top of page
News Articles
Sathyapatha News Plus


ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಜಲ ದುರಂತ: ಐವರು ನೀರುಪಾಲು
ಮಂತ್ರಾಲಯ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಹೈದರಾಬಾದ್ ಹಾಗೂ ಸ್ಥಳೀಯ ಮೂಲದ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಸಂಬಂಧಿಕರ ಮನೆಯ ಪೂಜೆ ಮುಗಿಸಿ ನದಿಗೆ ಇಳಿದಿದ್ದಾಗ ನೀರಿನ ಆಳ ತಿಳಿಯದೇ ಈ ದುರಂತ ಸಂಭವಿಸಿದೆ. ಅದೃಷ್ಟವಶಾತ್ ಅಪರ್ಣಾ ಎಂಬ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ರಾಘವೇಂದ್ರ ಮತ್ತು ಸಂಧ್ಯಾ ಅವರ ಶವಗಳು ಪತ್ತೆಯಾಗಿದ್ದು, ಉಳಿದ ಮೂವರಿಗಾಗಿ ರಕ್ಷಣಾ ತಂಡ ಶೋಧ ನಡೆಸುತ್ತಿದೆ. ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
May 311 min read


ಬೀದರ್ ಬ್ರಿಮ್ಸ್ ಶವಾಗಾರದಲ್ಲಿ ಮೃತ ಮಹಿಳೆಯರ ಬೆತ್ತಲೆ ಚಿತ್ರೀಕರಣ, ಆರೋಪಿ ಬಂಧನ*
ಬೀದರ್ನ ಪ್ರಮುಖ ಸರ್ಕಾರಿ ಆಸ್ಪತ್ರೆಯಾದ ಬ್ರಿಮ್ಸ್ (BRIMS) ಶವಾಗಾರದಲ್ಲಿ ಮೃತ ಮಹಿಳೆಯರ ಶವಗಳ ಬೆತ್ತಲೆ ಚಿತ್ರಗಳನ್ನು ಮೊಬೈಲ್ನಲ್ಲಿ ಸೆರೆಹಿಡಿದ ಘಟನೆ ಬೆಳಕಿಗೆ ಬಂದಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ಮೂಡಿಸಿದೆ. ಶವಾಗಾರದ ಅಟೆಂಡರ್ ಮುನೀರ್ ಅಹ್ಮದ್ ಎಂಬಾತ ಮರಣೋತ್ತರ ಪರೀಕ್ಷೆಯ ವೇಳೆ ಅನುಮತಿ ಇಲ್ಲದೆ, ಮೃತರ ಮೇಲಿದ್ದ ಬಟ್ಟೆಗಳನ್ನು ತೆಗೆದು ವಿಕೃತವಾಗಿ ಫೋಟೋ ಕ್ಲಿಕ್ಕಿಸಿ ಸಂಗ್ರಹಿಸಿಟ್ಟುಕೊಳ್ಳುತ್ತಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಘಟನೆ ತಿಳಿಯುತ್ತಿದ್ದಂತೆ ಶವಾಗಾರದ ಮುಖ್ಯಸ್ಥ ಡಾ. ಮೋಸಿನ್ ಉಲ್ ಹಕ್ ಅವರು ಬೀದರ್ ನ್ಯೂ ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
May 311 min read


ಬೆಳ್ತಂಗಡಿಯಲ್ಲಿ ಬೆಚ್ಚಿಬೀಳಿಸಿದ ಘಟನೆ: ದಿಡುಪೆ ಜಲಪಾತದಲ್ಲಿ ಯುವತಿಗೆ ಲೈಂಗಿಕ ಕಿರುಕುಳ – ಮೂವರು ಆರೋಪಿಗಳು ಬಂಧನ
ಬೆಳ್ತಂಗಡಿ, ದಕ್ಷಿಣ ಕನ್ನಡ: ಪ್ರಸಿದ್ಧ ಪ್ರವಾಸಿ ತಾಣವಾದ ದಿಡುಪೆ ಜಲಪಾತದಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಜಲಪಾತದಲ್ಲಿ ನೀರಾಟ ಆಡುತ್ತಿದ್ದ ವೇಳೆ ಪ್ರವಾಸಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳದ ಕಾಸರಗೋಡು ಮೂಲದ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಬ್ದುಲ್ ಖಾದರ್ (36), ಫೈಜಲ್ ಆದಿಲ್ (27) ಮತ್ತು ಉಸ್ಮಾನ್ ಸಲೀಂ (18) ಎಂದು ಗುರುತಿಸಲಾಗಿದೆ. ಇವರು ಯುವತಿಯರನ್ನು ದಿಡುಪೆ ಜಲಪಾತಕ್ಕೆ ಕರೆದುಕೊಂಡು ಬಂದಿದ್ದರು ಎಂದು ತಿಳಿದುಬಂದಿದೆ. ಘಟನೆಯ ವಿವರಗಳ ಪ್ರಕಾರ, ಜಲಪಾತದಲ್ಲಿ ಸ್ನಾನ ಮಾಡುತ್ತಿದ್ದ
May 211 min read


ನಟ ದರ್ಶನ್ಗೆ ಸುಪ್ರೀಂಕೋರ್ಟ್ ಶಾಕ್ ಜಾಮೀನು ನಿರಾಕರಣೆ; ಇನ್ನೂ ಒಂದು ವರ್ಷ ಜೈಲುವಾಸ ಸಾಧ್ಯತೆ!
ನವದೆಹಲಿ: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿ ಇರುವ ನಟ ದರ್ಶನ್ ಅವರಿಗೆ ಸುಪ್ರೀಂಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದೆ. ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಸದ್ಯಕ್ಕೆ ಯಾವುದೇ ರಿಲೀಫ್ ನೀಡಲು ನಿರಾಕರಿಸಿದ್ದು, ಪ್ರಕರಣದ ಗಂಭೀರತೆಯನ್ನು ಉಲ್ಲೇಖಿಸಿ ಜಾಮೀನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಪ್ರಕರಣದ ತನಿಖೆ ಹಾಗೂ ಲಭ್ಯವಿರುವ ಸಾಕ್ಷ್ಯಾಧಾರಗಳ ಹಿನ್ನಲೆಯಲ್ಲಿ ತಕ್ಷಣದ ಬಿಡುಗಡೆ ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಒಂದು ವರ್ಷದ ನಂತರವಷ್ಟೇ ಮತ್ತೆ ಜಾಮೀನಿಗಾಗಿ ಅರ್ಜಿ ಸಲ್ಲಿಸಲು ಅವಕಾಶವ
May 151 min read


ಬೆಳ್ತಂಗಡಿ: ಅಕ್ರಮ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸ್ ದಾಳಿ – ಮೂವರ ಬಂಧನ, ಯುವತಿ ರಕ್ಷಣೆ
ಬೆಳ್ತಂಗಡಿ: ಅಕ್ರಮವಾಗಿ ನಿರ್ಮಾಣಗೊಂಡ ಕ್ಯಾಂಟಿನ್ ಒಳಗೆ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿ, 29 ವರ್ಷದ ಯುವತಿಯನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಸುಂದರ್ ಶೆಟ್ಟಿ (55) ಅವರು ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ ಕಚೇರಿ ಪಕ್ಕದ ಸರ್ಕಾರಿ ಜಾಗದಲ್ಲಿ “ಪವನ್ ಕ್ಯಾಂಟಿನ್” ಎಂಬ ಹೆಸರಿನಲ್ಲಿ ಕಳೆದ 20 ವರ್ಷಗಳಿಂದ ಕ್ಯಾಂಟಿನ್ ನಡೆಸುತ್ತಿದ್ದರು ಎನ್ನಲಾಗಿದೆ. ಪ್ರತಿ ಭಾನುವಾರ ಕ್ಯಾಂಟಿನ್ಗೆ ರಜೆ ಇರುತ್ತಿದ್ದ ಸಮಯವನ್ನು ದುರುಪಯೋಗಪಡಿಸಿಕೊಂಡು, ಕ್ಯಾಂಟಿನ್ ಒಳಗೆ
May 111 min read


ಸಚಿವ ಡಿ. ಸುಧಾಕರ್ ವಿಧಿವಶ
ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಹಿರಿಯೂರು ಮತ್ತು ಚಿತ್ರದುರ್ಗ ಜಿಲ್ಲೆಯ ರಾಜಕಾರಣದಲ್ಲಿ ಅಪ್ರತಿಮ ನಾಯಕರಾಗಿ ಗುರುತಿಸಿಕೊಂಡಿದ್ದ ಅವರ ನಿಧನಕ್ಕೆ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಪಾರ್ಥಿವ ಶರೀರವನ್ನು ಚಳ್ಳಕೆರೆಯ ಸುಧಾಕರ್ ಸ್ಟೇಡಿಯಂನಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗಿದ್ದು, ಅಭಿಮಾನಿಗಳು ಭಾವುಕ ನಮನ ಸಲ್ಲಿಸುತ್ತಿದ್ದಾರೆ. ಉದ್ಯಮದಿಂದ ವಿಧಾನಸಭೆಯವರೆಗೆ ಬೆಳೆದ ಸುಧಾಕರ್ ಅವರ ಪಯಣ ಸ್ಫೂರ್ತಿದಾಯಕ. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಇವರು, 2008ರಲ್ಲಿ ಪಕ್ಷೇತರರಾಗಿ ಗೆದ್ದು ಸಚಿ
May 101 min read


ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹಿಂಸಾಚಾರಕ್ಕೆ ಸುವೇಂಧು ಅಧಿಕಾರಿಯ ಆಪ್ತ ಸಹಾಯಕ ಬಲಿ| ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು
ಪಶ್ಚಿಮ ಬಂಗಾಳದಲ್ಲಿ ಮತ್ತೆ ರಾಜಕೀಯ ಹಿಂಸಾಚಾರ ತಲೆದೋರಿದ್ದು, ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ಹಿರಿಯ ಮುಖಂಡ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಉತ್ತರ 24 ಪರಗಣ ಜಿಲ್ಲೆಯ ಮಾಧ್ಯಮಗ್ರಾಮದಲ್ಲಿ ಬುಧವಾರ ರಾತ್ರಿ ಈ ದಾಳಿ ನಡೆದಿದ್ದು, ಘಟನೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮಾಹಿತಿ ಪ್ರಕಾರ, ರಥ್ ಅವರು ತಮ್ಮ ಸ್ಕಾರ್ಪಿಯೋ ಕಾರಿನಲ್ಲಿ ಕುಳಿತಿದ್ದ ವೇಳೆ ನಾಲ್ಕು ಬೈಕ್ಗಳಲ್ಲಿ ಬಂದ ಸುಮಾರು ಎಂಟು ಮಂದಿ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಮುಖಕ್ಕೆ ಹೆಲ್ಮೆಟ್ ಧರಿಸಿದ್ದ ಆರೋಪ
May 71 min read


ಕಡಬದಲ್ಲಿ ಭೀಕರ ಘಟನೆ: ಅತ್ತಿಗೆಯ ಮೇಲೆ ಪೆಟ್ರೋಲ್ ಸುರಿದು ಕೊಲೆ ಯತ್ನ
ಕಡಬ, ಮೇ 6: ಆಸ್ತಿ ವಿಚಾರ ಹಾಗೂ ಅಸೂಯೆಯಿಂದ ಮೈದುನನೊಬ್ಬ ಅತ್ತಿಗೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಪಾದೆಮಜಲು ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಐತ್ತೂರು ಗ್ರಾಮದ ನಿವಾಸಿ ಬೇಬಿ ಕೆ.ಎಸ್ (35) ಅವರು ಈ ಘಟನೆಯಲ್ಲಿ ಸಾವಿನ ಅಂಚಿನಿಂದ ಪಾರಾಗಿದ್ದಾರೆ. ಅವರು ತಮ್ಮ ಪತಿ ನೋಣಯ್ಯ ಗೌಡ ಮತ್ತು ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದು, ಕುಟುಂಬಕ್ಕೆ ಸೇರಿದ ಜಾಗವನ್ನು ಮೊದಲು ಅತ್ತೆಯವರು ಇಬ್ಬರು ಸಹೋದರರಿಗೆ ಹಂಚಿಕೆ ಮಾಡಿದ್ದರು. ತಮಗೆ ಸಿಕ್ಕ ಜಾಗದಲ್ಲಿ ಮನೆ ನಿರ್ಮಾಣಕ್ಕಾಗಿ ಬೇಬಿ ಅವರು ಅ
May 61 min read


ಗಾಂಜಾ ಕೇಸ್ ಆರೋಪಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾದ ಬಿಎಸ್ ಸಿ ವಿದ್ಯಾರ್ಥಿ
ಧಾರವಾಡ: ಗಾಂಜಾ ಸೇವನೆ ಆರೋಪ ಹಾಗೂ ಪೊಲೀಸರ ಕಿರುಕುಳದ ಭೀತಿಯಿಂದ ಬಿಎಸ್ಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಧಾರವಾಡದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಆದಿತ್ಯ ಎಂದು ಗುರುತಿಸಲಾಗಿದೆ. ಆತ ಧಾರವಾಡದ ಕಿಟಲ್ ಕಾಲೇಜಿನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದನು. ಗಾಂಜಾ ಸೇವನೆ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ಒಟ್ಟು 10 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಆದಿತ್ಯನಿಗೂ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ವರದಿ ನೆಗೆಟಿವ್ ಆಗಿತ್ತು. ನಂತರ ವಿಚಾರಣೆ ಪೂರ್ಣಗೊಳಿಸಿ ಪೊಲೀಸರು ಅವನನ್ನು ಬಿಡುಗಡೆ ಮಾಡಿದ್ದರು. ಆದರೆ ಮನೆಗ
Apr 281 min read


ದ.ಕನ್ನಡ: ಎಸ್ಎಸ್ಐ ಕೊಲೆ ಯತ್ನ ಪ್ರಕರಣ – ಅಪರಾಧಿಗೆ 7 ವರ್ಷಗಳ ಕಠಿಣ ಶಿಕ್ಷೆ
ಮಂಗಳೂರು: ಉರ್ವ ಪೊಲೀಸ್ ಠಾಣೆಯಲ್ಲಿ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿದ್ದ ಐತ್ತಪ್ಪ ಅವರ ಮೇಲೆ ನಡೆದ ಕೊಲೆ ಯತ್ನ ಪ್ರಕರಣದಲ್ಲಿ ಅಪರಾಧಿಗೆ ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿದೆ. ಈ ಪ್ರಕರಣವನ್ನು ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಎಫ್ಟಿಎಸ್ಸಿ-1 (ತ್ವರಿತಗತಿ ನ್ಯಾಯಾಲಯ)ವು, ಸುರತ್ಕಲ್ ನಿವಾಸಿ ಮಹಮ್ಮದ್ ನಿಯಾಜ್ (29) ಅಪರಾಧಿ ಎಂದು ತೀರ್ಮಾನಿಸಿ, 7 ವರ್ಷಗಳ ಕಠಿಣ ಶಿಕ್ಷೆ ಹಾಗೂ ₹50,000 ದಂಡ ವಿಧಿಸಿ ಸೋಮವಾರ (ಏ.27) ತೀರ್ಪು ನೀಡಿದೆ. ನ್ಯಾಯಾಧೀಶ ಮೋಹನ ಜೆ.ಎಸ್. ಅವರು ಪ್ರಕರಣದ ಸಾಕ್ಷ್ಯಾಧಾರಗಳು, ದಾಖಲೆಗಳು ಮತ್ತು ವಾದಗಳನ್ನು ಪರಿಶೀಲಿಸಿದ
Apr 281 min read


ಪತ್ನಿಯ ಶೀಲ ಶಂಕೆ: ಮಚ್ಚಿನಿಂದ ಕೊಚ್ಚಿ ಕೊಂದ ಪತಿ
ಕೋಲಾರ: ಪತ್ನಿಯ ನಡತೆ ಬಗ್ಗೆ ಅನುಮಾನಗೊಂಡ ಪತಿಯೊಬ್ಬನು ಆಕೆಯನ್ನು ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಿನ್ನದ ಗಣಿ ಗ್ರಾಮದ ಬಳಿ ಬುಧವಾರ ನಡೆದಿದೆ. ಮೃತಳನ್ನು ಈಶ್ವರಮ್ಮ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಆಂಧ್ರಪ್ರದೇಶದ ಪೆದ್ದೂರು ಮೂಲದ ಗೋಪಿನಾಥ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ, ದಂಪತಿ ಬಂಗಾರಪೇಟೆಯಲ್ಲಿರುವ ಸಂಬಂಧಿಕರ ಮನೆಗೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದ ವೇಳೆ ದಾರಿಯುದ್ದಕ್ಕೂ ಜಗಳ ನಡೆದಿದೆ. ಪತ್ನಿಯ ಶೀಲದ ಬಗ್ಗೆ ಈಗಾಗಲೇ ಶಂಕೆ ಹೊಂದಿದ್ದ ಗೋಪಿನಾಥ ಆಕ್ರೋಶಗೊಂಡು, ಮಚ್ಚಿನಿಂದ ಈಶ್ವರಮ್ಮ ಅವರ ಕೈ
Apr 241 min read


ಪುತ್ತೂರು :ಮದುವೆ ಭರವಸೆ ಪ್ರಕರಣಹೈಕೋರ್ಟ್ ಮಧ್ಯಂತರ ತಡೆ, ₹75 ಸಾವಿರ ಪಾವತಿ ಆದೇಶ
ಬೆಂಗಳೂರು, ಏಪ್ರಿಲ್ 24: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ನಂತರ ಆಕೆ ಮಗುವಿಗೆ ಜನ್ಮ ನೀಡಿದ ಬಳಿಕ ವಂಚನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಮಧ್ಯಂತರ ಆದೇಶ ಹೊರಡಿಸಿದೆ. ಪುತ್ತೂರಿನ ಬಿಜೆಪಿ ಮಾಜಿ ಮುಖಂಡನ ಪುತ್ರ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಪ್ರಕರಣ ರದ್ದು ಅರ್ಜಿಯನ್ನು ವಿಚಾರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಪ್ರಕರಣಕ್ಕೆ ತಾತ್ಕಾಲಿಕ ತಡೆ ನೀಡಿದರೂ, ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಿದೆ. ಈ ಪ್ರಕರಣದಲ್ಲಿ ಪ್ರಮುಖವಾಗಿ ಗಮನಸೆಳೆದ ಅಂಶವೆಂದರೆ, ಆರೋಪಿಯೊಂದಿಗೆ ದೈಹಿಕ ಸಂಬಂಧದಿಂದ ಯುವತಿಗೆ
Apr 241 min read


ಬಿಜೆಪಿ ನಾಯಕನ ಪುತ್ರನಿಂದ ಯುವತಿಗೆ ವಂಚನೆ: ಮದುವೆಯಾಗುವುದೇ ಉತ್ತಮ ಎಂದು ಹೈಕೋರ್ಟ್ ಅಭಿಪ್ರಾಯ
ಡಿಎನ್ಎ ಪರೀಕ್ಷೆಯಲ್ಲಿ ಮಗುವಿನ ತಂದೆ ದೃಢ – ಯುವತಿಗೆ ₹10,000 ಜೀವನಾಂಶ ನೀಡಲು ಸಿದ್ಧರೇ? ಎಂದು ಕೋರ್ಟ್ ಪ್ರಶ್ನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಕೇಳಿಬಂದ ಪ್ರೀತಿ-ವಂಚನೆ ಪ್ರಕರಣ ಇದೀಗ ಕಾನೂನು ಹಂತದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್, ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಗರ್ಭವತಿಯಾಗಿಸಿ ನಂತರ ವಂಚಿಸಿದ ಆರೋಪ ಎದುರಿಸುತ್ತಿದ್ದಾನೆ. ಈ ಪ್ರಕರಣವನ್ನು ರದ್ದುಪಡಿಸುವಂತೆ ಕೃಷ್ಣ ಜೆ. ರಾವ್ ಹೈಕೋರ್ಟ್ ಮೊರೆ ಹೋಗಿದ್ದು, ವಿಚಾರಣೆ ವೇಳೆ ನ್ಯಾಯಾಲಯ ಮಹತ್
Apr 231 min read


ಪ್ರಪೋಸ್ ನೆಪದಲ್ಲಿ ಪ್ರಿಯಕರನ ಕಣ್ಣಿಗೆ ಬಟ್ಟೆ ಕಟ್ಟಿ ಬೆಂಕಿ ಹಚ್ಚಿ ಕೊಂದ ಯುವತಿ!
ಬೆಂಗಳೂರಿನ ಅಂಜನಾಪುರದಲ್ಲಿ ನಡೆದ ಕ್ರೂರ ಕೃತ್ಯ; ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದರು ಬೆಂಗಳೂರು, ಏಪ್ರಿಲ್ 22: ದಕ್ಷಿಣ ಬೆಂಗಳೂರಿನ ಅಂಜನಾಪುರದಲ್ಲಿ ಪ್ರೇಮ ಸಂಬಂಧವು ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ನಗರದ ಜನತೆಯನ್ನು ಬೆಚ್ಚಿಬೀಳಿಸಿದೆ. ಕಿರಣ್ (27) ಎಂಬ ಯುವಕನನ್ನು ಅವನ ಪ್ರಿಯತಮೆಯೇ ಪ್ರಪೋಸಲ್ ಹೆಸರಿನಲ್ಲಿ ಮನೆಗೆ ಕರೆದು ಕ್ರೂರವಾಗಿ ಕೊಲೆ ಮಾಡಿದ ಆರೋಪ ಕೇಳಿಬಂದಿದೆ. ಮೃತ ಕಿರಣ್ ಹಾಗೂ ಆರೋಪಿಯಾದ ಯುವತಿ ಇಬ್ಬರೂ ರಾಜಾಜಿನಗರದ ವೊಡಾಫೋನ್ ಮಳಿಗೆಯಲ್ಲಿ ಸಹೋದ್ಯೋಗಿಗಳಾಗಿದ್ದು, ಕಳೆದ ಒಂದು ವರ್ಷದಿಂದ ಪ್ರೇಮ ಸಂಬಂಧ ಹೊಂದಿದ್ದರು ಎಂದು ತಿಳಿದುಬಂದಿದೆ. ಇತ್ತೀಚೆಗೆ ಕಿರ
Apr 221 min read


SSLC ಹಿಂದಿ ವಿಷಯಕ್ಕೆ ಅಂಕ ಕಡ್ಡಾಯ: ಗ್ರೇಡ್ ವ್ಯವಸ್ಥೆಗೆ ಹೈಕೋರ್ಟ್ ತಡೆ
ಬೆಂಗಳೂರು, ಏಪ್ರಿಲ್ 21: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕ ನೀಡುವಂತೆ ನೀಡಿದ್ದ ಆದೇಶದ ಕುರಿತು ರಾಜ್ಯ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. 2025-26ನೇ ಶೈಕ್ಷಣಿಕ ಸಾಲಿನಿಂದ ಹಿಂದಿ ವಿಷಯಕ್ಕೆ ಅಂಕ ನೀಡಬೇಕೆಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ನ್ಯಾ. ಇ.ಎಸ್. ಇಂದಿರೇಶ್ ಅವರಿದ್ದ ಹೈಕೋರ್ಟ್ ಪೀಠ, ಪರೀಕ್ಷಾ ಅಧಿಸೂಚನೆ ಹೊರಬಿದ್ದ ಬಳಿಕ ನಿಯಮಗಳನ್ನು ಬದಲಾಯಿಸುವುದು ಸೂಕ್ತವಲ್ಲ ಎಂದು ಕಠಿಣವಾಗಿ ಸೂಚಿಸಿದೆ. “ಎಲ್ಲರನ್ನೂ ಪಾಸ್ ಮಾಡಬೇಕೆಂದಿದ್ದರೆ ಪರೀಕ್ಷೆಯನ್ನೇ ರದ್ದು ಮಾಡಿ” ಎಂದು ಸರ್ಕಾರದ
Apr 211 min read


ಬೆಳ್ತಂಗಡಿಯಲ್ಲಿ ಮಗನಿಂದ ತಂದೆಯ ಕೊಲೆ ಯತ್ನ: ಆರೋಪಿ ಬಂಧನ
ಕುಡಿದ ಮತ್ತಿನಲ್ಲಿ ಗಲಾಟೆ; ಕತ್ತಿಯಿಂದ ಹಲ್ಲೆ – ತಂದೆ ಆಸ್ಪತ್ರೆಗೆ ದಾಖಲು ವರದಿ | ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದಲ್ಲಿ ಮಗನೊಬ್ಬ ತನ್ನ ತಂದೆಯ ಮೇಲೆ ಕೊಲೆ ಯತ್ನ ನಡೆಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಕುಡಿದ ಮತ್ತಿನಲ್ಲಿ ನಡೆದ ಗಲಾಟೆ ಈ ದುರಂತಕ್ಕೆ ಕಾರಣವಾಗಿದೆ. ಉಜಿರೆ ಗ್ರಾಮದ ಮಣಿಕೆ ನಿವಾಸಿಯಾದ ಗಾರೆ ಕೆಲಸಗಾರ ನಾರಾಯಣ (52) ಹಾಗೂ ಟಿಂಬರ್ ಕೆಲಸ ಮಾಡುತ್ತಿದ್ದ ಪುತ್ರ ಭರತ್ (25) ನಡುವೆ ಏಪ್ರಿಲ್ 19ರಂದು ರಾತ್ರಿ ಸುಮಾರು 7:30 ಗಂಟೆ ಸುಮಾರಿಗೆ ಮನೆಯಲ್ಲೇ ವಾಗ್ವಾದ ಉಂಟಾಯಿತು. ವಾಗ್ವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕೋಪೋ
Apr 211 min read


ಮಗ ತನ್ನಂತೆ ಇಲ್ಲ ಎಂದಿದ್ದಕ್ಕೆ ನದಿಗೆ ತಳ್ಳಿ ಕೊಂದ ಪಾಪಿ ತಂದೆ!
ಮಗ ತನ್ನಂತೆ ಇಲ್ಲ ಎಂದು ಗ್ರಾಮಸ್ಥರು ಚುಡಾಯಿಸಿದ್ದಕ್ಕೆ ತಂದೆಯೇ ಮಗನನ್ನು ಹತ್ಯೆ ಮಾಡಿದ ಭೀಕರ ಘಟನೆ ವಿಜಯಪುರ ಜಿಲ್ಲೆಯ ನಾಗಠಾಣ ಗ್ರಾಮದಲ್ಲಿ ನಡೆದಿದೆ. ಮಾರ್ಚ್ 16ರಂದು ಮಗ ಸಿದ್ದಾರ್ಥನನ್ನು ಶಾಲೆಗೆ ಸೇರಿಸುವುದಾಗಿ ಕರೆದೊಯ್ದ ತಂದೆ ಮಲ್ಲಿಕಾರ್ಜುನ, ಮಹಾರಾಷ್ಟ್ರದ ಕರಾಡ್ ಬಳಿ ಕೃಷ್ಣಾ ನದಿಗೆ ತಳ್ಳಿ ಕೊಲೆ ಮಾಡಿದ್ದಾನೆ. ಮಗನನ್ನು ಹಾಸ್ಟೆಲ್ನಲ್ಲಿ ಇಟ್ಟಿರುವುದಾಗಿ ಸುಳ್ಳು ಹೇಳಿದ್ದ ಮಲ್ಲಿಕಾರ್ಜುನ, ಏಪ್ರಿಲ್ 1ರಂದು ಮಗನ ಹುಟ್ಟುಹಬ್ಬಕ್ಕೆ ತಾಯಿ ಪಟ್ಟು ಹಿಡಿದಾಗ ಪರಾರಿಯಾಗಿದ್ದಾನೆ. ಇದರಿಂದ ಅನುಮಾನಗೊಂಡ ತಾಯಿ ಭಾಗ್ಯಶ್ರೀ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ವೇಳೆ ಪಾಪಿ ತಂದೆಯ
Apr 171 min read


ಸುಳ್ಯ: ಸಾಲ ಮರಳಿಸುವ ನೆಪದಲ್ಲಿ ಚಿನ್ನಾಭರಣ ದೋಚಿದ ಮಹಿಳೆ ಆರೋಪಿಯನ್ನು ಬಂಧಿಸಿದ ಪೊಲೀಸರು
ಸಾಲ ಮರುಪಾವತಿಸುವ ನೆಪದಲ್ಲಿ ಮನೆಗೆ ಬಂದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದ ಶೃತಿ ಹಾಗೂ ಆಕೆಗೆ ಸಹಕರಿಸಿದ ಪ್ರದೀಪ್ ಎಂಬುವವರನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಪುಣ್ಯಶ್ರೀ ಎಂಬುವವರ ತಂದೆಯಿಂದ 6 ಲಕ್ಷ ರೂ. ಸಾಲ ಪಡೆದಿದ್ದ ಶೃತಿ, ಏಪ್ರಿಲ್ 7 ರಂದು ಹಣ ನೀಡುವ ನೆಪದಲ್ಲಿ ಅವರ ಮನೆಗೆ ಬಂದಿದ್ದರು. ಮನೆಯವರು ಕೆಲಸಕ್ಕೆ ತೆರಳಿದ್ದನ್ನು ಗಮನಿಸಿ, ಕಪಾಟಿನ ಬೀಗದ ಕೀ ಬಳಸಿ ಸುಮಾರು 62.5 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿದ್ದರು. ಮನೆಯವರು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ ಕಳವಾದ ಸುಮಾರು 5 ಲಕ್ಷ ರೂ.
Apr 121 min read


ಮಾರಕಾಸ್ತ್ರಗಳಿಂದ ಕೊಚ್ಚಿ ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ
ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಸರ್ಕಾರಿ ಶಾಲಾ ಶಿಕ್ಷಕಿ ಜ್ಯೋತಿ ಕಪಾಳೆ ಹಿರೇಮಠ (57) ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಹಂತಕರು ಸಾಕ್ಷ್ಯ ನಾಶಪಡಿಸಲು ಪೆಟ್ರೋಲ್ ಸುರಿದು ಶವವನ್ನು ಸುಟ್ಟುಹಾಕಿದ್ದು, ಈ ಕೃತ್ಯವು ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಮೃತರು ಬೀದರ್ ಜಿಲ್ಲೆಯ ವಂದರಖೇಡ ಗ್ರಾಮದ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಕಲಬುರಗಿಯಿಂದ ಬೀದರ್ಗೆ ತೆರಳುವ ಮಾರ್ಗಮಧ್ಯೆ ಈ ಅಮಾನುಷ ಘಟನೆ ನಡೆದಿದೆ. ಆರಂಭದಲ್ಲಿ ಅಪರಿಚಿತ ಮಹಿಳೆಯ ಕೊಲೆ ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು, ನಂತರ ತನಿಖ
Apr 71 min read


ಭಾರತದ ಇತಿಹಾಸದಲ್ಲೇ ಮಹತ್ವದ ತೀರ್ಪು ತಂದೆ-ಮಗನ ಲಾಕಪ್ ಡೆತ್ ಪ್ರಕರಣ: ಒಂಬತ್ತು ಪೊಲೀಸರಿಗೆ ಮರಣದಂಡನೆ ಶಿಕ್ಷೆ
ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾಥನ್ಕುಲಂನಲ್ಲಿ ನಡೆದ ತಂದೆ-ಮಗನ ಅಮಾನವೀಯ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುರೈ ಜಿಲ್ಲಾ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಪೊಲೀಸ್ ಕಸ್ಟಡಿಯಲ್ಲಿ ಜಯರಾಜ್ ಮತ್ತು ಬೆನ್ನಿಕ್ಸ್ ಅವರ ಸಾವಿಗೆ ಕಾರಣರಾದ ಇನ್ಸ್ಪೆಕ್ಟರ್ ಶ್ರೀಧರ್ ಸೇರಿದಂತೆ ಒಂಬತ್ತು ಪೊಲೀಸರಿಗೆ ನ್ಯಾಯಾಧೀಶ ಜಿ. ಮುತ್ತುಕುಮಾರನ್ ಮರಣದಂಡನೆ ವಿಧಿಸಿದ್ದಾರೆ. ಈ ಪ್ರಕರಣವನ್ನು ‘ಅಪರೂಪದಲ್ಲಿ ಅಪರೂಪದ ಪ್ರಕರಣ’ ಎಂದು ಬಣ್ಣಿಸಿರುವ ನ್ಯಾಯಾಲಯವು, ಪೊಲೀಸರ ಈ ಕ್ರೌರ್ಯವು ಸಮಾಜದಲ್ಲಿ ಕಾನೂನಿನ ಮೇಲಿದ್ದ ವಿಶ್ವಾಸವನ್ನೇ ಅಲುಗಾಡಿಸಿದೆ ಎಂದು ಅಭಿಪ್ರಾಯಪಟ್ಟಿದೆ. 2020ರ ಕೊರೊ
Apr 71 min read
Archive
bottom of page



