top of page
News Articles
Sathyapatha News Plus


ವಿಟ್ಲ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು
ವಿಟ್ಲ: ಕೇರಳ ಮೂಲದ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯೊಂದಿಗೆ ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದು, ಆಕೆಯನ್ನು ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. 2025ರ ಡಿಸೆಂಬರ್ 21ರಂದು ಬಾಲಕಿಯು ಆರೋಪಿತ ಬಾಲಕನ ಮನೆಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. 2026ರ ಸೆಪ್ಟೆಂಬರ್ 8ರಂದು ಬಾಲಕಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೆಪ್ಟೆಂಬರ್ 9ರಂದು ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಕುರಿತು ವಿಟ್ಲ ಠಾಣೆಯಲ್ಲಿ
Sep 241 min read


ಶಾರ್ಜಾದಲ್ಲಿ ಉಡುಪಿ ಮೂಲದ ಆಲ್ವಿನ್ ಪ್ರಕಾಶ್ ಕುಂದರ್ ಹತ್ಯೆ: ದೇಹ 9 ತುಂಡು, ಸಿಸಿಟಿವಿಯಲ್ಲಿ ಶವ ಸಾಗಿಸಿದ ದೃಶ್ಯ
: ಉಡುಪಿ ಮೂಲದ ಆಲ್ವಿನ್ ಪ್ರಕಾಶ್ ಕುಂದರ್ ಅವರ ಹತ್ಯೆ ಪ್ರಕರಣದಲ್ಲಿ ತನಿಖೆಗೆ ಮಹತ್ವದ ಸುಳಿವುಗಳು ಲಭ್ಯವಾಗಿವೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿಯ ಪ್ರಕಾರ, ಆಲ್ವಿನ್ ಅವರ ಮೃತದೇಹವನ್ನು ಒಂಬತ್ತು ಭಾಗಗಳಾಗಿ ಬೇರ್ಪಡಿಸಲಾಗಿತ್ತು. ತನಿಖೆಯ ಭಾಗವಾಗಿ ಪರಿಶೀಲಿಸಲಾದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರು ಎರಡು ಚೀಲಗಳನ್ನು ಸಾಗಿಸುತ್ತಿರುವುದು ಕಂಡುಬಂದಿದೆ ಎಂದು ವರದಿಯಾಗಿದೆ. ಈ ದೃಶ್ಯಗಳು ಪ್ರಕರಣದ ತನಿಖೆಯಲ್ಲಿ ಪ್ರಮುಖ ಸುಳಿವಾಗಿವೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಆಲ್ವಿನ್ ಅವರ ಎಡ ಎದೆ ಭಾಗದಲ್ಲಿ ಎರಡು ಚುಚ್ಚಿದ ಗಾಯಗಳಿರುವುದಾಗಿ ಉಲ್ಲೇಖಿ
Sep 231 min read


15ಕ್ಕೂ ಹೆಚ್ಚು ದೂರು, ಲೋಕಾಯುಕ್ತ ದಾಳಿ ಬೆನ್ನಲ್ಲೇ ಕ್ರಮ: ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ಸಸ್ಪೆಂಡ್!
ಮಂಗಳೂರು, ಸೆ.23: ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಹಾಗೂ ಅನುಚಿತ ವರ್ತನೆ ಸೇರಿದಂತೆ ಹಲವು ಆರೋಪಗಳ ಹಿನ್ನೆಲೆಯಲ್ಲಿ ಆರ್ಯಾಪು ಗ್ರಾಮ ಪಂಚಾಯಿತಿಯ ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಅಮಾನತುಗೊಳಿಸಿದ್ದಾರೆ. ವಾರದ ಹಿಂದಷ್ಟೇ ಅವರನ್ನು ಉಪ್ಪಿನಂಗಡಿ ಗ್ರಾಮಾಂತರ ಪಂಚಾಯಿತಿಗೆ ಪಿಡಿಒ ಆಗಿ ವರ್ಗಾವಣೆ ಮಾಡಲಾಗಿತ್ತು. ಅದಕ್ಕೂ ಮುನ್ನ ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರ ವಿರುದ್ಧ 15ಕ್ಕೂ ಹೆಚ್ಚು ಸಾರ್ವಜನಿಕ ದೂರುಗಳು ದಾಖಲಾಗಿದ್ದವು ಎನ್ನಲಾಗಿದೆ. ವ್ಯಾಪಾರ ಪರವಾನಗಿ ನವೀಕರ
Sep 231 min read


ಸೆಪ್ಟೆಂಬರ್ 26ರಿಂದ 5 ದಿನ ಬ್ಯಾಂಕ್ಗಳ ಸೇವೆ ಲಭ್ಯವಿಲ್ಲ: ಸತತ ರಜೆಯಿಂದ ಗ್ರಾಹಕರಿಗೆ ಸಂಕಷ್ಟ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರು ಸೆಪ್ಟೆಂಬರ್ 28ರಿಂದ 30ರವರೆಗೆ ಮೂರು ದಿನಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದರೊಂದಿಗೆ ಸೆಪ್ಟೆಂಬರ್ 26 ಹಾಗೂ 27ರಂದು ನಾಲ್ಕನೇ ಶನಿವಾರ ಮತ್ತು ಭಾನುವಾರದ ಸಾಮಾನ್ಯ ರಜೆ ಬಂದಿರುವುದರಿಂದ, ಸತತ ಐದು ದಿನಗಳ ಕಾಲ ದೇಶದಾದ್ಯಂತ ಬ್ಯಾಂಕ್ ಶಾಖೆಗಳು ಸಂಪೂರ್ಣವಾಗಿ ಮುಚ್ಚಿರಲಿವೆ. ಈ ಹಿಂದೆ ಸೆಪ್ಟೆಂಬರ್ 11ರಂದು ಬ್ಯಾಂಕ್ ನೌಕರರ ಒಕ್ಕೂಟ ಮುಷ್ಕರ ನಡೆಸಿತ್ತು. ಆದರೆ, ಸರ್ಕಾರದಿಂದ ಸೂಕ್ತ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಯೋಜನೆಯಂತೆ ಸೆಪ್ಟೆಂಬರ್ 28ರಿಂದ ಮತ್ತೆ ಮುಷ್ಕರ ಮುಂದುವರಿಸಲು ತೀರ್ಮಾನ
Sep 231 min read


ಪುತ್ತೂರು, ವಿಟ್ಲ ಅಭಿವೃದ್ಧಿಗೆ ₹10 ಕೋಟಿ ವಿಶೇಷ ಅನುದಾನ: ಶಾಸಕ ಅಶೋಕ್ ರೈ
ಪುತ್ತೂರು: ಕರ್ನಾಟಕ ನಗರಾಭಿವೃದ್ಧಿ ಇಲಾಖೆಯ ಮೂಲಕ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ನಗರಸಭೆ ಹಾಗೂ ವಿಟ್ಲ ಪಟ್ಟಣ ಪಂಚಾಯತ್ಗೆ ಒಟ್ಟು ₹10 ಕೋಟಿ ವಿಶೇಷ ಅನುದಾನ ಮಂಜೂರಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಶಾಸಕರು, ಪುತ್ತೂರು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದರು. ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಹಲವು ಒಳರಸ್ತೆಗಳ ಅಭಿವೃದ್ಧಿ ಹಾಗೂ ಒಳಚರಂಡಿ ಸೇರಿದಂತೆ ಮೂಲಸೌಕರ್ಯ ಕಾಮಗಾರಿಗಳು ಬಾಕಿ ಉಳಿದಿದ್ದು, ಅನುದಾನದ ಅಗತ್
Sep 231 min read


ವಂದೇ ಮಾತರಂ ಕಡ್ಡಾಯವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ
ಧಾರ್ಮಿಕ ಅಥವಾ ಆತ್ಮಸಾಕ್ಷಿಯ ಕಾರಣಕ್ಕೆ ‘ವಂದೇ ಮಾತರಂ’ ಹಾಡಲು ನಿರಾಕರಿಸುವವರ ವಿರುದ್ಧ ಯಾವುದೇ ದಂಡನಾತ್ಮಕ നടപಡಿ ಕೈಗೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಸಂಗೀತಗಾರ ಟಿ.ಎಂ. ಕೃಷ್ಣ ಅವರು 'ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ'ಯ ತಿದ್ದುಪಡಿ ಹಾಗೂ ಗೃಹ ಸಚಿವಾಲಯದ ಕಡ್ಡಾಯ ನಿಯಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರಿದ್ದ ತ್ರಿಸದಸ್ಯ ಪೀಠವು ಈ ವಿಚಾರಣೆ ನಡೆಸಿತು. ಕರ್ನಾಟಕದಲ್ಲಿ ವಂದೇ ಮಾತರಂ ಗಾಯನದ ಕಡ್ಡಾಯಗೊಳಿಸುವಿಕೆ ಕುರಿತು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ ನಡೆಯುತ್ತ
Sep 231 min read


ದಕ್ಷಿಣ ಕನ್ನಡ, ಉಡುಪಿ: ಭೋವಿ ಸಮುದಾಯಕ್ಕೆ ‘ಭೋವಿ ವಡ್ಡರ’ ಜಾತಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಲು ಮನವಿ
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಭೋವಿ ಸಮುದಾಯದವರು ‘ಭೋವಿ ವಡ್ಡರ’ ಜಾತಿ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸುವಂತೆ ಸಮಾಜದ ಯುವ ಮುಖಂಡ ಪವನ್ ಕುಮಾರ್ ಶಿರ್ವ ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹಲವು ವರ್ಷಗಳಿಂದ ಭೋವಿ ಸಮುದಾಯದವರಿಗೆ ಜಾತಿ ಪ್ರಮಾಣ ಪತ್ರ ನೀಡುವ ವಿಚಾರದಲ್ಲಿ ಸಮಸ್ಯೆ ಎದುರಾಗಿತ್ತು. ಈ ಕುರಿತು ಸರ್ಕಾರದ ಗಮನಕ್ಕೆ ತರಲಾಗಿದ್ದು, ಭೋವಿ ಸಮುದಾಯದ ಅರ್ಹ ಫಲಾನುಭವಿಗಳಿಗೆ ‘ಭೋವಿ ವಡ್ಡರ’ ಜಾತಿ ಪ್ರಮಾಣ ಪತ್ರ ನೀಡಲು ಇಲಾಖೆ ಸೂಚನೆ ನೀಡಿದೆ ಎಂದು ಪವನ್ ಕುಮಾರ್ ತಿಳಿಸಿದ್ದಾರೆ. ಈ ವಿಚಾರವನ್ನು ಸೆಪ್ಟೆಂಬರ್ 18ರಂದು
Sep 231 min read


ನಕಲಿ ಔಷಧಿ ಜಾಲ ತಡೆಗೆ ಸರ್ಕಾರದ ಬಿಗಿ ಮಾರ್ಗಸೂಚಿ ಪ್ರಕಟ
ಬೆಂಗಳೂರು: ನಕಲಿ ಔಷಧಿಗಳ ಜಾಲಕ್ಕೆ ತಡೆಹಾಕಲು ಮತ್ತು ಔಷಧಿಗಳ ದುರ್ಬಳಕೆ ತಡೆಯಲು ಕೇಂದ್ರ ಔಷಧ ನಿಯಂತ್ರಣ ಇಲಾಖೆ ಮಹತ್ವದ ಮಾರ್ಗಸೂಚಿ ಬಿಡುಗಡೆ ಮಾಡಿದೆ. 'ಡ್ರಗ್ಸ್ ರೂಲ್ಸ್ 1945' ಪ್ರಕಾರ ವೈದ್ಯರ ಚೀಟಿ (ಪ್ರಿಸ್ಕ್ರಿಪ್ಷನ್) ಇಲ್ಲದೆ ಆಂಟಿಬಯೋಟಿಕ್ ಹಾಗೂ ನೋವು ನಿವಾರಕ ಮಾತ್ರೆಗಳನ್ನು ಮಾರಾಟ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ವೈದ್ಯರು ರೋಗಿಯ ವಯಸ್ಸು, ಕಿಡ್ನಿ ಮತ್ತು ಹೃದಯದ ಆರೋಗ್ಯ ಸ್ಥಿತಿ ಹಾಗೂ ಲ್ಯಾಬ್ ವರದಿಗಳನ್ನು ಪರಿಶೀಲಿಸಿ, ಅಗತ್ಯವಿದ್ದರಷ್ಟೇ ಕನಿಷ್ಠ ಅವಧಿಗೆ ಮಾತ್ರ ಮಾತ್ರೆಗಳನ್ನು ಬರೆಯಬೇಕು. ಸ್ವಯಂ ಚಿಕಿತ್ಸೆಗೆ ಮಾತ್ರೆ ನೀಡುವುದನ್ನು ಫಾರ್ಮಾಸಿಸ್ಟ್ಗ
Sep 231 min read


LPG ಗ್ರಾಹಕರೇ ಗಮನಿಸಿ! ಅಕ್ಟೋಬರ್ 1ರಿಂದ ಬದಲಾಗಲಿದೆ ನಿಯಮ; KYC ಮಾಡದಿದ್ದರೆ ಸಬ್ಸಿಡಿ ದರದ ಸಿಲಿಂಡರ್ಗೆ ಬ್ರೇಕ್!
LPG ಗ್ರಾಹಕರಿಗೆ ಹೊಸ ನಿಯಮ: ಅಕ್ಟೋಬರ್ 1ರಿಂದ ಸಬ್ಸಿಡಿ ಪಡೆಯಲು ಬಯೋಮೆಟ್ರಿಕ್ KYC ಕಡ್ಡಾಯ ನವದೆಹಲಿ: ದೇಶದ ಗೃಹಬಳಕೆಯ LPG ಗ್ರಾಹಕರಿಗೆ ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೆ ತರಲು ಮುಂದಾಗಿದೆ. 2026ರ ಅಕ್ಟೋಬರ್ 1ರಿಂದ ಸಬ್ಸಿಡಿ ಸಹಿತ ನಿಯಂತ್ರಿತ ದರದಲ್ಲಿ LPG ಸಿಲಿಂಡರ್ ರಿಫಿಲ್ ಬುಕ್ ಮಾಡಲು ಬಯೋಮೆಟ್ರಿಕ್ ಆಧಾರ್ ದೃಢೀಕರಣ (BAA) ಪೂರ್ಣಗೊಳಿಸಿರುವುದು ಅಗತ್ಯವಾಗಲಿದೆ. ಈಗಾಗಲೇ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಪೂರ್ಣಗೊಳಿಸಿರುವ ಗ್ರಾಹಕರು ಮತ್ತೆ ಯಾವುದೇ ಪ್ರಕ್ರಿಯೆ ಮಾಡುವ ಅಗತ್ಯವಿಲ್ಲ. ಅವರ LPG ರಿಫಿಲ್ ಸೇವೆ ಎಂದಿನಂತೆ ಮುಂದುವರಿಯಲಿದೆ. KYC ಮಾಡದವರಿಗೆ ಏನಾಗಲಿದೆ? ಅಕ್ಟೋ
Sep 231 min read


ಕಸ್ತೂರಿ ರಂಗನ್ ವರದಿ ಜಾರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ತೀವ್ರ ವಿರೋಧ
ಬೆಂಗಳೂರು: ಕಸ್ತೂರಿ ರಂಗನ್ ವರದಿ ಕುರಿತು ನಡೆದ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ , ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ವರದಿಯ ಶಿಫಾರಸುಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಸುಳ್ಯ ಕ್ಷೇತ್ರದ 26 ಗ್ರಾಮಗಳು ಕಸ್ತೂರಿ ರಂಗನ್ ವರದಿಯ ವ್ಯಾಪ್ತಿಗೆ ಒಳಪಡುತ್ತಿದ್ದು, ನಿಯಮಗಳ ಬಿಗಿಯಿಂದಾಗಿ ಕೃಷಿಕರು ಹಾಗೂ ಸ್ಥಳೀಯ ಜನಸಾಮಾನ್ಯರು ಭಯ ಮತ್ತು ಆತಂಕದಿಂದ ಜೀವಿಸುವಂತಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು . ಮೂಲಭೂತ ಸೌಕರ್ಯ, ಮನೆ ನಿರ್ಮಾಣ ಹಾಗೂ ಜಮೀನು ಹಕ್ಕುಗಳಿಗೆ ಈ ವರದಿ ಅಡ್ಡಿಯಾಗಿದೆ ಎಂದರು. ಅರಣ್ಯ, ಕಂದಾಯ ಮತ್ತು ಸರ್ವೇ ಇಲಾಖೆಗಳು ಜಂಟಿಯಾಗಿ ಗ್ರಾಮ ಮಟ್
Sep 221 min read


ಕಾರ್ತಿಕ್ ಸುವರ್ಣ ಮೇರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಪುತ್ತೂರು: ಹಿಂದೂ ಜಾಗರಣ ವೇದಿಕೆಯ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿದ್ದ ಕಾರ್ತಿಕ್ ಸುವರ್ಣ ಮೇರ್ಲ (27) ಅವರ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಪ್ರಮುಖ ಆರೋಪಿ ಉಳ್ಳಾಲದ ಪ್ರೀತೇಶ್ ಶೆಟ್ಟಿ ಹಾಗೂ ಸಂಪ್ಯ ಪೊಲೀಸ್ ಠಾಣೆಯ ಹಿಂಭಾಗದ ನಿವಾಸಿ ಕಿರಣ್ ರೈ ಶಿಕ್ಷೆಗೆ ಗುರಿಯಾದವರು. ಮಂಗಳವಾರ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯಕ್ ಅವರು ಶಿಕ್ಷೆಯ ಪ್ರಮಾಣ ಪ್ರಕಟಿಸಿದರು. ಇಬ್ಬರು ಆರೋಪಿಗಳಿಗೆ ತಲಾ ₹3 ಲಕ್ಷ ದಂಡವನ್ನೂ ನ್ಯಾಯಾಲಯ ವಿಧಿಸಿದೆ. ದಂಡದ ಮೊತ್ತದಲ್ಲಿ ₹5.90 ಲಕ್ಷವನ್ನ
Sep 221 min read


ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಭೀಕರ ಕೊಲೆ; ಪತ್ನಿ, ಅಪ್ರಾಪ್ತ ಪುತ್ರ ನಾಪತ್ತೆ
ಉಡುಪಿ: ಯುಎಇಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಕೊಲೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಅವರ ಪತ್ನಿ ಹಾಗೂ ಅಪ್ರಾಪ್ತ ಪುತ್ರ ನಾಪತ್ತೆಯಾಗಿರುವುದು ಪ್ರಕರಣಕ್ಕೆ ಮತ್ತಷ್ಟು ಕುತೂಹಲ ಮೂಡಿಸಿದೆ. ಪ್ರಕರಣದ ಕುರಿತು ಶಾರ್ಜಾ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮೃತರನ್ನು ಉಡುಪಿ ಮೂಲದ ಪ್ರಕಾಶ್ ಕುಂದರ್ ಎಂದು ಗುರುತಿಸಲಾಗಿದೆ. ಅವರು ಪತ್ನಿ ಟೀನಾ ಹಾಗೂ ಪುತ್ರನೊಂದಿಗೆ ಶಾರ್ಜಾದಲ್ಲಿ ವಾಸವಾಗಿದ್ದರು. ಪ್ರಕಾಶ್ ಶಾರ್ಜಾ ವಿಮಾನ ನಿಲ್ದಾಣದಲ್ಲಿ ಉದ್ಯೋಗದಲ್ಲಿದ್ದರು ಎನ್ನಲಾಗಿದ್ದು, ಅವರ ಪತ್ನಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು ಎಂದು ವರದಿಯಾಗಿದೆ. ವರದಿಗಳ ಪ್ರ
Sep 222 min read


108 ಆ್ಯಂಬುಲೆನ್ಸ್ ಸೇವೆಗೆ ಮುಷ್ಕರದ ಬಿಸಿ?; ಇಂದು ರಾತ್ರಿ 8ರಿಂದ ಸೇವೆ ಸ್ಥಗಿತದ ಎಚ್ಚರಿಕೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 108 ಆ್ಯಂಬುಲೆನ್ಸ್ ಸಿಬ್ಬಂದಿ ಇಂದು ರಾತ್ರಿ 8 ಗಂಟೆಯಿಂದ ಸೇವೆ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ್ದಾರೆ. ಬೇಡಿಕೆಗಳಿಗೆ ಸ್ಪಂದನೆ ದೊರೆಯದಿದ್ದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಸಿಬ್ಬಂದಿ ಘೋಷಿಸಿದ್ದಾರೆ. ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ 108 ಆ್ಯಂಬುಲೆನ್ಸ್ ಸೇವೆ ಅತ್ಯಂತ ಮಹತ್ವದ್ದಾಗಿರುವ ಹಿನ್ನೆಲೆಯಲ್ಲಿ, ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಸಿಬ್ಬಂದಿಯ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ಆಗ್ರಹಿಸಿದ್ದಾರೆ. “ಸಾರ್ವಜನಿಕರ ಜೀವಕ್ಕೆ ಸಂಬಂಧಿಸಿದ ತುರ್ತು ಸೇವೆ ಸ್ಥಗಿತವಾಗದಂತೆ ರಾಜ್ಯ ಸರ್ಕ
Sep 221 min read


ಕುಕ್ಕೆ ಸುಬ್ರಹ್ಮಣ್ಯ: ₹603 ಕೋಟಿ ಮಾಸ್ಟರ್ ಪ್ಲಾನ್ ಕಾಮಗಾರಿಗೆ ವೇಗ ನೀಡಲು ಅಪರ ಮುಖ್ಯ ಕಾರ್ಯದರ್ಶಿ ಸೂಚನೆ
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಸೆ.20 ರಂದು ಭೇಟಿ ನೀಡಿದ ಕಂದಾಯ ಹಾಗೂ ಮುಜರಾಯಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ, ದೇವಾಲಯದ ಆಡಳಿತ ಮಂಡಳಿ ಮತ್ತು ಮಾಸ್ಟರ್ ಪ್ಲಾನ್ ಸದಸ್ಯರೊಂದಿಗೆ ಮಹತ್ವದ ಸಭೆ ನಡೆಸಿದರು. ಕ್ಯಾಬಿನೆಟ್ ಅನುಮೋದನೆ ಪಡೆದಿರುವ ₹603 ಕೋಟಿ ವೆಚ್ಚದ ಮಾಸ್ಟರ್ ಪ್ಲಾನ್ ಯೋಜನೆಯನ್ನು ಶೀಘ್ರವಾಗಿ ಜಾರಿಗೊಳಿಸುವಂತೆ ಅವರು ಖಡಕ್ ಸೂಚನೆ ನೀಡಿದರು. ಮುಂದಿನ ಹಂತದಲ್ಲಿ ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯ, ಚಿನ್ನ-ಬೆಳ್ಳಿ ಭದ್ರತೆ ಹಾಗೂ ಭಕ್ತರ ದರ್ಶನದ ವೇಳೆ ನೂಕುನುಗ್ಗಲು ತಡೆಯಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕ
Sep 221 min read


ಮಂಗಳೂರು: ₹5 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬಜಪೆ ಇನ್ಸ್ಪೆಕ್ಟರ್
ಮಂಗಳೂರು: ಚೀಟಿಂಗ್ ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಬಜಪೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಪ್ರಕರಣದ ಆರೋಪಿಗಳಿಂದ ಹಣ ಬಿಡುಗಡೆ ಮಾಡಲು ಇನ್ಸ್ಪೆಕ್ಟರ್ ಬಾಲಕೃಷ್ಣ ಒಟ್ಟು ₹25 ಸಾವಿರ ಲಂಚದ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಮಂಗಳವಾರ ಮುಂಗಡವಾಗಿ ₹5 ಸಾವಿರ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಇನ್ಸ್ಪೆಕ್ಟರ್ ಅವರನ್ನು ರೆಡ್ಹ್ಯಾಂಡ್ ಆಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ
Sep 221 min read


ಕಾರ್ತಿಕ್ ಸುವರ್ಣ ಮೇರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ದೋಷಿಗಳು; ಸೆ.22ಕ್ಕೆ ಶಿಕ್ಷೆ ಪ್ರಮಾಣ ಪ್ರಕಟ
ಪುತ್ತೂರು: ಸಂಪ್ಯದಲ್ಲಿ 2019ರ ಸೆಪ್ಟೆಂಬರ್ 3ರಂದು ಗಣೇಶೋತ್ಸವದ ಪೆಂಡಾಲ್ನಲ್ಲಿ ನಡೆದಿದ್ದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳ ಮೇಲಿನ ಕೊಲೆ ಆರೋಪಗಳು ಸಾಬೀತಾಗಿವೆ. ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದು, ಆರೋಪಿಗಳಾದ ಕಿರಣ್ (ಎ3) ಹಾಗೂ ಪ್ರೀತೇಶ್ (ಎ1) ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ತೀರ್ಪು ನೀಡಿದೆ. ಇವರಿಗೆ ವಿಧಿಸಬೇಕಾದ ಶಿಕ್ಷೆಯ ಪ್ರಮಾಣವನ್ನು ಸೆಪ್ಟೆಂಬರ್ 22ರಂದು ನ್ಯಾಯಾಲಯ ಪ್ರಕಟಿಸಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರೀತ
Sep 211 min read


ಸೌಜನ್ಯಾ ಕೊಲೆ ಪ್ರಕರಣ: ಮರು ತನಿಖೆಗೆ ಸುಪ್ರೀಂ ಕೋರ್ಟ್ ಸೂಚನೆ, ಎಸ್ಐಟಿ ರಚನೆಗೆ ರಾಜ್ಯ ಸರ್ಕಾರಕ್ಕೆ ಆದೇಶ
ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪ್ರಕರಣದ ಮರು ತನಿಖೆಗೆ ಆದೇಶಿಸಿದೆ. ಸೌಜನ್ಯಾ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ಪೀಠವು, ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಹಿಂದಿನ ಸಿಬಿಐ ತನಿಖೆಯ ವೈಫಲ್ಯ ಹಾಗೂ ಲೋಪದೋಷಗಳ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನೈಜ ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ತನಿಖಾ ಸಂಸ್
Sep 211 min read


ಕೇರಳದಲ್ಲಿ ಮತ್ತೆ ಮಳೆ ಆರ್ಭಟ: ದಿಢೀರ್ ಪ್ರವಾಹ, ಭೂಕುಸಿತಕ್ಕೆ ಐವರು ಬಲಿ
ಕೇರಳದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ದಿಢೀರ್ ಪ್ರವಾಹ ಹಾಗೂ ಭೂಕುಸಿತಗಳಿಗೆ ಭಾನುವಾರ ಕನಿಷ್ಠ ಐವರು ಮೃತಪಟ್ಟಿದ್ದಾರೆ. ಇಬ್ಬರು ನಾಪತ್ತೆಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಮಲಪ್ಪುರಂನ ಕೊಟ್ಟಪುಳ ನದಿಯಲ್ಲಿ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿ ಸ್ನಾನಕ್ಕಿಳಿದಿದ್ದ ಇಬ್ಬರು ಕೊಚ್ಚಿಹೋಗಿ ಮೃತಪಟ್ಟರೆ, ಇನ್ನಿಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕೊಟ್ಟಾಯಂನ ಟೀಕೋಯ್ ಬಳಿ ಸಂಭವಿಸಿದ ಭೂಕುಸಿತಕ್ಕೆ ಚೆನ್ನೈ ಮೂಲದ ಪ್ರವಾಸಿಗ ಬಲಿಯಾಗಿದ್ದಾರೆ. ಇಡುಕ್ಕಿಯ ಕೊಟ್ಟಕಂಬೂರಿನಲ್ಲಿ ರಸ್ತೆಬದಿಯ ಶೆಡ್ ಮೇಲೆ ಬೆಟ್ಟ ಕುಸಿದು ಬಿದ್ದು ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾ
Sep 211 min read


ಪೆರ್ನೆಯಲ್ಲಿ ಬಾವಿಗೆ ಮಕ್ಕಳನ್ನೆಸೆದ ಕ್ರೂರ ಘಟನೆ; ಆರೋಪಿ ನೂರುನ್ನಿಸಾಗೆ 15 ದಿನ ನ್ಯಾಯಾಂಗ ಬಂಧನ
ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಪೆರ್ನೆ ಮೈರಕಟ್ಟೆಯಲ್ಲಿ ಕೌಟುಂಬಿಕ ಕಲಹದ ಬಳಿಕ ಇಬ್ಬರು ಪುಟ್ಟ ಮಕ್ಕಳನ್ನು ತೆರೆದ ಬಾವಿಗೆ ಎಸೆದ ಆರೋಪದ ಪ್ರಕರಣದಲ್ಲಿ ನೂರುನ್ನಿಸಾಳಿಗೆ ಪುತ್ತೂರು ನ್ಯಾಯಾಲಯ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಮೊಬೈಲ್ ಫೋನ್ ವಿಚಾರವಾಗಿ ಪತಿ ಸಿನಾನ್ ಜೊತೆ ವೈವಾಹಿಕ ಕಲಹ ಉಂಟಾದ ಬಳಿಕ ನೂರುನ್ನಿಸಾ ಆಕ್ರೋಶಗೊಂಡಿದ್ದಳು ಎನ್ನಲಾಗಿದೆ. ಬಳಿಕ ತನ್ನ ಮೂರೂವರೆ ವರ್ಷದ ಮಗಳು ಹಾಗೂ ಗಂಡನ ತಂಗಿಯ ಮೂರು ವರ್ಷದ ಪುತ್ರ ರಬೀಜ್ನನ್ನು ಮನೆಯ ಸಮೀಪದ ಬಾವಿಗೆ ಎಸೆದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮಕ್ಕಳ ಚೀರಾಟ ಕೇಳಿದ ಸ್ಥಳೀಯರು ತಕ್ಷಣ
Sep 211 min read


ವಿಧಾನಮಂಡಲ ವಿಶೇಷ ಅಧಿವೇಶನ ಆರಂಭ: ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ತೀವ್ರ ಚರ್ಚೆ
ಬೆಳಗಾವಿ/ಬೆಂಗಳೂರು: ರಾಜ್ಯದಲ್ಲಿ ಎದುರಾಗಿರುವ ಭೀಕರ ಬರ ಪರಿಸ್ಥಿತಿ ಹಾಗೂ ಕಸ್ತೂರಿರಂಗನ್ ವರದಿ ಕರಡು ಅಧಿಸೂಚನೆ ಕುರಿತು ಚರ್ಚಿಸಲು ಇಂದಿನಿಂದ ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ ಅಧಿವೇಶನ ಆರಂಭವಾಗಲಿದೆ. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳಲಿದ್ದು, ಆಡಳಿತ ಹಾಗೂ ವಿಪಕ್ಷಗಳ ನಡುವೆ ಭಾರಿ ಜಿದ್ದಾಜಿದ್ದಿ ನಡೆಯುವ ಸಾಧ್ಯತೆಯಿದೆ. ಕಳೆದ ಅಧಿವೇಶನದಲ್ಲಿ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸಿದ ನಿರಂತರ ಧರಣಿಯಿಂದಾಗಿ ಕಲಾಪ ಮೊಟಕುಗೊಂಡಿತ್ತು. ಹೀಗಾಗಿ, ಈ ವಿಶೇಷ ಅಧಿವೇಶನದಲ್ಲಿ ಬೆಳೆಹಾನಿ, ಕುಡಿಯುವ ನೀರು, ವಿದ್ಯುತ್ ಅಭಾವ ಹಾಗೂ ಜಾನುವಾರುಗಳ ಮೇವಿನ ಅಭಾ
Sep 211 min read
Archive
bottom of page



