top of page
News Articles
Sathyapatha News Plus


ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಯುಪಿಸಿಎಲ್ ಗುತ್ತಿಗೆ ವೈಮನಸ್ಸೇ ಕೊಲೆಗೆ ಕಾರಣ? ಸುಪಾರಿ ಕಿಂಗ್ ಪತ್ತೆಗೆ ಜಾಲ!
ಉಡುಪಿಯ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜ ಅವರ ಬರ್ಬರ ಹತ್ಯೆ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಉತ್ತರ ಭಾರತದ ವ್ಯಕ್ತಿಯೊಬ್ಬ ಹತ್ಯೆಗೆ ಸುಪಾರಿ ನೀಡಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಯುಪಿಸಿಎಲ್ ಗುತ್ತಿಗೆಗೆ ಸಂಬಂಧಿಸಿದಂತೆ ಉಂಟಾದ ಆರ್ಥಿಕ ವೈಮನಸ್ಸೇ ಈ ಕೊಲೆಗೆ ಪ್ರಮುಖ ಕಾರಣವಾಗಿರಬಹುದು ಎಂಬ ಬಲವಾದ ಅನುಮಾನ ವ್ಯಕ್ತವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರು, ಡೇವಿಡ್ ಹಾಗೂ ಮತ್ತೊಬ್ಬ ಗುತ್ತಿಗೆದಾರನ ನಡುವೆ ಕೋಟಿಗಟ್ಟಲೆ ಮೌಲ್ಯದ ಗುತ್ತಿಗೆ ವಿಚಾರದಲ್ಲಿ ತೀವ್ರ ವೈಮನಸ್ಸು ಉಂಟಾಗಿತ್
Aug 91 min read


ಫಾರ್ಮಸಿ, ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಫಾರ್ಮಸಿ ಆಫೀಸರ್ ಮತ್ತು ನರ್ಸಿಂಗ್ ಆಫೀಸರ್ ಸೇರಿದಂತೆ 233 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆಗಸ್ಟ್ 30ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೇಮಕಾತಿಗೆ ಸಂಬಂಧಿಸಿದ ಅಂತಿಮ ಮತ್ತು ಅಧಿಕೃತ ಮಾಹಿತಿಗಾಗಿ KEA ವೆಬ್ಸೈಟ್ನಲ್ಲಿರುವ ಅಧಿಸೂಚನೆಯನ್ನೇ ಪರಿಗಣಿಸುವುದು ಸೂಕ್ತ. *233 ಹುದ್ದೆಗಳಿಗೆ ನೇಮಕಾತಿ:* ಈ ನೇಮಕಾತಿಯಲ್ಲಿ ಕರ್ನಾಟಕದ ಉಳಿದ ವೃಂದ (RPC) ಹಾಗೂ ಕಲ್ಯಾಣ ಕರ್ನಾಟಕ (KK) ವೃಂದದ ಹುದ್ದೆಗಳು ಸೇರಿವೆ. ಒಟ್ಟು 233 ಹುದ್ದೆಗಳಲ್ಲಿ 98 ಫಾರ್ಮಸಿ ಆಫೀಸರ್ RPC, 90 ನರ್ಸಿಂಗ್ ಆಫೀಸರ್ RPC, 1
Aug 82 min read


ಭೂಮಾಪಕರ 750 ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಭೂ ದಾಖಲೆಗಳ ಇಲಾಖೆಯಲ್ಲಿ 750 ಭೂಮಾಪಕ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಗಡುವನ್ನು ಆಗಸ್ಟ್ 20 ರವರೆಗೆ ವಿಸ್ತರಿಸಲಾಗಿದ್ದು, ಆಯ್ಕೆಯಾದವರಿಗೆ 76,100 ರೂ.ವರೆಗೆ ವೇತನ ದೊರೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಆರಂಭಿಕ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಆಗಸ್ಟ್ 7 ಕೊನೆಯ ದಿನವಾಗಿತ್ತು. ಇದೀಗ ಅಭ್ಯರ್ಥಿಗಳಿಗೆ ಹೆಚ್ಚುವರಿ ಅವಕಾಶ ನೀಡಲು ಅರ್ಜಿ ಸಲ್ಲಿಕೆ ಗಡುವನ್ನು ಆಗಸ್ಟ್ 20 ರವರೆಗೆ ವಿಸ್ತರಿಸಲಾಗಿದೆ. *ಒಟ್ಟು 750 ಭೂಮಾಪಕ ಹುದ್ದೆಗಳು:* KEA ನೇಮಕಾತಿಯಲ್ಲಿ ಒ
Aug 82 min read


ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಗಂಭೀರ? ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವರದಿ
ಟೆಹ್ರಾನ್: ಇರಾನ್ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರು ಅತ್ಯಂತ ಗಂಭೀರ ಆರೋಗ್ಯ ಸ್ಥಿತಿಯಲ್ಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ವರದಿಗಳು ಶುಕ್ರವಾರ ಹರಿದಾಡಿವೆ. ಇಸ್ರೇಲಿ ಮಾಧ್ಯಮ ಚಾನೆಲ್ 14 ಸೇರಿದಂತೆ ಕೆಲವು ಮಾಧ್ಯಮಗಳು ಇರಾನ್ನ ಒಳಗಿನ ಮೂಲಗಳನ್ನು ಉಲ್ಲೇಖಿಸಿ ಈ ಮಾಹಿತಿ ಪ್ರಕಟಿಸಿವೆ. ಜೆರುಸಲೆಮ್ ಪೋಸ್ಟ್ ವರದಿ ಮಾಡಿರುವಂತೆ, ಖಮೇನಿ ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಹದಗೆಟ್ಟಿದೆ ಎಂಬ ವದಂತಿಗಳು ಕೇಳಿಬರುತ್ತಿದ್ದು, ಅವರ ಸಾವಿನ ಸಾಧ್ಯತೆಯ ಬಗ್ಗೆಯೂ ಕೆಲವು ಮೂಲಗಳು ಆತಂಕ ವ್ಯಕ್ತಪಡಿಸಿವೆ. ಆದರೆ ಈ ಹೇಳಿಕೆಗಳಿಗೆ ಸ್ವತಂತ್ರ ಅಥವಾ ಅಧಿಕೃತ ದೃಢೀಕರಣ ಲಭ್ಯವಾ
Aug 81 min read


ಹಣಕಾಸು ವೈಷಮ್ಯಕ್ಕೆ ಕಾಂಗ್ರೆಸ್ ಮುಖಂಡನ ಹತ್ಯೆ: ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು!
ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜಾ ಅವರ ಹಾಡಹಗಲಿನ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಮೂವರು ಶಾರ್ಪ್ ಶೂಟರ್ಗಳನ್ನು ಬಂಧಿಸಿದ್ದಾರೆ. ಹಣಕಾಸಿನ ವೈಷಮ್ಯದ ಹಿನ್ನೆಲೆಯಲ್ಲಿ ಉತ್ತರ ಭಾರತದ ಸುಪಾರಿ ಕಿಲ್ಲರ್ಗಳಿಗೆ ಗುತ್ತಿಗೆ ನೀಡಿ ಈ ಕೊಲೆ ಮಾಡಿಸಲಾಗಿದೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಗಳನ್ನು ಉತ್ತರ ಪ್ರದೇಶ, ಜಾರ್ಖಂಡ್ ಹಾಗೂ ಬಿಹಾರ ಮೂಲದ ಶಾರ್ಪ್ ಶೂಟರ್ಗಳು ಎಂದು ಗುರುತಿಸಲಾಗಿದೆ. ಹತ್ಯೆಯ ನಂತರ ಪರಾರಿಯಾಗಲು ಯತ್ನಿಸುತ್ತಿದ್ದ ಆ
Aug 81 min read


ಡೇವಿಡ್ ಡಿಸೋಜಾ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಶಿರೂರು ಬಳಿ ಮೂವರು ಶೂಟರ್ಗಳು ಅರೆಸ್ಟ್
ಹಣಕಾಸಿನ ವಿಚಾರಕ್ಕೆ ಉತ್ತರ ಭಾರತದ ಶೂಟರ್ಗಳಿಗೆ ಸುಪಾರಿ; ಮೂವರು ಆರೋಪಿಗಳ ಬಂಧನ — ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡು ಉಡುಪಿ, ಆ. 8: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಡೇವಿಡ್ ಡಿಸೋಜಾ ಅವರನ್ನು ಹತ್ಯೆ ಮಾಡಲು ಉತ್ತರ ಭಾರತದ ಸುಪಾರಿ ಕಿಲ್ಲರ್ಗಳಿಗೆ ಗುತ್ತಿಗೆ ನೀಡಲಾಗಿತ್ತು ಎಂಬುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ, ಜಾರ್ಖಂಡ್ ಹಾಗೂ ಬಿಹಾರ ಮೂಲದ
Aug 82 min read


ಭಾರತದ ಅಧಿಕೃತ ನಕ್ಷೆಗಳಲ್ಲಿ ಅರುಣಾಚಲ ಪ್ರದೇಶದ 27 ಸ್ಥಳಗಳ ಹೆಸರು: ಚೀನಾಗೆ ಭಾರತದ ತಕ್ಕ ತಿರುಗೇಟು
ಅರುಣಾಚಲ ಪ್ರದೇಶದ 27 ಪ್ರಮುಖ ಸ್ಥಳಗಳನ್ನು ಸರ್ವೇ ಆಫ್ ಇಂಡಿಯಾದ ಅಧಿಕೃತ ನಕ್ಷೆಗಳಲ್ಲಿ ಔಪಚಾರಿಕವಾಗಿ ಗುರುತಿಸುವ ಮೂಲಕ ಭಾರತ ಸರ್ಕಾರವು ಚೀನಾಗೆ ಸೂಕ್ತ ಪ್ರತ್ಯುತ್ತರ ನೀಡಿದೆ. ಗಡಿ ಪ್ರದೇಶದ ಸ್ಥಳಗಳ ಹೆಸರುಗಳನ್ನು ಪದೇ ಪದೆ ಏಕಪಕ್ಷೀಯವಾಗಿ ಬದಲಾಯಿಸಲು ಯತ್ನಿಸುತ್ತಿದ್ದ ಬೀಜಿಂಗ್ನ ನಡೆಯನ್ನು ಭಾರತ ಇದರಿಂದ ವಿಫಲಗೊಳಿಸಿದೆ. ಅರುಣಾಚಲ ಪ್ರದೇಶ ಸರ್ಕಾರ ಹಾಗೂ ಕೇಂದ್ರ ಗೃಹ ಸಚಿವಾಲಯದ ಸಮಾಲೋಚನೆಯೊಂದಿಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ. ಚೀನಾ 'ಝಂಗ್ನಾನ್' ಎಂದು ಪ್ರತಿಪಾದಿಸುವ ಈ ಪ್ರದೇಶಗಳ ಭೌಗೋಳಿಕ ಸ್ಥಳಗಳಿಗೆ ನಿಖರವಾದ ಭಾರತೀಯ ಗುರುತನ್ನು ನೀಡುವುದು ಹಾಗೂ ಸಾರ್ವಜನಿಕರ
Aug 81 min read


ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ: ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಆತಂಕ
ಕೌಲಾಲಂಪುರದಿಂದ ಕೊಚ್ಚಿಗೆ ಆಗಮಿಸುತ್ತಿದ್ದ ಬಾಟಿಕ್ ಏರ್ ವಿಮಾನದಲ್ಲಿ ಪ್ರಯಾಣಿಕನೊಬ್ಬ ತುರ್ತು ನಿರ್ಗಮನ ದ್ವಾರ ತೆರೆಯಲು ಯತ್ನಿಸಿದ ಭೀಕರ ಘಟನೆ ನಡೆದಿದೆ. ವಿಮಾನವು ಲ್ಯಾಂಡಿಂಗ್ ಆಗುವ ಕೆಲವೇ ನಿಮಿಷಗಳ ಮೊದಲು ನಡೆದ ಈ ಕೃತ್ಯದಿಂದಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ತೀವ್ರ ಭಯಭೀತರಾಗಿದ್ದರು. ಆರೋಪಿಯನ್ನು ಕೇರಳದ ಪಾಲಕ್ಕಾಡ್ ಜಿಲ್ಲೆಯ ಕೂತನಾಡ್ ನಿವಾಸಿ, 34 ವರ್ಷದ ಜಮ್ಶೀರ್ ಅಥಾನಿಕ್ಕಲ್ ಎಂದು ಗುರುತಿಸಲಾಗಿದೆ. ತುರ್ತು ಬಾಗಿಲನ್ನು ತೆರೆಯಲು ಯತ್ನಿಸಿದ ಈತನನ್ನು ತಡೆಯಲು ಬಂದ ಕ್ಯಾಬಿನ್ ಸಿಬ್ಬಂದಿ ಹಾಗೂ ಸಹ ಪ್ರಯಾಣಿಕರಿಗೆ ಈತ ಬೆದರಿಕೆ ಹಾಕಿದ್ದಾನೆ. ಬಳಿಕ ಎಲ್ಲರೂ ಸೇರಿ ಆತನನ್ನು
Aug 81 min read


ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಪುತ್ತೂರು ಉಪವಿಭಾಗದ 4 ತಾಲೂಕುಗಳಲ್ಲಿ ಆ.8ರಂದು ಶಾಲಾ-ಕಾಲೇಜುಗಳಿಗೆ ರಜೆ
ಮಂಗಳೂರು, ಆ.7: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ನೀಡಿರುವ ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದಾದ್ಯಂತ ಮಳೆ ಮುಂದುವರಿದಿದೆ. ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಲವು ತುರ್ತು ಕ್ರಮಗಳನ್ನು ಕೈಗೊಂಡಿದೆ. ಪುತ್ತೂರು ಉಪವಿಭಾಗದ ತಹಶೀಲ್ದಾರರ ಮನವಿಯ ಮೇರೆಗೆ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ
Aug 71 min read


ಅಪ್ಪನ ರೂಪದಲ್ಲಿ ಬಂದ ಕ್ರೂರಿ..! ನಾಲ್ಕು ವರ್ಷದ ಮಗಳ ಮೇಲೆ ಅಮಾನವೀಯ ಕೃತ್ಯ
ಗಾಂಧೀನಗರ (ಗುಜರಾತ್): ಮಾನವೀಯತೆಯನ್ನೇ ಬೆಚ್ಚಿಬೀಳಿಸುವ ಘಟನೆ ಗುಜರಾತ್ನ ಗಾಂಧೀನಗರದಲ್ಲಿ ಬೆಳಕಿಗೆ ಬಂದಿದೆ. ಪತ್ನಿ ಮನೆ ಬಿಟ್ಟು ತವರು ಮನೆಗೆ ತೆರಳಿದ ಕೋಪದಲ್ಲಿ ಸ್ವಂತ ನಾಲ್ಕು ವರ್ಷದ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 32 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿ ತನ್ನ ಮನೆಯಲ್ಲಿ ವಾಸವಾಗಿದ್ದ ಪತ್ನಿಯ ಸ್ನೇಹಿತೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದನು. ಆಕೆ ಒಬ್ಬಳೇ ಇದ್ದ ವೇಳೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪವೂ ಕೇಳಿಬಂದಿದೆ. ಈ ವಿಚಾರ ತಿಳಿದ ಬಳಿಕ ಪತಿ-ಪತ್ನಿ ನಡುವೆ ತೀವ್ರ ಜಗಳ ನಡೆದಿದ್ದು, ಮನನೊಂದ ಪತ್ನಿ ತನ್ನ ನಾಲ್ಕು
Aug 71 min read


ಕುಂದಾಪುರ ಶೂಟೌಟ್ ಬಳಿಕ ಉಡುಪಿಯಲ್ಲಿ ಮತ್ತೊಂದು ರಕ್ತಪಾತಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಗುಂಡಿನ ದಾಳಿಗೆ ಬಲಿ
ಉಡುಪಿ: ಕುಂದಾಪುರದಲ್ಲಿ ನಡೆದ ಶೂಟೌಟ್ ಘಟನೆ ಮಾಸುವ ಮುನ್ನವೇ, ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಗುಂಡಿನ ದಾಳಿ ಸಂಭವಿಸಿದ್ದು, ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ (ಪ್ರಿನ್ಸ್) ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಈ ಘಟನೆಯಿಂದ ಕರಾವಳಿ ಭಾಗವೇ ಬೆಚ್ಚಿಬಿದ್ದಿದೆ. ಸ್ಥಳೀಯವಾಗಿ ಪ್ರಭಾವಿ ನಾಯಕನಾಗಿದ್ದ ಡೇವಿಡ್ ಡಿಸೋಜಾ ಅವರು ಮುದರಂಗಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾಗಿದ್ದು, ಸಾರ್ವಜನಿಕ ಸೇವೆಯಲ್ಲಿ ಸಕ್ರಿಯರಾಗಿದ್ದರು. ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಶೂಟೌಟ್ಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬ
Aug 71 min read


ವರ್ಕ್ ಫ್ರಂ ಹೋಂ' ಹೆಸರಲ್ಲಿ ಕೋಟ್ಯಂತರ ವಂಚನೆ: ಇನ್ಸ್ಟಾಗ್ರಾಂ ರೀಲ್ಸ್ ಮೂಲಕ ಜನರಿಗೆ ಬಲೆ ಬೀಸಿದ್ದ ದಂಪತಿ ಬಂಧನ
ಇನ್ಸ್ಟಾಗ್ರಾಂ ರೀಲ್ಸ್ ಮೂಲಕ ‘ವರ್ಕ್ ಫ್ರಂ ಹೋಂ’ ಹೆಸರಿನಲ್ಲಿ ಪ್ಯಾಕಿಂಗ್ ಕೆಲಸ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ವಂಚನೆ ನಡೆಸಿದ್ದ ಆರೋಪದ ಮೇಲೆ ಕಿರಣ್ ಮತ್ತು ಆತನ ಪತ್ನಿ ಆರತಿ ಅವರನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ‘ಕಾಳಿಕಾ ದೇವಿ ಎಂಟರ್ಪ್ರೈಸಸ್’ ಹೆಸರಿನಲ್ಲಿ ನಕಲಿ ಸಂಸ್ಥೆ ಸ್ಥಾಪಿಸಿ, ಮೇಣದ ಬತ್ತಿ, ಅಗರಬತ್ತಿ ಹಾಗೂ ಡ್ರೈ ಫ್ರೂಟ್ಸ್ ಪ್ಯಾಕಿಂಗ್ ಕೆಲಸವನ್ನು ಮನೆಬಾಗಿಲಿಗೆ ನೀಡುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ಮಾಡುತ್ತಿದ್ದರು. ಕಚ್ಚಾ ವಸ್ತುಗಳ ಪ್ಯಾಕಿಂಗ್ ಕೆಲಸಕ್ಕಾಗಿ ₹1 ಲಕ್ಷ ಡೆಪಾಸಿಟ್ ಮಾಡಿದರೆ ಪ್ರತಿ ತಿಂಗಳು
Aug 71 min read


ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಉಡುಪಿಯ ಯುವತಿ ಆತ್ಮಹತ್ಯೆ
ಉಡುಪಿ, ಆ.7: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿಯೊಬ್ಬರು ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಮಾಡಿಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತರನ್ನು ಕಲ್ಮಾಡಿ ನಿವಾಸಿ ಕೃತಿ ಬಂಗೇರಾ (27) ಎಂದು ಗುರುತಿಸಲಾಗಿದೆ. ಅವರು ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದು, ನಗರದ ಕಡಿಯಾಳಿ ಸಮೀಪದ ಖಾಸಗಿ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಕೆಲವು ತಿಂಗಳಿಂದ ಅವರು ಕೆಲಸಕ್ಕೆ ತೆರಳದೆ ಮನೆಯಲ್ಲೇ ಇದ್ದರು ಎಂದು ತಿಳಿದುಬಂದಿದೆ. ಘಟನೆಯ ದಿನ ತಾಯಿ ಕೆಲಸದ ನಿಮಿತ್ತ ಹೊರಗೆ ತೆರಳಿ
Aug 71 min read


ಬಿ.ಸಿ.ರೋಡ್ನಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಯಾಗಿ ಸ್ಕೂಟರ್ ಸಹಸವಾರ ಸಾವು, ಸವಾರನಿಗೆ ತೀವ್ರ ಗಾಯ
ಬಂಟ್ವಾಳದ ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸಹಸವಾರ ಯಶ್ವಂತ್ ಕುಲಾಲ್ ಮೃತಪಟ್ಟಿದ್ದು, ಸವಾರ ದಯಾನಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲ್ಲಡ್ಕ ಕಡೆಯಿಂದ ಲೊರೆ ಕಡೆಗೆ ಅತಿವೇಗ ಮತ್ತು ಅಜಾಗರೂಕತೆಯಿಂದ ಧಾವಿಸಿ ಬಂದ ಟಿಪ್ಪರ್ ಲಾರಿಯು, ಮಂಗಳೂರಿನಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಸ್ಕೂಟರ್ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಟರ್ನಲ್ಲಿದ್ದ ಇಬ್ಬರೂ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದರು. ಗಾಯಾಳುಗಳನ್ನು ತಕ್ಷಣವೇ ಮಂಗಳೂರಿನ ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿ
Aug 71 min read


ವಿಟ್ಲ : ಅಡ್ಯನಡ್ಕದಲ್ಲಿ ಆಕಸ್ಮಿಕ ದುರಂತ: ಕೆರೆಗೆ ಬಿದ್ದು 32 ವರ್ಷದ ವ್ಯಕ್ತಿ ಸಾವು
ವಿಟ್ಲ, ಆ.7: ವಿಟ್ಲ ಸಮೀಪದ ಅಡ್ಯನಡ್ಕ ಗ್ರಾಮದ ಮನಿಮುಂಡ ಪ್ರದೇಶದಲ್ಲಿ ಕಾಲು ಜಾರಿ ಕೆರೆಗೆ ಬಿದ್ದ ಪರಿಣಾಮ ಕೂಲಿ ಕಾರ್ಮಿಕನೋರ್ವ ಮೃತಪಟ್ಟ ದುರ್ಘಟನೆ ನಡೆದಿದೆ. ಮೃತರನ್ನು ದಿನೇಶ್ ನಾಯ್ಕ (32) ಎಂದು ಗುರುತಿಸಲಾಗಿದೆ. ಅವರು ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, ಪತ್ನಿ ಹಾಗೂ ತಂದೆ-ತಾಯಿಯನ್ನು ಅಗಲಿದ್ದಾರೆ. ಲಭ್ಯವಾದ ಮಾಹಿತಿಯಂತೆ, ದಿನೇಶ್ ಅವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮು
Aug 71 min read


ರಾಷ್ಟ್ರೀಯ ಹಸ್ತಮಗ್ಗ ದಿನ: ಕೈಮಗ್ಗ ಉತ್ಪನ್ನಗಳೊಂದಿಗೆ GRWM ವಿಡಿಯೋ ಹಂಚಿಕೊಳ್ಳಿ – ಪ್ರಧಾನಿ ಮೋದಿ ಕರೆ
ನವದೆಹಲಿ, ಆ. 6: ಭಾರತದ ಸಮೃದ್ಧ ಹಸ್ತಮಗ್ಗ ಪರಂಪರೆಯನ್ನು ವಿಶ್ವದಾದ್ಯಂತ ಜನಪ್ರಿಯಗೊಳಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ವಿಶೇಷ ಕರೆ ನೀಡಿದ್ದಾರೆ. ಆಗಸ್ಟ್ 7ರಂದು ಆಚರಿಸಲಾಗುವ ರಾಷ್ಟ್ರೀಯ ಹಸ್ತಮಗ್ಗ ದಿನದ ಅಂಗವಾಗಿ ತಮ್ಮ ನೆಚ್ಚಿನ ಹಸ್ತಮಗ್ಗ ಉಡುಪುಗಳು ಮತ್ತು ಉತ್ಪನ್ನಗಳೊಂದಿಗೆ GRWM (Get Ready With Me) ಸೇರಿದಂತೆ ಸೃಜನಾತ್ಮಕ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಜೊತೆಗೆ #NationalHandloomDay ಹ್ಯಾಶ್ಟ್ಯಾಗ್ ಬಳಸುವಂತೆ ಕರೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ 'ಎಕ್ಸ್' ಮತ್ತು ಇನ್ಸ್ಟಾಗ್ರಾಂನಲ್ಲ
Aug 61 min read


ರೋಗವನ್ನು ಮೂಲದಿಂದ ನಿವಾರಿಸುವ ಸಾಮರ್ಥ್ಯ ಹೋಮಿಯೋಪತಿ ಔಷಧಿಗಿದೆ.-ಡಾ.ಶ್ರೀ ದೇವಿ ವೆಂಕಟಾಪುರ
ಮಂಗಳೂರು : ಯಾವುದೇ ಅಡ್ಡ ಪರಿಣಾಮವಿಲ್ಲದ; ರೋಗವನ್ನು ಮೂಲದಿಂದ ನಿವಾರಿಸುವ ಹೋಮಿಯೋಪತಿ ಔಷಧಿಗಳನ್ನು ಶಿಶುವಿನಿಂದ ಹಿಡಿದು ಎಲ್ಲಾ ವಯೋಮಾನದ ವ್ಯಕ್ತಿಗಳು ತಮ್ಮ ಇತರ ಔಷಧಿಯೊಂದಿಗೆ ಕೂಡಾ ಸೇವಿಸಬಹುದು ಎಂದು ಹೋಮಿಯೋಪತಿ ತಜ್ಞರಾದ ಆಯುಷ್ ಇಲಾಖೆಯ ಡಾ.ಶ್ರೀ ದೇವಿ ವೆಂಕಟಾಪುರ ತಿಳಿಸಿದರು. ಅವರು ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆಯ (ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ) ಸಹಯೋಗದೊಂದಿಗೆ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ (KSTA) ಭವನ, ಗೋರಿಗುಡ್ಡದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆ ಹಾಗೂ ಹೋಮಿಯೋಪತಿ ಚಿಕಿತ್ಸಾ ಶಿಬಿರದ ಕಾರ್ಯಕ
Aug 61 min read


ಸಕಲೇಶಪುರ–ಸುಬ್ರಹ್ಮಣ್ಯ ಘಾಟ್ನಲ್ಲಿ ವಂದೇ ಭಾರತ್ ಟ್ರಯಲ್ ರನ್ಗೆ ಸಿದ್ಧತೆ: ಆ.11ರಿಂದ ಸುರಕ್ಷತಾ ಪರೀಕ್ಷೆ ಆರಂಭ
ಬೆಂಗಳೂರು, ಆ.6: ಬಹುನಿರೀಕ್ಷಿತ ಬೆಂಗಳೂರು–ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಆರಂಭದತ್ತ ಮಹತ್ವದ ಹೆಜ್ಜೆ ಇಟ್ಟಿದ್ದು, ಆಗಸ್ಟ್ 11ರಿಂದ 20ರವರೆಗೆ ಪರೀಕ್ಷಾರ್ಥ ಸಂಚಾರ (ಟ್ರಯಲ್ ರನ್) ನಡೆಸಲು ರೈಲ್ವೆ ಇಲಾಖೆ ಸಿದ್ಧತೆ ಪೂರ್ಣಗೊಳಿಸಿದೆ. ಈ ಅವಧಿಯಲ್ಲಿ ರೈಲಿನ ಕಾರ್ಯಕ್ಷಮತೆ ಹಾಗೂ ಸುರಕ್ಷತಾ ಮಾನದಂಡಗಳನ್ನು ವಿವಿಧ ಹಂತಗಳಲ್ಲಿ ಪರಿಶೀಲಿಸಲಾಗುತ್ತದೆ. ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಟ್ರಯಲ್ ರನ್ಗೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದು, ಭಾರತೀಯ ರೈಲ್ವೆಯ ಸಂಶೋಧನೆ, ವಿನ್ಯಾಸ ಮತ್ತು ಮಾನಕ ಸಂಸ್ಥೆ (RDSO) ಅಧಿಕಾರಿಗಳ ತಂಡವು ಪರೀಕ್ಷಾರ್ಥ ಸಂಚಾರದ ಮೇಲ್ವಿಚ
Aug 61 min read
Archive
bottom of page



