top of page
News Articles
Sathyapatha News Plus


ಬಸ್ಸಿನಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯ ಬಂಧನ
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದ ಮೇಲೆ ಕೊಂಡಗಾಯಿ ನಿವಾಸಿ ಉಮೇಶ್ (53) ಎಂಬಾತನನ್ನು ವಿಟ್ಲ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಆಗಸ್ಟ್ 15 ರಂದು ಸಂತ್ರಸ್ತ ಬಾಲಕನು ಅಳಿಕೆಯಿಂದ ಪುತ್ತೂರಿಗೆ ಬಸ್ಸಿನಲ್ಲಿ ಹೋಗುತ್ತಿದ್ದಾಗ, ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸನ್ನೇರಿದ ಆರೋಪಿಯು ಬಾಲಕನ ಪಕ್ಕದಲ್ಲಿ ಕುಳಿತು ಅನುಚಿತವಾಗಿ ವರ್ತಿಸಿದ್ದನು. ಇಷ್ಟಕ್ಕೇ ನಿಲ್ಲಿಸದ ಆರೋಪಿಯು, ಬಾಲಕನು ಮನೆಗೆ ತೆರಳಿದಾಗ ಆತನನ್ನು ಹಿಂಬಾಲಿಸಿಕೊಂಡು ಮನೆಗೇ ಬಂದು ಲೈಂಗಿಕ ಕಿರು
Aug 191 min read


ಉದ್ಯೋಗ ಮಾಹಿತಿಗಾಗಿ ‘ಯುವಸೇತು’ ಯೋಜನೆ: ಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಖಾಸಗಿ ವಲಯದಲ್ಲಿ ಲಭ್ಯವಿರುವ ಉದ್ಯೋಗಾವಕಾಶಗಳ ಮಾಹಿತಿಯನ್ನು ಯುವಕರಿಗೆ ತಲುಪಿಸುವ ಉದ್ದೇಶದಿಂದ ‘ಯುವಸೇತು’ ಎಂಬ ಹೊಸ ಯೋಜನೆ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ವಿಶ್ವ ಯುವ ಕೌಶಲ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವಜನತೆ ವಿದ್ಯೆಯ ಜೊತೆಗೆ ಕೌಶಲ್ಯವನ್ನೂ ಬೆಳೆಸಿಕೊಳ್ಳಬೇಕು. ಕೌಶಲ್ಯವನ್ನು ಯಾರಿಂದಲೂ ಕದಿಯಲು ಸಾಧ್ಯವಿಲ್ಲ. ಕೌಶಲ್ಯ ಇದ್ದರೆ ಎಲ್ಲಿ ಬೇಕಾದರೂ ಬದುಕು ಕಟ್ಟಿಕೊಳ್ಳಬಹುದು ಎಂದು ಹೇಳಿದರು. ಖಾಸಗಿ ಕ್ಷೇತ್ರದ ಉದ್ಯೋಗದಾತರು ತ
Aug 181 min read


ವಸತಿ ರಹಿತರಿಗೆ ಗುಡ್ನ್ಯೂಸ್: ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶನ ಹಂಚಿಕೆಗೆ ಸರ್ಕಾರ ಸಿದ್ಧತೆ
ಬೆಂಗಳೂರು: ರಾಜ್ಯದ ನಿವೇಶನ ಹಾಗೂ ವಸತಿ ರಹಿತರಿಗೆ ನಿವೇಶನ ಒದಗಿಸುವ ಚುನಾವಣಾ ಪ್ರಣಾಳಿಕೆಯ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಸರ್ಕಾರ ಉದ್ದೇಶಿಸಿದ್ದು, ನಿವೇಶನಗಳ ರಚನೆಗೆ ಅಗತ್ಯ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಸೂಚಿಸಿದೆ. ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿ ಮೂಲಕ ನಿರ್ದೇಶನ ನೀಡಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ 30×40, ನಗರದಲ್ಲಿ 20×30 ಅಡಿ ನಿವೇಶನ ಸರ್ಕಾರದ
Aug 181 min read


Fancy Number Auction: ವಾಹನಗಳ ಫ್ಯಾನ್ಸಿ ನಂಬರ್ ಹರಾಜಿನಿಂದ ಸಾರಿಗೆ ಇಲಾಖೆಗೆ ₹118.14 ಕೋಟಿ ಆದಾಯ
ಬೆಂಗಳೂರು: ವಾಹನಗಳ ನೋಂದಣಿ ಸಂಖ್ಯೆ ಇದೀಗ ಕೇವಲ ವಾಹನದ ಗುರುತಾಗಿ ಉಳಿದಿಲ್ಲ. ಪ್ರತಿಷ್ಠೆ, ಅದೃಷ್ಟ ಹಾಗೂ ವೈಯಕ್ತಿಕ ಗುರುತಿನ ಸಂಕೇತವಾಗಿಯೂ ಫ್ಯಾನ್ಸಿ ನಂಬರ್ಗಳಿಗೆ ಬೇಡಿಕೆ ಹೆಚ್ಚಾಗಿದೆ. ರಾಜಕಾರಣಿಗಳು, ಚಲನಚಿತ್ರರಂಗದ ಗಣ್ಯರು, ಉದ್ಯಮಿಗಳು ಹಾಗೂ ಐಷಾರಾಮಿ ಕಾರು ಮಾಲೀಕರು ತಮ್ಮಿಷ್ಟದ ನೋಂದಣಿ ಸಂಖ್ಯೆ ಪಡೆಯಲು ಪೈಪೋಟಿ ನಡೆಸುತ್ತಿರುವ ಪರಿಣಾಮ ಸಾರಿಗೆ ಇಲಾಖೆಗೆ ಭರ್ಜರಿ ಆದಾಯ ಹರಿದುಬಂದಿದೆ. 2025-26ನೇ ಸಾಲಿನಲ್ಲಿ ಪ್ರೀಮಿಯಂ ನೋಂದಣಿ ಸಂಖ್ಯೆಗಳ ಇ-ಹರಾಜಿನ ಮೂಲಕ ಸಾರಿಗೆ ಇಲಾಖೆ ₹118.14 ಕೋಟಿ ತೆರಿಗೆಯೇತರ ಆದಾಯ ಗಳಿಸಿದೆ. ಕಳೆದ ಐದು ವರ್ಷಗಳಲ್ಲೇ ಇದು ಗರಿಷ್ಠ ಆದಾಯವಾಗಿದೆ. ಐ
Aug 181 min read


ಚಾಮರಾಜನಗರದಲ್ಲಿ ಗುಂಡಿನ ಸದ್ದು: ಅರಣ್ಯ ಸಿಬ್ಬಂದಿ–ಶಂಕಿತ ಬೇಟೆಗಾರರ ನಡುವೆ ಗುಂಡಿನ ಚಕಮಕಿ; ಮೂವರು ಸಾವು, DRFO ಕಚೇರಿ ಧ್ವಂಸ
ಚಾಮರಾಜನಗರ, ಆ.15: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಹನೂರು ತಾಲೂಕಿನ ಶಾಗ್ಯ ಸಮೀಪದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಮತ್ತು ಶಂಕಿತ ಬೇಟೆಗಾರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಘಟನೆಯ ಬಳಿಕ ಮೃತರ ಸಂಬಂಧಿಕರು ಹಾಗೂ ಗ್ರಾಮಸ್ಥರು ಆಕ್ರೋಶಗೊಂಡು ಶಾಗ್ಯದಲ್ಲಿರುವ DRFO ಕಚೇರಿಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಇದರಿಂದ ಪ್ರದೇಶದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಮೃತರನ್ನು ಹನೂರು ತಾಲೂಕಿನ ತೋಮಿಯರ್ಪಾಳ್ಯದ ನಿವಾಸಿಗಳಾದ ಕುಮಾರ್, ಆಂಥೋಣಿಸ್ವಾಮಿ ಹಾಗೂ ಪೀಟರ್ ಎಂದು ಗುರುತಿಸಲ
Aug 152 min read


ಹಾಸ್ಟೆಲ್–ಪಿಜಿಗಳ ಕಳಪೆ ಆಹಾರಕ್ಕೆ ಬ್ರೇಕ್: ಕಠಿಣ ಕ್ರಮಕ್ಕೆ ಯು.ಟಿ. ಖಾದರ್ ಖಡಕ್ ವಾರ್ನಿಂಗ್!
ಬೆಂಗಳೂರು, ಆ.13: ಹೋಟೆಲ್ಗಳಲ್ಲಿ ಆಹಾರದ ಗುಣಮಟ್ಟ ಹಾಗೂ ಸ್ವಚ್ಛತೆ ಪರಿಶೀಲನೆ ನಡೆಯುತ್ತಿರುವ ಬೆನ್ನಲ್ಲೇ, ರಾಜ್ಯದ ಹಾಸ್ಟೆಲ್ಗಳು, ಪಿಜಿಗಳು ಹಾಗೂ ಕ್ಯಾಂಟೀನ್ಗಳಲ್ಲಿನ ಆಹಾರ ವ್ಯವಸ್ಥೆಯ ಮೇಲೂ ಆರೋಗ್ಯ ಇಲಾಖೆ ನಿಗಾ ವಹಿಸಲು ಮುಂದಾಗಿದೆ. ರಾಜ್ಯದ ವಿವಿಧೆಡೆ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ, ಖಾಸಗಿ ಹಾಗೂ ಸಹಕಾರಿ ಹಾಸ್ಟೆಲ್ಗಳಲ್ಲಿ ಆಹಾರ ತಯಾರಿಕೆ ಮತ್ತು ಪೂರೈಕೆ ವ್ಯವಸ್ಥೆಯನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆಹಾರದ ಗುಣಮಟ್ಟ, ಅಡುಗೆಮನೆಯ ಸ್ವಚ್ಛತೆ ಹಾಗೂ ಆಹಾರ ಪದಾರ್ಥಗಳ ಸಂಗ್ರಹಣೆ ಸೇರಿದಂತೆ ಹಲವು ಅಂಶಗಳನ್ನು ತಪಾಸಣೆ ಮಾಡಲಾಗುತ್ತದೆ. ಪಿಜಿಗಳಲ್ಲಿಯೂ
Aug 131 min read


ಶಿರಾಡಿಘಾಟ್ ಮಾರ್ಗದಲ್ಲಿ ವಂದೇ ಭಾರತ್ ರೈಲಿನ ಯಶಸ್ವಿ ಪ್ರಾಯೋಗಿಕ ಸಂಚಾರ
ಬೆಂಗಳೂರು–ಮಂಗಳೂರು ಸಂಪರ್ಕಕ್ಕೆ ಹೊಸ ನಿರೀಕ್ಷೆ; ಸಕಲೇಶಪುರ–ಕುಕ್ಕೆ ಸುಬ್ರಹ್ಮಣ್ಯ ನಡುವೆ ಟ್ರಯಲ್ ರನ್ ಸಕಲೇಶಪುರ: ಬೆಂಗಳೂರು ಮತ್ತು ಮಂಗಳೂರು ನಡುವಿನ ವೇಗದ ರೈಲು ಸಂಪರ್ಕದ ನಿರೀಕ್ಷೆಯಲ್ಲಿದ್ದ ಪ್ರಯಾಣಿಕರಿಗೆ ಮಹತ್ವದ ಬೆಳವಣಿಗೆ ನಡೆದಿದೆ. ಅತ್ಯಾಧುನಿಕ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರವು ಸಕಲೇಶಪುರದಿಂದ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯವರೆಗೆ ಯಶಸ್ವಿಯಾಗಿ ನಡೆದಿದೆ. ಅತ್ಯಂತ ಕಠಿಣ ಹಾಗೂ ತಿರುವುಗಳಿಂದ ಕೂಡಿರುವ ಶಿರಾಡಿಘಾಟ್ ರೈಲು ಮಾರ್ಗದಲ್ಲಿ ವಂದೇ ಭಾರತ್ ರೈಲು ಸಂಚರಿಸಿರುವುದು ಈ ಭಾಗದ ರೈಲು ಸಂಪರ್ಕದ ದೃಷ್ಟಿಯಿಂದ ಮಹತ್ವದ ಬೆಳವಣಿಗೆಯಾಗಿದೆ. ಟ್
Aug 121 min read


ಆಗಸ್ಟ್ 16ರೊಳಗೆ LPG ಇ-ಕೆವೈಸಿ ಕಡ್ಡಾಯ: ಸಬ್ಸಿಡಿ ಪಡೆಯಲು ಗ್ರಾಹಕರಿಗೆ ಸೂಚನೆ
ನವದೆಹಲಿ: ದೇಶದ ತೈಲ ಮಾರುಕಟ್ಟೆ ಕಂಪೆನಿಗಳು (OMCs) ಗೃಹ ಬಳಕೆಯ LPG ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದ್ದು, ಆಗಸ್ಟ್ 16ರೊಳಗೆ ಇ-ಕೆವೈಸಿ (E-KYC) ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪೂರ್ಣಗೊಳಿಸುವಂತೆ ತಿಳಿಸಿವೆ. ಕೇಂದ್ರ ಸರ್ಕಾರದಿಂದ ಸಿಗುವ LPG ಸಬ್ಸಿಡಿಯನ್ನು ಮುಂದುವರಿಸಿಕೊಂಡು ಹೋಗಲು ಈ ಪ್ರಕ್ರಿಯೆ ಅವಶ್ಯಕ ಎಂದು ತಿಳಿಸಲಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOCL), ಭಾರತ್ ಗ್ಯಾಸ್ ಹಾಗೂ ಹಿಂದೂಸ್ಥಾನ್ ಪೆಟ್ರೋಲಿಯಂ ಸಂಸ್ಥೆಗಳು ಈಗಾಗಲೇ ತಮ್ಮ ಗ್ರಾಹಕರಿಗೆ SMS ಹಾಗೂ ಇತರೆ ಮಾಧ್ಯಮಗಳ ಮೂಲಕ ಮಾಹಿತಿ ನೀಡಿವೆ. ನಿಗದಿತ ದಿನಾಂಕದೊಳಗೆ ಇ-ಕೆವೈಸಿ ಪೂರ್ಣಗೊಳಿಸದಿದ್ದಲ್ಲಿ LPG
Aug 101 min read


ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಯುಪಿಸಿಎಲ್ ಗುತ್ತಿಗೆ ವೈಮನಸ್ಸೇ ಕೊಲೆಗೆ ಕಾರಣ? ಸುಪಾರಿ ಕಿಂಗ್ ಪತ್ತೆಗೆ ಜಾಲ!
ಉಡುಪಿಯ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜ ಅವರ ಬರ್ಬರ ಹತ್ಯೆ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಉತ್ತರ ಭಾರತದ ವ್ಯಕ್ತಿಯೊಬ್ಬ ಹತ್ಯೆಗೆ ಸುಪಾರಿ ನೀಡಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಯುಪಿಸಿಎಲ್ ಗುತ್ತಿಗೆಗೆ ಸಂಬಂಧಿಸಿದಂತೆ ಉಂಟಾದ ಆರ್ಥಿಕ ವೈಮನಸ್ಸೇ ಈ ಕೊಲೆಗೆ ಪ್ರಮುಖ ಕಾರಣವಾಗಿರಬಹುದು ಎಂಬ ಬಲವಾದ ಅನುಮಾನ ವ್ಯಕ್ತವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರು, ಡೇವಿಡ್ ಹಾಗೂ ಮತ್ತೊಬ್ಬ ಗುತ್ತಿಗೆದಾರನ ನಡುವೆ ಕೋಟಿಗಟ್ಟಲೆ ಮೌಲ್ಯದ ಗುತ್ತಿಗೆ ವಿಚಾರದಲ್ಲಿ ತೀವ್ರ ವೈಮನಸ್ಸು ಉಂಟಾಗಿತ್
Aug 91 min read


ಭೂಮಾಪಕರ 750 ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಭೂ ದಾಖಲೆಗಳ ಇಲಾಖೆಯಲ್ಲಿ 750 ಭೂಮಾಪಕ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಗಡುವನ್ನು ಆಗಸ್ಟ್ 20 ರವರೆಗೆ ವಿಸ್ತರಿಸಲಾಗಿದ್ದು, ಆಯ್ಕೆಯಾದವರಿಗೆ 76,100 ರೂ.ವರೆಗೆ ವೇತನ ದೊರೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಆರಂಭಿಕ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಆಗಸ್ಟ್ 7 ಕೊನೆಯ ದಿನವಾಗಿತ್ತು. ಇದೀಗ ಅಭ್ಯರ್ಥಿಗಳಿಗೆ ಹೆಚ್ಚುವರಿ ಅವಕಾಶ ನೀಡಲು ಅರ್ಜಿ ಸಲ್ಲಿಕೆ ಗಡುವನ್ನು ಆಗಸ್ಟ್ 20 ರವರೆಗೆ ವಿಸ್ತರಿಸಲಾಗಿದೆ. *ಒಟ್ಟು 750 ಭೂಮಾಪಕ ಹುದ್ದೆಗಳು:* KEA ನೇಮಕಾತಿಯಲ್ಲಿ ಒ
Aug 82 min read


ಹಣಕಾಸು ವೈಷಮ್ಯಕ್ಕೆ ಕಾಂಗ್ರೆಸ್ ಮುಖಂಡನ ಹತ್ಯೆ: ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು!
ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜಾ ಅವರ ಹಾಡಹಗಲಿನ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಮೂವರು ಶಾರ್ಪ್ ಶೂಟರ್ಗಳನ್ನು ಬಂಧಿಸಿದ್ದಾರೆ. ಹಣಕಾಸಿನ ವೈಷಮ್ಯದ ಹಿನ್ನೆಲೆಯಲ್ಲಿ ಉತ್ತರ ಭಾರತದ ಸುಪಾರಿ ಕಿಲ್ಲರ್ಗಳಿಗೆ ಗುತ್ತಿಗೆ ನೀಡಿ ಈ ಕೊಲೆ ಮಾಡಿಸಲಾಗಿದೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಗಳನ್ನು ಉತ್ತರ ಪ್ರದೇಶ, ಜಾರ್ಖಂಡ್ ಹಾಗೂ ಬಿಹಾರ ಮೂಲದ ಶಾರ್ಪ್ ಶೂಟರ್ಗಳು ಎಂದು ಗುರುತಿಸಲಾಗಿದೆ. ಹತ್ಯೆಯ ನಂತರ ಪರಾರಿಯಾಗಲು ಯತ್ನಿಸುತ್ತಿದ್ದ ಆ
Aug 81 min read


ಭಾರತದ ಅಧಿಕೃತ ನಕ್ಷೆಗಳಲ್ಲಿ ಅರುಣಾಚಲ ಪ್ರದೇಶದ 27 ಸ್ಥಳಗಳ ಹೆಸರು: ಚೀನಾಗೆ ಭಾರತದ ತಕ್ಕ ತಿರುಗೇಟು
ಅರುಣಾಚಲ ಪ್ರದೇಶದ 27 ಪ್ರಮುಖ ಸ್ಥಳಗಳನ್ನು ಸರ್ವೇ ಆಫ್ ಇಂಡಿಯಾದ ಅಧಿಕೃತ ನಕ್ಷೆಗಳಲ್ಲಿ ಔಪಚಾರಿಕವಾಗಿ ಗುರುತಿಸುವ ಮೂಲಕ ಭಾರತ ಸರ್ಕಾರವು ಚೀನಾಗೆ ಸೂಕ್ತ ಪ್ರತ್ಯುತ್ತರ ನೀಡಿದೆ. ಗಡಿ ಪ್ರದೇಶದ ಸ್ಥಳಗಳ ಹೆಸರುಗಳನ್ನು ಪದೇ ಪದೆ ಏಕಪಕ್ಷೀಯವಾಗಿ ಬದಲಾಯಿಸಲು ಯತ್ನಿಸುತ್ತಿದ್ದ ಬೀಜಿಂಗ್ನ ನಡೆಯನ್ನು ಭಾರತ ಇದರಿಂದ ವಿಫಲಗೊಳಿಸಿದೆ. ಅರುಣಾಚಲ ಪ್ರದೇಶ ಸರ್ಕಾರ ಹಾಗೂ ಕೇಂದ್ರ ಗೃಹ ಸಚಿವಾಲಯದ ಸಮಾಲೋಚನೆಯೊಂದಿಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ. ಚೀನಾ 'ಝಂಗ್ನಾನ್' ಎಂದು ಪ್ರತಿಪಾದಿಸುವ ಈ ಪ್ರದೇಶಗಳ ಭೌಗೋಳಿಕ ಸ್ಥಳಗಳಿಗೆ ನಿಖರವಾದ ಭಾರತೀಯ ಗುರುತನ್ನು ನೀಡುವುದು ಹಾಗೂ ಸಾರ್ವಜನಿಕರ
Aug 81 min read


ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ: ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಆತಂಕ
ಕೌಲಾಲಂಪುರದಿಂದ ಕೊಚ್ಚಿಗೆ ಆಗಮಿಸುತ್ತಿದ್ದ ಬಾಟಿಕ್ ಏರ್ ವಿಮಾನದಲ್ಲಿ ಪ್ರಯಾಣಿಕನೊಬ್ಬ ತುರ್ತು ನಿರ್ಗಮನ ದ್ವಾರ ತೆರೆಯಲು ಯತ್ನಿಸಿದ ಭೀಕರ ಘಟನೆ ನಡೆದಿದೆ. ವಿಮಾನವು ಲ್ಯಾಂಡಿಂಗ್ ಆಗುವ ಕೆಲವೇ ನಿಮಿಷಗಳ ಮೊದಲು ನಡೆದ ಈ ಕೃತ್ಯದಿಂದಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ತೀವ್ರ ಭಯಭೀತರಾಗಿದ್ದರು. ಆರೋಪಿಯನ್ನು ಕೇರಳದ ಪಾಲಕ್ಕಾಡ್ ಜಿಲ್ಲೆಯ ಕೂತನಾಡ್ ನಿವಾಸಿ, 34 ವರ್ಷದ ಜಮ್ಶೀರ್ ಅಥಾನಿಕ್ಕಲ್ ಎಂದು ಗುರುತಿಸಲಾಗಿದೆ. ತುರ್ತು ಬಾಗಿಲನ್ನು ತೆರೆಯಲು ಯತ್ನಿಸಿದ ಈತನನ್ನು ತಡೆಯಲು ಬಂದ ಕ್ಯಾಬಿನ್ ಸಿಬ್ಬಂದಿ ಹಾಗೂ ಸಹ ಪ್ರಯಾಣಿಕರಿಗೆ ಈತ ಬೆದರಿಕೆ ಹಾಕಿದ್ದಾನೆ. ಬಳಿಕ ಎಲ್ಲರೂ ಸೇರಿ ಆತನನ್ನು
Aug 81 min read


ಬಿ.ಸಿ.ರೋಡ್ನಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಯಾಗಿ ಸ್ಕೂಟರ್ ಸಹಸವಾರ ಸಾವು, ಸವಾರನಿಗೆ ತೀವ್ರ ಗಾಯ
ಬಂಟ್ವಾಳದ ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸಹಸವಾರ ಯಶ್ವಂತ್ ಕುಲಾಲ್ ಮೃತಪಟ್ಟಿದ್ದು, ಸವಾರ ದಯಾನಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲ್ಲಡ್ಕ ಕಡೆಯಿಂದ ಲೊರೆ ಕಡೆಗೆ ಅತಿವೇಗ ಮತ್ತು ಅಜಾಗರೂಕತೆಯಿಂದ ಧಾವಿಸಿ ಬಂದ ಟಿಪ್ಪರ್ ಲಾರಿಯು, ಮಂಗಳೂರಿನಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಸ್ಕೂಟರ್ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಟರ್ನಲ್ಲಿದ್ದ ಇಬ್ಬರೂ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದರು. ಗಾಯಾಳುಗಳನ್ನು ತಕ್ಷಣವೇ ಮಂಗಳೂರಿನ ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿ
Aug 71 min read


ಚಿನ್ನಪ್ರಿಯರಿಗೆ ಶಾಕ್; ಮತ್ತೆ ಗಗನಕ್ಕೇರಿದ ಬಂಗಾರದ ಬೆಲೆ!
ಇಂದಿನ ಚಿನ್ನದ ಮಾರುಕಟ್ಟೆಯಲ್ಲಿ ಭರ್ಜರಿ ಏರಿಕೆ ಕಂಡುಬಂದಿದ್ದು, ಬಂಗಾರದ ದರ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಜಾಗತಿಕ ಮಾರುಕಟ್ಟೆಯ ಏರಿಳಿತಗಳು ಮತ್ತು ಹೂಡಿಕೆದಾರರಿಂದ ಹೆಚ್ಚುತ್ತಿರುವ ಬೇಡಿಕೆಯು ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ದಿಢೀರ್ ಹೆಚ್ಚಾಗಲು ಪ್ರಮುಖ ಕಾರಣವಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ ಪ್ರತಿ ಗ್ರಾಮ್ಗೆ ಅಂದಾಜು ₹13,442 ತಲುಪಿದ್ದರೆ, 10 ಗ್ರಾಮ್ ಚಿನ್ನದ ಬೆಲೆ ₹1,34,420 ರ ಆಸುಪಾಸಿನಲ್ಲಿದೆ. ಅದೇ ರೀತಿ, ಅತ್ಯಂತ ಶುದ್ಧವಾದ 24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ ಪ್ರತಿ ಗ್ರಾಮ್ಗೆ ಅಂದಾಜು ₹14,674 ಕ್ಕ
Aug 61 min read


ವಾಲಿಬಾಲ್ ಆಡುವಾಗ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು
ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ಬುಧವಾರ ಸಂಜೆ ಶೋಕದ ವಾತಾವರಣ ಆವರಿಸಿದೆ. ಸ್ನೇಹಿತರೊಂದಿಗೆ ಮೈದಾನದಲ್ಲಿ ವಾಲಿಬಾಲ್ ಆಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಲಿಖಿತ್ ಅಮೀನ್ (15) ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಈತ ಸ್ಥಳೀಯ ಮಾಧವ ಅಮೀನ್ ಅವರ ಪುತ್ರ. ಆಟದ ಮಧ್ಯೆ ಕುಸಿದು ಬಿದ್ದ ಬಾಲಕನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ. ಸೂರಿಂಜೆ ಕೋಟೆ ಬೋಳ್ಳಾರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಈತನ ಅಕಾಲಿಕ ಸಾವು ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ದುಃಖ ಸೃಷ್ಟಿಸಿದೆ.
Aug 61 min read


ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ‘ಋತುತಾರೆ’ ಯೋಜನೆ: ನಟಿ ರಮ್ಯಾ ಬ್ರ್ಯಾಂಡ್ ಅಂಬಾಸಿಡರ್
ಬೆಂಗಳೂರು: ಮಹಿಳೆಯರ ಆರೋಗ್ಯ ಮತ್ತು ಆರೋಗ್ಯ ಜಾಗೃತಿಗೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಋತುತಾರೆ’ ಎಂಬ ಹೊಸ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯ ಕುರಿತು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಮಾಹಿತಿ ನೀಡಿದರು. ಸಚಿವ ಯು.ಟಿ. ಖಾದರ್ ಮಾತನಾಡಿ, ಮಹಿಳೆಯರ ಆರೋಗ್ಯ ಸಂಬಂಧಿತ ಸಮಸ್ಯೆಗಳ ಕುರಿತು ಸಮಗ್ರವಾಗಿ ಕಾರ್ಯನಿರ್ವಹಿಸುವ ಉದ್ದೇಶದಿಂದ ‘ಋತುತಾರೆ’ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು. ಈ ಯೋಜನೆಗೆ ಮಹಿಳಾ ತಜ್ಞೆ ಡಾ. ಜೋಸ್ನಾ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿದ್ದು, ಮಹಿಳೆಯರ ಆರೋಗ್ಯ, ಮಾನಸಿಕ ಒತ್ತಡ ಸೇ
Aug 41 min read


ಬಿಳಿನೆಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು
ಕೆಲ ದಿನಗಳ ಹಿಂದೆ ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಡೆದ ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಬಿಳಿನೆಲೆ ಗ್ರಾಮದ ನಿವಾಸಿಗಳಾದ ಸುನಿಲ್, ಮನೋಜ್ ಮತ್ತು ಮನ್ವಿತ್ ಜಾಮೀನು ಪಡೆದ ಆರೋಪಿಗಳಾಗಿದ್ದಾರೆ. ಘಟನೆಯ ವಿವರ: ಜುಲೈ 16ರಂದು ಸಂಜೆ ಸುಮಾರು 7.30ರ ವೇಳೆಗೆ ಬಿಳಿನೆಲೆಯ ಪೌಲ್ಟ್ರಿ ಫಾರ್ಮ್ ಒಂದರ ಹತ್ತಿರ ಅವಿನಾಶ್ ಎಂಬವರು ಸತೀಶ್ ಮತ್ತು ಸುಬ್ರಾಯ ಅವರೊಂದಿಗೆ ಮಾತನಾಡುತ್ತಾ ನಿಂತಿದ್ದರು. ಈ ವೇಳೆ ಅಲ್ಲಿಗೆ ಬಂದ ಸುನಿಲ್, ಮ
Aug 41 min read


ಸಿಪಿಎಸ್ ಪರೀಕ್ಷೆ: ಕೆಇಎಯಿಂದ ತಾತ್ಕಾಲಿಕ ಕೀ ಉತ್ತರ ಪ್ರಕಟ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಆಗಸ್ಟ್ 2 ರಂದು ರಾಜ್ಯಾದ್ಯಂತ ಯಶಸ್ವಿಯಾಗಿ ನಡೆಸಿದ್ದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (ಸಿಪಿಸಿ) ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ತಮ್ಮ ಉತ್ತರಗಳನ್ನು ಪರಿಶೀಲಿಸಿಕೊಳ್ಳಬಹುದು. ಕೆಇಎ ಬಿಡುಗಡೆ ಮಾಡಿರುವ ಕೀ ಉತ್ತರಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಅವುಗಳನ್ನು ಸಲ್ಲಿಸಲು ಆಸಕ್ತ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 6 ರ ಬೆಳಿಗ್ಗೆ 10.30 ರವರೆಗೆ ಕಾಲಾವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಹೆಚ್ಚಿನ
Aug 41 min read


ಕೇರಳದಲ್ಲಿ ಭಾರಿ ಮಳೆ, ಪ್ರವಾಹ ಹಾಗೂ ಭೂಕುಸಿತ: 15 ಮಂದಿ ಬಲಿ, ಹಲವರು ನಾಪತ್ತೆ
ದೇವರನಾಡು ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸಾಲು ಸಾಲು ಅನಾಹುತಗಳು ಸಂಭವಿಸಿವೆ. ಭೀಕರ ಪ್ರವಾಹ ಹಾಗೂ ಭೂಕುಸಿತದ ಪರಿಣಾಮವಾಗಿ ಈವರೆಗೆ 15 ಜನರು ಪ್ರಾಣ ಕಳೆದುಕೊಂಡಿದ್ದು, 7 ಜನರು ನಾಪತ್ತೆಯಾಗಿದ್ದಾರೆ. ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ತಕ್ಷಣವೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಒಟ್ಟು 316 ಪರಿಹಾರ ಶಿಬಿರಗಳನ್ನು ತೆರೆದು 11,018 ಕ್ಕೂ ಹೆಚ್ಚು ಜನರಿಗೆ ಸುರಕ್ಷಿತ ಆಶ್ರಯ ಕಲ್ಪಿಸಿದೆ. ಮಳೆ ಅಬ್ಬರಕ್ಕೆ ರಾಜ್ಯದ ವಿವಿಧ ಜಿಲ್ಲೆಗಳು ತೀವ್ರವಾಗಿ ತತ್ತರಿಸಿವೆ. ಕೊಟ್ಟಾಯಂ ಜಿಲ್ಲೆಯಲ್ಲಿ ಮಗುವೂ
Aug 41 min read
Archive
bottom of page



