top of page
News Articles
Sathyapatha News Plus


ನಾಳೆ (ಜು. 24) ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೊ ಅಲರ್ಟ್
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಮತ್ತು ಜಿಲ್ಲೆಯ ಎಲ್ಲಾ ITI ಮತ್ತು Diploma ಕಾಲೇಜುಗಳು (ಎಲ್ಲಾ ವಸತಿ ಕಾಲೇಜುಗಳೂ ಸೇರಿದಂತೆ)ನಾಳೆ ಜುಲೈ 24ರಂದು ರಜೆ ಘೋಷಿಸಿದ್ದಾರೆ.
Jul 241 min read


ಸೌಜನ್ಯ ಕೊಲೆ ಪ್ರಕರಣ: ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ತರಾಟೆ, ಆದೇಶ ಕಾಯ್ದಿರಿಸಿಕೆ
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ 14 ವರ್ಷಗಳ ಹಿಂದೆ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸುದೀರ್ಘ ವಿಚಾರಣೆ ನಡೆಸಿ ತನ್ನ ಆದೇಶವನ್ನು ಕಾಯ್ದಿರಿಸಿದೆ. ವಿಚಾರಣೆ ವೇಳೆ ಸಿಬಿಐ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೀಠವು, ಸರಿಯಾದ ತನಿಖೆ ನಡೆಸದೆ ಸಿಬ್ಬಂದಿ ಮತ್ತು ಹಣಕಾಸಿನ ಅಭಾವದ ನೆಪ ಹೇಳುತ್ತಿರುವುದನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಪ್ರಕರಣವನ್ನು ಎಸ್ಐಟಿಗೆ ವಹಿಸಲು ರಾಜ್ಯ ಸರ್ಕಾರ ಸಮ್ಮತಿಸಿದ್ದು, ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಗೆ ಅರ್ಜಿದಾರರು ಕೋರಿದ್ದಾರೆ. ತನಿಖಾ ಏಜೆನ್ಸಿ ಕುರಿತ
Jul 231 min read


ನಾಳೆ (ಜು. 23) ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ನಾಳೆ ಜುಲೈ 23ರಂದು ರಜೆ ಘೋಷಿಸಿದ್ದಾರೆ. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಜಿಲ್ಲಾಡಳಿತದ ಸೂ ಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.
Jul 221 min read


ಬಂಟ್ವಾಳದಲ್ಲಿ ಖಾಸಗಿ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು ಮೂವರಿಗೆ ಗಾಯ
ಮಂಗಳೂರು, ಜುಲೈ 22: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ಸಮೀಪ ಬುಧವಾರ ಖಾಸಗಿ ಶಾಲೆಯ ಬಸ್ ಮೇಲೆ ಬೃಹತ್ ಗಾತ್ರದ ಮರ ಏಕಾಏಕಿ ಉರುಳಿಬಿದ್ದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡವರಲ್ಲಿ ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು, ಓರ್ವ ವಿದ್ಯಾರ್ಥಿಯ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಕಲ್ಲಡ್ಕದ ಖಾಸಗಿ ಶಾಲೆಗೆ ಸೇರಿದ ಬಸ್ ವಿದ್ಯಾರ್ಥಿಗಳನ್ನು ಕರೆದುಕೊಂಡು ತೆರಳುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಏಕಾಏಕಿ ಬಸ್ ಮೇಲೆ ಉರುಳಿಬಿದ್ದಿದೆ. ಮರ ಬಿದ್ದ ರಭಸಕ್ಕೆ ಬಸ್ನ ಮೇ
Jul 221 min read


2026-27ರ ಕಂಬಳ ವೇಳಾಪಟ್ಟಿ ಬಿಡುಗಡೆ: ಅಕ್ಟೋಬರ್ 18ರಿಂದ ಮೈಸೂರು ದಸರಾ ಕಂಬಳದೊಂದಿಗೆ ಸೀಸನ್ ಆರಂಭ!
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ 2026-27ನೇ ಸಾಲಿನ ಅಧಿಕೃತ ಕಂಬಳ ವೇಳಾಪಟ್ಟಿಯನ್ನು ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಬಿಡುಗಡೆ ಮಾಡಿದ್ದಾರೆ. ಈ ಬಾರಿಯ ಕಂಬಳ ಋತುವು ಅಕ್ಟೋಬರ್ 18 ಮತ್ತು 19ರಂದು ಸಾಂಸ್ಕೃತಿಕ ನಗರಿ ಮೈಸೂರು ದಸರಾ ಅಂಗವಾಗಿ ನಡೆಯುವ ಕಂಬಳದೊಂದಿಗೆ ಆರಂಭಗೊಳ್ಳಲಿದೆ. ನವೆಂಬರ್ 7ರಂದು ಪಣಪಿಲ, ನವೆಂಬರ್ 14ರಂದು ಸಾಣೂರು, ಡಿಸೆಂಬರ್ 19ರಂದು ಮಂಗಳೂರು ಹಾಗೂ ಜನವರಿ 23ರಂದು ಮೂಡುಬಿದಿರೆಯಲ್ಲಿ ಕಂಬಳ ಕೂಟಗಳು ನಡೆಯಲಿವೆ. 2027ರ ಜನವರಿ 30ರಂದು ಪುತ್ತೂರಿನ ಪ್ರಸಿದ್ಧ ಕೋಟಿಚೆನ್ನಯ ಜೋಡುಕರೆ ಕಂಬಳ ಹಾಗೂ ಮಾರ್ಚ್ 27ರಂದು ಉಪ್ಪಿ
Jul 221 min read


ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ; ಗರ್ಭಿಣಿಯಾದ ಪ್ರಕರಣದಲ್ಲಿ ಆಟೋ ಚಾಲಕ ಬಂಧನ
ಬೆಳ್ತಂಗಡಿ, ಜು. 21: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದಡಿ ಆಟೋ ರಿಕ್ಷಾ ಚಾಲಕನನ್ನು ಬೆಳ್ತಂಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಪ್ಪಿನಂಗಡಿ ಮೂಲದ ಶುಭರಾಜ್ (28) ಎಂದು ಗುರುತಿಸಲಾಗಿದೆ. ಆರೋಪಿಯು ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಪರಿಚಯ ಬೆಳೆಸಿ, ಆಕೆಯನ್ನು ಪುಸಲಾಯಿಸಿ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಅಲ್ಲದೆ, ಈ ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದನೆಂಬ ಆರೋಪವೂ ಕೇಳಿಬಂದಿದೆ. ಇತ್ತೀಚೆಗೆ ಬಾಲಕಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನ
Jul 211 min read


ಸುಳ್ಯ: ವಿವಾಹಿತೆ ಅನುಮಾನಾಸ್ಪದ ಸಾವು; ಅತ್ತೆ, ಮಾವನ ವಿರುದ್ಧ ಕೊಲೆ ಆರೋಪ
ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದ ಪುತ್ತೂರು ಕೆದಂಬಾಡಿಯ ಫಾತಿಮತ್ ನಿಶಾನ ಎಂಬುವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಜುಲೈ 18ರ ರಾತ್ರಿ ತಾಯಿಗೆ ಕರೆ ಮಾಡಿದ್ದ ನಿಶಾನಾ, ತನಗೆ ಗಂಡನ ಮನೆಯವರು ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿರುವುದಾಗಿ ತಿಳಿಸಿದ್ದರು. ಇದೇ ವೇಳೆ ಫೋನ್ ಕಸಿದುಕೊಂಡ ಮಾವ ಅಲವಿ, ಆಕೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರೆಂದು ಆರೋಪಿಸಲಾಗಿದೆ. ಪೋಷಕರು ಸ್ಥಳಕ್ಕೆ ತೆರಳುವಷ್ಟರಲ್ಲಿ ನಿಶಾನಾ ಮೃತಪಟ್ಟಿದ್ದರು. ಕೌಟುಂಬಿಕ ಕಿರುಕುಳ ಹಾಗೂ ಹತ್ಯೆ ಆರೋಪದಡಿ ಮೃತರ ಮಾವ ಅಲವಿ, ಅತ್ತೆ ಆಯಿಷ ಮತ್ತು ನಾದಿನಿ ಫಸೀಲಾ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ (
Jul 211 min read


ಬಂಟ್ವಾಳ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಹತ್ಯೆ
ಮಾರಕ ಆಯುಧದಿಂದ ದಾಳಿ; ಆರೋಪಿಯ ಪತ್ತೆಗೆ ಪೊಲೀಸರ ಶೋಧ ಬಂಟ್ವಾಳ: ಬಂಟ್ವಾಳ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಯುವತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ನಡೆದಿದೆ. ಮೃತರನ್ನು ಕಕ್ಯಪದವು ನಿವಾಸಿ ಲಾವಣ್ಯ (ಹೆಸರು ತಿಳಿಸಿದಂತೆ) ಎಂದು ಗುರುತಿಸಲಾಗಿದೆ. ಲಾವಣ್ಯ ಅವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕಕ್ಯಪದವು ಕಡೆಗೆ ತೆರಳಲು ಅವರು ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ತಮ್ಮ ಸಂಬಂಧಿಕರೊಬ್ಬರಿಗೆ ಕರೆ ಮಾಡಿ, ತಮ್ಮ ಪಕ್ಕದಲ್ಲಿ
Jul 161 min read


ಕೊಡಿಯಾಲಬೈಲು ಜೈಲಿನಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ
ಮಂಗಳೂರಿನ ಕೊಡಿಯಾಲಬೈಲು ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಅಕ್ರಮವಾಗಿ ಮೊಬೈಲ್ ಫೋನ್ಗಳು ಪತ್ತೆಯಾಗಿದ್ದು, ಜೈಲಿನ ಭದ್ರತೆಯ ಬಗ್ಗೆ ತೀವ್ರ ಆತಂಕ ಮೂಡಿಸಿದೆ. ಜುಲೈ 7ರಂದು ರಾತ್ರಿ ಜೈಲಿನ ಅಧೀಕ್ಷಕ ಶರಣ ಬಸಪ್ಪ ಸಿಬಂದಿಯೊಂದಿಗೆ ‘ಎ‘ ಬ್ಲಾಕ್ನಲ್ಲಿ ದಿಢೀರ್ ತಪಾಸಣೆ ನಡೆಸಿದಾಗ, ಕೈದಿಗಳಾದ ಮೊಹಮ್ಮದ್ ಅಜ್ಮಲ್ ಮತ್ತು ಮೊಹಮ್ಮದ್ ಇಕ್ಬಾಲ್ ಬಳಿ ಮೊಬೈಲ್ ಪತ್ತೆಯಾಗಿವೆ. ಜೈಲಿನ ನಿಯಮ ಉಲ್ಲಂಘಿಸಿ ಮೊಬೈಲ್ ಬಳಸುತ್ತಿದ್ದ ಈ ಇಬ್ಬರು ಆರೋಪಿಗಳ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಸದ್ಯ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Jul 101 min read


ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು, ಜು. 7: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ನೀಡಿರುವ ಮುನ್ಸೂಚನೆಯ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. ಇದರ ಹಿನ್ನೆಲೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹಲವು ತುರ್ತು ಕ್ರಮಗಳನ್ನು ಜಾರಿಗೆ ತಂದಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು, ವಸತಿ ಶಾ
Jul 71 min read


ನಿಂತಿಕಲ್ಲು: ಹೃದಯಾಘಾತದಿಂದ ೯ನೇ ತರಗತಿ ವಿದ್ಯಾರ್ಥಿ, ಯಕ್ಷಗಾನ ಕಲಾವಿದ ಶಿಶಿಲ್ ನಿಧನ
ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕರಿಂಬಿಲದಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಎಣ್ಮೂರು ಹೈಸ್ಕೂಲಿನ ೯ನೇ ತರಗತಿ ವಿದ್ಯಾರ್ಥಿಯಾಗಿದ್ದ ಶಿಶಿಲ್ (೧೪) ಎಂಬ ಬಾಲಕ ಭಾನುವಾರ ತಡರಾತ್ರಿ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಮೃತ ಬಾಲಕ ಇಲ್ಲಿನ ನಿವಾಸಿ ಪೂರ್ಣಚಂದ್ರ ಅವರ ಪುತ್ರನಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ತೀವ್ರ ಅಸೌಖ್ಯದಿಂದ ಬಳಲುತ್ತಿದ್ದ ಶಿಶಿಲ್ನನ್ನು ಕಾಣಿಯೂರು, ಪುತ್ತೂರು ಹಾಗೂ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಜುಲೈ ೬ರಂದು ಬೆಂಗಳೂರಿಗೆ ಕರೆದೊಯ್ಯಲು ಕುಟುಂಬಸ್ಥರು ನಿರ್ಧರಿಸಿದ್ದರು. ಆದರೆ ಜುಲೈ ೫ರ ರಾತ್ರಿ ಇದ್ದ
Jul 61 min read


ದಕ್ಷಿಣ ಕನ್ನಡದಲ್ಲಿ ಹೆಚ್ಚಿದ ಭೂಕುಸಿತ ಭೀತಿ: ಅಪಾಯದ ವಲಯದಲ್ಲಿ 88 ಪ್ರದೇಶಗಳು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗಾಲ ಆರಂಭವಾಗುತ್ತಿದ್ದಂತೆ ಭೂಕುಸಿತದ ಆತಂಕ ತೀವ್ರಗೊಂಡಿದೆ. ಜಿಲ್ಲೆಯ 100ಕ್ಕೂ ಹೆಚ್ಚು ಪ್ರದೇಶಗಳು ಕುಸಿತದ ಭೀತಿಯಲ್ಲಿದ್ದು, ಇವುಗಳಲ್ಲಿ 88 ಸ್ಥಳಗಳನ್ನು ಅತೀ ಅಪಾಯಕಾರಿ ವಲಯಗಳೆಂದು ಗುರುತಿಸಲಾಗಿದೆ. ಕಳೆದ ಐದು ವರ್ಷಗಳಲ್ಲಿ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದ್ದು, ಇತ್ತೀಚಿನ ನಾಗುರಿ ದುರಂತವು ಆಡಳಿತ ವ್ಯವಸ್ಥೆಗೆ ಎಚ್ಚರಿಕೆಯ ಗಂಟೆಯಾಗಿದೆ. ವಿಪತ್ತು ನಿರ್ವಹಣಾ ಪ್ರಾಧಿಕಾರದ ವರದಿ ಪ್ರಕಾರ, ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಸೇರಿದಂತೆ 35ಕ್ಕೂ ಹೆಚ್ಚು ಪಶ್ಚಿಮ ಘಟ್ಟದ ಪಾದಭಾಗಗಳು ತೀವ್ರ ಸೂಕ್ಷ್ಮ ಪ್ರದೇಶಗಳಾಗಿವೆ. ಇನ
Jul 41 min read


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್: ಶಾಲೆಗಳಿಗೆ ರಜೆ, ಜನರಿಗೆ ಕಟ್ಟುನಿಟ್ಟಿನ ಸೂಚನೆ
ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲೂ ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇರುವುದರಿಂದ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹಲವು ತುರ್ತು ಕ್ರಮಗಳನ್ನು ಕೈಗೊಂಡಿದೆ. ಅದರಂತೆ, ಜುಲೈ 2, 2026 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಮತ್ತು ಪದವಿ
Jul 11 min read


ಮಂಗಳೂರು: ಕಟ್ಟಡದಿಂದ ಬಿದ್ದು ರಾಷ್ಟ್ರ ಮಟ್ಟದ ಪವರ್ ಲಿಫ್ಟರ್ ಸಾವು!
ಮಂಗಳೂರಿನ ಪದವಿನಂಗಡಿ ಸಮೀಪದ ಹೊಸ ಕಟ್ಟಡವೊಂದರ ನಾಲ್ಕನೇ ಮಹಡಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ರಾಷ್ಟ್ರ ಮಟ್ಟದ ಪವರ್ ಲಿಫ್ಟರ್ ಸಂತೋಷ್ ಪೂಜಾರಿ (45) ಅವರು ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ತಲೆಗೆ ತೀವ್ರ ಪೆಟ್ಟಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಸ್ವಂತ ಉದ್ಯೋಗ ಹೊಂದಿದ್ದ ಕ್ರೀಡಾಪಟು ಉಳ್ಳಾಲ ಧರ್ಮನಗರದ ನಿವಾಸಿಯಾದ ಇವರು ತೊಕ್ಕೊಟ್ಟು ಶಕ್ತಿ ಭಾರತ್ ವ್ಯಾಯಾಮ ಶಾಲೆಯ ಸದಸ್ಯರಾಗಿದ್ದರು. ಈ ಹಿಂದೆ ವಿದೇಶದಲ್ಲಿ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಇವರು, ಊರಿಗೆ ಮರಳಿದ ಬಳಿಕ ಉಳ್ಳಾಲ ಬೈಲನಲ್ಲಿ ಸ್ವಂತ ವೆಲ್ಡಿಂಗ್ ಶಾಪ್
Jun 51 min read


ಸ್ನ್ಯಾಪ್ಚಾಟ್ನಲ್ಲಿ ಹುಡುಗಿ ಸೋಗು: ಪುತ್ತೂರು ನಿವಾಸಿಗೆ ₹4.84 ಲಕ್ಷ ವಂಚನೆ
ದಿನ ಕಳೆದಂತೆ ಸೈಬರ್ ವಂಚಕರ ಹಾವಳಿ ಹೆಚ್ಚಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ನ್ಯಾಪ್ಚಾಟ್ನಲ್ಲಿ ಹುಡುಗಿಯ ಸೋಗಿನಲ್ಲಿ ಬಂದ ವಂಚಕನೊಬ್ಬ ಪುತ್ತೂರು ನಿವಾಸಿಗೆ ಬರೋಬ್ಬರಿ 4,84,203 ರೂಪಾಯಿ ವಂಚಿಸಿದ್ದಾನೆ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಂಚಕನು ‘ಅನ್ನಪೂರ್ಣ ಗೌಡ’ ಎಂಬ ಹೆಸರಿನ ನಕಲಿ ಐಡಿ ಬಳಸಿ, ತಾನು ಬೆಂಗಳೂರಿನ ವಿಪ್ರೋ ಕಂಪನಿ ಉದ್ಯೋಗಿ ಎಂದು ನಂಬಿಸಿದ್ದನು. ಬಳಿಕ ವಾಟ್ಸಾಪ್ ಸಂಖ್ಯೆ ಪಡೆದು ನಿರಂತರ ಚಾಟಿಂಗ್ ಮಾಡಿದ್ದಲ್ಲದೆ, ತನಗೆ ಹಣಕಾಸಿನ ತೊಂದರೆ ಇದೆ ಎಂದು ಹಂತ ಹಂತವಾಗಿ ಲಕ್
Jun 41 min read


ದಕ್ಷಿಣ ಕನ್ನಡ ರೈತರ ಗನ್ ಲೈಸನ್ಸ್ ಸಮಸ್ಯೆ: ತುರ್ತು ಸ್ಪಂದನೆಗೆ ಸಂಸದ ಕ್ಯಾ. ಚೌಟ ಪತ್ರ
ದಕ್ಷಿಣ ಕನ್ನಡ ಜಿಲ್ಲೆಯ ಕೃಷಿಕರು ವನ್ಯಜೀವಿಗಳ ಉಪಟಳದಿಂದ ಬೆಳೆ ರಕ್ಷಿಸಿಕೊಳ್ಳಲು ಬಳಸುವ ಬಂದೂಕು ಪರವಾನಗಿ (ಗನ್ ಲೈಸನ್ಸ್) ನವೀಕರಣ ಪ್ರಕ್ರಿಯೆಯಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕಠಿಣ ನಿಯಮಗಳ ನೆಪವೊಡ್ಡಿ ಅಧಿಕಾರಿಗಳು ರೈತರ ನವೀಕರಣ ಅರ್ಜಿಗಳನ್ನು ವ್ಯವಸ್ಥಿತವಾಗಿ ತಿರಸ್ಕರಿಸುತ್ತಿರುವುದು ಕಳವಳಕಾರಿಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಕಳೆದೊಂದು ವರ್ಷದಲ್ಲಿ ವನ್ಯಜೀವಿಗಳು ಕೃಷಿ ಭ
Jun 31 min read


ಜೂನ್ 3 ರಿಂದ ಬೆಂಗಳೂರು-ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ
ಬೆಂಗಳೂರಿನಿಂದ ಕರ್ನಾಟಕ ಕರಾವಳಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಜೂನ್ 3 ರಂದು ಆರಂಭವಾಗಲಿದೆ. ಈ ವೇಗದ ರೈಲು ಸಾರಿಗೆಯು ಕರಾವಳಿ ಭಾಗದ ಪ್ರವಾಸೋದ್ಯಮ, ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರಗಳಿಗೆ ಹೆಚ್ಚಿನ ಉತ್ತೇಜನ ನೀಡಲಿದೆ. ಜೂನ್ 3 ರಂದು ಬೆಳಗ್ಗೆ 6 ಗಂಟೆಗೆ ಯಶವಂತಪುರದಿಂದ ಹೊರಡುವ 8 ಬೋಗಿಗಳ ಈ ರೈಲು, 8 ಗಂಟೆ 40 ನಿಮಿಷಗಳಲ್ಲಿ ಮಂಗಳೂರು ತಲುಪಲಿದೆ. ಪ್ರಾಯೋಗಿಕ ಸಂಚಾರದಲ್ಲಿ ರೈಲಿನ ವೇಗ, ಸಾಮರ್ಥ್ಯ ಹಾಗೂ ಘಾಟಿ ಮಾರ್ಗದ ಸುರಂಗಗಳಲ್ಲಿ ಅದರ ಕಾರ್ಯಕ್ಷಮತೆಯನ್ನು ತಪಾಸಣೆ ಮಾಡಲಾಗುತ್ತದೆ. ತಾತ್ಕಾಲಿಕ ವೇಳಾಪಟ
May 311 min read


ಜೂನ್ 3 ರಿಂದ ಬೆಂಗಳೂರು-ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ
ಬೆಂಗಳೂರಿನಿಂದ ಕರ್ನಾಟಕ ಕರಾವಳಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಜೂನ್ 3 ರಂದು ಆರಂಭವಾಗಲಿದೆ. ಈ ವೇಗದ ರೈಲು ಸಾರಿಗೆಯು ಕರಾವಳಿ ಭಾಗದ ಪ್ರವಾಸೋದ್ಯಮ, ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರಗಳಿಗೆ ಹೆಚ್ಚಿನ ಉತ್ತೇಜನ ನೀಡಲಿದೆ. ಜೂನ್ 3 ರಂದು ಬೆಳಗ್ಗೆ 6 ಗಂಟೆಗೆ ಯಶವಂತಪುರದಿಂದ ಹೊರಡುವ 8 ಬೋಗಿಗಳ ಈ ರೈಲು, 8 ಗಂಟೆ 40 ನಿಮಿಷಗಳಲ್ಲಿ ಮಂಗಳೂರು ತಲುಪಲಿದೆ. ಪ್ರಾಯೋಗಿಕ ಸಂಚಾರದಲ್ಲಿ ರೈಲಿನ ವೇಗ, ಸಾಮರ್ಥ್ಯ ಹಾಗೂ ಘಾಟಿ ಮಾರ್ಗದ ಸುರಂಗಗಳಲ್ಲಿ ಅದರ ಕಾರ್ಯಕ್ಷಮತೆಯನ್ನು ತಪಾಸಣೆ ಮಾಡಲಾಗುತ್ತದೆ. ತಾತ್ಕಾಲಿಕ ವೇಳಾಪಟ
May 311 min read


ಅಶೋಕ್ ಕುಮಾರ್ ರೈ ಸಚಿವ ಸಂಪುಟ ಸೇರ್ಪಡೆ ಬಹುತೇಕ ಖಚಿತ: ಕರಾವಳಿ ಬಲವರ್ಧನೆಗೆ ಡಿಕೆಶಿ ಮಾಸ್ಟರ್ ಪ್ಲಾನ್!
ರಾಜ್ಯ ರಾಜಕೀಯದಲ್ಲಿ ಭಾರಿ ಆಡಳಿತಾತ್ಮಕ ಬದಲಾವಣೆಗಳು ಪ್ರಕ್ರಿಯೆಗೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಹುಲ್ ಗಾಂಧಿ ಅವರ ಸೂಚನೆಗೆ ಗೌರವ ನೀಡಿ, ತಾವು ನುಡಿದಂತೆ ಸಿದ್ದರಾಮಯ್ಯ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದೆ. ಈ ನಾಯಕತ್ವ ಬದಲಾವಣೆ ಪ್ರಕ್ರಿಯೆ ನಡುವೆ ರಾಜ್ಯ ಸಚಿವ ಸಂಪುಟ ಪುನಾರಚನೆಯ ಭಾರಿ ಕಸರತ್ತು ಮತ್ತು ಲಾಬಿಗಳು ಶುರುವಾಗಿವೆ. ದಕ್ಷಿಣ ಕನ
May 291 min read


ಸುಬ್ರಹ್ಮಣ್ಯ-ಗುಂಡ್ಯ ಹೆದ್ದಾರಿಯಲ್ಲಿ ಅಪಘಾತ: ದೇವನಹಳ್ಳಿಯ ಮಹಿಳೆ ಸಾವು
ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಟೆಂಪೋ ಟ್ರಾವೆಲ್ಲರ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಮೇ 25ರಂದು ಸಂಜೆ ನಡೆದ ಈ ದುರ್ಘಟನೆಯಲ್ಲಿ ಚಿಕ್ಕಬಳ್ಳಾಪುರದ ಕೆರೆಸಂದ್ರಮನೆ ನಿವಾಸಿ ಆಂಜನಮ್ಮ (47) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧರ್ಮಸ್ಥಳ, ಸುಬ್ರಹ್ಮಣ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ದರ್ಶನ ಮುಗಿಸಿ ಬೆಂಗಳೂರಿನತ್ತ ಮರಳುತ್ತಿದ್ದ ದೇವನಹಳ್ಳಿಯ 14 ಯಾತ್ರಾರ್ಥಿಗಳಿದ್ದ ಟೆಂಪೋಗೆ ಎದುರಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಟೆಂಪೋದಲ್ಲಿದ್ದ 5 ವರ್ಷದ ಬಾಲಕಿ ನಯಾನಿಕಾ ಸೇರಿ ಏಳು ಮಂದಿ
May 261 min read
Archive
bottom of page



