top of page
News Articles
Sathyapatha News Plus


ಮೂರು ಗಂಟೆಗಳ ಕಾಲ ಸುಳ್ಯ ನಗರ ಬ್ಲಾಕ್: ಸಾರ್ವಜನಿಕರಿಗೆ ತೀವ್ರ ತೊಂದರೆ — ತುರ್ತು ಸೇವೆಗಳಿಗೂ ಅಡ್ಡಿಯಾಗಿದ್ದರೆ ಹೊಣೆ ಯಾರು?
ಸುಳ್ಯ: ಸುಮಾರು 500 ಮಂದಿಯ ಮೆರವಣಿಗೆಗಾಗಿ ಸುಳ್ಯ ನಗರದ ಪ್ರಮುಖ ರಸ್ತೆಯೇ ಸುಮಾರು ಮೂರು ಗಂಟೆಗಳ ಕಾಲ ಬಂದ್ ಆಗಿದ್ದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಸಾರ್ವಜನಿಕರು ಪರದಾಡುವಂತಾದ ಘಟನೆ ಸೆ.11ರಂದು ನಡೆದಿದೆ. ಯಾವುದೇ ಪರ್ಯಾಯ ಮಾರ್ಗದ ವ್ಯವಸ್ಥೆಯಿಲ್ಲದೆ ಮುಖ್ಯ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡ ಪರಿಣಾಮ ನಗರದಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಯಿತು. ಪ್ರವಾದಿ ಮುಹಮ್ಮದ್ ಅವರ ಜನ್ಮದಿನದ ಅಂಗವಾಗಿ ನಡೆದ ಕಾಲ್ನಡಿಗೆ ಜಾಥಾ ಹಾಗೂ ದಫ್ ಪ್ರದರ್ಶನ ಸಂಜೆ 4 ಗಂಟೆಗೆ ನಿಗದಿಯಾಗಿತ್ತು. ಆದರೆ ಮೆರವಣಿಗೆ ರಾತ್ರಿ 7.30ರವರೆಗೂ ಮುಂದುವರಿದ ಪರಿಣಾಮ ಈ ಅವಧಿಯಲ್ಲಿ ಮುಖ್ಯ ರಸ್ತ
3 days ago1 min read


ಬೆಳ್ತಂಗಡಿಯಲ್ಲಿ ಲೋಕಾಯುಕ್ತ ದಾಳಿ: ಕುವೆಟ್ಟು, ಮಡಂತ್ಯಾರು ಗ್ರಾ.ಪಂ. ಕಚೇರಿಗಳಲ್ಲಿ ಕಡತಗಳ ಪರಿಶೀಲನೆ
ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಮತ್ತು ಮಡಂತ್ಯಾರು ಗ್ರಾಮ ಪಂಚಾಯತ್ ಕಚೇರಿಗಳ ಮೇಲೆ ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಗ್ರಾಮ ಪಂಚಾಯತ್ಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಲೋಕಾಯುಕ್ತ ಕೇಂದ್ರ ಕಚೇರಿಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಉಡುಪಿ ಜಿಲ್ಲೆಯ ಲೋಕಾಯುಕ್ತ ಇನ್ಸ್ಪೆಕ್ಟರ್ ಮಂಜುನಾಥ್ ಶಂಕರಹಳ್ಳಿ ನೇತೃತ್ವದಲ್ಲಿ ರಾಘವೇಂದ್ರ ಸಾಲಿಗ್ರಾಮ, ಆದರ್ಶ್, ಅರುಣ್ ಕುಮಾರ್, ಸೂರಜ್ ಕಾಪು ಸೇರಿದಂತೆ ಒಟ್ಟು ಎಂಟು ಮಂದಿಯ ತಂಡ ಬೆಳಗ್ಗೆ ಸುಮ
6 days ago1 min read


ಕಡಬ: ಪತ್ನಿಗೆ ಹಲ್ಲೆ ಆರೋಪ; ವಿಷ ಸೇವಿಸಿದ ಪತಿ ಆಸ್ಪತ್ರೆಗೆ ದಾಖಲು
ಕಡಬ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ವೇಳೆ, ಹಲ್ಲೆ ಆರೋಪ ಎದುರಿಸುತ್ತಿರುವ ಪತಿ ವಿಷ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದುಬಂದಿದೆ. ಕಡಬ ತಾಲೂಕಿನ ಕುದ್ಮಾರು ನಿವಾಸಿ ಸುಚಿತ್ರಾ ಪಿ.ಜೆ. (38) ಅವರು ನೀಡಿದ ದೂರಿನಂತೆ, ಸುಮಾರು ನಾಲ್ಕು ವರ್ಷಗಳ ಹಿಂದೆ ಕುದ್ಮಾರು ನಿವಾಸಿ ಚಿದಾನಂದ ಕೆ. ಅವರೊಂದಿಗೆ ವಿವಾಹವಾಗಿದ್ದರು. ಸೆ. 6ರಂದು ಬೆಳಿಗ್ಗೆ ದಂಪತಿ ನಡುವೆ ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿ ಕಲಹ ಉಂಟಾಗಿದೆ. ಈ ವೇಳೆ ಚಿದಾನಂದ ಅವರು
Sep 81 min read


ಸುಳ್ಯದ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿ
ಸುಳ್ಯ: ಶಿಕ್ಷಕರ ದಿನಾಚರಣೆಯ ಶುಭ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಸುಳ್ಯ ತಾಲೂಕಿನ ಮೂವರು ಸಾಧಕ ಶಿಕ್ಷಕರು ಈ ಗೌರವಕ್ಕೆ ಭಾಜನರಾಗಿದ್ದಾರೆ. * ಕಿರಿಯ ಪ್ರಾಥಮಿಕ ವಿಭಾಗ: ಪಾಂಡಿಗದ್ದೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಯಶೋಧರ ಕೆ. * ಹಿರಿಯ ಪ್ರಾಥಮಿಕ ವಿಭಾಗ: ಏಣ್ಮೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಭುವನೇಶ್ವರಿ ಕೆ. * ಪ್ರೌಢಶಾಲಾ ವಿಭಾಗ: ಅರಂತೋಡು ಎನ್ಎಂಪಿಯು ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಶಿಕ್ಷಕ ಕಿಶೋರ್ ಕುಮಾರ್. ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಗಣನೀಯ ಸೇವೆಯನ್ನು ಗು
Sep 51 min read


ಶೇಣಿಯಲ್ಲಿ 23ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಸತ್ಯನಾರಾಯಣ ಪೂಜೆ
ಸುಳ್ಯ: ಚೊಕ್ಕಾಡಿ ಸಮೀಪದ ಶೇಣಿಯಲ್ಲಿ ಸಾರ್ವಜನಿಕ ಶ್ರೀ ಕೃಷ್ಣ ಸೇವಾ ಸಮಿತಿ (ರಿ.) ಆಶ್ರಯದಲ್ಲಿ 23ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವು 2026ರ ಸೆಪ್ಟೆಂಬರ್ 6ರ ಆದಿತ್ಯವಾರ ಬೆಳಿಗ್ಗೆ 9-00 ಗಂಟೆಗೆ ಜರುಗಲಿದೆ. ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷರಾದ ಶ್ರೀ ಶಿವ ಸುಬ್ರಹ್ಮಣ್ಯ ಭಟ್ ನಾಟಿಕೇರಿ ವಹಿಸಲಿದ್ದು, ಚೊಕ್ಕಾಡಿ ಶ್ರೀ ರಾಮ ದೇವಾಲಯದ ಅರ್ಚಕರಾದ ಶ್ರೀ ರಘುರಾಮ ಭಟ್ ಉದ್ಘಾಟನೆ ನೆರವೇರಿಸಲಿದ್ದಾರೆ. ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ನಳಿನಿ ವಿ. ಮುಖ್ಯ ಅತಿಥಿಗಳಾಗಿ ಹಾಗೂ ದ
Sep 31 min read


ದರ್ಬೆ ಸೈಬರ್ ಸೆಂಟರ್ ಗಲಾಟೆ ಪ್ರಕರಣ: ಸತ್ಯಾಸತ್ಯತೆ ಬಿಚ್ಚಿಟ್ಟ ಸಂತ್ರಸ್ತ ಮುಬಾಶಿರ; ಕ್ಷಮೆ ಕೇಳಿದರೆ ಕೇಸ್ ವಾಪಸ್ ಪಡೆಯಲು ಸಿದ್ಧ
ಪುತ್ತೂರು / ಮಂಗಳೂರು: ಪುತ್ತೂರು ನಗರದ ದರ್ಬೆಯ ಸೈಬರ್ ಕೇಂದ್ರವೊಂದರಲ್ಲಿ ಜನನ ಪ್ರಮಾಣಪತ್ರ ಲ್ಯಾಮಿನೇಷನ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ಪ್ರಕರಣವು ರಾಜಕೀಯ ಹಾಗೂ ಕೋಮು ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ಸಂತ್ರಸ್ತ ಮಂಡೆಕೋಲು ನಿವಾಸಿ ಮುಬಾಶಿರ ಅವರು ಮಂಗಳೂರಿನಲ್ಲಿ ಮಾಧ್ಯಮಗಳ ಮುಂದೆ ಹಾಜರಾಗಿ ಘಟನೆಯ ಪೂರ್ಣ ವಾಸ್ತವಾಂಶವನ್ನು ಸ್ಪಷ್ಟಪಡಿಸಿದ್ದಾರೆ. ಆಗಸ್ಟ್ 21ರಂದು ಊಟಕ್ಕೆ ಬಂದಿದ್ದಾಗ ಪಕ್ಕದ ಸೈಬರ್ ಸೆಂಟರ್ಗೆ ಮಗುವಿನ ಬರ್ತ್ ಸರ್ಟಿಫಿಕೇಟ್ ಲ್ಯಾಮಿನೇಷನ್ ಮತ್ತು ಆಧಾರ್ ಕಾರ್ಡ್ ಪ್ರಿಂಟ್ಗೆ ನೀಡಿದ್ದೆವು. ಆದರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಸರ್ಟಿ
Aug 281 min read


ಬಳ್ಪ -ಕೋಡಿಂಬಾಳ: ಜನವಸತಿ ಪ್ರದೇಶಕ್ಕೆ ಲಗ್ಗೆಯಿಟ್ಟ ಕಾಡಾನೆಗಳ ಹಿಂಡು; ಗ್ರಾಮಸ್ಥರಲ್ಲಿ ಆತಂಕ
ಕೋಡಿಂಬಾಳ: ಬಳ್ಪ ಪರಿಸರದಲ್ಲಿ ಸಂಚರಿಸುತ್ತಿದ್ದ ಕಾಡಾನೆಗಳ ಹಿಂಡು ಇದೀಗ ಪಕ್ಕದ ಕೋಡಿಂಬಾಳ ಗ್ರಾಮಕ್ಕೆ ಲಗ್ಗೆಯಿಟ್ಟಿದೆ. ಎಣ್ಣೆಮಜಲು ಬಳಿಯ ಬೀರಿಕಾಡು ಪ್ರದೇಶದ ಮೂಲಕ ನದಿ ದಾಟಿ ಬಂದಿರುವ ಆನೆಗಳು, ಕೊರಿಯರ್ ಸಮೀಪದ ಖಾಸಗಿ ರಬ್ಬರ್ ತೋಟದಲ್ಲಿ ಠಿಕಾಣಿ ಹೂಡಿವೆ. ಜನವಸತಿ ಹಾಗೂ ಕೃಷಿ ತೋಟಗಳ ಸನಿಹದಲ್ಲೇ ಆನೆಗಳು ಬೀಡುಬಿಟ್ಟಿರುವುದರಿಂದ ಸ್ಥಳೀಯ ಕೃಷಿಕರು, ಕಾರ್ಮಿಕರು ಮತ್ತು ಶಾಲಾ ಮಕ್ಕಳು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಗ್ರಾಮಸ್ಥರು ಒಂಟಿಯಾಗಿ ಸಂಚರಿಸದೆ ಜಾಗರೂಕರಾಗಿರುವಂತೆ ಎಚ್ಚರಿಕೆ ಸಂದೇಶ ರವಾನಿಸಲಾಗುತ್ತಿದೆ. ಅರಣ್ಯ ಇಲಾಖಾಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಆಗಮಿಸಿ, ಕಾಡಾನೆಗಳನ್
Aug 281 min read


ಕಡಬ: ಪ.ಪಂ ಅಧ್ಯಕ್ಷೆಯ ಮನೆಯಲ್ಲೇ ಕಳ್ಳತನ
ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಡ್ಡಗದ್ದೆ ಎಂಬಲ್ಲಿ ಮನೆಯ ಮರದ ಬಾಕ್ಸ್ ಒಡೆದು ಅದರಲ್ಲಿದ್ದ ₹84,800/- ನಗದು ಹಣವನ್ನು ಕಳ್ಳರು ದೋಚಿರುವ ಘಟನೆ ನಡೆದಿದೆ. ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷೆ ತಮನ್ನಾ ಜಬೀನ್ (43) ಅವರ ಮನೆಯಲ್ಲಿ ಈ ಕಳವು ಸಂಭವಿಸಿದ್ದು, ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರೆ ತಮನ್ನಾ ಜಬೀನ್ ಅವರು ಕುಟುಂಬದೊಂದಿಗೆ ಕಡಬ ಅಡ್ಡಗದ್ದೆಯಲ್ಲಿರುವ ಗಂಡನ ಮನೆಯಲ್ಲಿ ವಾಸವಾಗಿದ್ದು, ಮಲಗುವ ಕೋಣೆಯ ಮರದ ಬಾಕ್ಸ್ನಲ್ಲಿ ಹಣ ಸಂಗ್ರಹಿಸಿಟ್ಟಿದ್ದರು. ಆಗಸ್ಟ್ 18 ರಂದು ಕಾರ್ಯಕ್ರಮ ನಿಮಿತ್ತ ಕುಟುಂಬ ಸಮೇತ ಉಡುಪಿಗೆ ತೆರಳಿ ಅಂದೇ ಮನೆಗೆ ಹಿಂತಿರುಗಿದ್ದರು. ಬಳಿಕ
Aug 281 min read


ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಪ್ರತಿಭಾ ಪುರಸ್ಕಾರ
ಬೆಳಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳಂದೂರು ವತಿಯಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ, ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶ್ರೀ ರಾಘವ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪದ್ಮನಾಭ ಕೆ., ಪ್ರಾಂಶುಪಾಲರು, ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ ಹಾಗೂ ಶ್ರೀ ವಚನ ಜಯರಾಮ್, ಅಧ್ಯಕ್ಷರು ವಿದ್ಯಾಭಿಮಾನಿಗಳ ಸಂಘ ಹಾಗೂ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ವೇಣುಗೋಪಾಲ ಕಳುವಾಜೆ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ವಿದ್ಯ
Aug 271 min read


ಕಡಬ: ಅಂಬೇಡ್ಕರ್ ಭವನದಲ್ಲಿ ಅಕ್ರಮ ಮನಿ ಸರ್ಕ್ಯುಲೇಷನ್ ಜಾಲ ಪತ್ತೆ, 8 ಜನರ ವಿರುದ್ಧ ಎಫ್ಐಆರ್
ಕಡಬ ಪೇಟೆಯ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರಿಗೆ ಆಮಿಷವೊಡ್ಡಿ ನಿಷೇಧಿತ ಮನಿ ಸರ್ಕ್ಯುಲೇಷನ್ ಯೋಜನೆ ನಡೆಸುತ್ತಿದ್ದ ಜಾಲವನ್ನು ಕಡಬ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಸಂಸ್ಥೆಯ ಮಾಲೀಕರು ಹಾಗೂ ಸ್ಥಳೀಯ ಏಜೆಂಟರು ಸೇರಿದಂತೆ ಒಟ್ಟು 8 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ದಿನಾಂಕ 23.08.2026 ರಂದು ಸಿಕ್ಕ ಗುಪ್ತಚರ ಮಾಹಿತಿ ಆಧರಿಸಿ ಕಡಬ ಪೊಲೀಸರು ದಾಳಿ ನಡೆಸಿದಾಗ, ಹಾವೇರಿ ಮೂಲದ 'ಕಿಂಗ್ಸ್ ಬಜಾರ್' (KINGS Bazaar) ಹೆಸರಿನಲ್ಲಿ ಸಾರ್ವಜನಿಕರನ್ನು ಸೇರಿಸಿ ಸಭೆ ನಡೆಸುತ್ತಿರುವುದು ಕಂಡುಬಂದಿದೆ. "ಕಂಪನಿಗೆ ಹಣ ತೊಡಗಿಸಿದರೆ ಶೀಘ್ರವಾಗಿ ಭಾರಿ ಲಾಭ ಗಳಿಸಬಹುದು, ರಿಯಾಯಿತಿ ದರದಲ
Aug 261 min read


ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಗಸ್ಟ್ 23ರ ರಾತ್ರಿ ಕಾರ್ಯಕ್ರಮವೊಂದರಿಂದ ಬಾಲಕಿಯನ್ನು ಮನೆಗೆ ತಲುಪಿಸುವ ನೆಪದಲ್ಲಿ ಆರೋಪಿ ಅದ್ದು ಪಡೀಲ್ ತನ್ನ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುವಾಗ ದಾರಿಮಧ್ಯೆ ಈ ಕೃತ್ಯ ಎಸಗಿದ್ದಾನೆ ಎಂದು ದೂರಲ್ಲಿ ತಿಳಿಸಲಾಗಿದೆ. ಬಾಲಕಿಯ ತಾಯಿ ನೀಡಿದ ದೂರಿನನ್ವಯ ಪೊಲೀಸರು ಬಿಎನ್ಎಸ್ ಕಲಂ 75 ಹಾಗೂ ಪೋಕ್ಸೋ ಕಾಯ್ದೆಯಡಿ (ಅ.ಕ್ರ. 46/2026) ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.
Aug 241 min read
Archive
bottom of page



