top of page
News Articles
Sathyapatha News Plus


ಬಂಟ್ವಾಳ: ಹೆಜ್ಜೇನು ದಾಳಿಗೆ ವೃದ್ಧೆ ಬಲಿ
ಬಂಟ್ವಾಳ: ಇಲ್ಲಿನ ಕಸಬಾ ಗ್ರಾಮದ ಕೆಮ್ಮಟ್ಟೆ ಗುಡ್ಡೆಯಲ್ಲಿ ಹೆಜ್ಜೇನು ದಾಳಿಗೆ ಒಳಗಾಗಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ. ಕೆಮ್ಮಟ್ಟೆ ಗುಡ್ಡೆ ನಿವಾಸಿ ಕಮಲಾ (74) ಮೃತಪಟ್ಟ ದುರದೃಷ್ಟಕರ ಮಹಿಳೆ. ಸೆಪ್ಟೆಂಬರ್ 23ರಂದು ಬೆಳಿಗ್ಗೆ ಕಮಲಾ ಅವರು ಮನೆಯ ಬಳಿಯ ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ದಿಢೀರನೆ ದಾಳಿ ಮಾಡಿದ ಹೆಜ್ಜೇನುಗಳು ಅವರ ಮುಖ, ಬೆನ್ನು ಹಾಗೂ ಕಾಲುಗಳಿಗೆ ತೀವ್ರವಾಗಿ ಕಚ್ಚಿದ್ದವು. ಮನೆಗೆ ಬಂದ ಅವರು ಘಟನೆಯನ್ನು ಮಗ ದಿನೇಶ್ ಅವರಿಗೆ ತಿಳಿಸಿದ್ದರು. ಕೂಡಲೇ ಅವರನ್ನು ಖಾಸಗಿ ಕ್ಲಿನಿಕ್ಗೆ ಕರೆದೊಯ್ದು ಪ್ರಥಮ ಚಿಕಿತ್ಸ
Sep 251 min read


ಬೆಳ್ತಂಗಡಿ: ಪತ್ನಿ ಶವ ಕೆರೆಯಲ್ಲಿ ಪತ್ತೆಯಾದ ಬೆನ್ನಲ್ಲೇ ಪತಿಯೂ ಆತ್ಮಹತ್ಯೆಗೆ ಶರಣು - ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ: ತಾಲೂಕಿನ ಶಿಶಿಲ ಗ್ರಾಮದ ಗುಂಡಿಕ್ಕಾಡಿನಲ್ಲಿ ಅತ್ಯಂತ ಆಘಾತಕಾರಿ ಹಾಗೂ ನಿಗೂಢ ಘಟನೆಯೊಂದು ಸಂಭವಿಸಿದ್ದು, ಪತ್ನಿಯ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಬೆನ್ನಲ್ಲೇ ಆಕೆಯ ಪತಿಯೂ ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುಂಡಿಕ್ಕಾಡು ನಿವಾಸಿ ತನಿಯಪ್ಪ ಗೌಡ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಳೆದ ಎರಡು-ಮೂರು ದಿನಗಳಿಂದ ತನಿಯಪ್ಪ ಗೌಡ ಅವರು ಯಾರಿಗೂ ಕಾಣಿಸದೆ ನಾಪತ್ತೆಯಾಗಿದ್ದರು. ಇದರಿಂದ ಅನುಮಾನಗೊಂಡ ಸ್ಥಳೀಯ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ತೀವ್ರ ಶೋಧ ಕಾರ್ಯ ನಡೆಸಿದಾಗ, ತನಿಯಪ್ಪ ಗೌಡ ಅವರು ತಮ್ಮ ನಿವಾಸದ ಒಳಗಡೆಯೇ ನೇಣು
Sep 241 min read


ಗ್ರೇಟರ್ ನೋಯ್ಡಾದಲ್ಲಿ ಭೀಕರ ದುರಂತ: ಚಲಿಸುತ್ತಿದ್ದ ಸ್ಲೀಪರ್ ಬಸ್ಗೆ ಬೆಂಕಿ, 9 ಮಂದಿ ಸಜೀವ ದಹನ
ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್ಪ್ರೆಸ್ವೇನಲ್ಲಿ ಚಲಿಸುತ್ತಿದ್ದ ಸ್ಲೀಪರ್ ಬಸ್ನಲ್ಲಿ ಏಕಾಏಕಿ ಭೀಕರ ಬೆಂಕಿ ಕಾಣಿಸಿಕೊಂಡು 9 ಮಂದಿ ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ. ಸುಮಾರು 40 ರಿಂದ 50 ಮಂದಿ ಇದ್ದ ಈ ಬಸ್ನಲ್ಲಿ ಬೆಂಕಿ ವೇಗವಾಗಿ ಆವರಿಸಿದಾಗ, ಪ್ರಾಣ ಉಳಿಸಿಕೊಳ್ಳಲು ಕೆಲ ಪ್ರಯಾಣಿಕರು ಚಲಿಸುತ್ತಿದ್ದ ಬಸ್ನಿಂದಲೇ ಹೊರಗೆ ಜಿಗಿದಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಕೂಲಿಂಗ್ ಕಾರ್ಯಾಚರಣೆ ನಡೆಸಿದ್ದಾರೆ. ಬಸ್ನೊಳಗೆ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯ
Sep 241 min read


ವಿಟ್ಲ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು
ವಿಟ್ಲ: ಕೇರಳ ಮೂಲದ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯೊಂದಿಗೆ ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದು, ಆಕೆಯನ್ನು ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. 2025ರ ಡಿಸೆಂಬರ್ 21ರಂದು ಬಾಲಕಿಯು ಆರೋಪಿತ ಬಾಲಕನ ಮನೆಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. 2026ರ ಸೆಪ್ಟೆಂಬರ್ 8ರಂದು ಬಾಲಕಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೆಪ್ಟೆಂಬರ್ 9ರಂದು ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಕುರಿತು ವಿಟ್ಲ ಠಾಣೆಯಲ್ಲಿ
Sep 241 min read


15ಕ್ಕೂ ಹೆಚ್ಚು ದೂರು, ಲೋಕಾಯುಕ್ತ ದಾಳಿ ಬೆನ್ನಲ್ಲೇ ಕ್ರಮ: ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ಸಸ್ಪೆಂಡ್!
ಮಂಗಳೂರು, ಸೆ.23: ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಹಾಗೂ ಅನುಚಿತ ವರ್ತನೆ ಸೇರಿದಂತೆ ಹಲವು ಆರೋಪಗಳ ಹಿನ್ನೆಲೆಯಲ್ಲಿ ಆರ್ಯಾಪು ಗ್ರಾಮ ಪಂಚಾಯಿತಿಯ ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಅಮಾನತುಗೊಳಿಸಿದ್ದಾರೆ. ವಾರದ ಹಿಂದಷ್ಟೇ ಅವರನ್ನು ಉಪ್ಪಿನಂಗಡಿ ಗ್ರಾಮಾಂತರ ಪಂಚಾಯಿತಿಗೆ ಪಿಡಿಒ ಆಗಿ ವರ್ಗಾವಣೆ ಮಾಡಲಾಗಿತ್ತು. ಅದಕ್ಕೂ ಮುನ್ನ ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರ ವಿರುದ್ಧ 15ಕ್ಕೂ ಹೆಚ್ಚು ಸಾರ್ವಜನಿಕ ದೂರುಗಳು ದಾಖಲಾಗಿದ್ದವು ಎನ್ನಲಾಗಿದೆ. ವ್ಯಾಪಾರ ಪರವಾನಗಿ ನವೀಕರ
Sep 231 min read


ಸೆಪ್ಟೆಂಬರ್ 26ರಿಂದ 5 ದಿನ ಬ್ಯಾಂಕ್ಗಳ ಸೇವೆ ಲಭ್ಯವಿಲ್ಲ: ಸತತ ರಜೆಯಿಂದ ಗ್ರಾಹಕರಿಗೆ ಸಂಕಷ್ಟ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರು ಸೆಪ್ಟೆಂಬರ್ 28ರಿಂದ 30ರವರೆಗೆ ಮೂರು ದಿನಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದರೊಂದಿಗೆ ಸೆಪ್ಟೆಂಬರ್ 26 ಹಾಗೂ 27ರಂದು ನಾಲ್ಕನೇ ಶನಿವಾರ ಮತ್ತು ಭಾನುವಾರದ ಸಾಮಾನ್ಯ ರಜೆ ಬಂದಿರುವುದರಿಂದ, ಸತತ ಐದು ದಿನಗಳ ಕಾಲ ದೇಶದಾದ್ಯಂತ ಬ್ಯಾಂಕ್ ಶಾಖೆಗಳು ಸಂಪೂರ್ಣವಾಗಿ ಮುಚ್ಚಿರಲಿವೆ. ಈ ಹಿಂದೆ ಸೆಪ್ಟೆಂಬರ್ 11ರಂದು ಬ್ಯಾಂಕ್ ನೌಕರರ ಒಕ್ಕೂಟ ಮುಷ್ಕರ ನಡೆಸಿತ್ತು. ಆದರೆ, ಸರ್ಕಾರದಿಂದ ಸೂಕ್ತ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಯೋಜನೆಯಂತೆ ಸೆಪ್ಟೆಂಬರ್ 28ರಿಂದ ಮತ್ತೆ ಮುಷ್ಕರ ಮುಂದುವರಿಸಲು ತೀರ್ಮಾನ
Sep 231 min read


ಪುತ್ತೂರು, ವಿಟ್ಲ ಅಭಿವೃದ್ಧಿಗೆ ₹10 ಕೋಟಿ ವಿಶೇಷ ಅನುದಾನ: ಶಾಸಕ ಅಶೋಕ್ ರೈ
ಪುತ್ತೂರು: ಕರ್ನಾಟಕ ನಗರಾಭಿವೃದ್ಧಿ ಇಲಾಖೆಯ ಮೂಲಕ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ನಗರಸಭೆ ಹಾಗೂ ವಿಟ್ಲ ಪಟ್ಟಣ ಪಂಚಾಯತ್ಗೆ ಒಟ್ಟು ₹10 ಕೋಟಿ ವಿಶೇಷ ಅನುದಾನ ಮಂಜೂರಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಶಾಸಕರು, ಪುತ್ತೂರು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದರು. ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಹಲವು ಒಳರಸ್ತೆಗಳ ಅಭಿವೃದ್ಧಿ ಹಾಗೂ ಒಳಚರಂಡಿ ಸೇರಿದಂತೆ ಮೂಲಸೌಕರ್ಯ ಕಾಮಗಾರಿಗಳು ಬಾಕಿ ಉಳಿದಿದ್ದು, ಅನುದಾನದ ಅಗತ್
Sep 231 min read


ವಂದೇ ಮಾತರಂ ಕಡ್ಡಾಯವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ
ಧಾರ್ಮಿಕ ಅಥವಾ ಆತ್ಮಸಾಕ್ಷಿಯ ಕಾರಣಕ್ಕೆ ‘ವಂದೇ ಮಾತರಂ’ ಹಾಡಲು ನಿರಾಕರಿಸುವವರ ವಿರುದ್ಧ ಯಾವುದೇ ದಂಡನಾತ್ಮಕ നടപಡಿ ಕೈಗೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಸಂಗೀತಗಾರ ಟಿ.ಎಂ. ಕೃಷ್ಣ ಅವರು 'ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ'ಯ ತಿದ್ದುಪಡಿ ಹಾಗೂ ಗೃಹ ಸಚಿವಾಲಯದ ಕಡ್ಡಾಯ ನಿಯಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರಿದ್ದ ತ್ರಿಸದಸ್ಯ ಪೀಠವು ಈ ವಿಚಾರಣೆ ನಡೆಸಿತು. ಕರ್ನಾಟಕದಲ್ಲಿ ವಂದೇ ಮಾತರಂ ಗಾಯನದ ಕಡ್ಡಾಯಗೊಳಿಸುವಿಕೆ ಕುರಿತು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ ನಡೆಯುತ್ತ
Sep 231 min read


ದಕ್ಷಿಣ ಕನ್ನಡ, ಉಡುಪಿ: ಭೋವಿ ಸಮುದಾಯಕ್ಕೆ ‘ಭೋವಿ ವಡ್ಡರ’ ಜಾತಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಲು ಮನವಿ
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಭೋವಿ ಸಮುದಾಯದವರು ‘ಭೋವಿ ವಡ್ಡರ’ ಜಾತಿ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸುವಂತೆ ಸಮಾಜದ ಯುವ ಮುಖಂಡ ಪವನ್ ಕುಮಾರ್ ಶಿರ್ವ ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹಲವು ವರ್ಷಗಳಿಂದ ಭೋವಿ ಸಮುದಾಯದವರಿಗೆ ಜಾತಿ ಪ್ರಮಾಣ ಪತ್ರ ನೀಡುವ ವಿಚಾರದಲ್ಲಿ ಸಮಸ್ಯೆ ಎದುರಾಗಿತ್ತು. ಈ ಕುರಿತು ಸರ್ಕಾರದ ಗಮನಕ್ಕೆ ತರಲಾಗಿದ್ದು, ಭೋವಿ ಸಮುದಾಯದ ಅರ್ಹ ಫಲಾನುಭವಿಗಳಿಗೆ ‘ಭೋವಿ ವಡ್ಡರ’ ಜಾತಿ ಪ್ರಮಾಣ ಪತ್ರ ನೀಡಲು ಇಲಾಖೆ ಸೂಚನೆ ನೀಡಿದೆ ಎಂದು ಪವನ್ ಕುಮಾರ್ ತಿಳಿಸಿದ್ದಾರೆ. ಈ ವಿಚಾರವನ್ನು ಸೆಪ್ಟೆಂಬರ್ 18ರಂದು
Sep 231 min read


ನಕಲಿ ಔಷಧಿ ಜಾಲ ತಡೆಗೆ ಸರ್ಕಾರದ ಬಿಗಿ ಮಾರ್ಗಸೂಚಿ ಪ್ರಕಟ
ಬೆಂಗಳೂರು: ನಕಲಿ ಔಷಧಿಗಳ ಜಾಲಕ್ಕೆ ತಡೆಹಾಕಲು ಮತ್ತು ಔಷಧಿಗಳ ದುರ್ಬಳಕೆ ತಡೆಯಲು ಕೇಂದ್ರ ಔಷಧ ನಿಯಂತ್ರಣ ಇಲಾಖೆ ಮಹತ್ವದ ಮಾರ್ಗಸೂಚಿ ಬಿಡುಗಡೆ ಮಾಡಿದೆ. 'ಡ್ರಗ್ಸ್ ರೂಲ್ಸ್ 1945' ಪ್ರಕಾರ ವೈದ್ಯರ ಚೀಟಿ (ಪ್ರಿಸ್ಕ್ರಿಪ್ಷನ್) ಇಲ್ಲದೆ ಆಂಟಿಬಯೋಟಿಕ್ ಹಾಗೂ ನೋವು ನಿವಾರಕ ಮಾತ್ರೆಗಳನ್ನು ಮಾರಾಟ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ವೈದ್ಯರು ರೋಗಿಯ ವಯಸ್ಸು, ಕಿಡ್ನಿ ಮತ್ತು ಹೃದಯದ ಆರೋಗ್ಯ ಸ್ಥಿತಿ ಹಾಗೂ ಲ್ಯಾಬ್ ವರದಿಗಳನ್ನು ಪರಿಶೀಲಿಸಿ, ಅಗತ್ಯವಿದ್ದರಷ್ಟೇ ಕನಿಷ್ಠ ಅವಧಿಗೆ ಮಾತ್ರ ಮಾತ್ರೆಗಳನ್ನು ಬರೆಯಬೇಕು. ಸ್ವಯಂ ಚಿಕಿತ್ಸೆಗೆ ಮಾತ್ರೆ ನೀಡುವುದನ್ನು ಫಾರ್ಮಾಸಿಸ್ಟ್ಗ
Sep 231 min read


LPG ಗ್ರಾಹಕರೇ ಗಮನಿಸಿ! ಅಕ್ಟೋಬರ್ 1ರಿಂದ ಬದಲಾಗಲಿದೆ ನಿಯಮ; KYC ಮಾಡದಿದ್ದರೆ ಸಬ್ಸಿಡಿ ದರದ ಸಿಲಿಂಡರ್ಗೆ ಬ್ರೇಕ್!
LPG ಗ್ರಾಹಕರಿಗೆ ಹೊಸ ನಿಯಮ: ಅಕ್ಟೋಬರ್ 1ರಿಂದ ಸಬ್ಸಿಡಿ ಪಡೆಯಲು ಬಯೋಮೆಟ್ರಿಕ್ KYC ಕಡ್ಡಾಯ ನವದೆಹಲಿ: ದೇಶದ ಗೃಹಬಳಕೆಯ LPG ಗ್ರಾಹಕರಿಗೆ ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೆ ತರಲು ಮುಂದಾಗಿದೆ. 2026ರ ಅಕ್ಟೋಬರ್ 1ರಿಂದ ಸಬ್ಸಿಡಿ ಸಹಿತ ನಿಯಂತ್ರಿತ ದರದಲ್ಲಿ LPG ಸಿಲಿಂಡರ್ ರಿಫಿಲ್ ಬುಕ್ ಮಾಡಲು ಬಯೋಮೆಟ್ರಿಕ್ ಆಧಾರ್ ದೃಢೀಕರಣ (BAA) ಪೂರ್ಣಗೊಳಿಸಿರುವುದು ಅಗತ್ಯವಾಗಲಿದೆ. ಈಗಾಗಲೇ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಪೂರ್ಣಗೊಳಿಸಿರುವ ಗ್ರಾಹಕರು ಮತ್ತೆ ಯಾವುದೇ ಪ್ರಕ್ರಿಯೆ ಮಾಡುವ ಅಗತ್ಯವಿಲ್ಲ. ಅವರ LPG ರಿಫಿಲ್ ಸೇವೆ ಎಂದಿನಂತೆ ಮುಂದುವರಿಯಲಿದೆ. KYC ಮಾಡದವರಿಗೆ ಏನಾಗಲಿದೆ? ಅಕ್ಟೋ
Sep 231 min read


ಕಸ್ತೂರಿ ರಂಗನ್ ವರದಿ ಜಾರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ತೀವ್ರ ವಿರೋಧ
ಬೆಂಗಳೂರು: ಕಸ್ತೂರಿ ರಂಗನ್ ವರದಿ ಕುರಿತು ನಡೆದ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ , ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ವರದಿಯ ಶಿಫಾರಸುಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಸುಳ್ಯ ಕ್ಷೇತ್ರದ 26 ಗ್ರಾಮಗಳು ಕಸ್ತೂರಿ ರಂಗನ್ ವರದಿಯ ವ್ಯಾಪ್ತಿಗೆ ಒಳಪಡುತ್ತಿದ್ದು, ನಿಯಮಗಳ ಬಿಗಿಯಿಂದಾಗಿ ಕೃಷಿಕರು ಹಾಗೂ ಸ್ಥಳೀಯ ಜನಸಾಮಾನ್ಯರು ಭಯ ಮತ್ತು ಆತಂಕದಿಂದ ಜೀವಿಸುವಂತಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು . ಮೂಲಭೂತ ಸೌಕರ್ಯ, ಮನೆ ನಿರ್ಮಾಣ ಹಾಗೂ ಜಮೀನು ಹಕ್ಕುಗಳಿಗೆ ಈ ವರದಿ ಅಡ್ಡಿಯಾಗಿದೆ ಎಂದರು. ಅರಣ್ಯ, ಕಂದಾಯ ಮತ್ತು ಸರ್ವೇ ಇಲಾಖೆಗಳು ಜಂಟಿಯಾಗಿ ಗ್ರಾಮ ಮಟ್
Sep 221 min read


108 ಆ್ಯಂಬುಲೆನ್ಸ್ ಸೇವೆಗೆ ಮುಷ್ಕರದ ಬಿಸಿ?; ಇಂದು ರಾತ್ರಿ 8ರಿಂದ ಸೇವೆ ಸ್ಥಗಿತದ ಎಚ್ಚರಿಕೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 108 ಆ್ಯಂಬುಲೆನ್ಸ್ ಸಿಬ್ಬಂದಿ ಇಂದು ರಾತ್ರಿ 8 ಗಂಟೆಯಿಂದ ಸೇವೆ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ್ದಾರೆ. ಬೇಡಿಕೆಗಳಿಗೆ ಸ್ಪಂದನೆ ದೊರೆಯದಿದ್ದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಸಿಬ್ಬಂದಿ ಘೋಷಿಸಿದ್ದಾರೆ. ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ 108 ಆ್ಯಂಬುಲೆನ್ಸ್ ಸೇವೆ ಅತ್ಯಂತ ಮಹತ್ವದ್ದಾಗಿರುವ ಹಿನ್ನೆಲೆಯಲ್ಲಿ, ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಸಿಬ್ಬಂದಿಯ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ಆಗ್ರಹಿಸಿದ್ದಾರೆ. “ಸಾರ್ವಜನಿಕರ ಜೀವಕ್ಕೆ ಸಂಬಂಧಿಸಿದ ತುರ್ತು ಸೇವೆ ಸ್ಥಗಿತವಾಗದಂತೆ ರಾಜ್ಯ ಸರ್ಕ
Sep 221 min read


ಕುಕ್ಕೆ ಸುಬ್ರಹ್ಮಣ್ಯ: ₹603 ಕೋಟಿ ಮಾಸ್ಟರ್ ಪ್ಲಾನ್ ಕಾಮಗಾರಿಗೆ ವೇಗ ನೀಡಲು ಅಪರ ಮುಖ್ಯ ಕಾರ್ಯದರ್ಶಿ ಸೂಚನೆ
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಸೆ.20 ರಂದು ಭೇಟಿ ನೀಡಿದ ಕಂದಾಯ ಹಾಗೂ ಮುಜರಾಯಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ, ದೇವಾಲಯದ ಆಡಳಿತ ಮಂಡಳಿ ಮತ್ತು ಮಾಸ್ಟರ್ ಪ್ಲಾನ್ ಸದಸ್ಯರೊಂದಿಗೆ ಮಹತ್ವದ ಸಭೆ ನಡೆಸಿದರು. ಕ್ಯಾಬಿನೆಟ್ ಅನುಮೋದನೆ ಪಡೆದಿರುವ ₹603 ಕೋಟಿ ವೆಚ್ಚದ ಮಾಸ್ಟರ್ ಪ್ಲಾನ್ ಯೋಜನೆಯನ್ನು ಶೀಘ್ರವಾಗಿ ಜಾರಿಗೊಳಿಸುವಂತೆ ಅವರು ಖಡಕ್ ಸೂಚನೆ ನೀಡಿದರು. ಮುಂದಿನ ಹಂತದಲ್ಲಿ ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯ, ಚಿನ್ನ-ಬೆಳ್ಳಿ ಭದ್ರತೆ ಹಾಗೂ ಭಕ್ತರ ದರ್ಶನದ ವೇಳೆ ನೂಕುನುಗ್ಗಲು ತಡೆಯಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕ
Sep 221 min read


ಮಂಗಳೂರು: ₹5 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬಜಪೆ ಇನ್ಸ್ಪೆಕ್ಟರ್
ಮಂಗಳೂರು: ಚೀಟಿಂಗ್ ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಬಜಪೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಪ್ರಕರಣದ ಆರೋಪಿಗಳಿಂದ ಹಣ ಬಿಡುಗಡೆ ಮಾಡಲು ಇನ್ಸ್ಪೆಕ್ಟರ್ ಬಾಲಕೃಷ್ಣ ಒಟ್ಟು ₹25 ಸಾವಿರ ಲಂಚದ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಮಂಗಳವಾರ ಮುಂಗಡವಾಗಿ ₹5 ಸಾವಿರ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಇನ್ಸ್ಪೆಕ್ಟರ್ ಅವರನ್ನು ರೆಡ್ಹ್ಯಾಂಡ್ ಆಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ
Sep 221 min read


ಸೌಜನ್ಯಾ ಕೊಲೆ ಪ್ರಕರಣ: ಮರು ತನಿಖೆಗೆ ಸುಪ್ರೀಂ ಕೋರ್ಟ್ ಸೂಚನೆ, ಎಸ್ಐಟಿ ರಚನೆಗೆ ರಾಜ್ಯ ಸರ್ಕಾರಕ್ಕೆ ಆದೇಶ
ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪ್ರಕರಣದ ಮರು ತನಿಖೆಗೆ ಆದೇಶಿಸಿದೆ. ಸೌಜನ್ಯಾ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ಪೀಠವು, ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಹಿಂದಿನ ಸಿಬಿಐ ತನಿಖೆಯ ವೈಫಲ್ಯ ಹಾಗೂ ಲೋಪದೋಷಗಳ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನೈಜ ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ತನಿಖಾ ಸಂಸ್
Sep 211 min read


ಕೇರಳದಲ್ಲಿ ಮತ್ತೆ ಮಳೆ ಆರ್ಭಟ: ದಿಢೀರ್ ಪ್ರವಾಹ, ಭೂಕುಸಿತಕ್ಕೆ ಐವರು ಬಲಿ
ಕೇರಳದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ದಿಢೀರ್ ಪ್ರವಾಹ ಹಾಗೂ ಭೂಕುಸಿತಗಳಿಗೆ ಭಾನುವಾರ ಕನಿಷ್ಠ ಐವರು ಮೃತಪಟ್ಟಿದ್ದಾರೆ. ಇಬ್ಬರು ನಾಪತ್ತೆಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಮಲಪ್ಪುರಂನ ಕೊಟ್ಟಪುಳ ನದಿಯಲ್ಲಿ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿ ಸ್ನಾನಕ್ಕಿಳಿದಿದ್ದ ಇಬ್ಬರು ಕೊಚ್ಚಿಹೋಗಿ ಮೃತಪಟ್ಟರೆ, ಇನ್ನಿಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕೊಟ್ಟಾಯಂನ ಟೀಕೋಯ್ ಬಳಿ ಸಂಭವಿಸಿದ ಭೂಕುಸಿತಕ್ಕೆ ಚೆನ್ನೈ ಮೂಲದ ಪ್ರವಾಸಿಗ ಬಲಿಯಾಗಿದ್ದಾರೆ. ಇಡುಕ್ಕಿಯ ಕೊಟ್ಟಕಂಬೂರಿನಲ್ಲಿ ರಸ್ತೆಬದಿಯ ಶೆಡ್ ಮೇಲೆ ಬೆಟ್ಟ ಕುಸಿದು ಬಿದ್ದು ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾ
Sep 211 min read


ವಿಧಾನಮಂಡಲ ವಿಶೇಷ ಅಧಿವೇಶನ ಆರಂಭ: ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ತೀವ್ರ ಚರ್ಚೆ
ಬೆಳಗಾವಿ/ಬೆಂಗಳೂರು: ರಾಜ್ಯದಲ್ಲಿ ಎದುರಾಗಿರುವ ಭೀಕರ ಬರ ಪರಿಸ್ಥಿತಿ ಹಾಗೂ ಕಸ್ತೂರಿರಂಗನ್ ವರದಿ ಕರಡು ಅಧಿಸೂಚನೆ ಕುರಿತು ಚರ್ಚಿಸಲು ಇಂದಿನಿಂದ ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ ಅಧಿವೇಶನ ಆರಂಭವಾಗಲಿದೆ. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳಲಿದ್ದು, ಆಡಳಿತ ಹಾಗೂ ವಿಪಕ್ಷಗಳ ನಡುವೆ ಭಾರಿ ಜಿದ್ದಾಜಿದ್ದಿ ನಡೆಯುವ ಸಾಧ್ಯತೆಯಿದೆ. ಕಳೆದ ಅಧಿವೇಶನದಲ್ಲಿ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸಿದ ನಿರಂತರ ಧರಣಿಯಿಂದಾಗಿ ಕಲಾಪ ಮೊಟಕುಗೊಂಡಿತ್ತು. ಹೀಗಾಗಿ, ಈ ವಿಶೇಷ ಅಧಿವೇಶನದಲ್ಲಿ ಬೆಳೆಹಾನಿ, ಕುಡಿಯುವ ನೀರು, ವಿದ್ಯುತ್ ಅಭಾವ ಹಾಗೂ ಜಾನುವಾರುಗಳ ಮೇವಿನ ಅಭಾ
Sep 211 min read


ರಾಜ್ಯದ ಶಾಲೆಗಳಿಗೆ 19 ದಿನಗಳ ಸುದೀರ್ಘ ದಸರಾ ರಜೆ ಘೋಷಣೆ: ಶೈಕ್ಷಣಿಕ ಕ್ಯಾಲೆಂಡರ್ ಪ್ರಕಟ
ಬೆಂಗಳೂರು: ರಾಜ್ಯಾದ್ಯಂತ ಶಾಲಾ ವಿದ್ಯಾರ್ಥಿಗಳಿಗೆ 2026-27ನೇ ಶೈಕ್ಷಣಿಕ ವರ್ಷದಲ್ಲಿ ಬರೋಬ್ಬರಿ 19 ದಿನಗಳ ದಸರಾ ರಜೆ ಸಿಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೊರಡಿಸಿದ ವಾರ್ಷಿಕ ಶೈಕ್ಷಣಿಕ ಕ್ಯಾಲೆಂಡರ್ ತಿಳಿಸಿದೆ. ಈ ರಜೆಯು ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅನ್ವಯಿಸಲಿದೆ. ಅಕ್ಟೋಬರ್ 2 ರ ಗಾಂಧಿ ಜಯಂತಿಯ ಸಾರ್ವತ್ರಿಕ ರಜೆಯ ನಂತರ, ಅಕ್ಟೋಬರ್ 3 ರಿಂದ ಅಧಿಕೃತವಾಗಿ ದಸರಾ ರಜೆ ಪ್ರಾರಂಭವಾಗಿ ಅಕ್ಟೋಬರ್ 21 ರ ವಿಜಯದಶಮಿಯವರೆಗೆ ಮುಂದುವರಿಯಲಿದೆ. ಎರಡನೇ ಶೈಕ್ಷಣಿಕ ಅವಧಿಯು ಅಕ್ಟೋಬರ್ 22, 2026 ರಿಂದ ಪ್ರಾರಂಭವಾಗಿ ಏಪ್ರಿಲ್ 10,
Sep 201 min read


ಮೀನುಗಾರರ ವಹಿವಾಟು ಬಂದ್ಗೆ ಡಿ.ಕೆ.ಶಿವಕುಮಾರ್ ಕೆಂಡ: ಅಧಿಕಾರಿಗಳ ಅಮಾನತಿಗೆ ಸೂಚನೆ
ಮೀನುಗಾರಿಕೆ ಢಕ್ಕೆಗೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೋಟ್ ಏರಿ ಪರಿಶೀಲನೆ ನಡೆಸಿ, ಸ್ಥಳೀಯ ಮೀನುಗಾರರೊಂದಿಗೆ ಸಂವಾದ ನಡೆಸಿದರು. ಆದರೆ, ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಢಕ್ಕೆಯಲ್ಲಿ ವ್ಯಾಪಾರ ವಹಿವಾಟುಗಳನ್ನು ಸಂಪೂರ್ಣ ಬಂದ್ ಮಾಡಿಸಿ, ಖಾಲಿಗೊಳಿಸಲಾಗಿತ್ತು. ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಡಿ.ಕೆ. ಶಿವಕುಮಾರ್, "ಅನೇಕ ಸ್ಥಳೀಯ ಹಾಗೂ ಹೊರರಾಜ್ಯದ ಕಾರ್ಮಿಕರು ಇದನ್ನೇ ನಂಬಿ ಬದುಕುತ್ತಿದ್ದಾರೆ. ನಮ್ಮ ಭೇಟಿಯಿಂದ ಅವರ ದೈನಂದಿನ ಜೀವನ ಮತ್ತು ವ್ಯಾಪಾರಕ್ಕೆ ಅಡ್ಡಿಯಾಗಬಾರದಿತ್ತು" ಎಂದರು. ಈ ಘಟನೆ ಕುರಿತು ತಕ್ಷಣ ತನಿಖೆ ನಡೆಸಿ, ವ್ಯಾಪಾರ ಬಂದ್ ಮ
Sep 191 min read
Archive
bottom of page



