top of page
News Articles
Sathyapatha News Plus


ಠಾಣೆಯಲ್ಲಿ ಹೆತ್ತವರ ಕಣ್ಣೀರಿಗೂ ಕರಗದ ಮಗಳು! 40ರ ಧರ್ಮಗುರುವಿನ ಜೊತೆ ಹೋಗುವುದಾಗಿ ಯುವತಿ ಪಟ್ಟು…
ಠಾಣೆಯಲ್ಲೇ ಹೆತ್ತವರ ಕಣ್ಣೀರು… ಕುಮಟಾ–ಮಂಗಳೂರು ಪ್ರಕರಣ ಭಾರೀ ಚರ್ಚೆ ಮಂಗಳೂರು/ಕುಮಟಾ: ಧರ್ಮ ಶಿಕ್ಷಣ ನೀಡುವ ಮದರಸಾದಲ್ಲಿ ಧರ್ಮಗುರುವಾಗಿ ಸೇವೆ ಸಲ್ಲಿಸುತ್ತಿದ್ದ ವಿವಾಹಿತ ವ್ಯಕ್ತಿಯೊಬ್ಬರು, ತನಗಿಂತ ಕಿರಿಯ ಯುವತಿಯೊಂದಿಗೆ ತೆರಳಿರುವ ಆರೋಪದ ಪ್ರಕರಣ ಇದೀಗ ಉತ್ತರ ಕನ್ನಡದ ಕುಮಟಾ ಹಾಗೂ ಮಂಗಳೂರಿನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕುಮಟಾ ತಾಲೂಕಿನ ಬೆಟಗುಳಿ ನಿವಾಸಿ ದಾವುದ್ ಖಾಸಿಂ ಅವರ 22 ವರ್ಷದ ಪುತ್ರಿ ಸ್ಥಳೀಯ ಮದರಸಾದಲ್ಲಿ ಧರ್ಮ ಶಿಕ್ಷಣ ಪಡೆಯುತ್ತಿದ್ದರು. ಇದೇ ಮದರಸಾದಲ್ಲಿ ಮಂಗಳೂರಿನ ಅಸೈಗೋಳಿ ನಿವಾಸಿ, 40 ವರ್ಷದ ಅಶ್ರಫ್ ಸಅದಿ ಧರ್ಮಗುರುವಾಗಿ ಸೇವೆ ಸಲ್ಲಿಸುತ್ತಿದ್ದರು ಎ
1 day ago1 min read


ದೇರಳಕಟ್ಟೆ ಕಾಲೇಜಿನಲ್ಲಿ ರ್ಯಾಗಿಂಗ್ ಆರೋಪ: 7 ವಿದ್ಯಾರ್ಥಿಗಳಿಗೆ ಬೆದರಿಕೆ, ಹಿರಿಯರ ವಿರುದ್ಧ ಕೇಸ್!
ಉಳ್ಳಾಲ: ದೇರಳಕಟ್ಟೆಯ ಖಾಸಗಿ ಪದವಿ ಕಾಲೇಜೊಂದರಲ್ಲಿ ಏಳು ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿ, ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತ ವಿದ್ಯಾರ್ಥಿಯೊಬ್ಬರು ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಹಾಡು ಹಾಡಿಸಿ ವಿಡಿಯೋ ರೆಕಾರ್ಡ್? ದೂರಿನ ಪ್ರಕಾರ, ಅಕ್ಟೋಬರ್ 2ರಂದು ಕಾಲೇಜಿನ ಹೊರಗೆ ತೆರಳಿದ್ದ ವೇಳೆ ದೂರುದಾರ ವಿದ್ಯಾರ್ಥಿ ಹಾಗೂ ಸ್ನೇಹಿತರಿಗೆ ಹಿರಿಯ ವಿದ್ಯಾರ್ಥಿಗಳಾದ ಅಶಬ್ ಮತ್ತು ಅಸ್ಪಾಕ್ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಅಕ್ಟೋಬರ್ 15ರಂದು ದೂರುದಾರ ಹಾಗೂ
2 days ago1 min read


ಆಟವಾಡುತ್ತಿದ್ದಾಗ ಕುತ್ತಿಗೆಗೆ ಸಿಲುಕಿದ ಹಗ್ಗ; 9 ವರ್ಷದ ಬಾಲಕ ದಾರುಣ ಸಾವು
ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ಸಮೀಪದ ಕೇಂತಲೆ ಮನೆಯಲ್ಲಿ ನಡೆದ ದುರ್ಘಟನೆಯೊಂದರಲ್ಲಿ 9 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಕೇಂತಲೆ ನಿವಾಸಿ ಆನಂದ ಪೂಜಾರಿ ಅವರ ಪುತ್ರ ಅಮೃತ್ ಎ. ಪೂಜಾರಿ (9) ಮೃತಪಟ್ಟ ಬಾಲಕ. ಅ.25ರ ರಾತ್ರಿ ಮನೆಯ ಎದುರಿನ ಹಾಲ್ನಲ್ಲಿ ಅಮೃತ್ ಒಬ್ಬನೇ ಆಟವಾಡುತ್ತಿದ್ದ ಎನ್ನಲಾಗಿದೆ. ಈ ವೇಳೆ ಕಿಟಕಿಯಲ್ಲಿ ಮೊದಲೇ ಸಿಕ್ಕಿಸಲಾಗಿದ್ದ ಹಗ್ಗವೊಂದು ಆಕಸ್ಮಿಕವಾಗಿ ಬಾಲಕನ ಕುತ್ತಿಗೆಗೆ ಸಿಲುಕಿಕೊಂಡಿದೆ. ಪರಿಣಾಮ ಉಸಿರುಗಟ್ಟಿ ಬಾಲಕ ಅಸ್ವಸ್ಥಗೊಂಡಿದ್ದಾನೆ. ಅಮೃತ್ ಮಾತನಾಡದೆ ಇರುವುದನ್ನು ಗಮನಿಸಿದ ಆತನ ಸಹೋದರಿ ಪ್ರಾರ್ಥನಾ, ಆತಂಕದಿಂದ ಜೋರಾಗಿ ಕೂಗ
4 days ago1 min read


₹4,200ರ ಟಿಕೆಟ್ ₹12 ಸಾವಿರಕ್ಕೆ? ಕುಕ್ಕೆ ಕ್ಷೇತ್ರದಲ್ಲಿ ಅಧಿಕಾರಿ ವರ್ಗದವರ ವಿರುದ್ಧ ಆರೋಪ!
ಸುಬ್ರಹ್ಮಣ್ಯ: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆಯ ಟಿಕೆಟ್ ಹಾಗೂ ರಶೀದಿ ವಿಚಾರ ಇದೀಗ ಚರ್ಚೆಗೆ ಗ್ರಾಸವಾಗಿದೆ. ನಿಗದಿತ ದರಕ್ಕಿಂತ ಹೆಚ್ಚುವರಿ ಹಣ ಪಡೆದು ಸೇವೆ ಮಾಡಿಸಿಕೊಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಸರ್ಪಸಂಸ್ಕಾರ ಸೇವೆಗೆ ದಿನಾಂಕ ಹಾಗೂ ಸ್ಪಾಟ್ಗಳು ಮೊದಲೇ ನಿಗದಿಯಾಗಿದ್ದು, ಟಿಕೆಟ್ಗಳು ಮುಗಿದಿವೆ ಎಂದು ತಿಳಿಸಿದ ಬಳಿಕವೂ ₹4,200ರ ಸೇವೆಯನ್ನು ಸುಮಾರು ₹12 ಸಾವಿರದವರೆಗೆ ಹೆಚ್ಚುವರಿ ಹಣ ಪಡೆದು ಮಾಡಿಸಿಕೊಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದರ ಹಿಂದೆ ಅಧಿಕಾರಿ ವರ್ಗದವರ ಪಾತ್ರವೂ ಇದೆ ಎಂಬ ಆರೋಪಗಳು ಕೇಳಿ
Oct 161 min read


Big Breaking | ಸುಳ್ಯದಲ್ಲಿ ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ವಿದ್ಯುತ್ ಶಾಕ್ಗೆ ಬಲಿಯಾಗಿರುವ ದಾರುಣ ಘಟನೆ ಅಕ್ಟೋಬರ್ 12ರ ರಾತ್ರಿ ನಡೆದಿದೆ. ತೋಡಿನ ಪಕ್ಕದ ಅಡಿಕೆ ತೋಟಕ್ಕೆ ಅಕ್ರಮವಾಗಿ ಅಳವಡಿಸಲಾಗಿದ್ದ ವಿದ್ಯುತ್ ತಂತಿ ತಗುಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತರನ್ನು ಕಲ್ಮಡ್ಕ ನಿವಾಸಿ ಭರತ್ (28) ಹಾಗೂ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ನಿವಾಸಿ ರಮೇಶ್ ಅಲಿಯಾಸ್ ಗಣೇಶ್ (36) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಅವರೊಂದಿಗೆ ತೆರಳಿದ್ದ ಅಪ್ರಾಪ್ತ ಬಾಲಕನಿಗೂ ವಿದ್ಯುತ್ ಶಾಕ್ ತಗುಲಿ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡ
Oct 131 min read


ಸಂಪಾಜೆಯಿಂದ ಮಂಗಳೂರಿಗೆ ‘ಸ್ವಚ್ಛತಾ ದಂಡಯಾತ್ರೆ’: ಅ.9ರಿಂದ ನಾಗರಾಜ್ ಬಜಾಲ್ ನೇತೃತ್ವದಲ್ಲಿ ವಿನೂತನ ಅಭಿಯಾನ
ಮಂಗಳೂರು: ರಸ್ತೆ ಬದಿಯ ತ್ಯಾಜ್ಯವನ್ನು ಸ್ವಚ್ಛಗೊಳಿಸುತ್ತಾ, ಸಾರ್ವಜನಿಕರಲ್ಲಿ ತ್ಯಾಜ್ಯ ನಿರ್ವಹಣೆ ಮತ್ತು ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸುವ ಉದ್ದೇಶದಿಂದ ಹಸಿರು ದಳದ ವತಿಯಿಂದ ಅಕ್ಟೋಬರ್ 9ರಿಂದ 17ರವರೆಗೆ ಸಂಪಾಜೆಯಿಂದ ಮಂಗಳೂರಿನವರೆಗೆ ‘ಸ್ವಚ್ಛತಾ ದಂಡಯಾತ್ರೆ’ ಹಮ್ಮಿಕೊಳ್ಳಲಾಗಿದೆ. ಪರಿಸರ ಕಾರ್ಯಕರ್ತ ಹಾಗೂ ಹಸಿರು ದಳದ ಪ್ರಾಜೆಕ್ಟ್ ಮ್ಯಾನೇಜರ್ ನಾಗರಾಜ್ ಬಜಾಲ್ ಅವರ ನೇತೃತ್ವದಲ್ಲಿ ನಡೆಯಲಿರುವ ಈ 9 ದಿನಗಳ ಪಾದಯಾತ್ರೆಯಲ್ಲಿ ಸಾರ್ವಜನಿಕರು, ಸಂಘ-ಸಂಸ್ಥೆಗಳು, ಗ್ರಾಮ ಪಂಚಾಯತ್ಗಳು, ಶಾಲಾ-ಕಾಲೇಜುಗಳು ಹಾಗೂ ಯುವಕರು ಭಾಗವಹಿಸಲು ಮುಕ್ತ ಅವಕಾಶವಿದೆ. ಕಳೆದ ಬಾರಿ ಕಾರವಾರದಿಂದ ಮಂಗ
Oct 82 min read


ಶಾಸಕಿ ಪ್ರಯಾಣಿಸುತ್ತಿದ್ದ ಇನ್ನೋವಾಗೆ ಕಾರು ಢಿಕ್ಕಿ; ಭಾಗೀರಥಿ ಮುರುಳ್ಯ ಅಪಾಯದಿಂದ ಪಾರು
ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಅಪಘಾತಕ್ಕೀಡಾದ ಘಟನೆ ಕರಿಕ್ಕಳ–ನಿಂತಿಕಲ್ ಮಾರ್ಗದ ಮುಚ್ಚಿಲ ಎಂಬಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಶಾಸಕಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರಿನ ಮುಂಭಾಗದಲ್ಲಿ ಸಾಗುತ್ತಿದ್ದ ಕಾರೊಂದು ಏಕಾಏಕಿ ಬ್ರೇಕ್ ಹಾಕಿದೆ. ಇದರಿಂದ ಹಿಂಬದಿಯಿಂದ ಬರುತ್ತಿದ್ದ ಇನ್ನೋವಾ ಕಾರು ನಿಯಂತ್ರಣ ತಪ್ಪಿ ಮುಂಭಾಗದ ಕಾರಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಇನ್ನೋವಾ ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು, ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಕಾರಿನ ಚಾಲಕ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಬಳಿಕ ಶಾಸ
Oct 61 min read


ಫ್ಲೈದುಬೈ ವಿಮಾನ ಪತನದಂಚಿಗೆ: ಸಹ ಪೈಲಟ್ ಹಿನ್ನೆಲೆ ಬಗ್ಗೆ ಸ್ಫೋಟಕ ಮಾಹಿತಿ ಬಹಿರಂಗ
182 ಜನರನ್ನು ಹೊತ್ತೊಯ್ಯುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ನಡೆದ ಆತಂಕಕಾರಿ ಘಟನೆ ಇದೀಗ ಮತ್ತಷ್ಟು ಗಂಭೀರ ತಿರುವು ಪಡೆದುಕೊಂಡಿದೆ. ವಿಮಾನವನ್ನು ಅಪಾಯಕ್ಕೆ ತಳ್ಳಿದ ಆರೋಪ ಎದುರಿಸುತ್ತಿರುವ ಸಹ ಪೈಲಟ್ಗೆ ಈ ಹಿಂದೆ ಒಮಾನ್ನಲ್ಲಿ ವಿಮಾನ ಹಾರಾಟ ನಡೆಸದಂತೆ ನಿಷೇಧಿಸಲಾಗಿತ್ತು ಎಂಬ ಮಾಹಿತಿ ಹೊರಬಂದಿದೆ. ತನಿಖೆಗೆ ಸಂಬಂಧಿಸಿದ ಮಾಹಿತಿಯನ್ನು ಹೊಂದಿರುವ ವ್ಯಕ್ತಿಯೊಬ್ಬರ ಪ್ರಕಾರ, ಸಹ ಪೈಲಟ್ ಉಗ್ರವಾದಿ ವಿಚಾರಧಾರೆಗಳಿಗೆ ಒಲವು ಹೊಂದಿದ್ದಾನೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ಒಮಾನ್ನಲ್ಲಿ ಆತನಿಗೆ ಹಾರಾಟ ನಿರ್ಬಂಧ ವಿಧಿಸಲಾಗಿತ್ತು. ಆದರೆ ನಂತರ ಯುನೈಟೆಡ್ ಅರಬ್ ಎಮಿರೇಟ್ಸ್ ಮೂಲದ ವಿಮಾನಯಾನ ಸ
Oct 32 min read


ಬ್ಯಾಂಕ್ಗಳಿಗೆ ಪ್ರತಿ ಶನಿವಾರ ರಜೆ? ಸಾಮಾಜಿಕ ಜಾಲತಾಣದ ಪೋಸ್ಟ್ನ ಅಸಲಿಯತ್ತು ಏನು?
ನವದೆಹಲಿ: ಬ್ಯಾಂಕ್ಗಳಿಗೆ ಇನ್ನು ಮುಂದೆ ಪ್ರತಿ ಶನಿವಾರ ಹಾಗೂ ಭಾನುವಾರ ರಜೆ ಇರಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೇಂದ್ರ ಹಣಕಾಸು ಇಲಾಖೆ ಹೊರಡಿಸಿರುವ ಗೆಜೆಟ್ ಆದೇಶ ಎಂದು ಹೇಳಲಾಗುತ್ತಿರುವ ದಾಖಲೆಯೊಂದನ್ನು ಹಂಚಿಕೊಳ್ಳಲಾಗುತ್ತಿದ್ದು, ಇದರಿಂದ ಬ್ಯಾಂಕ್ ಗ್ರಾಹಕರಲ್ಲಿ ಗೊಂದಲ ಉಂಟಾಗಿದೆ. ಆದರೆ, ಈ ವೈರಲ್ ಪೋಸ್ಟ್ಗೆ ಸಂಬಂಧಿಸಿದಂತೆ ಪ್ರೆಸ್ ಇನ್ಫಾರ್ಮೇಷನ್ ಬ್ಯೂರೊ (PIB) ಫ್ಯಾಕ್ಟ್ಚೆಕ್ ಸ್ಪಷ್ಟನೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆದೇಶದ ಪ್ರತಿ ನಕಲಿ ಎಂದು ತಿಳಿಸಿದೆ. ಪ್ರತಿ ಶನಿವಾರ ಬ್ಯಾಂಕ್ ರಜೆ ಘೋಷಣೆಯಾಗಿದೆಯೇ? PIB
Oct 11 min read


MRPL ಘಟಕದಲ್ಲಿ ಸ್ಫೋಟ: ಓರ್ವನಿಗೆ ಗಂಭೀರ ಸುಟ್ಟ ಗಾಯ, ಆರು ಮಂದಿಗೆ ಸಣ್ಣಪುಟ್ಟ ಗಾಯ
ಮಂಗಳೂರು: ನಗರದ ಹೊರವಲಯದ ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಆವರಣದಲ್ಲಿರುವ CHT (Hydrogen Sulphur Treatment) ಘಟಕದಲ್ಲಿ ಬುಧವಾರ (ಸೆ.30) ಸ್ಫೋಟ ಸಂಭವಿಸಿ ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಸ್ಫೋಟದ ಬಳಿಕ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ದಟ್ಟ ಹೊಗೆ ಆವರಿಸಿತ್ತು. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟಕದಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ ಬ್ಯಾಪ್ಟಿಸ್ಟ್ ಅವರಿಗೆ ಸುಮಾರು 35% ಸುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗ
Sep 301 min read


ಗೃಹಲಕ್ಷ್ಮಿಯರಿಗೆ ನವರಾತ್ರಿ ಗುಡ್ನ್ಯೂಸ್; 33ನೇ ಕಂತಿನ ಹಣ ಬಿಡುಗಡೆಗೆ ಗ್ರೀನ್ ಸಿಗ್ನಲ್
ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಯೋಜನೆಯ 33ನೇ ಕಂತಿನ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲು ಆರ್ಥಿಕ ಇಲಾಖೆ ಅನುಮತಿ ನೀಡಿದೆ ಎಂದು ತಿಳಿದುಬಂದಿದೆ. ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಹಣ ಬಿಡುಗಡೆಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ. ಇದರೊಂದಿಗೆ ಈಗಾಗಲೇ ಯೋಜನೆಗೆ ಅರ್ಹರಾಗಿರುವ ಮಹಿಳೆಯರಿಗೆ 33ನೇ ಕಂತಿನ ಹಣ ಖಾತೆಗೆ ಜಮೆಯಾಗುವ ನಿರೀಕ್ಷೆ ಮೂಡಿದೆ. ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ₹2,000 ನೇರವಾಗಿ ಬ್ಯಾಂಕ್ ಖಾತೆಗೆ ವರ
Sep 291 min read


ವೃದ್ಧ ತಾಯಿಗೆ ಆಸರೆಯಾಗಬೇಕಿದ್ದ ಮಗನೇ ರಸ್ತೆಯಲ್ಲಿ ಬಿಟ್ಟು ಹೋದ! ಉಡುಪಿಯಲ್ಲಿ ಅಮಾನವೀಯ ಘಟನೆ
ಉಡುಪಿ: ಬ್ರಹ್ಮಾವರದ ಎಸ್.ಎಂ.ಎಸ್. ಆಂಗ್ಲ ಮಾಧ್ಯಮ ಶಾಲೆ ಬಳಿ 70 ವರ್ಷದ ವೃದ್ಧೆಯೊಬ್ಬರು ದಿಕ್ಕು ತೋಚದೆ ನಿಂತಿದ್ದ ಘಟನೆ ನಡೆದಿದೆ. ಶಾಲಾ ಬಸ್ ಚಾಲಕ ರಾಮನಾಥ್ ಶೆಣೈ ಅವರು ವೃದ್ಧೆಯನ್ನು ಗಮನಿಸಿ ಸಮಾಜ ಸೇವಾ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿದ ನಿತ್ಯಾನಂದ ಒಳಕಾಡು ಅವರು 112 ತುರ್ತು ಪೊಲೀಸ್ ಸಹಾಯವಾಣಿ ಸಿಬ್ಬಂದಿಯ ನೆರವಿನಿಂದ ವೃದ್ಧೆಯನ್ನು ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ವೃದ್ಧೆ ತನ್ನ ಹೆಸರು ಸರಸ್ವತಿ (70) ಎಂದು ಹಾಗೂ ತಮಿಳುನಾಡಿನ ತಿರುವಳ್ಳುವೂರು ನಿವಾಸಿ ಎಂದು ತಿಳಿಸಿದ್ದಾರೆ. ತನ್ನ ಮಗ ಕಾರಿನಲ್ಲಿ
Sep 281 min read


ಬ್ಯಾಂಕ್ ಮುಷ್ಕರ ರದ್ದು; ಎಂದಿನಂತೆ ಕಾರ್ಯನಿರ್ವಹಿಸಲಿವೆ ಬ್ಯಾಂಕ್ಗಳು
ನವದೆಹಲಿ: ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಸೆಪ್ಟೆಂಬರ್ 28ರಿಂದ 30ರವರೆಗೆ ಕರೆ ನೀಡಿದ್ದ ಮೂರು ದಿನಗಳ ದೇಶವ್ಯಾಪಿ ಬ್ಯಾಂಕ್ ಮುಷ್ಕರವನ್ನು ರದ್ದುಗೊಳಿಸಿದೆ. ಒಕ್ಕೂಟಗಳು ದಿಢೀರ್ ಈ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಬ್ಯಾಂಕ್ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ವಾರಾಂತ್ಯದ ರಜೆಗಳೊಂದಿಗೆ ಸತತ ಮೂರು ದಿನಗಳ ಮುಷ್ಕರ ನಡೆದರೆ ಸಾರ್ವಜನಿಕರಿಗೆ ಬ್ಯಾಂಕಿಂಗ್ ಸೇವೆಗಳಲ್ಲಿ ನಿರಂತರ ವ್ಯತ್ಯಯ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 27ರ ಭಾನುವಾರದಂದು ಸಾರ್ವಜನಿಕ ವಲಯದ ಬ್ಯಾಂಕ್ಗಳು ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳು (RRB) ಸಹ..
Sep 281 min read


ಶಾರ್ಜಾದಲ್ಲಿ ಉಡುಪಿ ಮೂಲದ ಆಲ್ವಿನ್ ಪ್ರಕಾಶ್ ಕುಂದರ್ ಹತ್ಯೆ: ದೇಹ 9 ತುಂಡು, ಸಿಸಿಟಿವಿಯಲ್ಲಿ ಶವ ಸಾಗಿಸಿದ ದೃಶ್ಯ
: ಉಡುಪಿ ಮೂಲದ ಆಲ್ವಿನ್ ಪ್ರಕಾಶ್ ಕುಂದರ್ ಅವರ ಹತ್ಯೆ ಪ್ರಕರಣದಲ್ಲಿ ತನಿಖೆಗೆ ಮಹತ್ವದ ಸುಳಿವುಗಳು ಲಭ್ಯವಾಗಿವೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿಯ ಪ್ರಕಾರ, ಆಲ್ವಿನ್ ಅವರ ಮೃತದೇಹವನ್ನು ಒಂಬತ್ತು ಭಾಗಗಳಾಗಿ ಬೇರ್ಪಡಿಸಲಾಗಿತ್ತು. ತನಿಖೆಯ ಭಾಗವಾಗಿ ಪರಿಶೀಲಿಸಲಾದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರು ಎರಡು ಚೀಲಗಳನ್ನು ಸಾಗಿಸುತ್ತಿರುವುದು ಕಂಡುಬಂದಿದೆ ಎಂದು ವರದಿಯಾಗಿದೆ. ಈ ದೃಶ್ಯಗಳು ಪ್ರಕರಣದ ತನಿಖೆಯಲ್ಲಿ ಪ್ರಮುಖ ಸುಳಿವಾಗಿವೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಆಲ್ವಿನ್ ಅವರ ಎಡ ಎದೆ ಭಾಗದಲ್ಲಿ ಎರಡು ಚುಚ್ಚಿದ ಗಾಯಗಳಿರುವುದಾಗಿ ಉಲ್ಲೇಖಿ
Sep 231 min read


15ಕ್ಕೂ ಹೆಚ್ಚು ದೂರು, ಲೋಕಾಯುಕ್ತ ದಾಳಿ ಬೆನ್ನಲ್ಲೇ ಕ್ರಮ: ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ಸಸ್ಪೆಂಡ್!
ಮಂಗಳೂರು, ಸೆ.23: ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಹಾಗೂ ಅನುಚಿತ ವರ್ತನೆ ಸೇರಿದಂತೆ ಹಲವು ಆರೋಪಗಳ ಹಿನ್ನೆಲೆಯಲ್ಲಿ ಆರ್ಯಾಪು ಗ್ರಾಮ ಪಂಚಾಯಿತಿಯ ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಅಮಾನತುಗೊಳಿಸಿದ್ದಾರೆ. ವಾರದ ಹಿಂದಷ್ಟೇ ಅವರನ್ನು ಉಪ್ಪಿನಂಗಡಿ ಗ್ರಾಮಾಂತರ ಪಂಚಾಯಿತಿಗೆ ಪಿಡಿಒ ಆಗಿ ವರ್ಗಾವಣೆ ಮಾಡಲಾಗಿತ್ತು. ಅದಕ್ಕೂ ಮುನ್ನ ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರ ವಿರುದ್ಧ 15ಕ್ಕೂ ಹೆಚ್ಚು ಸಾರ್ವಜನಿಕ ದೂರುಗಳು ದಾಖಲಾಗಿದ್ದವು ಎನ್ನಲಾಗಿದೆ. ವ್ಯಾಪಾರ ಪರವಾನಗಿ ನವೀಕರ
Sep 231 min read


LPG ಗ್ರಾಹಕರೇ ಗಮನಿಸಿ! ಅಕ್ಟೋಬರ್ 1ರಿಂದ ಬದಲಾಗಲಿದೆ ನಿಯಮ; KYC ಮಾಡದಿದ್ದರೆ ಸಬ್ಸಿಡಿ ದರದ ಸಿಲಿಂಡರ್ಗೆ ಬ್ರೇಕ್!
LPG ಗ್ರಾಹಕರಿಗೆ ಹೊಸ ನಿಯಮ: ಅಕ್ಟೋಬರ್ 1ರಿಂದ ಸಬ್ಸಿಡಿ ಪಡೆಯಲು ಬಯೋಮೆಟ್ರಿಕ್ KYC ಕಡ್ಡಾಯ ನವದೆಹಲಿ: ದೇಶದ ಗೃಹಬಳಕೆಯ LPG ಗ್ರಾಹಕರಿಗೆ ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೆ ತರಲು ಮುಂದಾಗಿದೆ. 2026ರ ಅಕ್ಟೋಬರ್ 1ರಿಂದ ಸಬ್ಸಿಡಿ ಸಹಿತ ನಿಯಂತ್ರಿತ ದರದಲ್ಲಿ LPG ಸಿಲಿಂಡರ್ ರಿಫಿಲ್ ಬುಕ್ ಮಾಡಲು ಬಯೋಮೆಟ್ರಿಕ್ ಆಧಾರ್ ದೃಢೀಕರಣ (BAA) ಪೂರ್ಣಗೊಳಿಸಿರುವುದು ಅಗತ್ಯವಾಗಲಿದೆ. ಈಗಾಗಲೇ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಪೂರ್ಣಗೊಳಿಸಿರುವ ಗ್ರಾಹಕರು ಮತ್ತೆ ಯಾವುದೇ ಪ್ರಕ್ರಿಯೆ ಮಾಡುವ ಅಗತ್ಯವಿಲ್ಲ. ಅವರ LPG ರಿಫಿಲ್ ಸೇವೆ ಎಂದಿನಂತೆ ಮುಂದುವರಿಯಲಿದೆ. KYC ಮಾಡದವರಿಗೆ ಏನಾಗಲಿದೆ? ಅಕ್ಟೋ
Sep 231 min read


ಟಾರ್ಗೆಟ್ ಪೂರ್ಣಗೊಳಿಸಿಲ್ಲ ಎಂದು 200 ಬಸ್ಕಿ ಶಿಕ್ಷೆ: ತೀವ್ರ ಅನಾರೋಗ್ಯಕ್ಕೆ ತುತ್ತಾದ ಯುವ ಉದ್ಯೋಗಿ!
ಚೀನಾದ ಹ್ಯಾಂಗ್ಝೌನಲ್ಲಿರುವ ಖಾಸಗಿ ಸಾಲ ಒದಗಿಸುವ ಕಂಪನಿಯೊಂದರಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ನಿಗದಿತ ದೈನಂದಿನ ಕೆಲಸದ ಟಾರ್ಗೆಟ್ ಪೂರ್ಣಗೊಳಿಸಿಲ್ಲ ಎಂಬ ಕಾರಣಕ್ಕೆ ಮ್ಯಾನೇಜರ್ ನೀಡಿದ 200 ಸ್ಕ್ವಾಟ್ಸ್ (ಬಸ್ಕಿ) ಶಿಕ್ಷೆಯಿಂದಾಗಿ ಯಾಂಗ್ ಎಂಬ ಯುವ ಉದ್ಯೋಗಿ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಹಣಕಾಸು ಸಲಹೆಗಾರರಾಗಿದ್ದ ಯಾಂಗ್ ಜುಲೈ 28ರಂದು ಟಾರ್ಗೆಟ್ ತಲುಪಲು ವಿಫಲರಾಗಿದ್ದರು. ಮ್ಯಾನೇಜರ್ ದಂಡ ಅಥವಾ 200 ಬಸ್ಕಿ ಶಿಕ್ಷೆಯ ಷರತ್ತು ವಿಧಿಸಿದ್ದರಿಂದ, ಹಣವಿಲ್ಲದೆ ಯಾಂಗ್ ಬಸ್ಕಿ ಹೊಡೆದು ವಿಡಿಯೊ ಕಳುಹಿಸಿದ್ದರು. ಕೊನೆಯಲ್ಲಿ ಕುಸಿದುಬಿದ್ದ ಆಕೆಗೆ ತೀವ್ರ ಕಾಲುನೋವು ಕಾಣಿ
Aug 271 min read
Archive
bottom of page







