆವರಿಸಿದಾಗ, ಪ್ರಾಣ ಉಳಿಸಿಕೊಳ್ಳಲು ಕೆಲ ಪ್ರಯಾಣಿಕರು ಚಲಿಸುತ್ತಿದ್ದ ಬಸ್ನಿಂದಲೇ ಹೊರಗೆ ಜಿಗಿದಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಕೂಲಿಂಗ್ ಕಾರ್ಯಾಚರಣೆ ನಡೆಸಿದ್ದಾರೆ. ಬಸ್ನೊಳಗೆ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯ
Sep 241 min read
Archive
bottom of page



