top of page
News Articles
Sathyapatha News Plus


ಮಂಗಳೂರು ಸೆಂಟ್ರಲ್ ಮತ್ತು ಸುಬ್ರಹ್ಮಣ್ಯ ರೈಲು ಸಂಚಾರ ರದ್ದು: ಪ್ರಯಾಣಿಕರಿಗೆ ಮುನ್ಸೂಚನೆ
ನರಿಮೊಗರು ಮತ್ತು ಪಡೀಲ್ ನಿಲ್ದಾಣಗಳ ನಡುವೆ ರೈಲ್ವೆ ಹಳಿ ನಿರ್ವಹಣಾ ಕಾರ್ಯ (BCM) ನಡೆಯಲಿರುವ ಹಿನ್ನೆಲೆಯಲ್ಲಿ ಮಂಗಳೂರು ಸೆಂಟ್ರಲ್ ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ ಪ್ಯಾಸೆಂಜರ್ ರೈಲು (ಸಂಖ್ಯೆ 56629) ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 14 ರವರೆಗೆ ಮೊದಲ ಹಂತದ ಸೇವೆ ಸ್ಥಗಿತಗೊಳ್ಳಲಿದ್ದು, ಪ್ರಯಾಣಿಕರು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಲಾಗಿದೆ. ದ್ವಿತೀಯ ಹಂತದಲ್ಲಿ ಜೂನ್ 10 ರಿಂದ ಜೂನ್ 21 ರವರೆಗೆ ರೈಲು ಸಂಚಾರ ಮತ್ತೆ ರದ್ದಾಗಲಿದೆ. ಹಳಿಗಳ ಬಲವರ್ಧನೆಗಾಗಿ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಅನಿವಾರ್ಯವಾಗಿದ್ದು, ಸುರಕ್ಷ
Mar 221 min read


ಗ್ಯಾಸ್ ಪಂಪ್ನಲ್ಲಿ ಆಟೋ ಚಾಲಕನ ಅಟ್ಟಹಾಸ: ಸಿಬ್ಬಂದಿ ಮೇಲೆ ಹಲ್ಲೆ, ದಾಂಧಲೆ!
ಬಂಟ್ವಾಳದ ಮೆಲ್ಕಾರ್ ಬಳಿಯ ಗ್ಯಾಸ್ ಪಂಪ್ ಏಜೆನ್ಸಿಯಲ್ಲಿ ಶುಕ್ರವಾರ ಸಂಜೆ ಅಫ್ರೀಝ್ ಎಂಬಾತ ಸಿಬ್ಬಂದಿ ಅಶ್ವಿನ್ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಮ್ಯಾನೇಜರ್ ಕುನಲ್ ಭುಕ್ಕಿಯಾ ನೀಡಿದ ದೂರಿನಂತೆ, ಆರೋಪಿಯು ಕಚೇರಿಯ ಸೊತ್ತುಗಳನ್ನು ಧ್ವಂಸಗೊಳಿಸಿದ್ದಾನೆ. ಈ ಕೃತ್ಯದಿಂದ ಸುಮಾರು ₹48,000 ಮೌಲ್ಯದ ನಷ್ಟ ಸಂಭವಿಸಿದೆ ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಕಲಂ ಅಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ಅಫ್ರೀಝ್ ವಿರುದ್ಧ ತನಿಖೆ ಆರಂಭಿಸಿದ್ದು, ಆಟೋರಿಕ್ಷಾ ಮೂಲಕ ಪಂಪ್ ಆವರಣಕ್
Mar 211 min read


ಪುತ್ತೂರು: ದಾಂಪತ್ಯ ಕಲಹಕ್ಕೆ ಬಲಿಯಾದ ಪತ್ನಿ; ಪತಿಯೂ ಆತ್ಮಹತ್ಯೆಗೆ ಯತ್ನ
ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಗೋಳ್ತಿಲದಲ್ಲಿ ದಾಂಪತ್ಯ ಕಲಹವೊಂದು ಕೊಲೆಯಲ್ಲಿ ಅಂತ್ಯವಾದ ಘೋರ ಘಟನೆ ಇಂದು ನಡೆದಿದೆ. ದಂಪತಿಗಳ ನಡುವೆ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ಆವೇಶಕ್ಕೊಳಗಾದ ಪತಿಯು ಪತ್ನಿಯನ್ನು ಹತ್ಯೆ ಮಾಡಿದ್ದಾನೆ ಎಂದು ವರದಿಯಾಗಿದೆ. ಪತ್ನಿಯನ್ನು ಕೊಲೆ ಮಾಡಿದ ನಂತರ ಪತಿಯೂ ಸಹ ಆತ್ಮಹತ್ಯೆಗೆ ಯತ್ನಿಸಿದ್ದು, ಆತನ ಸ್ಥಿತಿ ಸದ್ಯ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಆತನನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯವಾಗಿ ಈ ಘಟನೆಯು ಭಾರೀ ಆತಂಕ ಮತ್ತು ಆಘಾತವನ್ನು ಸೃಷ್ಟಿಸಿದೆ. ವಿಷಯ ತಿಳಿಯುತ್ತಿದ್ದಂತೆಯೇ ಪುತ್ತೂರು ಗ್ರಾಮಾಂತರ ಠಾ
Mar 201 min read


ತಲೆನೋವಿಗೆ ಮಾತ್ರೆ ಸೇವಿಸಿ ಪ್ರಾಣ ಕಳೆದುಕೊಂಡ 10 ವರ್ಷದ ಬಾಲಕ
ಕಡಬ ತಾಲೂಕಿನ ರಾಮಕುಂಜದ 10 ವರ್ಷದ ಬಾಲಕನೊಬ್ಬ ತಲೆನೋವಿಗಾಗಿ ಮನೆಯಲ್ಲಿದ್ದ ಔಷಧ ಸೇವಿಸಿದ ಬಳಿಕ ಮೃತಪಟ್ಟಿದ್ದಾನೆ. ಸಂಜೀವ ಪೂಜಾರಿ ಅವರ ಪುತ್ರನಿಗೆ ಪದೇಪದೇ ತಲೆನೋವು ಕಾಣಿಸಿಕೊಳ್ಳುತ್ತಿತ್ತು ಎಂದು ತಿಳಿದುಬಂದಿದೆ. ಮಾರ್ಚ್ 18ರಂದು ಸಂಜೆ ತಲೆನೋವಿನ ಬಾಧೆಯಿಂದ ಬಾಲಕನು ಮನೆಯಲ್ಲಿದ್ದ ಔಷಧಿಯನ್ನು ಸೇವಿಸಿದ್ದು, ತಕ್ಷಣವೇ ತೀವ್ರ ಅಸ್ವಸ್ಥಗೊಂಡು ಹೊರಳಾಡತೊಡಗಿದ್ದನು. ತಂದೆ ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ದರೂ, ಪರೀಕ್ಷಿಸಿದ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ಘೋಷಿಸಿದರು. ಈ ಬಗ್ಗ
Mar 201 min read


ಖಾಕಿ ಪಡೆಗೆ ಕಪ್ಪುಚುಕ್ಕೆ: ಮೂಡುಬಿದಿರೆ ಇನ್ಸ್ಪೆಕ್ಟರ್ನಿಂದ ಮಹಿಳೆಯರಿಗೆ ಲೈಂಗಿಕ ಕಿರುಕುಳ, ಹಣಕ್ಕಾಗಿ ಸುಲಿಗೆ!
ಖಾಕಿ ಪಡೆಗೆ ಮತ್ತೊಂದು ಕಪ್ಪು ಚುಕ್ಕೆ ಬಂದಿದೆ. ಮೂಡುಬಿದಿರೆ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಸಾಲು ಸಾಲು ಲೈಂಗಿಕ ಕಿರುಕುಳ ಹಾಗೂ ಸುಲಿಗೆಯ ಗಂಭೀರ ಆರೋಪಗಳು ಕೇಳಿಬಂದಿವೆ. ಗಂಡನನ್ನು ಬಂಧಿಸಿದ ನೆಪದಲ್ಲಿ ಮಹಿಳೆಯರಿಗೆ ಲೈಂಗಿಕ ಟಾರ್ಚರ್ ನೀಡುತ್ತಿದ್ದ ಎನ್ನಲಾಗಿದೆ. ಪೋಸ್ಟಿಂಗ್ಗಾಗಿ ತಾವು 50 ಲಕ್ಷ ರೂ. ಲಂಚ ನೀಡಿರುವುದಾಗಿ ಹೇಳಿಕೊಳ್ಳುತ್ತಿದ್ದ ಇನ್ಸ್ಪೆಕ್ಟರ್, ಸಾರ್ವಜನಿಕರಿಂದ ಹಣಕ್ಕಾಗಿ ಸುಲಿಗೆ ಮಾಡುತ್ತಿದ್ದರು. ಹಣ ನೀಡದಿದ್ದರೆ ರೌಡಿಶೀಟ್ ತೆರೆಯುವ ಬೆದರಿಕೆ ಹಾಕುತ್ತಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಕ್ರಮ ಕೈಗ
Mar 171 min read


ರಾಜ್ಯದ ಹಲವೆಡೆ ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆ ಮುನ್ಸೂಚನೆ
ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಾರ್ಚ್ 16ರಿಂದಲೇ ಮಳೆ ಆರಂಭವಾಗಲಿದ್ದು, ಮಾ. 21ರಂದು ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಚಿಕ್ಕಮಗಳೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ವರ್ಷಧಾರೆಯಾಗಲಿದ್ದು, ಕೊಪ್ಪಳ, ವಿಜಯಪುರ ಹಾಗೂ ದಾವಣಗೆರೆ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ. ಮಾರ್ಚ್ 18ರಿಂದ ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಮಳೆಯ ನಿರೀಕ್ಷೆಯಿದ್ದು, ಮಾ. 19ರಿಂದ ಚಿತ್ರದುರ್ಗದಲ್ಲ
Mar 161 min read


ಉಡುಪಿ ಅಬಕಾರಿ ಡಿಸಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ: ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ
ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ. ಅವರ ನಿವಾಸ ಸೇರಿದಂತೆ ರಾಜ್ಯದ 15 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಮಂಗಳೂರು ವಿಭಾಗದ ಎಸ್ಪಿ ದಿನೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ, ಅಕ್ರಮವಾಗಿ ಗಳಿಸಿದ ಎನ್ನಲಾದ ಬರೋಬ್ಬರಿ 6.90 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ಪತ್ತೆಹಚ್ಚಲಾಗಿದೆ. ಇದರಲ್ಲಿ 11 ನಿವೇಶನಗಳು ಮತ್ತು 31 ಎಕರೆ ಕೃಷಿ ಭೂಮಿ ಸೇರಿವೆ. ಕೇವಲ ಸ್ಥಿರಾಸ್ತಿಯಷ್ಟೇ ಅಲ್ಲದೆ, 2.66 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿಗಳೂ ಲೋಕಾಯುಕ್ತರ ಕೈಗೆ ಸಿಕ್ಕಿವೆ. ದಾಳಿಯ ವೇಳೆ ಒಂದೂವರೆ ಕೋಟಿಗೂ ಅಧಿಕ ನಗದು ಹಾಗೂ ಚಿನ್ನಾ
Mar 141 min read


ಬೈಕ್ ಡಿಕ್ಕಿ: ಪ್ರಗತಿಪರ ಕೃಷಿಕ ದಿನೇಶ್ ಗಟ್ಟಿ ನಿಧನ
ಮಂಗಳೂರಿನ ಕುತ್ತಾರು ಸಮೀಪದ ಮದನಿ ನಗರದಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಮುಂಡೋಳಿ ನಿವಾಸಿ ಹಾಗೂ ಪ್ರಗತಿಪರ ಕೃಷಿಕ ದಿನೇಶ್ ಗಟ್ಟಿ (50) ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಬೈಕ್ ಸವಾರನ ಅತಿವೇಗ ಮತ್ತು ನಿರ್ಲಕ್ಷ್ಯವೇ ಈ ಅಪಘಾತಕ್ಕೆ ನೇರ ಕಾರಣ ಎನ್ನಲಾಗಿದೆ. ಕೂಡಲೇ ದಿನೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಈ ಘಟನೆ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಹಾಗ
Mar 121 min read


ಸುಳ್ಯದಲ್ಲಿ ದುರಂತ: ಕಾಲೇಜು ಉಪನ್ಯಾಸಕ ಹಠಾತ್ ಕುಸಿದು ಬಿದ್ದು ಸಾವು
ಸುಳ್ಯ ಕೊಡಿಯಾಲ್ ಬೈಲ್ನಲ್ಲಿರುವ ಸರ್ಕಾರಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕರಾದ ಮಂಜು (42) ಅವರು ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮಂಜು ಅವರು ಕಳೆದ ಎರಡು ವರ್ಷಗಳಿಂದ ಈ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ಆರಂಭದಲ್ಲಿ ಹೈಸ್ಕೂಲ್ನಲ್ಲಿ ಪಾಠ ನಿರ್ವಹಿಸುತ್ತಿದ್ದ ಅವರು ನಂತರ ಪದವಿ ಕಾಲೇಜಿಗೆ ಭಡ್ತಿ ಪಡೆದು ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ಅವರು ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್. ನಗರ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. Ad ಗುರುವಾರ ಮಧ್ಯಾಹ್ನ ಕಾಲೇಜಿನ ಸಿಬ್ಬಂದಿಯೊಂದಿಗೆ ಮಾತನಾಡಿದ ನಂತರ ಮಂಜು ಅವರು “ಸ್
Mar 121 min read


ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆ
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ತೀವ್ರತೆ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಭಾಗಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಅನಿವಾರ್ಯ ಕೆಲಸಗಳ ಹೊರತಾಗಿ ಮಧ್ಯಾಹ್ನದ ಸಮಯದಲ್ಲಿ ಹೊರಗೆ ಓಡಾಡುವಾಗ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು. ವಾಹನಗಳನ್ನು ಉರಿ ಬಿಸಿಲಿನಲ್ಲಿ ನಿಲ್ಲಿಸಿದಾಗ ಅದರೊಳಗೆ ಮಕ್ಕಳು ಅಥವಾ ವೃದ್ಧರು ಇರದಂತೆ ವಿಶೇಷ ನಿಗಾ ವಹಿಸುವುದು ಅತ್ಯಗತ್ಯವಾಗಿದೆ. ಬಿಸಿಲಿನ ಬೇಗೆಯಿಂದ ಆರೋಗ್ಯವನ್ನು ರಕ್ಷಿಸಿಕೊಳ್ಳಲು ಸಾರ್ವಜನಿಕರು ಹೆಚ್ಚಿನ ಪ್ರಮಾ
Mar 111 min read


ಉಪ್ಪಿನಂಗಡಿ: ಅಕ್ರಮವಾಗಿ ಸಂಗ್ರಹಿಸಿದ್ದ 4,175 ಲೀಟರ್ ಡೀಸೆಲ್ ವಶ
ಉಪ್ಪಿನಂಗಡಿ ಸಮೀಪದ ಕಣಿಯೂರು ಗ್ರಾಮದಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಸುಮಾರು 4,175 ಲೀಟರ್ ಡೀಸೆಲ್ ಅನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆದಿದೆ. ಸ್ಥಳೀಯ ನಿವಾಸಿ ಜಗದೀಶ್ ಎಂಬಾತನ ಮನೆಯ ಶೆಡ್ನಲ್ಲಿ 20 ಬ್ಯಾರೆಲ್ ಹಾಗೂ 5 ಕ್ಯಾನ್ಗಳಲ್ಲಿ ಇಂಧನ ಪತ್ತೆಯಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ಸುಮಾರು ರೂ. 3,50,000 ಎಂದು ಅಂದಾಜಿಸಲಾಗಿದ್ದು, ಯಾವುದೇ ಪರವಾನಗಿ ಇಲ್ಲದೆ ಇದನ್ನು ಸಂಗ್ರಹಿಸಲಾಗಿತ್ತು. ಈ ಸಂಬಂಧ ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಹಾಗ
Mar 111 min read


ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು-ಆಟೋ ಡಿಕ್ಕಿ: ಐವರು ಶಾಲಾ ಮಕ್ಕಳಿಗೆ ಗಾಯ
ರಾಷ್ಟ್ರೀಯ ಹೆದ್ದಾರಿ 75 ರ ಸರ್ವೀಸ್ ರಸ್ತೆಯಲ್ಲಿ ಸೋಮವಾರ ಸಂಜೆ ಕಾರು ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಉಪ್ಪಿನಂಗಡಿ ಸರ್ಕಾರಿ ಶಾಲೆಯ ಐವರು ವಿದ್ಯಾರ್ಥಿಗಳು ಹಾಗೂ ಆಟೋ ಚಾಲಕ ಕಲಂದರ್ ಶಾಫಿ (46) ಗಾಯಗೊಂಡಿದ್ದಾರೆ. ಶಾಲೆಯಿಂದ ಮನೆಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಗಾಯಗೊಂಡ ವಿದ್ಯಾರ್ಥಿಗಳಾದ ಮಹಮ್ಮದ್ ಜಾಝೀಬ್, ಇರ್ಷಾದ್, ನೂರ್ ಮಹಮದ್, ರಾಝೀಲ್ ಮತ್ತು ಪುಟ್ಟ ಬಾಲಕಿ ಸಜ್ಮಾ ಅವರನ್ನು ತಕ್ಷಣ ಸ್ಥಳೀಯ ಸೂರ್ಯ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ನೆಕ
Mar 101 min read


ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ಬೇಗೆ: ಒಣಹವೆ ಮುಂದುವರಿಕೆ
ರಾಜ್ಯಾದ್ಯಂತ ಬಿಸಿಲಿನ ಅಬ್ಬರ ಜೋರಾಗಿದ್ದು, ಇಂದು ಕೂಡ ಒಣಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಮತ್ತು ಕೋಲಾರದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದ್ದು, ಕರಾವಳಿ ನಗರಿ ಮಂಗಳೂರಿನಲ್ಲಿ 31-25 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬಂದರೂ, ಮಧ್ಯಾಹ್ನದ ವೇಳೆಗೆ ಉಷ್ಣಾಂಶ ಏರಿಕೆಯಾಗಲಿದೆ. ಬೆಂಗಳೂರಿನಲ್ಲಿ ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದ್ದು, ಜನರು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
Mar 91 min read


ಹೈಕಮಾಂಡ್ ಸೂಚಿಸಿದರೆ ಮತ್ತೆರಡು ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ
ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಯಕತ್ವ ಬದಲಾವಣೆ ಚರ್ಚೆಗಳಿಗೆ ತೆರೆ ಎಳೆದಿದ್ದಾರೆ. "ಹೈಕಮಾಂಡ್ ಅವಕಾಶ ನೀಡಿದರೆ ಇನ್ನು ಎರಡು ಬಜೆಟ್ ಮಂಡಿಸಲು ಸಿದ್ಧನಿದ್ದೇನೆ. ಜನರ ಆಶೀರ್ವಾದ ಹಾಗೂ ಹೈಕಮಾಂಡ್ ತೀರ್ಮಾನವೇ ಅಂತಿಮ, ಯಾರೋ ನೀಡುವ ಹೇಳಿಕೆಗಳು ನನಗೆ ಮುಖ್ಯವಲ್ಲ" ಎಂದು ಸ್ಪಷ್ಟಪಡಿಸಿದರು. ರಾಜ್ಯದ ಸಾಲದ ಹೊರೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಭಿವೃದ್ಧಿ ಕಾರ್ಯಗಳಿಗಾಗಿ ನಿಯಮದ ಮಿತಿಯಲ್ಲೇ ಸಾಲ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡರು. ಪ್ರಧಾನಿ ಮೋದಿ ಅವಧಿಯ ಸಾಲವನ್ನು ಪ್ರಶ್ನಿಸಿದ ಸಿಎಂ, ಕೇಂದ್ರದ ಅನ್ಯಾಯದಿಂದ ರಾಜ್ಯಕ್ಕೆ ಹಿನ್ನಡೆಯಾಗಿದೆಯೇ ಹೊರತು ತಮ್ಮ ಬಜೆಟ್ನಿಂದ
Mar 71 min read


ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕ ‘ಆನೆ ಕಾರ್ಯಪಡೆ’ ಮಂಜೂರು: ಕಾಡಾನೆಗಳ ಹಾವಳಿ ತಡೆಗೆ ರಾಜ್ಯ ಸರ್ಕಾರದ ಮಹತ್ವದ ಆದೇಶ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ರಾಜ್ಯ ಸರ್ಕಾರವು ಮಂಗಳೂರು ಅರಣ್ಯ ವಿಭಾಗಕ್ಕೆ ಪ್ರತ್ಯೇಕ 'ಆನೆ ಕಾರ್ಯಪಡೆ'ಯನ್ನು (Elephant Task Force) ಮಂಜೂರು ಮಾಡಿ ಆದೇಶ ಹೊರಡಿಸಿದೆ. ಈ ಹಿಂದೆ ಆನೆಗಳು ಜನವಸತಿ ಪ್ರದೇಶಕ್ಕೆ ನುಗ್ಗಿದಾಗ ಮಡಿಕೇರಿಯಿಂದ ತಂಡವನ್ನು ಕರೆಯಿಸಬೇಕಿತ್ತು, ಇದರಿಂದ ಕಾರ್ಯಾಚರಣೆ ವಿಳಂಬವಾಗುತ್ತಿತ್ತು. ಈಗ ಜಿಲ್ಲೆಗೆ ಪ್ರತ್ಯೇಕ ತಂಡ ಲಭ್ಯವಿರುವುದರಿಂದ ಕಾಡಾನೆಗಳನ್ನು ಕಾಡಿಗೆ ಓಡಿಸುವ ಪ್ರಕ್ರಿಯೆ ಇನ್ನು ಮುಂದೆ ಶೀಘ್ರವಾಗಿ ನಡೆಯಲಿದೆ. ಈ ಕಾರ್ಯಪಡೆಯು ಒಟ್ಟು 28 ಸದಸ್ಯರ ಬಲಿಷ್ಠ ತಂಡವನ್ನು ಒಳಗೊಂಡಿರಲಿದೆ. ಇದರಲ್ಲಿ
Mar 61 min read


ಅಡಿಕೆ ರೋಗಗಳ ನಿಯಂತ್ರಣಕ್ಕೆ ₹10 ಕೋಟಿ ಅನುದಾನ; ಕರಾವಳಿ-ಮಲೆನಾಡು ರೈತರಿಗೆ ಸಿಎಂ ಸಿದ್ದರಾಮಯ್ಯ ಭರವಸೆ
ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಗೆ ಬಾಧಿಸುತ್ತಿರುವ ವಿವಿಧ ರೋಗಗಳ ನಿಯಂತ್ರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್ನಲ್ಲಿ ₹10 ಕೋಟಿ ಅನುದಾನ ಘೋಷಿಸಿದ್ದಾರೆ. ಎಲೆ ಚುಕ್ಕಿ ರೋಗ, ಹಳದಿ ಎಲೆ ರೋಗ ಹಾಗೂ ಕೊಳೆ ರೋಗದಂತಹ ಸಮಸ್ಯೆಗಳಿಂದ ಕಂಗಾಲಾಗಿರುವ ಅಡಿಕೆ ಬೆಳೆಗಾರರಿಗೆ ನೆರವಾಗಲು ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. Ad ಈ ರೋಗಗಳ ಕುರಿತು ಹೆಚ್ಚಿನ ಅಧ್ಯಯನ ಮತ್ತು ಸಂಶೋಧನೆ ನಡೆಸಲು ಈ ಹಣವನ್ನು ಬಳಸಲಾಗುತ್ತದೆ. ಅಡಿಕೆ ಮಾತ್ರವಲ್ಲದೆ, ತೆಂಗು ಬೆಳೆಗಾರರ ಹಿತದೃಷ್ಟಿಯಿಂದಲೂ ಸರ್ಕಾರ ಕೆಲವು ಕ್ರಮಗಳನ್ನು ಪ್ರಕಟಿಸಿದೆ. ತೆಂಗು ಬೆಳೆಗೆ ತೀವ್ರ
Mar 61 min read


ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಪ್ರಾಧಿಕಾರ ರಚನೆಗೆ ನಿರ್ಧಾರ ರಾಜ್ಯ ಬಜೆಟ್ ನಲ್ಲಿ ಸಿಎಂ ಘೋಷಣೆ
ರಾಜ್ಯದ ಪ್ರಸಿದ್ಧ ಧಾರ್ಮಿಕ ಕೇಂದ್ರಗಳಾದ ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳ ಸಮಗ್ರ ಪ್ರಗತಿಗಾಗಿ ಪ್ರತ್ಯೇಕ 'ಅಭಿವೃದ್ಧಿ ಪ್ರಾಧಿಕಾರ' ರಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇತ್ತೀಚಿನ ರಾಜ್ಯ ಬಜೆಟ್ ಮಂಡನೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಲಾಗಿದೆ. ಸೌಲಭ್ಯಗಳ ಸುಧಾರಣೆಗೆ ಆದ್ಯತೆ ದಿನೇ ದಿನೇ ಹೆಚ್ಚುತ್ತಿರುವ ಭಕ್ತರ ಸಂಖ್ಯೆಯನ್ನು ಪರಿಗಣಿಸಿ, ಮೂಲಸೌಕರ್ಯ ಹಾಗೂ ಪ್ರವಾಸೋದ್ಯಮಕ್ಕೆ ಹೆಚ್ಚಿನ ವೇಗ ನೀಡಲು ಈ ಪ್ರಾಧಿಕಾರಗಳು ಸಹಕಾರಿಯಾಗಲಿವೆ. ಈ ಯೋಜನೆಯ ಮೂಲಕ ಈ ಪುಣ್ಯಕ್ಷೇತ್ರಗಳ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳು ಇನ್ನ
Mar 61 min read


ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್ತೆ: ತನಿಖೆಗೆ ಸ್ಪೀಕರ್ ಯು.ಟಿ. ಖಾದರ್ ಸೂಚನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪದ ನೇತ್ರಾವತಿ ನದಿ ತೀರದಲ್ಲಿ ನೂರಾರು ಆಧಾರ್ ಕಾರ್ಡ್ಗಳು ಅನಾಥವಾಗಿ ಬಿದ್ದಿರುವುದು ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ಮೂಡಿಸಿದೆ. ಪುದು ಗ್ರಾಮದ ನಿವಾಸಿಗಳ ವಿಳಾಸ ಹೊಂದಿರುವ ಈ ಕಾರ್ಡ್ಗಳು ನದಿಯಲ್ಲಿ ತೇಲಿ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಗ್ರಾಮ ಪಂಚಾಯತ್ ಗಮನಕ್ಕೆ ತಂದಿದ್ದಾರೆ. ಸರ್ಕಾರದ ಪ್ರಮುಖ ಗುರುತಿನ ಚೀಟಿಗಳು ಹೀಗೆ ನದಿ ಪಾಲಾಗಿರುವುದು ವ್ಯವಸ್ಥೆಯ ಬೇಜವಾಬ್ದಾರಿತನಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಸ್ಥಳೀಯರು ಆಪಾದಿಸಿದ್ದಾರೆ. ಈ ಗಂಭೀರ ಘಟನೆಯನ್ನು ಗಮನಿಸಿದ ಸ್ಥಳ
Mar 51 min read


ಇಂಧನ ಅಭಾವದ ವದಂತಿ: ಭಟ್ಕಳದಲ್ಲಿ ಪೆಟ್ರೋಲ್ಗಾಗಿ ಮುಗಿಬಿದ್ದ ಜನ
ಮಧ್ಯಪ್ರಾಚ್ಯದಲ್ಲಿ ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಉದ್ವಿಗ್ನತೆಯಿಂದಾಗಿ ಜಾಗತಿಕವಾಗಿ ತೈಲ ಬೆಲೆ ಏರಿಕೆಯ ಭೀತಿ ಎದುರಾಗಿದೆ. ಇರಾನ್ ಹಾರ್ಮೂಜ್ ಜಲಸಂಧಿಯಲ್ಲಿ ಹಡಗು ಸಂಚಾರಕ್ಕೆ ನಿರ್ಬಂಧ ಹೇರಿರುವುದು ಇಂಧನ ಕೊರತೆಯ ಆತಂಕವನ್ನು ಹೆಚ್ಚಿಸಿದೆ. ಇದರ ಬೆನ್ನಲ್ಲೇ ತೈಲ ದರ ಬ್ಯಾರೆಲ್ಗೆ 100 ಡಾಲರ್ ತಲುಪಿರುವುದು ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಂಧನ ಬೆಲೆ ದುಪ್ಪಟ್ಟಾಗಲಿದೆ ಎಂಬ ತಪ್ಪು ಮಾಹಿತಿ ಹರಡಿದ್ದರಿಂದ, ಉತ್ತರ ಕನ್ನಡದ ಭಟ್ಕಳದಲ್ಲಿ ಪೆಟ್ರೋಲ್ ಪಡೆಯಲು ಜನ ಮುಗಿಬಿದ್ದಿದ್ದಾರೆ. ಬಂಕ್ಗಳಲ್ಲಿ ವಾಹನಗಳ ಸಾಲು ಕಂಡುಬಂದಿದ್ದು, ಅನೇಕರ
Mar 51 min read


ಬಜತ್ತೂರು: ಅನಧಿಕೃತ ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ; ಮೂವರ ಬಂಧನ
ಬಜತ್ತೂರು ಗ್ರಾಮದ ಮಣಿಕ್ಕಳ ಎಂಬಲ್ಲಿ ನಡೆಯುತ್ತಿದ್ದ ಅನಧಿಕೃತ ಕೋಳಿ ಅಂಕದ ಮೇಲೆ ಉಪ್ಪಿನಂಗಡಿ ಪೊಲೀಸರು ಮಿಂಚಿನ ದಾಳಿ ನಡೆಸಿದ್ದಾರೆ. ಮಾರ್ಚ್ 3ರಂದು ಗಸ್ತು ನಿರತವಾಗಿದ್ದ ಉಪನಿರೀಕ್ಷಕ ಸುತೇಶ್ ಕೆ.ಪಿ. ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದ್ದು, ಕೋಳಿಗಳ ಕೂಗಿನ ಸದ್ದನ್ನಾಧರಿಸಿ ಸ್ಥಳಕ್ಕೆ ತೆರಳಿದಾಗ ಜೂಜಾಟ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ ದಾಳಿಯಲ್ಲಿ ಸತೀಶ್, ಮುರಳಿ ಮತ್ತು ಮೋನಪ್ಪ ಕೆ. ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರು ಸ್ಥಳದಿಂದ ಐದು ಹುಂಜಗಳು, ಕೋಳಿ ಕಾಲುಗಳಿಗೆ ಕಟ್ಟುವ ಚೂರಿಗಳು, 2,300 ರೂ. ನಗದು ಹಾಗೂ ಒಂದು ಮೋಟಾರ್ ಸೈಕಲ್ ಅನ್ನು ವಶಪಡಿಸಿಕೊಂ
Mar 51 min read
Archive
bottom of page



