top of page
News Articles
Sathyapatha News Plus


ಬೆಂಗಳೂರು: ಬಿಎಂಟಿಸಿ ಬಸ್ಸಿಗೆ ರೈಲು ಡಿಕ್ಕಿ;
ಬೆಂಗಳೂರು: ನಗರದ ಕಾಡುಗೋಡಿಯ ಸಾದರಮಂಗಲ ರೈಲ್ವೆ ಕ್ರಾಸಿಂಗ್ ಬಳಿ ಬಿಎಂಟಿಸಿ ಬಸ್ ಮತ್ತು ರೈಲಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸಾದರಮಂಗಲದಲ್ಲಿ ಪ್ರಯಾಣಿಕರನ್ನು ಇಳಿಸಿ ಖಾಲಿ ಬಸ್ಸು ಡಿಪೋಗೆ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿ ಪ್ರಯಾಣಿಕರು ಯಾರೂ ಇಲ್ಲದ ಕಾರಣ ಯಾವುದೇ ಜೀವಹಾನಿ ಸಂಭವಿಸಿಲ್ಲ. ಆದರೆ ರೈಲಿನ ಡಿಕ್ಕಿಯ ರಭಸಕ್ಕೆ ಬಿಎಂಟಿಸಿ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಡಿಪೋ ಸಂಖ್ಯೆ 51ಕ್ಕೆ ಸೇರಿದ್ದ ಈ ಬಸ್ಸು, ಇಕ್ಕಟ್ಟಾದ ರಸ್ತೆಯಲ್ಲಿ ಹಿಂಬದಿಗೆ ಚಲಿಸಿ ನಂತರ ಮುಂದಕ್ಕೆ ಹೋಗಲು ಪ್ರಯತ್ನಿಸುತ್ತಿತ್ತು. ಈ ಸಂದರ್ಭದಲ್ಲಿ ಚಾಲಕನು ಹಳಿ
Jan 271 min read


ರಾಜ್ಯಾದ್ಯಂತ ಮುಂದುವರಿಯಲಿರುವ ಚಳಿ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಕರ್ನಾಟಕದಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಒಣ ಹವೆ ಮುಂದುವರಿಯಲಿದ್ದು, ಚಳಿಯ ತೀವ್ರತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ ಇರಲಿದ್ದು, ಬೆಳಗಿನ ಜಾವ ದಟ್ಟ ಮಂಜು ಕವಿಯುವ ಸಾಧ್ಯತೆಯಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 27°C ಮತ್ತು ಕನಿಷ್ಠ 18°C ತಾಪಮಾನ ದಾಖಲಾಗುವ ನಿರೀಕ್ಷೆಯಿದೆ. ಪ್ರಮುಖ ನಗರಗಳ ತಾಪಮಾನ ಗಮನಿಸುವುದಾದರೆ, ಮಂಗಳೂರಿನಲ್ಲಿ 31-24°C, ಶಿವಮೊಗ್ಗದಲ್ಲಿ 32-19°C ಹಾಗೂ ಬೆಳಗಾವಿಯಲ್ಲಿ 29-19°C ಇರಲಿದೆ. ಕರಾವಳಿ ಮತ್ತು ಮಲೆ
Jan 271 min read


ಬೆಳ್ತಂಗಡಿ: ವಿದ್ಯುತ್ ಪಂಪ್ ಆನ್ ಮಾಡುವಾಗ ಶಾಕ್ ತಗುಲಿ ವ್ಯಕ್ತಿ ದುರ್ಮರಣ
ಬೆಳ್ತಂಗಡಿ: ತಾಲೂಕಿನ ಗುರಿಪಳ್ಳದಲ್ಲಿ ಗಣರಾಜ್ಯೋತ್ಸವದ ದಿನವಾದ ಇಂದು (ಜನೆವರಿ 26) ಬೆಳಿಗ್ಗೆ ಸಂಭವಿಸಿದ ವಿದ್ಯುತ್ ಅವಘಡದಲ್ಲಿ 48 ವರ್ಷದ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಗುರಿಪಳ್ಳದ ಕಡಿಯಾರು ಗ್ರಾಮದ ನಿವಾಸಿ ಶಿವಪ್ರಸಾದ್ ಆದಪ್ಪ ಎಂಬವರೇ ಮೃತಪಟ್ಟ ದುರ್ದೈವಿ. ಮನೆಯ ಬಳಿಯ ನೀರಿನ ಪಂಪ್ ಆನ್ ಮಾಡಲು ಹೋದಾಗ ಈ ಘೋರ ದುರಂತ ಸಂಭವಿಸಿದೆ. ಕುಟುಂಬದ ಮೂಲಗಳ ಪ್ರಕಾರ, ಶಿವಪ್ರಸಾದ್ ಅವರು ಎಂದಿನಂತೆ ತಮ್ಮ ಬೆಳಗಿನ ದಿನಚರಿಯ ಕೆಲಸಕ್ಕೆಂದು ಹೊರಬಂದಿದ್ದರು. ಈ ವೇಳೆ ಪಂಪ್ ಸೆಟ್ ಸ್ವಿಚ್ ಹಾಕುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಗಂಭೀರವಾಗಿ ಗಾಯಗೊಂಡು ನೆಲಕ್ಕೆ ಉರುಳಿ ಬಿ
Jan 261 min read


ಶರಣ್ ಪಂಪ್ವೆಲ್ಗೆ ಜಿಲ್ಲಾ ಪ್ರವೇಶ ನಿಷೇಧ: ಶಾಂತಿ ಕಾಪಾಡಲು ಜಿಲ್ಲಾಧಿಕಾರಿ ಕ್ರಮ
ಹಾಸನ: ಶ್ರವಣಬೆಳಗೊಳ ಹಾಗೂ ಅರಸೀಕೆರೆಯಲ್ಲಿ ಭಾನುವಾರ ಆಯೋಜಿಸಲಾಗಿದ್ದ 'ಹಿಂದೂ ಸಮಾಜೋತ್ಸವ' ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದ್ದ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಅವರಿಗೆ ಜಿಲ್ಲಾ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ಆದೇಶ ಹೊರಡಿಸಿದ್ದಾರೆ. ಶರಣ್ ಪಂಪ್ವೆಲ್ ಅವರು ಈ ಹಿಂದೆ ವಿವಿಧ ಜಿಲ್ಲೆಗಳಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಈ ಇತಿಹಾಸವನ್ನು ಗಮನಿಸಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು
Jan 261 min read


ತಂದೆಗೆ ಚೂರಿ ಇರಿದು, ಬಳಿಕ ಶೂಟೌಟ್ ಮಾಡಿಕೊಂಡು ಆತ್ಮಹತ್ಯೆ: ಕಡಬದಲ್ಲಿ ಭೀಕರ ಘಟನೆ
ಕಡಬ: ತಂದೆಯನ್ನೇ ಚೂರಿಯಿಂದ ಇರಿದು ಕೊಲೆ ಯತ್ನ ನಡೆಸಿದ ಬಳಿಕ ಮನೆಯಲ್ಲಿದ್ದ ಕೋವಿಯಿಂದ ಶೂಟೌಟ್ ಮಾಡಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಶನಿವಾರ ಸಂಜೆ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ನಡೆದಿದೆ. ಶೂಟೌಟ್ ಮಾಡಿಕೊಂಡು ಮೃತಪಟ್ಟ ಯುವಕನನ್ನು ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಎಂಬವರ ಪುತ್ರ ಮೋಕ್ಷ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ತಂದೆ–ಮಗನ ನಡುವೆ ತೀವ್ರ ಜಗಳ ನಡೆದಿದ್ದು, ಆ ಸಂದರ್ಭದಲ್ಲಿ ಮೋಕ್ಷ ತನ್ನ ತಂದೆ ವಸಂತ ಅಮೀನ್ ಅವರಿಗೆ ಚೂರಿಯಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ ಎನ್ನಲಾಗಿದೆ. ಅನಂತರ ಮನೆಗೆಲ್ಲಿದ್ದ
Jan 241 min read


ಮಂಗಳೂರು: ನಕಲಿ ಚಿನ್ನದ ಬಳೆ ಅಡವಿಟ್ಟು ₹14.89 ಲಕ್ಷ ಸಾಲ – ಮೂವರ ಬಂಧನ
ಕಾವೂರು ವ್ಯಾಪ್ತಿಯ ಸಹಕಾರಿ ಸಂಸ್ಥೆಯೊಂದರಲ್ಲಿ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ₹14.89 ಲಕ್ಷ ಸಾಲ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್ ನಝೀರ್, ಜಮಾಲುದ್ದೀನ್ ಎ.ಎಚ್. ಹಾಗೂ ಸೈನಾಝ್ ಎಂದು ಗುರುತಿಸಲಾಗಿದೆ. ಪ್ರಕರಣದ ಮತ್ತೊಬ್ಬ ಆರೋಪಿ ದಿಲ್ಶಾದ್ ತಲೆಮರೆಸಿಕೊಂಡಿದ್ದು, ಆಕೆಯ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಬಂಧಿತರು ಹಾಗೂ ತಲೆಮರೆಸಿಕೊಂಡಿರುವ ಆರೋಪಿ 2024ರ ಜೂನ್ 24ರಿಂದ ಅಕ್ಟೋಬರ್ 5ರವರೆಗೆ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಸಾಲ ಪಡೆದಿದ್ದರು. ಬ್ಯಾಂಕ್ನ ಚಿನ
Jan 241 min read
Archive
bottom of page



