top of page
News Articles
Sathyapatha News Plus


ರೋಗವನ್ನು ಮೂಲದಿಂದ ನಿವಾರಿಸುವ ಸಾಮರ್ಥ್ಯ ಹೋಮಿಯೋಪತಿ ಔಷಧಿಗಿದೆ.-ಡಾ.ಶ್ರೀ ದೇವಿ ವೆಂಕಟಾಪುರ
ಮಂಗಳೂರು : ಯಾವುದೇ ಅಡ್ಡ ಪರಿಣಾಮವಿಲ್ಲದ; ರೋಗವನ್ನು ಮೂಲದಿಂದ ನಿವಾರಿಸುವ ಹೋಮಿಯೋಪತಿ ಔಷಧಿಗಳನ್ನು ಶಿಶುವಿನಿಂದ ಹಿಡಿದು ಎಲ್ಲಾ ವಯೋಮಾನದ ವ್ಯಕ್ತಿಗಳು ತಮ್ಮ ಇತರ ಔಷಧಿಯೊಂದಿಗೆ ಕೂಡಾ ಸೇವಿಸಬಹುದು ಎಂದು ಹೋಮಿಯೋಪತಿ ತಜ್ಞರಾದ ಆಯುಷ್ ಇಲಾಖೆಯ ಡಾ.ಶ್ರೀ ದೇವಿ ವೆಂಕಟಾಪುರ ತಿಳಿಸಿದರು. ಅವರು ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆಯ (ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ) ಸಹಯೋಗದೊಂದಿಗೆ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ (KSTA) ಭವನ, ಗೋರಿಗುಡ್ಡದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆ ಹಾಗೂ ಹೋಮಿಯೋಪತಿ ಚಿಕಿತ್ಸಾ ಶಿಬಿರದ ಕಾರ್ಯಕ
Aug 61 min read


ಸಕಲೇಶಪುರ–ಸುಬ್ರಹ್ಮಣ್ಯ ಘಾಟ್ನಲ್ಲಿ ವಂದೇ ಭಾರತ್ ಟ್ರಯಲ್ ರನ್ಗೆ ಸಿದ್ಧತೆ: ಆ.11ರಿಂದ ಸುರಕ್ಷತಾ ಪರೀಕ್ಷೆ ಆರಂಭ
ಬೆಂಗಳೂರು, ಆ.6: ಬಹುನಿರೀಕ್ಷಿತ ಬೆಂಗಳೂರು–ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಆರಂಭದತ್ತ ಮಹತ್ವದ ಹೆಜ್ಜೆ ಇಟ್ಟಿದ್ದು, ಆಗಸ್ಟ್ 11ರಿಂದ 20ರವರೆಗೆ ಪರೀಕ್ಷಾರ್ಥ ಸಂಚಾರ (ಟ್ರಯಲ್ ರನ್) ನಡೆಸಲು ರೈಲ್ವೆ ಇಲಾಖೆ ಸಿದ್ಧತೆ ಪೂರ್ಣಗೊಳಿಸಿದೆ. ಈ ಅವಧಿಯಲ್ಲಿ ರೈಲಿನ ಕಾರ್ಯಕ್ಷಮತೆ ಹಾಗೂ ಸುರಕ್ಷತಾ ಮಾನದಂಡಗಳನ್ನು ವಿವಿಧ ಹಂತಗಳಲ್ಲಿ ಪರಿಶೀಲಿಸಲಾಗುತ್ತದೆ. ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಟ್ರಯಲ್ ರನ್ಗೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದು, ಭಾರತೀಯ ರೈಲ್ವೆಯ ಸಂಶೋಧನೆ, ವಿನ್ಯಾಸ ಮತ್ತು ಮಾನಕ ಸಂಸ್ಥೆ (RDSO) ಅಧಿಕಾರಿಗಳ ತಂಡವು ಪರೀಕ್ಷಾರ್ಥ ಸಂಚಾರದ ಮೇಲ್ವಿಚ
Aug 61 min read


ಸಂಪಾಜೆಯಲ್ಲಿ ಕಾಡುಕೋಣ ಬೇಟೆ; ಮಾಂಸ ಮಾರಾಟಕ್ಕೆ ಯತ್ನ – ಇಬ್ಬರ ಬಂಧನ, ಓರ್ವ ಪರಾರಿ
ಸಂಪಾಜೆ, ಆ.6: ಕೊಡಗು ಜಿಲ್ಲೆಯ ಚೆಂಬು ಅರಣ್ಯ ವಲಯದಲ್ಲಿ ಕಾಡು ಪ್ರಾಣಿಯನ್ನು ಬೇಟೆಯಾಡಿ ಅದರ ಮಾಂಸವನ್ನು ಮಾರಾಟಕ್ಕೆ ಸಾಗಿಸುತ್ತಿದ್ದ ಪ್ರಕರಣವನ್ನು ಅರಣ್ಯ ಇಲಾಖೆ ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಬಂಧಿತ ಆರೋಪಿಗಳನ್ನು ಗೌತಮ್ (ಚೆಂಬು) ಹಾಗೂ ಶರತ್ (ಪೆರಾಜೆ) ಎಂದು ಗುರುತಿಸಲಾಗಿದೆ. ಯತಿನ್ (ಕಾಡುಪಂಜ) ಎಂಬ ಆರೋಪಿ ಪರಾರಿಯಾಗಿದ್ದಾನೆ. ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಕೊಡಗು ವ್ಯಾಪ್ತಿಯ ಚೆಂಬು ಅರಣ್ಯದ ಕಾಡುಪಂಜ ಪ್ರದೇಶದಲ್ಲಿ ಕಾಡುಕೋಣವನ್ನು ಅಕ್ರಮವಾಗಿ ಬೇಟೆಯಾಡಿ ಹತ್ಯೆ ಮಾ
Aug 61 min read


ವಾಲಿಬಾಲ್ ಆಡುವಾಗ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು
ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ಬುಧವಾರ ಸಂಜೆ ಶೋಕದ ವಾತಾವರಣ ಆವರಿಸಿದೆ. ಸ್ನೇಹಿತರೊಂದಿಗೆ ಮೈದಾನದಲ್ಲಿ ವಾಲಿಬಾಲ್ ಆಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಲಿಖಿತ್ ಅಮೀನ್ (15) ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಈತ ಸ್ಥಳೀಯ ಮಾಧವ ಅಮೀನ್ ಅವರ ಪುತ್ರ. ಆಟದ ಮಧ್ಯೆ ಕುಸಿದು ಬಿದ್ದ ಬಾಲಕನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ. ಸೂರಿಂಜೆ ಕೋಟೆ ಬೋಳ್ಳಾರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಈತನ ಅಕಾಲಿಕ ಸಾವು ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ದುಃಖ ಸೃಷ್ಟಿಸಿದೆ.
Aug 61 min read


ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಉಮರ್ ಫಾರೂಕ್ ಎನ್ಐಎ ಬಲೆಗೆ
ಮಂಗಳೂರು, ಆ.6: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಕೇರಳದ ಕೊಚ್ಚಿಯಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಸುಳ್ಯ ತಾಲೂಕಿನ ಕಲ್ಲುಮುಟ್ಟು ನಿವಾಸಿ ಉಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಪಟ್ಟಿಯಲ್ಲಿ ಈತನ ಹೆಸರು ಇದ್ದು, ಮಾಹಿತಿ ನೀಡಿದವರಿಗೆ ಎನ್ಐಎ ₹2 ಲಕ್ಷ ಬಹುಮಾನ ಘೋಷಿಸಿತ್ತು. 2022ರ ಜುಲೈ 26ರಂದು ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯಲ್ಲಿ, ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಹಿಂದ
Aug 61 min read


ಮಂಗಳೂರು ಕಾಲೇಜು ಕ್ಯಾಂಪಸ್ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ; ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲು
ಮಂಗಳೂರು, ಆ.5: ಖಾಸಗಿ ಕಾಲೇಜಿನ ಕ್ಯಾಂಪಸ್ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳವಾರ ಮಂಗಳೂರಿನಲ್ಲಿ ನಡೆದಿದೆ. ಕಾಲೇಜು ಆಡಳಿತ ಮಂಡಳಿ ನಡೆಸಿದ ತಪಾಸಣೆಯ ವೇಳೆ ವಿದ್ಯಾರ್ಥಿಗಳ ಬಳಿ ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಪ್ಯಾಕ್ ಮಾಡಲಾಗಿದ್ದ ಸುಮಾರು 290 ಗ್ರಾಂ ಗಾಂಜಾ ಪತ್ತೆಯಾಗಿದೆ. ಕೂಡಲೇ ಕಾಲೇಜು ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ವಿದ್ಯಾರ್ಥಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಮೂವರೂ ಮಾ
Aug 51 min read


ಆ. 4ರಂದು ಭಾರೀ ಮಳೆ ಸಾಧ್ಯತೆ: ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ
ಉಡುಪಿ: ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಆಗಸ್ಟ್ 4 (ಮಂಗಳವಾರ) ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ. ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಇದೀಗ ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಆಗಸ್ಟ್ 7
Aug 31 min read


ಕುಕ್ಕೆ ಸುಬ್ರಹ್ಮಣ್ಯ: ಭಾರೀ ಮಳೆಗೆ ಗುಡ್ಡ ಕುಸಿತ, ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಕಾಂಪೌಂಡ್ ಹಾನಿ
ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಇಂದು ಭಾರೀ ಮಳೆಯಾಗಿದೆ. ಮಳೆಯ ರಭಸಕ್ಕೆ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಹಿಂಬಾಗದ ಗುಡ್ಡ ಜರಿದು ಬಿದ್ದಿದೆ. ಗುಡ್ಡ ಜರಿತದ ಜೊತೆಗೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮವಾಗಿ, ದೈವಸ್ಥಾನದ ಕಾಂಪೌಂಡ್ ಸಂಪೂರ್ಣವಾಗಿ ಹಾನಿಗೀಡಾಗಿದೆ. ಅದೃಷ್ಟವಶಾತ್ ದೊಡ್ಡ ಮಟ್ಟದ ಅನಾಹುತವೊಂದು ತಪ್ಪಿದಂತಾಗಿದೆ. ಈ ಪ್ರದೇಶದಲ್ಲಿ ಗುಡ್ಡ ಇನ್ನೂ ಜರಿಯುವ ಅಪಾಯವಿದ್ದು, ಸ್ಥಳದಲ್ಲಿ ಅನೇಕ ಮರಗಳು ಅಪಾಯಕಾರಿ ಸ್ಥಿತಿಯಲ್ಲಿವೆ. ಇದರಿಂದಾಗಿ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
Aug 21 min read


ಬೆಳ್ತಂಗಡಿ: ಕಾಡಾನೆ ದಾಳಿಗೆ ವ್ಯಕ್ತಿ ಬಲಿ – ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ದುರಂತ
ಬೆಳ್ತಂಗಡಿ, ಆ. 2: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಶನಿವಾರ ಸಂಜೆ ಸಂಭವಿಸಿದೆ. ಮೃತರನ್ನು ಇಡಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಮಾಹಿತಿಯಂತೆ, ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸಕ್ಕೆ ತೆರಳಿದ್ದು, ಸಂಜೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ರಾತ್ರಿ ತಡವಾದರೂ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸ್ಥಳೀಯರು ಅವರನ್ನು ಹುಡುಕಾಟ ಆರಂಭಿಸಿದರು. ಹುಡುಕಾಟದ ವೇಳೆ ಅವರು ಧರಿಸಿದ್ದ ಪ್ಲಾಸ್ಟಿಕ
Aug 21 min read


ಮಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು, ಆ. 1: ಮಂಗಳೂರು ವಿಶ್ವವಿದ್ಯಾನಿಲಯವು 2026–27ನೇ ಶೈಕ್ಷಣಿಕ ಸಾಲಿಗೆ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ಅತಿಥಿ ಉಪನ್ಯಾಸಕರ (Guest Faculty) ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆಗಸ್ಟ್ 1, 2026ರೊಳಗೆ ನಿಗದಿತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ವಿಶ್ವವಿದ್ಯಾನಿಲಯದ ಕನ್ನಡ, ಇಂಗ್ಲಿಷ್, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಸೋಷಿಯಲ್ ವರ್ಕ್, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಜಿಯೋಗ್ರಫಿ, ಲೈಬ್ರರಿ ಮತ್ತು ಇನ್ಫಾರ್ಮೇಷನ್ ಸೈನ್ಸ್, ಬಯೋಕೆಮಿಸ್ಟ್ರಿ, ಮೆಡಿಕಲ್ ಫಿಸಿಕ್ಸ್, ಫಿಸ
Aug 11 min read


ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರ ನದಿ ಭರ್ತಿ, ಸ್ನಾನಘಟ್ಟ ಮುಳುಗಡೆ – ಭಕ್ತರಿಗೆ ಪರ್ಯಾಯ ಸ್ನಾನದ ವ್ಯವಸ್ಥೆ
ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮತ್ತು ಸುತ್ತಮುತ್ತಲಿನ ಪರಿಸರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಹಠಾತ್ತನೆ ಏರಿಕೆಯಾಗಿದೆ. ನದಿಯ ಭಾರಿ ಹರಿವಿಗೆ ಮುಖ್ಯ ಸ್ನಾನಘಟ್ಟವು ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಅಲ್ಲಿದ್ದ ಶೌಚಾಲಯ ಹಾಗೂ ಡ್ರೆಸ್ಸಿಂಗ್ ರೂಮ್ಗಳು ನೀರಿನಲ್ಲಿ ಜಲಾವೃತಗೊಂಡಿವೆ. ನದಿಯಲ್ಲಿ ನೀರು ಅಪಾಯಕಾರಿ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಭಕ್ತಾದಿಗಳಿಗೆ ನದಿಯಲ್ಲಿ ಇಳಿದು ತೀರ್ಥಸ್ನಾನ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ನದಿಯ ದಂಡೆಗೆ ಬೇ
Jul 311 min read


11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿ ಮಂಗಳೂರು ಸಿಸಿಬಿ ವಶಕ್ಕೆ
೨೦೧೫ರಲ್ಲಿ ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಳೆದ ೧೧ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂකಿನ ಮಲ್ಲೇನಹಳ್ಳಿ ನಿವಾಸಿ ಚುಂಕಿ ಆಕಾಶಭವನ ಅಲಿಯಾಸ್ ಸಂತೋಷ್ ಎಸ್ (೩೪) ಬಂಧಿತ ಆರೋಪಿಯಾಗಿದ್ದಾನೆ. ೨೦೧೫ರಲ್ಲಿ ಆಕಾಶಭವನದಲ್ಲಿ ನಡೆದ ಮದುವೆಯ ಮದರಂಗಿ ಶಾಸ್ತ್ರದ ವೇಳೆ ಅಶೋಕ ಕುಮಾರ ಕೊಟ್ಟಾರಿ ಎಂಬವರ ಮೇಲೆ ಆರೋಪಿ ಸಂತೋಷ್ ತನ್ನ ಸಹಚರರೊಂದಿಗೆ ಸೇರಿ ತಲವಾರಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದನು. ಈ ಭೀಕರ
Jul 311 min read


12 ವರ್ಷಗಳ ಹಿಂದಿನ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಮೂವರು ಸಹೋದರರು ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ
ಮಂಗಳೂರು: 12 ವರ್ಷಗಳ ಹಿಂದೆ ನಡೆದ ಗಂಗಾಧರ ಪಾಂಗಾಳ ಹತ್ಯೆ ಪ್ರಕರಣದಲ್ಲಿ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ಮೂವರು ಸಹೋದರರು ಸೇರಿ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. 2014ರಲ್ಲಿ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಮೀನಕಳಿಯ ಗಣೇಶ್ ಶಿಪ್ಪಿಂಗ್ ಗೋಡೌನ್ ಸಮೀಪ ಗಂಗಾಧರ ಪಾಂಗಾಳ ಅವರನ್ನು ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ಸಂಚು ರೂಪಿಸಿ ಹತ್ಯೆ ಮಾಡಲಾಗಿತ್ತು. ಪ್ರಮುಖ ಆರೋಪಿ ಸತೀಶ್ ಬೈಕಂಪಾಡಿ, ಬೈಕಂಪಾಡಿ ಮೊಗವೀರ ಮಹಾಸಭೆಯ ಸದಸ್ಯತ್ವದಿಂದ ಅಮಾನತುಗೊಂಡಿದ್ದಕ್ಕೆ ಗಂಗಾಧರ ಪಾಂಗಾಳ ಅವರೇ ಕಾರಣ ಎಂದು ನಂಬಿ ದ್ವೇಷ
Jul 281 min read


ಲಾಲ್ಬಾಗ್ ಸಿಗ್ನಲ್ ಬಳಿ ಬೈಕ್ ಸವಾರನ ಮೇಲೆ ಮಚ್ಚಿನಿಂದ ಭೀಕರ ಹಲ್ಲೆ: ಗಂಭೀರ ಗಾಯ
ಮಂಗಳೂರು: ನಗರದ ಪ್ರಮುಖ ವಲಯವಾದ ಲಾಲ್ಬಾಗ್ ಸಿಗ್ನಲ್ ಸಮೀಪ, ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಯೊಬ್ಬ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ಯುವಕನನ್ನು ಪ್ರಾಥಮಿಕವಾಗಿ ವಿಕ್ಕಿ ಬಪ್ಪಾಲ್ ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಸುಮಾರು 1:45 ರ ಸುಮಾರಿಗೆ ಅವರು ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಈ ಕೃತ್ಯ ನಡೆದಿದೆ. ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಗಾಯಾಳುವನ್ನು ಹಿಂಬಾಲಿಸಿಕೊಂಡು ಬಂದ ಏಕಾಂಗಿ ಬೈಕ್ ಸವಾರನೊಬ್ಬ, ಚಲಿಸುತ್ತಿದ್ದಂತೆಯೇ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆಯ
Jul 251 min read


ಧರ್ಮೇಂದ್ರ ಪ್ರಧಾನ್ ರಾಜೀನಾಮೆ – ವಿದ್ಯಾರ್ಥಿಗಳ ಹೋರಾಟಕ್ಕೆ ಬೆದರಿದ ಮೋದಿ ಸರ್ಕಾರ
ದೇಶಾದ್ಯಂತ ಭಾರೀ ಸಂಚಲನ ಮೂಡಿಸಿರುವ ನೀಟ್-ಯುಜಿ (NEET-UG) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ವ್ಯವಸ್ಥಿತ ಅಕ್ರಮಗಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ದೆಹಲಿಯ ಜಂತರ್ ಮಂತರ್ ಹಾಗೂ ಸಂಸತ್ತಿನ ಆವರಣದಲ್ಲಿ ವಿದ್ಯಾರ್ಥಿ ಸಂಘಟನೆಗಳು ನಡೆಸಿದ ತೀವ್ರ ಸ್ವರೂಪದ ಪ್ರತಿಭಟನೆಗಳು ಮತ್ತು ವಿಪಕ್ಷಗಳ ತೀವ್ರ ಒತ್ತಡದ ಹಿನ್ನೆಲೆಯಲ್ಲಿ ಈ ನಿರ್ಣಾಯಕ ಬೆಳವಣಿಗೆ ನಡೆದಿದೆ. ವಿದ್ಯಾರ್ಥಿಗಳ ಭವಿಷ್ಯದ ರಕ್ಷಣೆ ಮತ್ತು ಪರೀಕ್ಷಾ ವ್ಯವಸ್ಥೆಯ ಮೇಲಿನ ನ
Jul 251 min read


ಭಾರೀ ಮಳೆ ಹಿನ್ನೆಲೆ: ಜು. 25ರಂದು ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ರಜೆ
ಮಂಗಳೂರು, ಜು. 24: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ, ಜುಲೈ 25 (ಶನಿವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಶಾಲೆಗಳು, ಪದವಿಪೂರ್ವ (ಪಿಯು) ಕಾಲೇಜುಗಳು, ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.
Jul 241 min read


ಸುಳ್ಯ: ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ, ಲೈಂಗಿಕ ದೌರ್ಜನ್ಯ ಎಸಗಿದ ಯುವಕನ ಬಂಧನ
ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ ತಿಂಗಳಲ್ಲಿ ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿಯನ್ನು ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ಮೇ 7ರಂದು ಮಂಗಳೂರಿಗೆ ಕೆಲಸಕ್ಕೆಂದು ತೆರಳಿದ್ದ ಬಾಲಕಿ ಮನೆಗೆ ಮರಳದಿದ್ದಾಗ, ಕುಟುಂಬದವರು ಮೇ 11ರಂದು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಾಲಕಿ ಪತ್ತೆಯಾದ ನಂತರ ಆಕೆಯಿಂದ ಮಾಹಿತಿ ಪಡೆದ ಪೊಲೀಸರು, ಪ್ರಕರಣಕ್ಕೆ ಬಿಎನ್ಎಸ್ ಹಾಗೂ ಪೋಕ್ಸೋ (POCSO) ಕಾಯ್ದೆಯಡಿ ಹೆಚ್ಚುವರಿ ಲೈಂಗಿಕ ದೌರ್ಜನ್ಯದ ಕಲಂಗಳನ್ನು ಸೇರ್ಪಡೆಗೊಳಿಸಿದ್ದಾರೆ. ಬಾಲಕಿ ನೀಡಿದ ಹೇಳಿಕೆಯ ಆಧಾರದ ಮೇಲೆ ತನಿಖೆ ಚುರುಕುಗೊಳಿಸಲಾಗಿದೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಕಡಬ ಮೂ
Jul 241 min read
Archive
bottom of page









