top of page
News Articles
Sathyapatha News Plus


ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ,ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ/ಡಾ|| ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 2026-27ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರವು ಸ್ಥಾಪಿಸಿರುವ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಡಾ|| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 6 ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲ
9 hours ago1 min read


ಸಂತ ಅಲೋಶಿಯಸ್ ಕಾಲೇಜಿನ ಮಾಜಿ ರೆಕ್ಟರ್ ಫಾ. ಲಿಯೋ ಡಿಸೋಜ ನಿಧನ
ಮಂಗಳೂರು: ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ಮಾಜಿ ರೆಕ್ಟರ್ ಹಾಗೂ ಪ್ರಾಂಶುಪಾಲ ಫಾ. ಲಿಯೋ ಡಿಸೋಜ (93) ಮಂಗಳವಾರ ನಿಧನರಾದರು. ಮಂಗಳೂರಿನಲ್ಲಿ ಜನಿಸಿ, ಅಲೋಶಿಯಸ್ ಸಂಸ್ಥೆಯಲ್ಲೇ ಶಿಕ್ಷಣ ಪಡೆದಿದ್ದ ಇವರು, ದಶಕಗಳ ಕಾಲ ಅದೇ ಸಂಸ್ಥೆಯ ಬೆಳವಣಿಗೆಗೆ ಶ್ರಮಿಸಿದ್ದರು. ಪ್ರಾಂಶುಪಾಲರಾಗಿ ಮತ್ತು ರೆಕ್ಟರ್ ಆಗಿ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಅವರು, ಹಿರಿಯ ಶಿಕ್ಷಣ ತಜ್ಞರಾಗಿ ಗುರುತಿಸಿಕೊಂಡಿದ್ದರು. ಅವರ ನಿಧನಕ್ಕೆ ಶಿಕ್ಷಣ ಪ್ರೇಮಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.
1 day ago1 min read


ಶಾಲಾ ಮಕ್ಕಳಿಗೆ ಶೂ ಬದಲು ಪಾದರಕ್ಷೆ? ಶಿಕ್ಷಣ ಇಲಾಖೆಯಿಂದ ಮಹತ್ವದ ಬದಲಾವಣೆ ಸಾಧ್ಯತೆ
ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನೀಡಲಾಗುವ ಶೂ ಹಾಗೂ ಸಾಕ್ಸ್ ವಿತರಣಾ ಯೋಜನೆಯಲ್ಲಿ ಈ ಬಾರಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆಯಿದೆ. ಹವಾಮಾನ ವೈಪರೀತ್ಯ ಹಾಗೂ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕೆಲವು ಜಿಲ್ಲೆಗಳಲ್ಲಿ ಶೂಗಳ ಬದಲಿಗೆ ಚಪ್ಪಲಿ ಅಥವಾ ಸ್ಯಾಂಡಲ್ಗಳನ್ನು ನೀಡಲು ಶಿಕ್ಷಣ ಇಲಾಖೆ ಗಂಭೀರ ಚಿಂತನೆ ನಡೆಸಿದೆ. ಮಳೆಗಾಲದಲ್ಲಿ ಶೂ ಮತ್ತು ಸಾಕ್ಸ್ಗಳು ಒದ್ದೆಯಾಗಿ ಒಣಗಲು ವಿಳಂಬವಾಗುವುದರಿಂದ ಕೆಟ್ಟ ವಾಸನೆ ಹಾಗೂ ಚರ್ಮದ ಸೋಂಕುಗಳು ಕಾಣಿಸಿಕೊಳ್ಳುತ್ತಿವೆ. ಅಲ್ಲದೆ, ಬೇಸಿಗೆಯಲ್ಲಿ ದೀರ್ಘಕಾಲ ಶೂ ಧರಿಸುವುದರಿಂದ ಪಾದಗಳಲ್ಲಿ ಬೆವರು
2 days ago1 min read


SSLC ಪರೀಕ್ಷೆ: ಶಿಕ್ಷಣ ಇಲಾಖೆಯಿಂದ ಹೊಸ ಮಾರ್ಗಸೂಚಿ ಪ್ರಕಟ
ಬೆಂಗಳೂರು: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಶಿಕ್ಷಣ ಇಲಾಖೆಯು, ಮುಖ್ಯ ಪರೀಕ್ಷೆಗಾಗಿ ಕಠಿಣ ಮಾರ್ಗಸೂಚಿಗಳನ್ನು ಹೊರಡಿಸಿದೆ. ಪರೀಕ್ಷಾ ಅಕ್ರಮಗಳಿಗೆ ತಡೆ ಹಾಕಲು ಈ ಬಾರಿ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಹೊಸ ಗೈಡ್ಲೈನ್ಸ್ ಪ್ರಕಾರ, ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಪರೀಕ್ಷಾ ಕರ್ತವ್ಯದಲ್ಲಿರುವ ಶಿಕ್ಷಕರಿಗೂ ಮೊಬೈಲ್ ಬಳಕೆಯನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ. ಇನ್ಮುಂದೆ 2ನೇ ಹಾಗೂ 3ನೇ ಹಂತದ ಪರೀಕ್ಷೆಗಳು ನೇರವಾಗಿ ಆಯುಕ್ತರ ನೇತೃತ್ವದಲ್ಲಿ ನಡೆಯಲಿವೆ. ಪರೀಕ್ಷಾ ಕೇಂದ್ರಗಳ ಸಂಪೂರ್ಣ ಜವಾ
3 days ago1 min read


ಕರ್ನಾಟಕದ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಮತ್ತೆ ಮೊಳಗಲಿದೆ ವಿದ್ಯಾರ್ಥಿ ಚುನಾವಣೆಯ ರಣಕಹಳೆ!
ಕರ್ನಾಟಕದ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಮತ್ತೆ ಆರಂಭಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿರುವ ಸರ್ಕಾರ, ಮೊದಲ ಹಂತದ ಉನ್ನತ ಮಟ್ಟದ ಸಭೆಯನ್ನು ಪೂರ್ಣಗೊಳಿಸಿದೆ. ಉನ್ನತ ಶಿಕ್ಷಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಚುನಾವಣೆ ನಡೆಸುವ ಪ್ರಸ್ತಾವನೆಗೆ ಈಗಾಗಲೇ ಪ್ರಾಥಮಿಕ ಹಸಿರು ನಿಶಾನೆ ತೋರಿಸಿವೆ. ಇದರಿಂದಾಗಿ ಕಳೆದ ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಕ್ಯಾಂಪಸ್ ರಾಜಕೀಯಕ್ಕೆ ಮತ್ತೆ ಚಾಲನೆ ಸಿಗುವ ಸಾಧ್ಯತೆ ದಟ್ಟವಾಗಿದೆ. ವಿದ್ಯಾರ್ಥಿ ಚುನಾವಣೆಗಳನ್ನು ನಡೆಸುವ ಸಾಧಕ-ಬಾಧಕಗಳನ್
5 days ago1 min read


IIT ಹೈದರಾಬಾದ್ ವಿದ್ಯಾರ್ಥಿಗೆ 2.5 ಕೋಟಿ ರೂ. ಪ್ಯಾಕೇಜ್: ಸಂಸ್ಥೆಯ ಇತಿಹಾಸದಲ್ಲೇ ಹೊಸ ದಾಖಲೆ!
ಹೈದರಾಬಾದ್: ಐಟಿ ವಲಯದಲ್ಲಿ ಉದ್ಯೋಗ ಕಡಿತ ಮತ್ತು ಆರ್ಥಿಕ ಮಂದಗತಿಯ ಆತಂಕದ ನಡುವೆಯೂ ಭಾರತೀಯ ತಾಂತ್ರಿಕ ಸಂಸ್ಥೆಯ (IIT) ವಿದ್ಯಾರ್ಥಿಯೊಬ್ಬರು ಅಸಾಧಾರಣ ಸಾಧನೆ ಮಾಡಿದ್ದಾರೆ. ಐಐಟಿ ಹೈದರಾಬಾದ್ನ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ಎಡ್ವರ್ಡ್ ನಾಥನ್ ವರ್ಗೀಸ್ ವಾರ್ಷಿಕ 2.5 ಕೋಟಿ ರೂಪಾಯಿಗಳ ಬೃಹತ್ ವೇತನದ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ. ಸಂಸ್ಥೆಯ ಇತಿಹಾಸದಲ್ಲೇ ದಾಖಲೆ: 2008ರಲ್ಲಿ ಈ ಐಐಟಿ ಸಂಸ್ಥೆ ಆರಂಭವಾದಾಗಿನಿಂದ ಇದುವರೆಗೂ ಇಷ್ಟು ದೊಡ್ಡ ಮೊತ್ತದ ಪ್ಯಾಕೇಜ್ ಯಾರಿಗೂ ಸಿಕ್ಕಿರಲಿಲ್ಲ. ಇದಕ್ಕೂ ಮುನ್ನ 2017ರಲ್ಲಿ 1.1 ಕೋಟಿ ರೂ. ಪ್ಯಾಕೇಜ್ ಅತಿ ಹೆಚ್ಚು ಎನಿಸಿಕೊಂಡಿತ್ತು. ಈಗ
Jan 31 min read


ಸಿಇಟಿ 2026ರ ವೇಳಾಪಟ್ಟಿ ಪ್ರಕಟ: ಏಪ್ರಿಲ್ 22ರಿಂದ ಪರೀಕ್ಷೆಗಳು ಆರಂಭ
ಬೆಂಗಳೂರು: ರಾಜ್ಯದ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (CET-2026) ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಜಂಟಿಯಾಗಿ ಈ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದರು. ಪರೀಕ್ಷೆಗಳು ಏಪ್ರಿಲ್ 22ರಿಂದ 24ರವರೆಗೆ ನಡೆಯಲಿದ್ದು, ಜನವರಿ 17ರಿಂದಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ. ಈ ಬಾರಿ ಸಿಇಟಿ ವ
Jan 21 min read
Archive
bottom of page

