top of page
News Articles
Sathyapatha News Plus


ಪುತ್ತೂರು ಕೋಟಿ-ಚೆನ್ನಯ್ಯ ಜೋಡುಕೆರೆ ಕಂಬಳ: ಮದ್ಯ ಮಾರಾಟ ನಿಷೇದ
ಪುತ್ತೂರಿನ ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವಮಾರು ಗದ್ದೆಯಲ್ಲಿ 33ನೇ ವರ್ಷದ ‘ಕೋಟಿ-ಚೆನ್ನಯ್ಯ’ ಜೋಡುಕೆರೆ ಕಂಬಳವು ಜನವರಿ 24ರಿಂದ ಅದ್ದೂರಿಯಾಗಿ ಪ್ರಾರಂಭಗೊಳ್ಳಲಿದೆ. ಜನವರಿ 25ರವರೆಗೆ ನಡೆಯಲಿರುವ ಈ ಜಾನಪದ ಕ್ರೀಡಾಕೂಟಕ್ಕೆ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕಂಬಳಾಭಿಮಾನಿಗಳು ಹಾಗೂ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ. ಈ ಬೃಹತ್ ಜನಸಂದಣಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮದ ಯಶಸ್ವಿ ನಿರ್ವಹಣೆಗೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪುತ್ತೂರು ನಗರವು ಮತೀಯವಾಗಿ ಅತೀ ಸೂಕ್ಷ್ಮ ಪ್ರದೇಶವೆಂದು...
Jan 231 min read


ಮಂಗಳೂರಿಗೆ ಒಲಿದ ‘ದೇಶದ ಅತ್ಯಂತ ಸುರಕ್ಷಿತ ನಗರ’ ಎಂಬ ಹೆಗ್ಗಳಿಕೆ: ನಂಬಿಯೋ (Numbeo) ಜಾಗತಿಕ ವರದಿ ಬಿಡುಗಡೆ
ನಂಬಿಯೋ (Numbeo) ಸಂಸ್ಥೆಯು ಬಿಡುಗಡೆ ಮಾಡಿರುವ ‘ಸೇಫ್ಟಿ ಇಂಡೆಕ್ಸ್–2026’ರ (ಸುರಕ್ಷತಾ ಸೂಚ್ಯಂಕ) ವರದಿಯಲ್ಲಿ ಕರಾವಳಿಯ ಹೆಮ್ಮೆಯ ನಗರಿ ಮಂಗಳೂರು ಭಾರತದಲ್ಲೇ ಅತ್ಯಂತ ಸುರಕ್ಷಿತ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ವಿಶ್ವದಾದ್ಯಂತ ಒಟ್ಟು 304 ಪ್ರಮುಖ ನಗರಗಳನ್ನು ಒಳಗೊಂಡ ಈ ಸಮಗ್ರ ಸಮೀಕ್ಷೆಯಲ್ಲಿ, ಮಂಗಳೂರು ಅಗ್ರಸ್ಥಾನ ಪಡೆಯುವ ಮೂಲಕ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದೆ. ಈ ವರದಿಯು ಮಂಗಳೂರಿನ ನಾಗರಿಕರ ನೆಮ್ಮದಿಯ ಜೀವನ ಹಾಗೂ ನಗರದ ಶಿಸ್ತುಬದ್ಧ ವಾತಾವರಣಕ್ಕೆ ಹಿಡಿದ ಕನ್ನಡಿಯಾಗಿದೆ. ಸಾರ್ವಜನಿಕ ಸುರಕ್ಷತೆ, ಅಪರಾಧ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಹಾಗೂ ನಗರದ ಭದ
Jan 231 min read


ಪುತ್ತೂರು ‘ಲವ್-ಸೆಕ್ಸ್-ಧೋಖಾ’ ಪ್ರಕರಣ: ಜನವರಿ 31ರೊಳಗೆ ಮದುವೆಯಾಗದಿದ್ದರೆ ಸಂಧಾನವಿಲ್ಲ - ಪ್ರತಿಭಾ ಕುಳಾಯಿ ಎಚ್ಚರಿಕೆ
ಮಂಗಳೂರು: ಪುತ್ತೂರಿನಲ್ಲಿ ಸಂಚಲನ ಮೂಡಿಸಿರುವ 'ಲವ್-ಸೆಕ್ಸ್-ಧೋಖಾ' ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಧಾನ ಪ್ರಕ್ರಿಯೆಗೆ ಜನವರಿ 31ರ ಗಡುವು ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ತಿಳಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅವಧಿಯೊಳಗೆ ಮದುವೆ ನಡೆಯದಿದ್ದರೆ ಫೆಬ್ರವರಿ 7ರಂದು ಮಗುವಿನ ನಾಮಕರಣ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಿ, ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು. ಆರೋಪಿ ಕೃಷ್ಣ ಜೆ. ರಾವ್ ಕುಟುಂಬದವರು ಮದುವೆಗೆ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ, ಜ. 24ಕ್ಕೆ ನಿಗದ
Jan 221 min read


ಪುತ್ತೂರು ಕೋರ್ಟ್ನಲ್ಲಿ ಹೈಡ್ರಾಮ: ನ್ಯಾಯಾಧೀಶರ ಮುಂದೆಯೇ ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನ!
ಪುತ್ತೂರು: ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ವ್ಯಕ್ತಿಯೊಬ್ಬ ನ್ಯಾಯಾಧೀಶರ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆತಂಕಕಾರಿ ಘಟನೆ ನಡೆದಿದೆ. ಕಾವು ನಿವಾಸಿ ರವಿ (35) ಎಂಬಾತನೇ ಈ ಕೃತ್ಯ ಎಸಗಿದವನು. ತಕ್ಷಣವೇ ಆತನನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಘಟನೆಯಿಂದ ಕೋರ್ಟ್ ಸಂಕೀರ್ಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
Jan 221 min read


ಪುತ್ತೂರು: 53 ಲಕ್ಷ ಮೌಲ್ಯದ 106 ಕೆಜಿ ಗಾಂಜಾ ಜಪ್ತಿ; ಇಬ್ಬರು ಆರೋಪಿಗಳ ಬಂಧನ
ಪುತ್ತೂರು: ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣದ ಗುರಿ ಹೊಂದಿರುವ ಪುತ್ತೂರು ಪೊಲೀಸರು ಭಾನುವಾರ ಸಂಜೆ ಭರ್ಜರಿ ಕಾರ್ಯಾಚರಣೆ ನಡೆಸಿ, 53 ಲಕ್ಷ ರೂಪಾಯಿ ಮೌಲ್ಯದ 106 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಪಡುವನ್ನೂರು ಗ್ರಾಮದ ಸಜಂಕಾಡಿ ಎಂಬಲ್ಲಿ ಸಿನಿಮೀಯ ಮಾದರಿಯಲ್ಲಿ ನಡೆದ ಈ ದಾಳಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಬೆಳ್ತಂಗಡಿಯ ರಫೀಕ್ (37) ಮತ್ತು ಅಬ್ದುಲ್ ಸಾದಿಕ್ (37) ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸ್ಐ ಗುಣಪಾಲ ಜೆ. ನೇತೃತ್ವದ ತಂಡ, ಕಾರು ಮತ್ತು ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ 73 ಕಟ್ಟುಗಳ ಗಾಂಜಾವನ್ನು ಜ
Jan 201 min read


ಬೆಳ್ಳಾರೆ: ಬೈಕ್ ಮೋರಿಗೆ ಬಿದ್ದು ಮಗ ಸಾವು, ತಂದೆಗೆ ಗಂಭೀರ ಗಾಯ
ಬೆಳ್ಳಾರೆ: ಇಲ್ಲಿನ ಸಮೀಪದ ಕಲ್ಲೋಣಿ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ಮೋರಿಯಿಂದ ಕೆಳಗೆ ಬಿದ್ದ ಭೀಕರ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಕಡಬದ ಮರ್ದಾಳ ನಿವಾಸಿ ಎಂದು ಗುರುತಿಸಲಾಗಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಶಬರಿಮಲೆ ಪ್ರಸಾದವನ್ನು ಸುಳ್ಯಕ್ಕೆ ತಲುಪಿಸಲು ತಂದೆ-ಮಗ ಬೈಕಿನಲ್ಲಿ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮಗ ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಳ್ಳಾರೆ ಸಮೀಪದ ಕಲ್ಲೋಣಿಯಲ್ಲಿ ನಡೆದಿದೆ. ಮರ್ದಾಳ ಸಮೀಪದ ಕೊಲ್ಯ ನಿವಾಸಿ ನಿಶಾಂತ್ ಮೃತಪಟ್ಟ ದುರ್ದೈವಿ ಯುವಕ. ಇವರ ತಂದೆ ಮೋನಪ್ಪ ಅವರು ಅಪಘಾತದಲ್ಲಿ
Jan 201 min read


ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಜಾಲ್ಲೂರು ಗ್ರಾಮದ ಅಡ್ಕಾರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವರ್ಷಾವಧಿ ಜಾತ್ರೋತ್ಸವವು ಫೆಬ್ರವರಿ 18ರಿಂದ 20ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶಹರಿಪ್ರಕಾಶ್ ಅಡ್ಕಾರು ವಹಿಸಿದ್ದರು. ಈ ಸಂದರ್ಭದಲ್ಲೇ ಸಮಿತಿಯ ಸದಸ್ಯರಾದ ಪುರುಷೋತ್ತಮ, ನಂಗಾರು, ವಿಜಯಕುಮಾರ್ ನರಿಯೂರು, ಶ್ರೀಮತಿ ಪವಿತ್ರಾ ಭಾರತಿ, ಶ್ರೀಮತಿ ಸೌಮ್ಯಲಕ್ಷ್ಮಿ ಬೈತಡ್ಕ, ಮೊಕ್ತೆಸರ ಗುರುರಾಜ್ ಭಟ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಉತ್ಸವ ಸಮಿ
Jan 181 min read


ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು
ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಕುಮಾರಧಾರ ನದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಕೊಲ್ಲಮೊಗ್ರ ನಿವಾಸಿಗಳು ಎಂದು ಗುರುತಿಸಲಾಗಿದ್ದು, ಈ ಘಟನೆಯಿಂದ ಸುಬ್ರಹ್ಮಣ್ಯ ಮತ್ತು ಕೊಲ್ಲಮೊಗ್ರ ಭಾಗದಲ್ಲಿ ಶೋಕದ ಛಾಯೆ ಆವರಿಸಿದೆ. ಮೃತಪಟ್ಟವರನ್ನು ಸುಬ್ರಹ್ಮಣ್ಯದಲ್ಲಿ ಉದ್ಯಮ ನಡೆಸುತ್ತಿದ್ದ ಹರಿಪ್ರಸಾದ್ ಹಾಗೂ ಸುಜೀತ್ ಕೊಲ್ಲಮೊಗ್ರ ಎಂದು ಗುರುತಿಸಲಾಗಿದೆ. ಇವರಿಬ್ಬರು ರಜಾ ದಿನವಾದ ಇಂದು ಮಧ್ಯಾಹ್ನದ ವೇಳೆಗೆ ನದಿಯಲ್ಲಿ ಸ್ನಾನ ಮ
Jan 181 min read


ಎಡಮಂಗಲ: ಚಿರತೆ ಅಟ್ಟಹಾಸ – ಮನೆಯಂಗಳದಲ್ಲಿದ್ದ ನಾಯಿಯನ್ನು ಹೊತ್ತೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕಡಬ ತಾಲೂಕಿನ ಎಡಮಂಗಲ ಗ್ರಾಮದಲ್ಲಿ ಚಿರತೆ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಉಂಟಾಗಿದೆ. ಪಂಜ ಮೀಸಲು ಅರಣ್ಯ ವ್ಯಾಪ್ತಿಗೆ ಒಳಪಡುವ ಈ ಗ್ರಾಮದಲ್ಲಿ ಚಿರತೆಯ ಚಟುವಟಿಕೆಗಳು ದಿನೇದಿನೇ ಹೆಚ್ಚುತ್ತಿವೆ. ಜನವರಿ 7ರಂದು ಎಡಮಂಗಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಸುಮ ನೂಜಿಲ ಅವರ ಮನೆಯಂಗಳಕ್ಕೆ ನುಗ್ಗಿದ ಬೃಹತ್ ಗಾತ್ರದ ಚಿರತೆ, ಸಾಕು ನಾಯಿಯನ್ನು ಬೇಟೆಯಾಡಿ ಹೊತ್ತೊಯ್ದಿದೆ. ಈ ಸಂಪೂರ್ಣ ಘಟನೆ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯ ದಿನ ಕುಟುಂಬದವರು ಕಾರ್ಯಕ್ರಮಕ್ಕಾಗಿ ಹೊರಗಿದ್ದರಿಂದ ಮನೆಗೆ ಬೀಗ ಹಾಕಲಾಗಿತ್ತು. ಸಂಜೆ ಸುಮಾರು 7 ಗ
Jan 121 min read


ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ಸಾವು ಪ್ರಕರಣಕ್ಕೆ ಸ್ಫೋಟಕ ತಿರುವು: ಲೈಂಗಿಕ ದೌರ್ಜನ್ಯಕ್ಕೆ ನಿರಾಕರಿಸಿದ್ದಕ್ಕೆ ಕೊಲೆಗೈದು ಬೆಂಕಿ ಹಚ್ಚಿದ್ದ ನೆರೆಮನೆಯ ಯುವಕ ಅರೆಸ್ಟ್!
ಬೆಂಗಳೂರಿನಲ್ಲಿ ನಡೆದಿದ್ದ ಮಂಗಳೂರು ಮೂಲದ ಮಹಿಳಾ ಟೆಕ್ಕಿ ಶರ್ಮಿಳಾ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಈಗ ಆಘಾತಕಾರಿ ತಿರುವು ಸಿಕ್ಕಿದ್ದು, ಇದೊಂದು ವ್ಯವಸ್ಥಿತ ಕೊಲೆ ಎಂಬುದು ಪೊಲೀಸರ ತನಿಖೆಯಿಂದ ಬಯಲಾಗಿದೆ. ಜನವರಿ 3ರಂದು ರಾಮಮೂರ್ತಿನಗರದ ಫ್ಲಾಟ್ನಲ್ಲಿ ನಡೆದಿದ್ದ ಬೆಂಕಿ ಅವಘಡದಲ್ಲಿ ಶರ್ಮಿಳಾ ಮೃತಪಟ್ಟಿದ್ದರು. ಮೊದಲು ಇದನ್ನು ಶಾರ್ಟ್ ಸರ್ಕ್ಯೂಟ್ ಎಂದು ಶಂಕಿಸಲಾಗಿತ್ತಾದರೂ, ಮೃತರ ಸ್ನೇಹಿತರು ವ್ಯಕ್ತಪಡಿಸಿದ ಅನುಮಾನದ ಮೇರೆಗೆ ತನಿಖೆ ನಡೆಸಿದ ಪೊಲೀಸರು ನೆರೆಮನೆಯ 18 ವರ್ಷದ ಯುವಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಕೇರಳ ಮೂಲದ ಪಿಯುಸಿ ವಿದ್ಯಾರ್
Jan 121 min read


ಕಡಬ: ಅಕ್ರಮ ಮರ ಸಾಗಾಟ ಪತ್ತೆ; ಎಂಟು ಲಕ್ಷ ಮೌಲ್ಯದ ಸೊತ್ತು ವಶ
ಕಡಬ: ತಾಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಕಲೇಶಪುರದಿಂದ ಮಂಗಳೂರಿಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮರದ ದಿಮ್ಮಿಗಳನ್ನು ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡವು ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಮರಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ವಾಹನವನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಂಡಿದೆ. ಅರಣ್ಯ ಇಲಾಖೆಯ ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯ ಅಧಿಕಾರಿಗಳಾದ ವಿನಯ್ ಕುಮಾರ್ ಮತ್ತು ಪ್ರವೀಣ್ ಪಿ, ಗಸ್ತು ಅರಣ್ಯ ಪಾಲಕರಾದ ವಿನಯ ಚಂದ್ರ ಹಾಗೂ ಶಿವಾನಂದ ಕುದುರ
Jan 101 min read


ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳವರೆಗೆ ಹೊಸ ರೈಲು ಸಂಪರ್ಕಕ್ಕೆ ಸರ್ವೆ
ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದವರೆಗೆ ಹೊಸ ರೈಲು ಸಂಪರ್ಕ ಕಲ್ಪಿಸುವ ಮಹತ್ವದ ಯೋಜನೆ ರೂಪುಗೊಳ್ಳುತ್ತಿದೆ ಎಂದು ರೈಲ್ವೇ ಖಾತೆಯ ಸಹಾಯಕ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಅಧಿಕಾರಿಗಳೊಂದಿಗೆ ನಡೆದ ವೀಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಬೆಂಗಳೂರು–ಮಂಗಳೂರು ನಡುವಿನ ರೈಲು ಮಾರ್ಗದ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಂಡಿದ್ದು, ಈ ಮಾರ್ಗದಲ್ಲಿ ಶೀಘ್ರದಲ್ಲೇ ವಂದೇ ಭಾರತ್ ರೈಲು ಆರಂಭಿಸಲಾಗುವುದು ಎಂದು ಹೇಳಿದರು. ಇದೇ ವೇಳೆ, ಧಾರ್ಮಿಕ ಹಾಗೂ ಪ್ರವಾಸೋದ್ಯಮದ ದೃಷ್ಟಿಯಿಂದ ಪ್ರಮುಖ ಕೇಂದ್ರಗಳಾದ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳ ನಡುವೆ ನೇರ ರೈಲು ಸಂಪರ್ಕ ಕಲ್ಪಿಸುವ ಉದ್ದೇಶದಿ
Jan 81 min read


ಪುತ್ತೂರು: ವಿದ್ಯುತ್ ತಂತಿ ತುಂಡಾಗಿ ಬಿದ್ದು ಅಗ್ನಿ ಅವಘಡ - 900ಕ್ಕೂ ಅಧಿಕ ಅಡಿಕೆ ಗಿಡಗಳು ಭಸ್ಮ
ಪುತ್ತೂರು: ತಾಲೂಕಿನ ಕುರಿಯ ಗ್ರಾಮದ ಬೂಡಿಯಾರು ಎಂಬಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಮಾರು 900ಕ್ಕೂ ಹೆಚ್ಚು ಅಡಿಕೆ ಗಿಡಗಳು ಬೆಂಕಿಗಾಹುತಿಯಾಗಿವೆ. ಬೂಡಿಯಾರಿನ ಗಣೇಶ್ ರೈ ಎಂಬವರಿಗೆ ಸೇರಿದ ತೋಟದ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ಇದ್ದಕ್ಕಿದ್ದಂತೆ ತುಂಡಾಗಿ ಬಿದ್ದಿದ್ದೇ ಈ ದುರಂತಕ್ಕೆ ಕಾರಣವಾಗಿದೆ. ಉತ್ತಮವಾಗಿ ಬೆಳೆದು ನಿಂತಿದ್ದ ಅಡಿಕೆ ಗಿಡಗಳು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾಗಿದ್ದು, ಕೃಷಿಕರ ಶ್ರಮವೆಲ್ಲವೂ ಬೂದಿಯಾಗಿದೆ. ಮಂಗಳವಾರ ಮಧ್ಯಾಹ್ನದ ವೇಳೆಗೆ ವಿದ್ಯುತ್ ತಂತಿ ಕಡಿದು ಬಿದ್ದಾಗ, ಅದರಲ್ಲಿ ಹರಿಯುತ್ತಿದ್ದ ವಿದ್ಯುತ್ನಿಂದಾಗಿ ಕಿಡಿ ಉ
Jan 71 min read


ಫೆಬ್ರವರಿ 1ರ ಭಾನುವಾರವೇ ಕೇಂದ್ರ ಬಜೆಟ್ ಮಂಡನೆ ಸಾಧ್ಯತೆ: ಇತಿಹಾಸದಲ್ಲೇ ಮೊದಲ ಬಾರಿ ಇಂತಹದೊಂದು ನಿರ್ಧಾರ!
ಹೊಸದಿಲ್ಲಿ: ಮುಂದಿನ 2026-27ರ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1ರಂದು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ. ವಿಶೇಷವೆಂದರೆ, ಬಜೆಟ್ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಭಾನುವಾರದಂದು ಈ ಆಯವ್ಯಯ ಮಂಡನೆಯಾಗುತ್ತಿದೆ. ಬಜೆಟ್ ಅಧಿವೇಶನವು ಜನವರಿ 28ರಂದು ರಾಷ್ಟ್ರಪತಿಗಳ ಭಾಷಣದೊಂದಿಗೆ ಆರಂಭವಾಗಲಿದ್ದು, ಸಂಸದೀಯ ವ್ಯವಹಾರಗಳ ಕುರಿತ ಸಂಪುಟ ಸಮಿತಿಯು (CCPA) ಬುಧವಾರದ ಸಭೆಯಲ್ಲಿ ಈ ಕುರಿತು ಅಂತಿಮ ಮೊಹರು ಒತ್ತಲಿದೆ ಎಂದು ತಿಳಿದುಬಂದಿದೆ. ೨೦೧೭ರಿಂದೀಚೆಗೆ ಬಜೆಟ್ ಅನ್ನು ಫೆಬ್ರವರಿ 1ರ ಬೆಳಿಗ್ಗೆ 11 ಗಂಟೆಗೆ ಮಂಡಿಸುವ ಸಂಪ್ರದಾಯವನ್ನು ಮಾಜಿ ಹಣಕಾಸು ಸಚಿವ ಅರ
Jan 71 min read


ಧಾರ್ಮಿಕ ಕೇಂದ್ರಗಳ ಹಾದಿಯಲ್ಲೇ ಮಾಲಿನ್ಯ: ಭಕ್ತರಿಂದ ತೀವ್ರ ಅಸಮಾಧಾನ
ಅಲಂಕಾರು ಮತ್ತು ಕುದ್ಮಾರು ಗ್ರಾಮಗಳನ್ನು ಸಂಪರ್ಕಿಸುವ ಪ್ರಮುಖ ರಸ್ತೆಯ ಬದಿಯಲ್ಲಿ ಅತಿಯಾಗಿ ಕಸ ಸುರಿಯಲಾಗುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ರಸ್ತೆ ಪ್ರಸಿದ್ಧ ಧಾರ್ಮಿಕ ಕೇಂದ್ರಗಳಾದ ಕೂರಾ ಮಸೀದಿ, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಗಳಿಗೆ ತೆರಳುವ ಮುಖ್ಯ ಹಾದಿಯಾಗಿದ್ದು, ದಿನನಿತ್ಯ ನೂರಾರು ಭಕ್ತರು ಈ ಮಾರ್ಗವನ್ನು ಅವಲಂಬಿಸಿದ್ದಾರೆ. ಕುದ್ಮಾರಿನಿಂದ ಕೇವಲ 50–100 ಮೀಟರ್ ಅಂತರದಲ್ಲಿರುವ ಅಲಂಕಾರು ಮುಖ್ಯ ರಸ್ತೆಯ ಬದಿಯಲ್ಲಿ ಇತ್ತೀಚಿನ ದಿನಗಳಲ್ಲಿ ಹೋಟೆಲ್ ತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಕೊಳೆತ ವಸ್
Jan 61 min read


ಹದಗೆಟ್ಟ ಕಡಬ ಜೂನಿಯರ್ ಕಾಲೇಜು ರಸ್ತೆ, ದುರಸ್ತಿಗೆ ಆಗ್ರಹ.
ಕಡಬ ಪಟ್ಟಣದ ಪ್ರಮುಖ ಕೇಂದ್ರ ಬಿಂದುವಾದ ತಾಲೂಕು ಕಚೇರಿಯಿಂದ ಜೂನಿಯರ್ ಕಾಲೇಜಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ಸಾರ್ವಜನಿಕರ ಸಂಚಾರಕ್ಕೆ ದುಸ್ಥಿತಿಯಲಿದೆ. ರಸ್ತೆಯುದ್ದಕ್ಕೂ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಗಾಲದಲ್ಲಿ ಈ ಗುಂಡಿಗಳಲ್ಲಿ ನೀರು ತುಂಬಿ ಕೆರೆಯಂತಾಗುತ್ತಿದ್ದು, ರಸ್ತೆಯ ಆಳ ತಿಳಿಯದೆ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡಿರುವ ನಿದರ್ಶನಗಳೂ ಇವೆ. ಈ ರಸ್ತೆಯು ದೈನಂದಿನ ನೂರಾರು ವಿದ್ಯಾರ್ಥಿಗಳು, ಸರ್ಕಾರಿ ಕಚೇರಿಗೆ ಬರುವ ಸಾರ್ವಜನಿಕರು ಹಾಗೂ
Jan 61 min read


ಪುತ್ತೂರು: ತಾಯಿ-ಮಗು ಕೆರೆಗೆ ಹಾರಿ ಸಾವು; ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲು
ಪುತ್ತೂರು: ತಾಲೂಕಿನ ವ್ಯಾಪ್ತಿಯಲ್ಲಿ ತಾಯಿ ಮತ್ತು ಮಗು ಕೆರೆಗೆ ಹಾರಿ ಮೃತಪಟ್ಟಿರುವ ಅತ್ಯಂತ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ಮೃತರನ್ನು 34 ವರ್ಷದ ಮಹಿಳೆ ಮತ್ತು ಆಕೆಯ ಮೂರು ವರ್ಷದ ಗಂಡು ಮಗು ಎಂದು ಗುರುತಿಸಲಾಗಿದೆ. ಈ ದಾರುಣ ಘಟನೆಯು ಸ್ಥಳೀಯರಲ್ಲಿ ತೀವ್ರ ಶೋಕವನ್ನುಂಟು ಮಾಡಿದ್ದು, ಸಾವಿನ ನಿಖರ ಕಾರಣಗಳ ಬಗ್ಗೆ ತನಿಖೆ ಚುರುಕುಗೊಂಡಿದೆ. ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಎರಡು ಪ್ರತ್ಯೇಕ ದೂರುಗಳು ದಾಖಲಾಗಿವೆ. ಮೃತ ಮಹಿಳೆಯ ತಂದೆ ರುಕ್ಕಯ್ಯ ಗೌಡ (66) ಅವರು ನೀಡಿದ ದೂರಿನಂತೆ, ಮಗಳು ತನ್ನ ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್
Jan 51 min read


ಮಂಗಳೂರು: ಕಾರು ಅಪಘಾತದಿಂದ ಬೋಂಡೇಲ್ ಚರ್ಚ್ನ ಧರ್ಮಗುರುಗಳು ಪವಾಡಸದೃಶ ಪಾರು
ಮಂಗಳೂರು: ನಗರದ ಹೊರವಲಯದ ಕಾವೂರು-ಮರಕಡ ರಸ್ತೆಯ ಮರಕಡ ಎಂಬಲ್ಲಿ ಗುರುವಾರ ಸಂಜೆ ನಡೆದ ಭೀಕರ ಕಾರು ಅಪಘಾತದಲ್ಲಿ ಬೋಂಡೇಲ್ನ ಸಂತ ಲಾರೆನ್ಸರ ಪುಣ್ಯಕ್ಷೇತ್ರದ ಧರ್ಮಗುರುಗಳಾದ ಫಾ. ಆಂಡ್ರ್ಯೂ ಲಿಯೋ ಡಿಸೋಜಾ ಅವರು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊಸ ವರ್ಷದ ಸಂಭ್ರಮದ ನಡುವೆಯೇ ನಡೆದ ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಫಾ. ಆಂಡ್ರ್ಯೂ ಅವರು ನೀರುಮಾರ್ಗದಲ್ಲಿ ಆಯೋಜಿಸಲಾಗಿದ್ದ ಹೊಸ ವರ್ಷಾಚರಣೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು, ಬಜಪೆ ಮಾರ್ಗವಾಗಿ ಬೋಂಡೇಲ್ ಕಡೆಗೆ ತಮ್ಮ ಕಾರಿನಲ್ಲಿ ವಾಪಸ್ಸು ಬರುತ್ತಿದ್ದರು. ಈ ವೇಳೆ ಮರಕ
Jan 41 min read


ವಿಟ್ಲ: ದ್ವಿಚಕ್ರ ವಾಹನದ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ – ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ
ವಿಟ್ಲ: ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ನಿಟ್ಟಿನಲ್ಲಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ದ್ವಿಚಕ್ರ ವಾಹನ ಚಾಲಕರು ಮಾತ್ರವಲ್ಲದೆ, ಅವರ ಹಿಂದೆ ಕುಳಿತು ಸಂಚರಿಸುವ ಹಿಂಬದಿ ಸವಾರರು ಕೂಡ ಇನ್ನು ಮುಂದೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ವಿಟ್ಲ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಅಪಘಾತಗಳ ಸಂದರ್ಭದಲ್ಲಿ ಪ್ರಾಣಹಾನಿ ತಪ್ಪಿಸುವ ಉದ್ದೇಶದಿಂದ ಈ ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಳ್ಳಲಾಗಿದೆ. ಈ ನಿಯಮದ ಕುರಿತು ಜಾಗೃತಿ ಮೂಡಿಸಲು ಈಗಾಗಲೇ ವಿಟ್ಲ ಪೇಟೆಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆಗೆ ಇಳಿದಿದ್ದಾ
Jan 41 min read
Archive
bottom of page





