top of page
News Articles
Sathyapatha News Plus


ಸತತ ಮೂರು ದಿನ ಬ್ಯಾಂಕ್ ಬಂದ್: ಯಾವೆಲ್ಲ ಬ್ಯಾಂಕುಗಳ ಸೇವೆ ಸ್ಥಗಿತ?
ನಾಳೆ (ಜನವರಿ 27) ಬ್ಯಾಂಕ್ ಮುಷ್ಕರ ನಡೆಯಲಿದೆ. ಹೀಗಾಗಿ, ದೇಶಾದ್ಯಂತ ಈ ಬ್ಯಾಂಕುಗಳು ಮಂಗಳವಾರವೂ ಮುಚ್ಚಿರುತ್ತವೆ. ಭಾರತದಾದ್ಯಂತ ಬ್ಯಾಂಕ್ ಉದ್ಯೋಗಿ ಮತ್ತು ಅಧಿಕಾರಿ ಸಂಘಗಳು ಜನವರಿ 27ರಂದು ರಾಷ್ಟ್ರವ್ಯಾಪಿ ಮುಷ್ಕರವನ್ನು ಘೋಷಿಸಿವೆ. ಇದು ಹೆಚ್ಚಿನ ಸಾರ್ವಜನಿಕ ವಲಯದ ಬ್ಯಾಂಕುಗಳ ಸೇವೆಗಳನ್ನು ಅಡ್ಡಿಪಡಿಸುವ ನಿರೀಕ್ಷೆಯಿದೆ. ಈ ಮುಷ್ಕರಕ್ಕೆ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿದೆ. ತಮಗೆ ವಾರದಲ್ಲಿ 5 ದಿನಗಳ ಕಾಲ ಮಾತ್ರ ಕೆಲಸ ಮಾಡಲು ಅವಕಾಶ ನೀಡಬೇಕು, ಶನಿವಾರ ಹಾಗೂ ಭಾನುವಾರ ರಜೆ ನೀಡಬೇಕು ಎಂದು ಒತ್ತಾಯಿಸಿ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್
Jan 261 min read


ಗಗನಕ್ಕೆರುತ್ತಿರುವ ಚಿನ್ನದ ದರ- ಇಂದಿನ ದರ ಚೆಕ್ ಮಾಡಿ
ಇಂದು (ಜನವರಿ 26, 2026) ಚಿನ್ನದ ಬೆಲೆ ಭಾರಿ ಏರಿಕೆ ಕಂಡಿದೆ. 24 ಕ್ಯಾರೆಟ್ನ ಅಪರಂಜಿ ಚಿನ್ನದ ಬೆಲೆ ಪ್ರತಿ ಗ್ರಾಮ್ಗೆ ₹16,000 ಗಡಿ ದಾಟಿದೆ. ಇಂದಿನ ಪ್ರಮುಖ ದರ ವಿವರಗಳು ಇಲ್ಲಿವೆ (1 ಗ್ರಾಮ್ಗೆ): 24 ಕ್ಯಾರೆಟ್ ಚಿನ್ನ (ಅಪರಂಜಿ): ₹16,271 (ನಿನ್ನೆಯ ದರಕ್ಕಿಂತ ₹245 ಏರಿಕೆ). 22 ಕ್ಯಾರೆಟ್ ಚಿನ್ನ (ಆಭರಣ): ₹14,915 (ನಿನ್ನೆಯ ದರಕ್ಕಿಂತ ₹225 ಏರಿಕೆ). 18 ಕ್ಯಾರೆಟ್ ಚಿನ್ನ: ₹12,203 (ನಿನ್ನೆಯ ದರಕ್ಕಿಂತ ₹184 ಏರಿಕೆ). ಬೆಳ್ಳಿ ಬೆಲೆ: ಪ್ರತಿ 1 ಗ್ರಾಮ್ಗೆ ₹340 ಮತ್ತು 1 ಕೆಜಿಗೆ ₹3,40,000 ಆಗಿದೆ.
Jan 261 min read


ಶರಣ್ ಪಂಪ್ವೆಲ್ಗೆ ಜಿಲ್ಲಾ ಪ್ರವೇಶ ನಿಷೇಧ: ಶಾಂತಿ ಕಾಪಾಡಲು ಜಿಲ್ಲಾಧಿಕಾರಿ ಕ್ರಮ
ಹಾಸನ: ಶ್ರವಣಬೆಳಗೊಳ ಹಾಗೂ ಅರಸೀಕೆರೆಯಲ್ಲಿ ಭಾನುವಾರ ಆಯೋಜಿಸಲಾಗಿದ್ದ 'ಹಿಂದೂ ಸಮಾಜೋತ್ಸವ' ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದ್ದ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಅವರಿಗೆ ಜಿಲ್ಲಾ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ಆದೇಶ ಹೊರಡಿಸಿದ್ದಾರೆ. ಶರಣ್ ಪಂಪ್ವೆಲ್ ಅವರು ಈ ಹಿಂದೆ ವಿವಿಧ ಜಿಲ್ಲೆಗಳಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಈ ಇತಿಹಾಸವನ್ನು ಗಮನಿಸಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು
Jan 261 min read


ಜಾಮೀನು ನೀಡುವ ಮುನ್ನ ಎಚ್ಚರ: ರೌಡಿಗಳು ಸಿಗದಿದ್ದರೆ ಜಾಮೀನುದಾರರಿಗೆ ಸಂಕಷ್ಟ; ಮಂಗಳೂರು ಕಮಿಷನರ್ ವಾರ್ನಿಂಗ್!
ಮಂಗಳೂರು: ಗಂಭೀರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ತಲೆಮರೆಸಿಕೊಳ್ಳುವ ಆರೋಪಿಗಳಿಗೆ ಮಾತ್ರವಲ್ಲ, ಅವರಿಗೆ ಶ್ಯೂರಿಟಿ (ಜಾಮೀನು ಭರವಸೆ) ನೀಡುವವರಿಗೂ ಇನ್ಮುಂದೆ ಪೊಲೀಸರು ಬಿಸಿ ಮುಟ್ಟಿಸಲಿದ್ದಾರೆ. "ಅಪರಾಧಿಗಳಿಗೆ ಜಾಮೀನು ನೀಡುವಾಗ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು, ಇಲ್ಲದಿದ್ದರೆ ಗಂಭೀರ ಕಾನೂನು ಪರಿಣಾಮ ಎದುರಿಸಬೇಕಾಗುತ್ತದೆ" ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಕಡಕ್ ಎಚ್ಚರಿಕೆ ನೀಡಿದ್ದಾರೆ. ಈ ಮೂಲಕ ನ್ಯಾಯಾಂಗ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ರೌಡಿಗಳಿಗೆ ಸಾಥ್ ನೀಡುವವರಿಗೆ ಆಯುಕ್ತರು ನೇರ ಸಂದೇಶ ರವಾನಿಸಿದ್ದಾರೆ.
Jan 251 min read


ಹುಬ್ಬಳ್ಳಿಯಲ್ಲಿ ಇಂದು 42,345 ಮನೆಗಳ ಐತಿಹಾಸಿಕ ಹಂಚಿಕೆ; ಖರ್ಗೆ–ಸಿದ್ದರಾಮಯ್ಯ–ಡಿಕೆಶಿ ಚಾಲನೆ
ಹುಬ್ಬಳ್ಳಿ: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ನಿರ್ಮಿಸಲಾದ 42,345 ಮನೆಗಳನ್ನು ಬಡ ಕುಟುಂಬಗಳಿಗೆ ಹಂಚಿಕೆ ಮಾಡುವ ಐತಿಹಾಸಿಕ ಕಾರ್ಯಕ್ರಮ ಜ.24ರಂದು ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಯಶಸ್ವಿಯಾಗಿ ನೆರವೇರಿತು. ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಅವರ ನೇತೃತ್ವದಲ್ಲಿ ನಡೆದ ಈ ಬೃಹತ್ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ರಾಜ್ಯಾದ್ಯಂತ ನಿರ್ಮಾಣಗೊಂಡ ಮನೆಗಳ ಪೈಕಿ ಇದು ಎರಡನೇ ಹಂತದ ಹಂಚಿಕೆಯಾಗ
Jan 251 min read


ದೇಶದ ಅತಿ ದೊಡ್ಡ ರಾಬರಿ: ಬೆಳಗಾವಿ ಗಡಿಭಾಗದಲ್ಲಿ 400 ಕೋಟಿ ರೂ ಹಣವಿದ್ದ 2 ಕಂಟೇನರ್ ಹೈಜಾಕ್
ಗೋವಾದಿಂದ ಮಹಾರಾಷ್ಟ್ರಕ್ಕೆ ಸುಮಾರು ₹400 ಕೋಟಿ ನಗದು ಸಾಗಿಸುತ್ತಿದ್ದ ಎರಡು ಕಂಟೇನರ್ಗಳನ್ನು ಹೈಜಾಕ್ ಮಾಡಿರುವ ಘಟನೆ ದೇಶದ ಅಪರಾಧ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣಗಳಲ್ಲೊಂದು ಎಂದು ಪರಿಗಣಿಸಲಾಗಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅಪಾಯಕಾರಿ ಹಾಗೂ ಅರಣ್ಯ ಪ್ರದೇಶವಾದ ಚೋರ್ಲಾ ಘಾಟ್ ಮಾರ್ಗದಲ್ಲಿ ಈ ಕೃತ್ಯ ನಡೆದಿದ್ದು, ಘಟನೆ ನಡೆದ ಹಲವು ತಿಂಗಳ ಬಳಿಕ ಇದೀಗ ಪ್ರಕರಣ ಬಹಿರಂಗವಾಗಿದೆ. 2025ರ ಅಕ್ಟೋಬರ್ 16ರಂದು ನಡೆದ ಈ ದರೋಡೆ ಪ್ರಕರಣ, ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ – ಈ ಮೂರು ರಾಜ್ಯಗಳ ಪೊಲೀಸ್ ವ್ಯವಸ್ಥೆಯನ್ನು ತೀವ್ರ ಎಚ್ಚರಿಕೆಯಲ್ಲಿರಿಸಿದೆ. ಗೋವಾದಿಂದ ಮಹ
Jan 251 min read


ಕುಂದಾಪುರ: ಬಸ್ ಓವರ್ಟೇಕ್ ವೇಳೆ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು
ಕುಂದಾಪುರ ತಾಲೂಕಿನ ಶೆಟ್ರಕಟ್ಟೆ ತಿರುವಿನಲ್ಲಿ ಶನಿವಾರ ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತರನ್ನು ಸೌಕೂರು ನಿವಾಸಿ ವಿಜಯ್ ದೇವಾಡಿಗ (26) ಎಂದು ಗುರುತಿಸಲಾಗಿದೆ. ತ್ರಾಸಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದ ವಿಜಯ್, ಶನಿವಾರ ಬೆಳಿಗ್ಗೆ ತ್ರಾಸಿಯಿಂದ ಸೌಕೂರು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಶೆಟ್ರಕಟ್ಟೆ ತಿರುವಿನಲ್ಲಿ ಖಾಸಗಿ ಬಸ್ ಅನ್ನು ಓವರ್ಟೇಕ್ ಮಾಡಲು ಪ್ರಯತ್ನಿಸಿದಾಗ, ಎದುರಿನಿಂದ ಬರುತ್ತಿದ್ದ ಮತ್ತೊಂದು ಖಾಸಗಿ ಬಸ್ಗೆ ಬೈಕ್ ಮುಖಾಮುಖಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ತೀ
Jan 241 min read


ಕಾರವಾರ: ವೈರಲ್ ವೀಡಿಯೋಗೆ ಬಲಿಯಾದ ವೈದ್ಯ; ರಾಜೀವ್ ಪಿಕಳೆ ಪ್ರಕರಣದಲ್ಲಿ ಇಬ್ಬರ ಬಂಧನ
ಕಾರವಾರ: ಸಾಮಾಜಿಕ ಹಾಗೂ ವೈದ್ಯಕೀಯ ವಲಯದಲ್ಲಿ ಗೌರವ ಪಡೆದ ಕುಟುಂಬಕ್ಕೆ ಸೇರಿದ ವೈದ್ಯ ರಾಜೀವ್ ಪಿಕಳೆ ಆತ್ಮಹತ್ಯೆ (Rajiv Pikale Case) ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕೋಲಾ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಜಾಲತಾಣದಲ್ಲಿ ಅವಮಾನಕಾರಿ ವೀಡಿಯೋ ವೈರಲ್ ಆಗಿದ್ದೇ ಈ ದುರಂತಕ್ಕೆ ಕಾರಣವೆಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಹಟ್ಟಿಕೇರಿಯಲ್ಲಿ ವಾಸವಾಗಿದ್ದ ರಾಜೀವ್ ಪಿಕಳೆ, ತಮ್ಮ ನಿವಾಸದಲ್ಲೇ ಡಬಲ್ ಬ್ಯಾರಲ್ ಗನ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆರ್ಥಿಕವಾಗಿ ಸುಸ್ಥಿತಿಯಲ್ಲಿದ್ದರೂ ಒಂಟಿಯಾಗಿ ವಾಸಿಸುತ್ತಿದ್
Jan 241 min read


ಬಳ್ಳಾರಿ ಬ್ಯಾನರ್ ಗಲಾಟೆ ಮಾಸುವ ಮುನ್ನವೇ ರೆಡ್ಡಿ–ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್ಗೆ ಬೆಂಕಿ
ರಾಜ್ಯ ರಾಜಕಾರಣದಲ್ಲಿ ಮತ್ತೆ ಭಾರೀ ಸಂಚಲನ ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ನಡೆದ ಬ್ಯಾನರ್ ಗಲಾಟೆ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಗುಂಡೇಟಿಗೆ ಬಲಿಯಾದ ಪ್ರಕರಣ ಇನ್ನೂ ಮಾಸುವ ಮುನ್ನವೇ ಮತ್ತೊಂದು ಗಂಭೀರ ಘಟನೆ ನಡೆದಿದೆ. ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ಬಿ. ಶ್ರೀರಾಮುಲು ಅವರಿಗೆ ಸೇರಿದ ಜಿ–ಸ್ಕ್ವೇರ್ ಲೇಔಟ್ನಲ್ಲಿರುವ ಮಾಡೆಲ್ ಹೌಸ್ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಅಗ್ನಿ ಅವಘಡದ ಹಿಂದೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಶಾಸಕರ ಬೆಂಬಲಿಗರೇ ಇದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣ ರಾಜ್ಯ
Jan 242 min read


ಪುತ್ತೂರು ಕೋಟಿ-ಚೆನ್ನಯ್ಯ ಜೋಡುಕೆರೆ ಕಂಬಳ: ಮದ್ಯ ಮಾರಾಟ ನಿಷೇದ
ಪುತ್ತೂರಿನ ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವಮಾರು ಗದ್ದೆಯಲ್ಲಿ 33ನೇ ವರ್ಷದ ‘ಕೋಟಿ-ಚೆನ್ನಯ್ಯ’ ಜೋಡುಕೆರೆ ಕಂಬಳವು ಜನವರಿ 24ರಿಂದ ಅದ್ದೂರಿಯಾಗಿ ಪ್ರಾರಂಭಗೊಳ್ಳಲಿದೆ. ಜನವರಿ 25ರವರೆಗೆ ನಡೆಯಲಿರುವ ಈ ಜಾನಪದ ಕ್ರೀಡಾಕೂಟಕ್ಕೆ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕಂಬಳಾಭಿಮಾನಿಗಳು ಹಾಗೂ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ. ಈ ಬೃಹತ್ ಜನಸಂದಣಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮದ ಯಶಸ್ವಿ ನಿರ್ವಹಣೆಗೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪುತ್ತೂರು ನಗರವು ಮತೀಯವಾಗಿ ಅತೀ ಸೂಕ್ಷ್ಮ ಪ್ರದೇಶವೆಂದು...
Jan 231 min read


ಮಂಗಳೂರಿಗೆ ಒಲಿದ ‘ದೇಶದ ಅತ್ಯಂತ ಸುರಕ್ಷಿತ ನಗರ’ ಎಂಬ ಹೆಗ್ಗಳಿಕೆ: ನಂಬಿಯೋ (Numbeo) ಜಾಗತಿಕ ವರದಿ ಬಿಡುಗಡೆ
ನಂಬಿಯೋ (Numbeo) ಸಂಸ್ಥೆಯು ಬಿಡುಗಡೆ ಮಾಡಿರುವ ‘ಸೇಫ್ಟಿ ಇಂಡೆಕ್ಸ್–2026’ರ (ಸುರಕ್ಷತಾ ಸೂಚ್ಯಂಕ) ವರದಿಯಲ್ಲಿ ಕರಾವಳಿಯ ಹೆಮ್ಮೆಯ ನಗರಿ ಮಂಗಳೂರು ಭಾರತದಲ್ಲೇ ಅತ್ಯಂತ ಸುರಕ್ಷಿತ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ವಿಶ್ವದಾದ್ಯಂತ ಒಟ್ಟು 304 ಪ್ರಮುಖ ನಗರಗಳನ್ನು ಒಳಗೊಂಡ ಈ ಸಮಗ್ರ ಸಮೀಕ್ಷೆಯಲ್ಲಿ, ಮಂಗಳೂರು ಅಗ್ರಸ್ಥಾನ ಪಡೆಯುವ ಮೂಲಕ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದೆ. ಈ ವರದಿಯು ಮಂಗಳೂರಿನ ನಾಗರಿಕರ ನೆಮ್ಮದಿಯ ಜೀವನ ಹಾಗೂ ನಗರದ ಶಿಸ್ತುಬದ್ಧ ವಾತಾವರಣಕ್ಕೆ ಹಿಡಿದ ಕನ್ನಡಿಯಾಗಿದೆ. ಸಾರ್ವಜನಿಕ ಸುರಕ್ಷತೆ, ಅಪರಾಧ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಹಾಗೂ ನಗರದ ಭದ
Jan 231 min read


ದೆಹಲಿಯಲ್ಲಿ ಅಕಾಲಿಕ ಮಳೆ: ಏಳು ವರ್ಷಗಳ ದಾಖಲೆ ಮುರಿದ ತಾಪಮಾನದ ಬೆನ್ನಲ್ಲೇ ತಂಪು ಹವಾಮಾನ
ನವದೆಹಲಿ: ದೇಶದ ರಾಜಧಾನಿ ದೆಹಲಿಯ ವಿವಿಧೆಡೆ ಶುಕ್ರವಾರ ಅಕಾಲಿಕ ಮಳೆಯಾಗಿದ್ದು, ಸುಡುಬಿಸಿಲಿನಿಂದ ಕಂಗಾಲಾಗಿದ್ದ ಜನತೆಗೆ ತುಸು ಸಮಾಧಾನ ತಂದಿದೆ. ಪಶ್ಚಿಮ ಪ್ರಕ್ಷುಬ್ಧತೆಯ (Western Disturbance) ಪರಿಣಾಮವಾಗಿ ಈ ಹವಾಮಾನ ಬದಲಾವಣೆ ಉಂಟಾಗಿದ್ದು, ಮುಂದಿನ ಕೆಲವು ದಿನಗಳ ಕಾಲ ನಗರದಲ್ಲಿ ತುಂತುರು ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕೇವಲ ಮಳೆಯಷ್ಟೇ ಅಲ್ಲದೆ, ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಗುಡುಗು ಮತ್ತು ಮಿಂಚಿನ ಆರ್ಭಟವೂ ಇರಲಿದೆ ಎಂದು ಇಲಾಖೆ ಎಚ್ಚರಿಸಿದೆ. ಗುರುವಾರವಷ್ಟೇ ದೆಹಲಿಯಲ
Jan 231 min read


ಇಂದಿನಿಂದ ವಿಧಾನಸಭೆ ವಿಶೇಷ ಅಧಿವೇಶನ
ಕೇಂದ್ರ ಸರ್ಕಾರ ನರೇಗಾ ಯೋಜನೆಯ ಹೆಸರನ್ನು ಬದಲಾಯಿಸಿ ವಿಬಿ ಜಿ ರಾಮ್ ಜಿ ಎಂದು ಮರು ನಾಮಕರಣ ಮಾಡಿರುವುದರ ವಿರುದ್ಧ ನಿರ್ಣಯ ಕೈಗೊಳ್ಳಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ವಿಶೇಷ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಇದೀಗ ರಾಜ್ಯಪಾಲರು ನಿರಾಕರಿಸಿದ್ದಾರೆ. ಹೀಗಾಗಿ ಅಧಿವೇಶನಕ್ಕೆ ಗೈರಾಗುತ್ತಾರೆಯೇ ಎಂಬ ಪ್ರಶ್ನೆಯೂ ಮೂಡಿದೆ. ಒಂದು ವೇಳೆ ಗೈರಾದರೆ ಸುಪ್ರೀಂ ಕೋರ್ಟ್ ಮೊರೆ ಹೋಗಲು ಸರ್ಕಾರ ಸಿದ್ಧತೆ ಮಾಡಿದೆ.ಅಧಿವೇಶನಕ್ಕೆ ಹಾಜರಾಗಿಯೇ ಸರ್ಕಾರಕ್ಕೆ ಚೆಕ್ ಮೇಟ್ ಇಡ್ತಾರಾ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಎಂಬ ಪ್ರಶ್ನೆಮೂಡಿದೆ.
Jan 221 min read


ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲು
ಪುತ್ತೂರು: ಖಾಸಗಿ ಕಾಲೇಜೊಂದರಲ್ಲಿ ಕೋಮು ಭಾವನೆ ಕೆರಳಿಸುವ ಹಾಗೂ ಹಿಂಸೆಗೆ ಪ್ರಚೋದಿಸುವ ಭಾಷಣ ಮಾಡಿದ ಆರೋಪದಡಿ ಡಾ. ಕಲ್ಲಡ್ಕ ಪ್ರಭಾಕರ್ ಭಟ್, ಕಾರ್ಯಕ್ರಮ ಆಯೋಜಕರು ಮತ್ತು ಯುಟ್ಯೂಬ್ ಚಾನೆಲ್ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮಚಂದ್ರ ಕೆ. ನೀಡಿದ ದೂರಿನನ್ವಯ ಪೊಲೀಸರು ಬಿಎನ್ಎಸ್ ವಿವಿಧ ಸೆಕ್ಷನ್ಗಳಡಿ ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
Jan 221 min read


ಸಮವಸ್ತ್ರದ ಘನತೆ ಮರೆತ ಉನ್ನತ ಪೊಲೀಸ್ ಅಧಿಕಾರಿ: ಕಚೇರಿಯಲ್ಲೇ 'ಕಾಮಕಾಂಡ', ಸರ್ಕಾರಕ್ಕೆ ಭಾರೀ ಮುಜುಗರ
ಕರ್ನಾಟಕ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಯೊಬ್ಬರ ಅಸಭ್ಯ ವರ್ತನೆಯ ವಿಡಿಯೋಗಳು ಈಗ ರಾಜ್ಯಾದ್ಯಂತ ಸಂಚಲನ ಮೂಡಿಸಿವೆ. ಡಿಜಿಪಿ ಶ್ರೇಣಿಯ ಐಜಿಪಿ ಅಧಿಕಾರಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿರುವಾಗಲೇ ಮಹಿಳೆಯರೊಂದಿಗೆ ಸರಸವಾಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕಚೇರಿಗೆ ಕೆಲಸದ ನಿಮಿತ್ತ ಬರುವ ಮಹಿಳೆಯರ ಜೊತೆಗೂ ಇವರು ಅಸಭ್ಯವಾಗಿ ವರ್ತಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದ್ದು, ಸರಣಿ ವಿಡಿಯೋಗಳು ಹೊರಬರುತ್ತಿರುವುದು ಇಡೀ ಇಲಾಖೆಯನ್ನೇ ತಲೆತಗ್ಗಿಸುವಂತೆ ಮಾಡಿದೆ. ಈ ಕೃತ್ಯವು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಸರ
Jan 191 min read


ಚಾರ್ಮಾಡಿ ಘಾಟಿಯ ಮಲಯ ಮಾರುತ ಅರಣ್ಯದಲ್ಲಿ ಭೀಕರ ಕಾಡ್ಗಿಚ್ಚು: ವನ್ಯಸಂಪತ್ತು ಭಸ್ಮ!
ಮೂಡಿಗೆರೆ: ಪ್ರಕೃತಿ ಸೌಂದರ್ಯಕ್ಕೆ ಹೆಸರಾದ ಚಾರ್ಮಾಡಿ ಘಾಟ್ ವ್ಯಾಪ್ತಿಯ ಮಲಯ ಮಾರುತ ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಹಸಿರು ಸಿರಿ ನಾಶವಾಗಿದೆ. ರಾಷ್ಟ್ರೀಯ ಹೆದ್ದಾರಿಯಿಂದ ಸುಮಾರು 2 ಕಿಲೋಮೀಟರ್ ದೂರದ ಅರಣ್ಯದ ಒಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಕ್ಷಣಕ್ಕೂ ಭೀಕರವಾಗಿ ವ್ಯಾಪಿಸುತ್ತಿದೆ. ಇದರಿಂದಾಗಿ ಮಲೆನಾಡಿನ ಜೀವವೈವಿಧ್ಯಕ್ಕೆ ದೊಡ್ಡ ಮಟ್ಟದ ಹೊಡೆತ ಬಿದ್ದಿದ್ದು, ಪರಿಸರ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ. ಬೆಂಕಿಯ ಕೆನ್ನಾಲಗೆ ದಟ್ಟವಾಗಿ ಆವರಿಸುತ್ತಿದ್ದಂತೆ ಎಚ್ಚೆತ್ತುಕೊಂಡ ಅರಣ್ಯ ಇಲಾಖೆಯ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸ
Jan 191 min read


ಕರ್ನಾಟಕದ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಮತ್ತೆ ಮೊಳಗಲಿದೆ ವಿದ್ಯಾರ್ಥಿ ಚುನಾವಣೆಯ ರಣಕಹಳೆ!
ಕರ್ನಾಟಕದ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಮತ್ತೆ ಆರಂಭಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿರುವ ಸರ್ಕಾರ, ಮೊದಲ ಹಂತದ ಉನ್ನತ ಮಟ್ಟದ ಸಭೆಯನ್ನು ಪೂರ್ಣಗೊಳಿಸಿದೆ. ಉನ್ನತ ಶಿಕ್ಷಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಚುನಾವಣೆ ನಡೆಸುವ ಪ್ರಸ್ತಾವನೆಗೆ ಈಗಾಗಲೇ ಪ್ರಾಥಮಿಕ ಹಸಿರು ನಿಶಾನೆ ತೋರಿಸಿವೆ. ಇದರಿಂದಾಗಿ ಕಳೆದ ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಕ್ಯಾಂಪಸ್ ರಾಜಕೀಯಕ್ಕೆ ಮತ್ತೆ ಚಾಲನೆ ಸಿಗುವ ಸಾಧ್ಯತೆ ದಟ್ಟವಾಗಿದೆ. ವಿದ್ಯಾರ್ಥಿ ಚುನಾವಣೆಗಳನ್ನು ನಡೆಸುವ ಸಾಧಕ-ಬಾಧಕಗಳನ್
Jan 171 min read


ಬೀದಿನಾಯಿ ದಾಳಿಗೆ ಬಲಿಯಾದ 10 ವರ್ಷದ ಬಾಲಕಿ: ಚಿಕಿತ್ಸೆ ಫಲಿಸದೇ ಹುಬ್ಬಳ್ಳಿ ಕಿಮ್ಸ್ನಲ್ಲಿ ಸಾವು
ಬಾಗಲಕೋಟೆ: ಜಿಲ್ಲೆಯ ನವನಗರದಲ್ಲಿ ಬೀದಿನಾಯಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ 10 ವರ್ಷದ ಬಾಲಕಿ ಅಲೈನಾ ಲೋಕಾಪುರ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಕಳೆದ ಕೆಲವು ದಿನಗಳಿಂದ ಸಾವಿನೊಂದಿಗೆ ಹೋರಾಡುತ್ತಿದ್ದ ಬಾಲಕಿ, ಅಂತಿಮವಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಈ ಘಟನೆಯಿಂದ ಬಾಲಕಿಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳೀಯರಲ್ಲಿ ಶೋಕ ಮಡುಗಟ್ಟಿದೆ. ಕಳೆದ ಡಿಸೆಂಬರ್ 27 ರಂದು ನವನಗರದ ಸೆಕ್ಟರ್ ನಂಬರ್ 15 ರಲ್ಲಿ ಅಲೈನಾ ಮೇಲೆ ಬೀದಿನಾಯಿಗಳು ಭೀಕರವಾಗಿ ದಾಳಿ ನಡೆಸಿದ್ದವು. ಈ ವೇಳೆ ನಾಯಿಗಳು ಬಾಲಕಿಯ ಕಣ್ಣು
Jan 151 min read


ಜ.22ರಿಂದ ವಿಧಾನಮಂಡಲ ಜಂಟಿ ಅಧಿವೇಶನ: 'ವಿಬಿ-ಜಿ ರಾಮ್ ಜಿ' ಕಾಯ್ದೆ ವಿರುದ್ಧ ಗುಡುಗಲು ರಾಜ್ಯ ಸರ್ಕಾರ ಸನ್ನದ್ಧ
ಬೆಂಗಳೂರು: ಕೇಂದ್ರ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ರದ್ದತಿ ಮತ್ತು ಅದರ ಬದಲಿಗೆ ಜಾರಿಗೆ ತಂದಿರುವ 'ವಿಕಸಿತ ಭಾರತ್ ಜಿರಾಮಜಿ' (VB-G RAM G) ಕಾಯ್ದೆಯನ್ನು ವಿರೋಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಜನವರಿ 22ರಿಂದ 31ರವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ ನಡೆಸಲು ಬುಧವಾರ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಧಿವೇಶನದ ಮೊದಲ ದಿನ ರಾಜ್ಯಪಾಲರು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ರಜಾ ದಿನಗಳನ್ನು ಹೊರತುಪಡಿಸಿ ಅಧಿವೇಶನದ ಒಟ್ಟು ದಿನಗಳ ಬಗ್ಗೆ ಸ್ಪೀಕರ್ ಅಂತಿಮ ನಿರ್ಧಾರ ತೆಗೆ
Jan 151 min read


ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ ಸಾಧ್ಯತೆ: ಸಿಎಂ ಸಿದ್ದರಾಮಯ್ಯ ಅವರಿಂದ 17ನೇ ದಾಖಲೆಯ ಬಜೆಟ್
ಬೆಂಗಳೂರು: ಕರ್ನಾಟಕ ರಾಜ್ಯದ 2025-26ನೇ ಸಾಲಿನ ಆಯವ್ಯಯ ಮಂಡನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಜ್ಜಾಗುತ್ತಿದ್ದಾರೆ. ಆಪ್ತ ಮೂಲಗಳ ಮಾಹಿತಿ ಪ್ರಕಾರ, ಮಾರ್ಚ್ 6ರಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸುವ ಸಾಧ್ಯತೆಯಿದೆ. ಈ ಕುರಿತು ಈಗಾಗಲೇ ಅವರು ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದ್ದು, ಫೆಬ್ರವರಿ ತಿಂಗಳಿನಿಂದ ಇಲಾಖಾವಾರು ಪೂರ್ವಭಾವಿ ಸಭೆಗಳನ್ನು ನಡೆಸಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಮಾರ್ಚ್ 5ರಿಂದ ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನ ಆರಂಭವಾಗುವ ಸಾಧ್ಯತೆಯಿದ್ದು, ಅಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿ
Jan 121 min read
Archive
bottom of page



