top of page
News Articles
Sathyapatha News Plus


ಯಲಹಂಕ ರೈಲು ಚಕ್ರ ಕಾರ್ಖಾನೆಯಲ್ಲಿ 192 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರಿನ ಯಲಹಂಕದಲ್ಲಿರುವ ಭಾರತೀಯ ರೈಲ್ವೆಯ ರೈಲು ಚಕ್ರ ಕಾರ್ಖಾನೆಯು (Rail Wheel Factory) 2025-26ನೇ ಸಾಲಿಗೆ ವಿವಿಧ ತಾಂತ್ರಿಕ ವಿಭಾಗಗಳಲ್ಲಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 'ಕೌಶಲ ಭಾರತ' ಅಭಿಯಾನದಡಿ ಒಟ್ಟು 192 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಈ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳ ವಿವರ: ಫಿಟ್ಟರ್ (85), ಮಷಿನಿಸ್ಟ್ (31), ಮೋಟಾರ್ ವೆಹಿಕಲ್ ಮೆಕ್ಯಾನಿಕ್ (8), ಟರ್ನರ್ (5), ಎಲೆಕ್ಟ್ರಿಷಿಯನ್ (18), ಎಲೆಕ್ಟ್ರಾನಿಕ್ ಮೆಕ್ಯಾನಿಕ್ (22) ಮತ್ತು ಸಿಎನ್ಸಿ ಪ್ರೋಗ್ರಾಮಿಂಗ್ (23) ವಿಭಾಗಗಳಲ್ಲಿ ಅವಕಾಶಗಳಿವೆ. ಅರ್ಹತೆ ಮತ್ತು ವಯೋ
Mar 41 min read


ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಬೀದಿಗಿಳಿದ ಉದ್ಯೋಗಾಕಾಂಕ್ಷಿಗಳು: ಸಚಿವರ ಭಾವಚಿತ್ರ ಹಚ್ಚಿ ಆಕ್ರೋಶ
ಧಾರವಾಡ, ಫೆ.24: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ನೇತೃತ್ವದಲ್ಲಿ ಸೋಮವಾರ ಧಾರವಾಡದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಿತು. ಶ್ರೀನಗರದಿಂದ ಆರಂಭವಾದ ರ್ಯಾಲಿ ಜಯನಗರ, ಮಿಚಿಗನ್ ಕಾಂಪೌಂಡ್ ಮಾರ್ಗವಾಗಿ ಜುಬಿಲಿ ವೃತ್ತದವರೆಗೆ ಸಾಗಿತು. ಪ್ರತಿಭಟನೆಯಲ್ಲಿ ವಿಧಾನಸಭೆ ವಿಪಕ್ಷದ ನಾಯಕ R. Ashoka ಭಾಗವಹಿಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಸಾವಿರಾರು ಹುದ್ದೆಗಳು ಖಾಲಿ ಇದ್ದರೂ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿರುವುದರಿಂದ ಯುವಕರಿಗೆ ಅನ್ಯಾಯವಾಗುತ್ತಿದೆ ಎಂದು ಅವರು ಆರೋಪಿಸಿದರು. ಖಾಲಿ ಹುದ್ದೆಗ
Feb 241 min read


ಭಾರತೀಯ ನೌಕಾಪಡೆಯಲ್ಲಿ 260 ಸಬ್ ಲೆಫ್ಟಿನೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಲಿಖಿತ ಪರೀಕ್ಷೆಯಿಲ್ಲ; ಮೆರಿಟ್ ಮತ್ತು SSB ಸಂದರ್ಶನದ ಆಧಾರದಲ್ಲಿ ಆಯ್ಕೆ – ಫೆ.24 ಕೊನೆ ದಿನ ನವದೆಹಲಿ: ಭಾರತೀಯ ನೌಕಾಪಡೆಯು ಶಾರ್ಟ್ ಸರ್ವಿಸ್ ಕಮಿಷನ್ (SSC) ಅಡಿಯಲ್ಲಿ 260 ಸಬ್ ಲೆಫ್ಟಿನೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕಾರ್ಯನಿರ್ವಾಹಕ, ತಾಂತ್ರಿಕ, ಶಿಕ್ಷಣ ಹಾಗೂ ಲಾಜಿಸ್ಟಿಕ್ಸ್ ಶಾಖೆಗಳಲ್ಲಿ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ನೇಮಕಾತಿಗೆ ಲಿಖಿತ ಪರೀಕ್ಷೆಯಿಲ್ಲ; ಶೈಕ್ಷಣಿಕ ಮೆರಿಟ್ ಮತ್ತು ಸೇವಾ ಆಯ್ಕೆ ಮಂಡಳಿ (SSB) ಸಂದರ್ಶನದ ಮೂಲಕವೇ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 24, 2026ರೊಳಗೆ ಆನ್ಲ
Feb 201 min read


ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ PRO ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ಫೆ.20: ಕರ್ನಾಟಕ ಅರಣ್ಯ ಇಲಾಖೆ ವತಿಯಿಂದ ಸಾರ್ವಜನಿಕ ಸಂಪರ್ಕಾಧಿಕಾರಿ (PRO) ಹುದ್ದೆಗೆ ನೇಮಕಾತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಯನ್ನು ಕರ್ನಾಟಕ ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನ (KFWCCF) ಅಡಿಯಲ್ಲಿ ಎರಡು ವರ್ಷಗಳ ಒಪ್ಪಂದ ಆಧಾರಿತವಾಗಿ ಭರ್ತಿ ಮಾಡಲಾಗುತ್ತದೆ. ಅರಣ್ಯ ಭವನ, ಮಲ್ಲೇಶ್ವರಂ, ಬೆಂಗಳೂರು ಕೇಂದ್ರ ಕಚೇರಿಯಿಂದ ಪ್ರಕಟಣೆ ಹೊರಡಿಸಲಾಗಿದ್ದು, ಸಾರ್ವಜನಿಕ ಸಂಪರ್ಕ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಅಧಿಕೃತ ವೆಬ್
Feb 201 min read


ಭಾರತೀಯ ಸೇನೆಯಲ್ಲಿ ಅಗ್ನಿವೀರ್ ನೇಮಕಾತಿ 2026
ಭಾರತೀಯ ಸೇನೆಯು ಅಗ್ನಿವೀರ್ ನೇಮಕಾತಿ 2026ರ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ದೇಶಸೇವೆಗೆ ತೊಡಗಿಸಿಕೊಳ್ಳಲು ಆಸಕ್ತ ಯುವಕರಿಗೆ ಇದು ಮಹತ್ವದ ಅವಕಾಶವಾಗಿದೆ. ಫೆಬ್ರವರಿ 13ರಿಂದ ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಏಪ್ರಿಲ್ 1ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ joinindianarmy.nic.in ಮೂಲಕ ಅರ್ಜಿ ಸಲ್ಲಿಸಬಹುದು. ಪರೀಕ್ಷೆ ಮತ್ತು ಆಯ್ಕೆ ಪ್ರಕ್ರಿಯೆ ಅಗ್ನಿವೀರ್ ನೇಮಕಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (CEE) ಜೂನ್ 1ರಿಂದ ಜೂನ್ 15ರವರೆಗೆ ನಡೆಯಲಿದೆ. ಆನ್ಲೈನ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ
Feb 161 min read


GATE ಉತ್ತೀರ್ಣರಿಗೆ ಕೇಂದ್ರದಲ್ಲಿ ಉದ್ಯೋಗಾವಕಾಶ: NIC ನಲ್ಲಿ 376 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ: ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಮಾಹಿತಿ ಕೇಂದ್ರ (NIC) 376 ವೈಜ್ಞಾನಿಕ ಮತ್ತು ತಾಂತ್ರಿಕ ಸಹಾಯಕ ‘A’ (Scientific & Technical Assistant ‘A’) ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ತಾಂತ್ರಿಕ ಹಾಗೂ ಐಟಿ ಕ್ಷೇತ್ರದಲ್ಲಿ ಸರ್ಕಾರಿ ಸೇವೆಗೆ ಸೇರಲು ಬಯಸುವವರಿಗೆ ಇದು ಮಹತ್ವದ ಅವಕಾಶವಾಗಿದೆ. ಈ ಹುದ್ದೆಗಳು ಗುಂಪು–ಬಿ, ನಾನ್-ಗೆಜೆಟೆಡ್ ಎಸ್ & ಟಿ ವರ್ಗಕ್ಕೆ ಸೇರಿದ್ದು, ದೇಶದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ನಿಯೋಜಿಸಲಾಗುತ್ತದೆ. ಒಟ್ಟು 376 ಹುದ
Feb 121 min read


ಬಿಎಸ್ಎನ್ಎಲ್ ನೇಮಕಾತಿ 2026: ಇಂಜಿನಿಯರ್ಗಳು ಮತ್ತು ಹಣಕಾಸು ತಜ್ಞರಿಗೆ ಸುವರ್ಣಾವಕಾಶ!
ನವದೆಹಲಿ: ಕೇಂದ್ರ ಸರ್ಕಾರದ ಒಡೆತನದ ಭಾರತ ಸಂಚಾರ ನಿಗಮ ನಿಯಮಿತ (BSNL), ತನ್ನ 4G ಮತ್ತು 5G ಸೇವೆಗಳ ಉನ್ನತೀಕರಣದ ಭಾಗವಾಗಿ 'ಹಿರಿಯ ಕಾರ್ಯನಿರ್ವಾಹಕ ತರಬೇತುದಾರ' (Senior Executive Trainee - SET) ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಿದೆ. ದೇಶಾದ್ಯಂತ ಒಟ್ಟು 120 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಫೆಬ್ರವರಿ 5 ರಿಂದ ಪ್ರಕ್ರಿಯೆ ಆರಂಭವಾಗಿದೆ. ಹುದ್ದೆಗಳ ವಿವರ: * ಟೆಲಿಕಾಂ ವಿಭಾಗ: 95 ಹುದ್ದೆಗಳು (ಅರ್ಹತೆ: BE/B.Tech - Electronics, CS, IT, Electrical) * ಫೈನಾನ್ಸ್ ವಿಭಾಗ: 25 ಹುದ್ದೆಗಳು (ಅರ್ಹತೆ: CA ಅಥವಾ CMA) ಪ್ರಮುಖ ದಿನಾಂಕಗಳು: * ಅರ್ಜಿ ಸಲ
Feb 61 min read


ಮೆಸ್ಕಾಂ ನೇಮಕಾತಿ 2026: 140 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (MESCOM) ವತಿಯಿಂದ 2026ನೇ ಸಾಲಿನ ಅಪ್ರೆಂಟಿಸ್ ತರಬೇತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದ ವಿದ್ಯಾವಂತ ಯುವಕ-ಯುವತಿಯರಿಗೆ ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಸಂಸ್ಥೆಯಲ್ಲಿ ಒಂದು ವರ್ಷದ ವೃತ್ತಿ ಅನುಭವ ಪಡೆಯಲು ಇದೊಂದು ಉತ್ತಮ ಅವಕಾಶವಾಗಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 140 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರಿನಲ್ಲಿ ತರಬೇತಿ ಪಡೆಯಲಿದ್ದಾರೆ. ಆಸಕ್ತರು ನ್ಯಾಷನಲ್ ಅಪ್ರೆಂಟಿಸ್ಶಿಪ್ ಟ್ರೈನಿಂಗ್ ಸ್ಕೀಮ್ (NATS) ಪೋ
Feb 41 min read


ಮತ್ತೆ ಏರಿದ ಚಿನ್ನದ ದರ
ಫೆಬ್ರವರಿ 4, 2026 ರಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಏರಿಕೆ ಕಂಡಿದೆ. ಕಳೆದ ಕೆಲವು ದಿನಗಳ ಇಳಿಕೆಯ ನಂತರ ಇಂದು ಬೆಲೆಯಲ್ಲಿ ದಿಢೀರ್ ಏರಿಕೆ ಕಂಡುಬಂದಿದೆ. ಇಂದಿನ ಚಿನ್ನದ ದರಗಳು (ಪ್ರತಿ 10 ಗ್ರಾಂಗೆ): 22 ಕ್ಯಾರೆಟ್ (ಆಭರಣ ಚಿನ್ನ): ₹1,41,110 (ನಿನ್ನೆಗಿಂತ ₹10 ಏರಿಕೆ). ಕೆಲವು ಮೂಲಗಳ ಪ್ರಕಾರ ಬೆಂಗಳೂರಿನಲ್ಲಿ 10 ಗ್ರಾಂಗೆ ಸುಮಾರು ₹1,47,150 ರವರೆಗೆ ಏರಿಕೆಯಾಗಿದೆ ಎಂದು ವರದಿಯಾಗಿದೆ. 24 ಕ್ಯಾರೆಟ್ (ಅಪರಂಜಿ ಚಿನ್ನ): ₹1,53,940 (ನಿನ್ನೆಗಿಂತ ₹10 ಏರಿಕೆ). ನಗರವಾರು ಅಂದಾಜು ದರಗಳು (1 ಗ್ರಾಂಗೆ): ಬೆಂಗಳೂರು: 22K - ₹14,111 | 24K - ₹15
Feb 41 min read


ಇಂಡಿಯಾ ಪೋಸ್ಟ್ ನೇಮಕಾತಿ: ಜಿಡಿಎಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ: ಭಾರತೀಯ ಅಂಚೆ ಇಲಾಖೆಯು ಗ್ರಾಮೀಣ ಡಾಕ್ ಸೇವಕ್ (GDS), ಶಾಖೆ ಪೋಸ್ಟ್ಮಾಸ್ಟರ್ (BPM) ಮತ್ತು ಸಹಾಯಕ ಶಾಖೆ ಪೋಸ್ಟ್ಮಾಸ್ಟರ್ (ABPM) ಹುದ್ದೆಗಳ ಭರ್ತಿಗೆ ಚಾಲನೆ ನೀಡಿದೆ. ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ indiapost.gov.in ಮೂಲಕ ಫೆಬ್ರವರಿ 14, 2026ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಮುಖ ದಿನಾಂಕಗಳು: * ಜನವರಿ 30ರಿಂದ ನೋಂದಣಿ ಆರಂಭವಾಗಿದ್ದು, ಫೆಬ್ರವರಿ 1ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದೆ. * ಅರ್ಜಿ ತಿದ್ದುಪಡಿಗಾಗಿ ಫೆಬ್ರವರಿ 17 ಮತ್ತು 18 ರಂದು ಅವಕಾಶ ನೀಡಲಾಗುತ್ತದೆ. ಅರ್ಹತೆ ಮತ್ತು ಆಯ್ಕೆ ವಿಧಾನ: ಅರ್ಜಿದಾರರು 10ನೇ ತ
Feb 31 min read


ಮಹಿಳೆಯರಿಗೆ ಬಂಪರ್ ಕೊಡುಗೆ: ಉಚಿತ ಹೊಲಿಗೆ ಯಂತ್ರ ಹಾಗೂ ₹15,000 ಸಹಾಯಧನ!
ಬೆಂಗಳೂರು: ಮನೆಯಲ್ಲೇ ಕುಳಿತು ಸ್ವಂತ ಉದ್ಯೋಗ ಆರಂಭಿಸಲು ಬಯಸುವ ಮಹಿಳೆಯರಿಗೆ ಕೇಂದ್ರ ಸರ್ಕಾರವು 'ಪಿಎಂ ವಿಶ್ವಕರ್ಮ ಯೋಜನೆ'ಯಡಿ ಸುವರ್ಣಾವಕಾಶ ಕಲ್ಪಿಸಿದೆ. ಈ ಯೋಜನೆಯಡಿ ದರ್ಜಿ ವೃತ್ತಿ ಮಾಡುವ ಮಹಿಳೆಯರಿಗೆ ಆಧುನಿಕ ಹೊಲಿಗೆ ಯಂತ್ರ ಖರೀದಿಸಲು ₹15,000 ಪ್ರೋತ್ಸಾಹಧನ ನೀಡಲಾಗುತ್ತಿದೆ. ಇದರೊಂದಿಗೆ ಉಚಿತವಾಗಿ ಕೌಶಲ್ಯಾಭಿವೃದ್ಧಿ ತರಬೇತಿಯನ್ನೂ ನೀಡಲಾಗುತ್ತಿದ್ದು, ತರಬೇತಿ ಅವಧಿಯಲ್ಲಿ ಪ್ರತಿದಿನ ಭತ್ಯೆಯೂ ದೊರೆಯಲಿದೆ. ಅರ್ಹತೆ ಮತ್ತು ಸೌಲಭ್ಯಗಳು: ಅರ್ಜಿ ಸಲ್ಲಿಸುವ ಮಹಿಳೆಯರು ಕನಿಷ್ಠ 18 ವರ್ಷ ವಯಸ್ಸಿನವರಾಗಿರಬೇಕು. ಕುಟುಂಬದಲ್ಲಿ ಯಾರೂ ಸರ್ಕಾರಿ ನೌಕರರಿರಬಾರದು ಅಥವಾ ಆದಾಯ ತೆರಿಗೆ
Feb 21 min read


ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ: 18,000 ಗ್ರೂಪ್ 'ಡಿ' ಹುದ್ದೆಗಳಿಗೆ ಅರ್ಜಿ ಆಹ್ವಾನ!
ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡಬೇಕೆಂಬ ಕನಸು ಹೊತ್ತಿರುವ ಯುವಜನತೆಗೆ ಇಲ್ಲಿದೆ ಒಂದು ಸುವರ್ಣಾವಕಾಶ. ಭಾರತ ಸರ್ಕಾರದ ರೈಲ್ವೆ ಸಚಿವಾಲಯದ ಅಧೀನದಲ್ಲಿರುವ ರೈಲ್ವೆ ನೇಮಕಾತಿ ಮಂಡಳಿ (RRB), ಲೆವೆಲ್-1 (ಗ್ರೂಪ್ ‘ಡಿ’) ಹುದ್ದೆಗಳ ಭರ್ತಿಗಾಗಿ ಹೊಸ ಅಧಿಸೂಚನೆಯನ್ನು (CEN 09/2025) ಬಿಡುಗಡೆ ಮಾಡಿದೆ. ನೇಮಕಾತಿಯ ಪ್ರಮುಖ ವಿವರಗಳು: * ಒಟ್ಟು ಹುದ್ದೆಗಳು: 18,000 * ಹುದ್ದೆಯ ಹೆಸರು: ಲೆವೆಲ್-1 (ಗ್ರೂಪ್ 'ಡಿ' ಸಮಾನ) * ಅರ್ಜಿ ಸಲ್ಲಿಕೆ ಆರಂಭ: 31 ಜನವರಿ 2026 * ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02 ಮಾರ್ಚ್ 2026 (ರಾತ್ರಿ 11:59 ರವರೆಗೆ) ಅರ್ಹತೆ ಮತ್ತು ವಯೋಮಿತಿ: * ಶೈಕ್ಷಣ
Jan 311 min read


ಉದ್ಯೋಗಾವಕಾಶ: KSRLPS ನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೋಲಾರ: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರೋತ್ಸಾಹ ಸಂಸ್ಥೆ (KSRLPS) ಸಿಹಿಸುದ್ದಿ ನೀಡಿದೆ. ಕೋಲಾರ ಜಿಲ್ಲೆಯಲ್ಲಿ ಖಾಲಿ ಇರುವ ಬ್ಲಾಕ್ ಮ್ಯಾನೇಜರ್, ಕ್ಲಸ್ಟರ್ ಸೂಪರ್ವೈಸರ್ ಸೇರಿದಂತೆ ಒಟ್ಟು 13 ವಿವಿಧ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಕ್ಲಸ್ಟರ್ ಸೂಪರ್ವೈಸರ್ (5), ಬ್ಲಾಕ್ ಮ್ಯಾನೇಜರ್ (6), ಆಫೀಸ್ ಅಸಿಸ್ಟಂಟ್ (1) ಹಾಗೂ ಡಿಸ್ಟ್ರಿಕ್ಟ್ ಮ್ಯಾನೇಜರ್ (1) ಹುದ್ದೆಗಳು ಲಭ್ಯವಿವೆ. ಹುದ್ದೆಗಳಿಗೆ ಅ
Jan 301 min read


ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಪಿಯು ಉಪನ್ಯಾಸಕರಾಗಿ ಮುಂಬಡ್ತಿ: ಅರ್ಜಿ ಸಲ್ಲಿಸಲು ಜ. 31ರವರೆಗೆ ಕಾಲಾವಕಾಶ ವಿಸ್ತರಣೆ
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕ ಗ್ರೇಡ್-2 ಹುದ್ದೆಯಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಮುಂಬಡ್ತಿ ಪಡೆಯಲು ನಡೆಸುವ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಶಾಲಾ ಶಿಕ್ಷಣ ಇಲಾಖೆ ವಿಸ್ತರಿಸಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಮೊದಲು ಜನೆವರಿ 28ರವರೆಗೆ ನೀಡಲಾಗಿದ್ದ ಗಡುವನ್ನು ಇದೀಗ ಜನೆವರಿ 31ರವರೆಗೆ ಹೆಚ್ಚಿಸಲಾಗಿದೆ. ಈ ನಿರ್ಧಾರವು ಮುಂಬಡ್ತಿಯ ನಿರೀಕ್ಷೆಯಲ್ಲಿದ್ದ ಸಾವಿರಾರು ಅರ್ಹ ಶಿಕ್ಷಕರಿಗೆ ದೊಡ್ಡ ಸಮಾಧಾನ ತಂದಿದೆ. ಇಲಾಖೆಯ ಈ ನೂತನ ಆದೇಶದ ಪ್ರಕಾರ, ಕೇವಲ ಜೇಷ್ಠತಾ ಪಟ್ಟಿಯಲ್ಲಿ ಹೆಸರಿರುವವರು ಮಾತ್ರವಲ್ಲದೆ, ನಿಯಮ
Jan 291 min read


ಶಿಕ್ಷಣ ಇಲಾಖೆ ಮಹಿಳಾ ನೌಕರರಿಗೆ ಗುಡ್ ನ್ಯೂಸ್: ಪ್ರತಿ ತಿಂಗಳು ಒಂದು ದಿನ ‘ಋತುಚಕ್ರ ರಜೆ’ ಕಡ್ಡಾಯ
ರಾಜ್ಯ ಸರ್ಕಾರವು ಉದ್ಯೋಗಸ್ಥ ಮಹಿಳೆಯರ ಆರೋಗ್ಯದ ದೃಷ್ಟಿಯಿಂದ ಋತುಚಕ್ರ ರಜೆ (Menstrual Leave) ನೀಡಲು ನಿರ್ಧರಿಸಿದ ಬೆನ್ನಲ್ಲೇ, ಶಾಲಾ ಶಿಕ್ಷಣ ಇಲಾಖೆಯು ತನ್ನ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಈ ರಜೆಯನ್ನು ಕಡ್ಡಾಯಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಈ ಆದೇಶದ ಅನ್ವಯ, 18 ರಿಂದ 52 ವರ್ಷದೊಳಗಿನ ಋತುಚಕ್ರ ಹೊಂದಿರುವ ಎಲ್ಲಾ ಮಹಿಳಾ ಶಿಕ್ಷಕಿಯರು ಮತ್ತು ಸಿಬ್ಬಂದಿಗಳು ಪ್ರತಿ ತಿಂಗಳು ಒಂದು ದಿನದ ವಿಶೇಷ ರಜೆಯನ್ನು ಪಡೆಯಲು ಅರ್ಹರಾಗಿರುತ್ತಾರೆ. ಮಹಿಳೆಯರ ದೈಹಿಕ ಸಮಸ್ಯೆಗಳನ್ನು ಗೌರವಿಸುವ ನಿಟ್ಟಿನಲ್ಲಿ ಇಲಾಖೆಯ ಈ ಕ್ರಮವು ವ್ಯಾಪಕ ಶ್ಲಾಘನೆಗೆ ಪ
Jan 291 min read


SBI ಸರ್ಕಲ್ ಬೇಸ್ಡ್ ಆಫೀಸರ್ (CBO) ನೇಮಕಾತಿ – 2026 ಜನವರಿ 29ರಿಂದ ಅರ್ಜಿ ಸ್ವೀಕಾರ – ಫೆಬ್ರವರಿ 18 ಕೊನೆ ದಿನ
ಭಾರತೀಯ ಸ್ಟೇಟ್ ಬ್ಯಾಂಕ್ (SBI) ದೇಶದ ವಿವಿಧ ವಲಯಗಳಲ್ಲಿ ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2026ರ ಜನವರಿ 29ರಿಂದ ಫೆಬ್ರವರಿ 18ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಪ್ರಕ್ರಿಯೆ ಆನ್ಲೈನ್ ಪರೀಕ್ಷೆ, ಸ್ಕ್ರೀನಿಂಗ್ ಹಾಗೂ ಸಂದರ್ಶನದ ಮೂಲಕ ನಡೆಯಲಿದೆ. ಅರ್ಜಿ ಸಲ್ಲಿಸಲು ಬೇರೆ ಯಾವುದೇ ವಿಧಾನವನ್ನು ಅನುಮತಿಸಲಾಗುವುದಿಲ್ಲ ಎಂದು ಬ್ಯಾಂಕ್ ಸ್ಪಷ್ಟಪಡಿಸಿದೆ. ಅರ್ಜಿ ಶುಲ್ಕ ಸಾಮಾನ್ಯ, ಇಡಬ್ಲ್ಯೂಎಸ್ ಮತ್ತು ಓಬಿಸಿ ಅಭ್ಯರ್ಥಿಗಳಿಗೆ ₹750 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
Jan 291 min read


ಕರ್ನಾಟಕ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ನೇಮಕಾತಿ ವಯೋಮಿತಿ 5 ವರ್ಷ ಸಡಿಲಿಕೆ!
ಕರ್ನಾಟಕದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದ್ದು, ನಾಗರಿಕ ಸೇವಾ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ಘೋಷಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಇದರಿಂದಾಗಿ ಲಕ್ಷಾಂತರ ಅಭ್ಯರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಲಭ್ಯವಾಗಲಿವೆ. ಈ ಹೊಸ ತಿದ್ದುಪಡಿಯ ಪ್ರಕಾರ, ಸಾಮಾನ್ಯ ವರ್ಗದ (General Merit) ಅಭ್ಯರ್ಥಿಗಳ ವಯೋಮಿತಿಯನ್ನು 35 ವರ್ಷಗಳಿಂದ 40 ವರ್ಷಕ್ಕೆ ಹೆಚ್ಚಿಸಲಾಗಿದೆ. ಅದೇ ರೀತಿ, ಪರಿಶಿಷ್ಟ ಜ
Jan 231 min read


ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಸಂಘರ್ಷ: ವಿಧಾನಸಭೆಯಲ್ಲಿ ಹೈಡ್ರಾಮ!
ನರೇಗಾ ಯೋಜನೆ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿರುವುದನ್ನು ವಿರೋಧಿಸಿ ರಾಜ್ಯ ಸರ್ಕಾರ ಕರೆದಿದ್ದ ವಿಶೇಷ ಅಧಿವೇಶನವು, ರಾಜ್ಯಪಾಲರು ಮತ್ತು ಸರ್ಕಾರದ ನಡುವಿನ ಸಂಘರ್ಷಕ್ಕೆ ವೇದಿಕೆಯಾಯಿತು. ಬುಧವಾರ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಲು ಆಗಮಿಸಿದ ರಾಜ್ಯಪಾಲ ಥಾವರ್ಚಂದ್ರ ಗೆಹ್ಲೋಟ್ ಅವರು, ಸರ್ಕಾರ ಸಿದ್ಧಪಡಿಸಿದ್ದ ಭಾಷಣದ ಪ್ರತಿಯನ್ನು ಓದದೆ ಕೇವಲ ಒಂದೆರಡು ವಾಕ್ಯಗಳಲ್ಲಿ ಶುಭಾಶಯ ತಿಳಿಸಿ ನಿರ್ಗಮಿಸಿದರು. ಸರ್ಕಾರದ ಭಾಷಣದಲ್ಲಿದ್ದ 11 ಅಂಶಗಳನ್ನು ತೆಗೆದುಹಾಕುವಂತೆ ರಾಜ್ಯಪಾಲರು ನೀಡಿದ್ದ ಸೂಚನೆಯನ್ನು ಸರ್ಕಾರ ನಿರಾಕರಿಸಿದ್ದೇ ಈ ಬಿಕ್ಕಟ್ಟಿಗೆ ಕಾರಣ ಎನ್ನಲಾಗಿದೆ. ರಾಜ್ಯಪಾಲರು
Jan 221 min read


ಆದಾಯ ತೆರಿಗೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ
ನವದೆಹಲಿ: ಭಾರತೀಯ ಆದಾಯ ತೆರಿಗೆ ಇಲಾಖೆಯು ವಿವಿಧ ನಿರ್ದೇಶಕ ಮಟ್ಟದ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರು ಸೇರಿದಂತೆ ಹೈದರಾಬಾದ್, ನಾಗ್ಪುರ, ಭೋಪಾಲ್ ಮತ್ತು ನವದೆಹಲಿಯ ವಿವಿಧ ಕೇಂದ್ರಗಳಲ್ಲಿ ಒಟ್ಟು 11 ಹುದ್ದೆಗಳು ಲಭ್ಯವಿವೆ. ಕೇಂದ್ರ ಸರ್ಕಾರಿ ಸೇವೆಯಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಆಯ್ಕೆಯಾದವರಿಗೆ ಮಾಸಿಕ ₹15,600 ರಿಂದ ₹39,100 ವರೆಗೆ ವೇತನ ದೊರೆಯಲಿದೆ. ಈ ನೇಮಕಾತಿಯಡಿ ನಿರ್ದೇಶಕರು (ವ್ಯವಸ್ಥೆಗಳು), ಹೆಚ್ಚುವರಿ ನಿರ್ದೇಶಕರು ಹಾಗೂ ಉಪ ನಿರ್ದೇಶಕರು ಎಂಬ ಮೂರು ವರ್ಗದ ಹುದ್ದೆ
Jan 221 min read


ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ
ಮೈಸೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ವೈದ್ಯಕೀಯ ಮತ್ತು ನರ್ಸಿಂಗ್ ಅಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಆಸಕ್ತರು ಜನವರಿ 27ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಭರ್ತಿ ಮಾಡಿ. ಮೈಸೂರಿನಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸುವರ್ಣಾವಕಾಶ. ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10, 12ನೇ ತರಗತಿ, ಡಿಪ್ಲೊಮಾ, GNM, ANM, MPW, DMLT, MLT, B.Sc, BDS, ಪದವಿ,
Jan 211 min read
Archive
bottom of page



