top of page
News Articles
Sathyapatha News Plus


ಮಧ್ಯಪ್ರಾಚ್ಯ ಸಂಘರ್ಷದ ಬಿಸಿ: ಕಚ್ಚಾ ತೈಲ ಬೆಲೆ ಏರಿಕೆ, ಭಾರತೀಯ ಷೇರುಪೇಟೆಯಲ್ಲಿ ಭಾರಿ ಕುಸಿತ
ಮುಂಬೈ, ಸೆ. 2: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷ ಹಾಗೂ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಬುಧವಾರ ಭಾರಿ ಕುಸಿತ ಕಂಡುಬಂದಿದೆ. ಹೂಡಿಕೆದಾರರು ವ್ಯಾಪಕವಾಗಿ ಷೇರುಗಳ ಮಾರಾಟಕ್ಕೆ ಮುಂದಾದ ಹಿನ್ನೆಲೆಯಲ್ಲಿ ಬಿಎಸ್ಇ ಸೆನ್ಸೆಕ್ಸ್ ಸುಮಾರು 789 ಅಂಕಗಳಷ್ಟು ಕುಸಿದರೆ, ಎನ್ಎಸ್ಇ ನಿಫ್ಟಿ 24 ಸಾವಿರದ ಮಟ್ಟಕ್ಕಿಂತ ಕೆಳಗೆ ಜಾರಿದೆ. 30 ಷೇರುಗಳ ಬಿಎಸ್ಇ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ 788.52 ಅಂಕಗಳಷ್ಟು ಕುಸಿದು 76,155.76ಕ್ಕೆ ತಲುಪಿತು. ಇದೇ ವೇಳೆ 50 ಷೇರುಗಳ ಎನ್ಎಸ್ಇ ನಿಫ್ಟಿ 269 ಅಂಕಗಳಷ್ಟು ಇಳಿದು 23,786
Sep 22 min read


ದಕ್ಷಿಣ ಕನ್ನಡ: ಸೆಪ್ಟೆಂಬರ್ 1 ರಿಂದ ಆಟೋ ರಿಕ್ಷಾ ಪ್ರಯಾಣ ದರ ಬದಲಾವಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೋ ರಿಕ್ಷಾ ಪ್ರಯಾಣ ದರಗಳನ್ನು ಪರಿಷ್ಕರಿಸಲಾಗಿದ್ದು, ಸೆಪ್ಟೆಂಬರ್ 1ರಿಂದಲೇ ಹೊಸ ದರಗಳು ಜಾರಿಗೆ ಬಂದಿವೆ. ಉಪ ಆಯುಕ್ತ ದರ್ಶನ್ ಎಚ್ವಿ ಅಧ್ಯಕ್ಷತೆಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ (RTA) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೊಸ ನಿಯಮದಂತೆ, ಮೊದಲ 1.5 ಕಿಲೋಮೀಟರ್ಗೆ ಕನಿಷ್ಠ ದರವನ್ನು ರೂ.40 (ಗರಿಷ್ಠ ಮೂವರು ಪ್ರಯಾಣಿಕರು) ನಿಗದಿಪಡಿಸಲಾಗಿದೆ. ತದನಂತರದ ಪ್ರತಿ ಹೆಚ್ಚುವರಿ ಕಿಲೋಮೀಟರ್ಗೆ ರೂ.20 ಪಾವತಿಸಬೇಕಾಗುತ್ತದೆ. ಇನ್ನು ಕಾಯುವಿಕೆ ಶುಲ್ಕಕ್ಕೆ ಸಂಬಂಧಿಸಿದಂತೆ ಮೊದಲ 10 ನಿಮಿಷ ಉಚಿತವಾಗಿದ್ದು, ನಂತರದ ಪ್ರತಿ
Sep 11 min read


ಮನೆಗೆ ತಡವಾಗಿ ಬಂದಿದ್ದಕ್ಕೆ ಮಾತಿನ ಚಕಮಕಿ: ಕೆರೆಗೆ ಬಿದ್ದು ಪ್ರಾಣ ಕಳೆದುಕೊಂಡ ತಾಯಿ-ಮಗಳು
ಮಡಿಕೇರಿ: ಮನೆಗೆ ತಡವಾಗಿ ಬಂದಿದ್ದಕ್ಕೆ ತಾಯಿ ಗದರಿಸಿದ್ದರಿಂದ ಮನನೊಂದ ಮಗಳು ಕೆರೆಗೆ ಹಾರಿದ್ದು, ಆಕೆಯನ್ನು ರಕ್ಷಿಸಲು ಹೋದ ತಾಯಿಯೂ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಕೊಡಗು ಜಿಲ್ಲೆಯ ತಲಕಾವೇರಿ ಸಮೀಪದ ಕೆಂಪರಾಜಮೊಟ್ಟೆ ಕಾಲೋನಿಯಲ್ಲಿ ನಡೆದಿದೆ. ಮೃತರನ್ನು ಪ್ರೇಮಾ (45) ಹಾಗೂ ಅವರ ಮಗಳು ಪ್ರಿಯಾಂಕಾ (14) ಎಂದು ಗುರುತಿಸಲಾಗಿದೆ. ಪ್ರಿಯಾಂಕಾ ಕರಿಕೆಯ ಆಶ್ರಮ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಶನಿವಾರ ಶಾಲೆಯಿಂದ ಮನೆಗೆ ತಡವಾಗಿ ಬಂದಿದ್ದಕ್ಕೆ ತಾಯಿ ಪ್ರೇಮಾ ಆಕೆಯನ್ನು ಗದರಿಸಿದ್ದರು. ಇದರಿಂದ ಆಕ್ರೋಶಗೊಂಡ ಪ್ರಿಯಾಂಕಾ, ಮನೆಯ ಪಕ್ಕದಲ್ಲಿದ್ದ ಕೆರೆಗೆ
Sep 11 min read


ಕೃಷ್ಣ ಜನ್ಮಾಷ್ಟಮಿ, ತೆನೆ ಹಬ್ಬಕ್ಕೆ ಸ್ಥಳೀಯ ರಜೆ ಘೋಷಿಸಲು ಶಾಸಕ ವೇದವ್ಯಾಸ ಕಾಮತ್ ಮನವಿ
ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಕ್ರೈಸ್ತ ಸಮುದಾಯದ ಮರಿಯ ಜಯಂತಿ (ತೆನೆ ಹಬ್ಬ) ಆಚರಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಸ್ಥಳೀಯ ರಜೆ ಘೋಷಿಸುವಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಇದೇ ಸೆಪ್ಟೆಂಬರ್ 4 ರಂದು ಕರಾವಳಿ ಜಿಲ್ಲೆಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಇದು ಕೇವಲ ಧಾರ್ಮಿಕ ಆಚರಣೆಯಾಗಿರದೆ, ಭಾರತೀಯ ಸಂಸ್ಕೃತಿ, ಕುಟುಂಬ ಮೌಲ್ಯಗಳು ಹಾಗೂ ನೈತಿಕ ಶಿಕ್ಷಣವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಮಹತ್ವ
Sep 11 min read


ಹಬ್ಬದ ಋತುವಿನಲ್ಲಿ ಸಕ್ಕರೆ ಅಭಾವ ತಡೆಯಲು ಕೇಂದ್ರದ ಕಟ್ಟುನಿಟ್ಟಿನ ಕ್ರಮ: ದಾಸ್ತಾನು ಮಿತಿ ಇಳಿಕೆ
ಹಬ್ಬದ ಸಾಲಿನಲ್ಲಿ ಸಕ್ಕರೆಯ ಕೃತಕ ಅಭಾವ, ಅಕ್ರಮ ದಾಸ್ತಾನು ತಡೆಗಟ್ಟುವುದು ಹಾಗೂ ಬೆಲೆ ಸ್ಥಿರತೆ ಕಾಯ್ದುಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತಳೆದಿದೆ. ಸಕ್ಕರೆ ವಿತರಕರ ದಾಸ್ತಾನು ಮಿತಿಯನ್ನು 4,000 ಕ್ವಿಂಟಾಲ್ನಿಂದ 2,000 ಕ್ವಿಂಟಾಲ್ಗೆ ಇಳಿಕೆ ಮಾಡಲಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಈ ನೂತನ ನಿಯಮವು ಸೆಪ್ಟೆಂಬರ್ 15 ರಿಂದ ಜಾರಿಗೆ ಬರಲಿದ್ದು, ನವೆಂಬರ್ 30ರವರೆಗೆ ಅನ್ವಯವಾಗಲಿದೆ. ವ್ಯಾಪಾರಿಗಳು ಸಕ್ಕರೆ ಸ್ವೀಕರಿಸಿದ ದಿನದಿಂದ 30 ದಿನಗಳ ಮೀರಿದ ಅವಧಿಗೆ 2,000 ಕ್ವಿಂಟಾಲ್ಗಿಂತ ಹೆಚ್ಚು ದಾಸ್ತಾ
Sep 11 min read


ಐಬಿಪಿಎಸ್ ಆರ್ಆರ್ಬಿ ನೇಮಕಾತಿ: 13,706 ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 13,706 ಗ್ರೂಪ್ 'ಎ' (ಅಧಿಕಾರಿ) ಮತ್ತು ಗ್ರೂಪ್ 'ಬಿ' (ಕಚೇರಿ ಸಹಾಯಕ) ಹುದ್ದೆಗಳ ಭರ್ತಿಗೆ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಅಧಿಸೂಚನೆ ಹೊರಡಿಸಿದೆ. ಇದರಲ್ಲಿ 8,183 ಕಚೇರಿ ಸಹಾಯಕ ಹಾಗೂ 4,256 ಆಫೀಸರ್ ಸ್ಕೇಲ್-I ಹುದ್ದೆಗಳು ಪ್ರಮುಖವಾಗಿವೆ. ಯಾವುದೇ ಮಾನ್ಯತೆ ಪಡೆದ ಪದವಿ ಹೊಂದಿರುವ 18 ರಿಂದ 40 ವರ್ಷದೊಳಗಿನ (ಹುದ್ದೆಗನುಗುಣವಾಗಿ) ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್ಸಿ/ಎಸ್ಟಿ/ದಿವ್ಯಾಂಗರಿಗೆ 175 ರೂ. ಹಾಗೂ ಇತರೆ ವರ್ಗದ ಅಭ್ಯರ್ಥಿಗಳಿಗೆ 850 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದ
Sep 11 min read


ದರ್ಬೆ ಜನಸೇವಾ ಕೇಂದ್ರ ಘಟನೆ: ಆರೋಪಿಗಳಿಗೆ ಜಾಮೀನು ಮಂಜೂರು
ಪುತ್ತೂರಿನ ದರ್ಬೆಯ ಜನಸೇವಾ ಕೇಂದ್ರದಲ್ಲಿ ದಾಖಲಾತಿ ಹಾನಿ ವಿಚಾರವಾಗಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಕೊಲೆಯತ್ನ ಆರೋಪ ಎದುರಿಸುತ್ತಿದ್ದ ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಅಲ್ಲದೆ, ಪ್ರಕರಣದ ಇನ್ನೋರ್ವ ಆರೋಪಿ, ಜನಸೇವಾ ಕೇಂದ್ರದ ಮಾಲಕಿ ಅಂಜನಾ ಎಸ್. ಪೈ ಅವರಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ. ಅಂಜನಾ ಪರವಾಗಿ ವಕೀಲರಾದ ಮಾಧವ ಪೂಜಾರಿ, ರಾಕೇಶ್ ಬಲ್ನಾಡ್ ಹಾಗೂ ನಿಶಾ ಕುಮಾರಿ ನ್ಯಾಯಾಲಯದಲ್ಲಿ ಸುದೀರ್ಘ ವಾದ ಮಂಡಿಸಿದ್ದರು.
Sep 11 min read


ಬೆಂಗಳೂರು BELನಲ್ಲಿ ಉದ್ಯೋಗಾವಕಾಶ: 'ಮ್ಯಾನೇಜ್ಮೆಂಟ್ ಇಂಡಸ್ಟ್ರಿಯಲ್ ಟ್ರೈನಿ' ಹುದ್ದೆಗಳಿಗೆ ಸೆಪ್ಟೆಂಬರ್ 10ರಂದು ನೇರ ಸಂದರ್ಶನ
ಬೆಂಗಳೂರು: ದೇಶದ ಪ್ರಮುಖ ಸಾರ್ವಜನಿಕ ವಲಯದ ಉದ್ದಿಮೆಯಾದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL), ತನ್ನ ಬೆಂಗಳೂರು ಘಟಕದಲ್ಲಿ ಖಾಲಿ ಇರುವ 'ಮ್ಯಾನೇಜ್ಮೆಂಟ್ ಇಂಡಸ್ಟ್ರಿಯಲ್ ಟ್ರೈನಿ' ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು (Walk-in Interview) ಆಯೋಜಿಸಿದೆ. ಅರ್ಹತೆ ಮತ್ತು ವಯೋಮಿತಿ: ವಾಣಿಜ್ಯ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಮತ್ತು ಮಾನ್ಯತೆ ಪಡೆದ ಸಂಸ್ಥೆಯಿಂದ CA Inter ಅಥವಾ CMA Inter ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳ ಗರಿಷ್ಠ ವಯಸ್ಸು ಸೆಪ್ಟೆಂಬರ್ 01, 2026 ಕ್ಕೆ
Sep 11 min read


ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅಂತಾರಾಷ್ಟ್ರೀಯ ಫುಟ್ಬಾಲ್ಗೆ ಅಧಿಕೃತ ವಿದಾಯ
ಅರ್ಜೆಂಟೀನಾದ ವಿಶ್ವಕಪ್ ವಿಜೇತ ನಾಯಕ, ಫುಟ್ಬಾಲ್ ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಆಟಗಾರ ಲಿಯೋನೆಲ್ ಮೆಸ್ಸಿ ಅಂತಾರಾಷ್ಟ್ರೀಯ ಫುಟ್ಬಾಲ್ ವೃತ್ತಿಜೀವನಕ್ಕೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಳ್ಳುವ ಮೂಲಕ ಈ ಭಾವುಕ ನಿರ್ಧಾರವನ್ನು ವಿಶ್ವದಾದ್ಯಂತ ಇರುವ ತಮ್ಮ ಕೋಟ್ಯಂತರ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲ ಅರ್ಜೆಂಟೀನಾ ರಾಷ್ಟ್ರೀಯ ತಂಡಕ್ಕೆ ಅಪ್ರತಿಮ ಸೇವೆ ಸಲ್ಲಿಸಿದ ಮೆಸ್ಸಿ, 2022ರ ಫೀಫಾ ವಿಶ್ವಕಪ್ ಹಾಗೂ ಕೋಪಾ ಅಮೆರಿಕ ಟ್ರೋಫಿಗಳನ್ನು ಗೆದ್ದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿ
Aug 311 min read


ಸರ್ಕಾರಿ ಶಾಲೆಗಳಲ್ಲಿ ಶೂ, ಸಾಕ್ಸ್ ವಿತರಣೆ ವಿಳಂಬ: ಸರ್ಕಾರದ ವಿರುದ್ಧ AIDSO ಆಕ್ರೋಶ
ಶೈಕ್ಷಣಿಕ ವರ್ಷ ಆರಂಭವಾಗಿ ಮೂರು ತಿಂಗಳು ಕಳೆದರೂ ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸದಿರುವುದಕ್ಕೆ AIDSO ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಬೆಂಗಳೂರಿನ ಶಿಬಿರದಲ್ಲಿ ಮಾತನಾಡಿದ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, ವಿದ್ಯಾರ್ಥಿಗಳ ಮೂಲಸೌಕರ್ಯ ಹಾಗೂ ಪೌಷ್ಟಿಕ ಆಹಾರದ ಕುರಿತು ಸರ್ಕಾರದ ಆದ್ಯತೆಗಳನ್ನು ಪ್ರಶ್ನಿಸಿದರು. ಕೆಲವು ಶಾಲೆಗಳಲ್ಲಿ ರಾಗಿ ಗಂಜಿ ವಿತರಣೆ ನಿಂತಿರುವುದನ್ನು ಖಂಡಿಸಿದ ಅವರು, ಸರ್ಕಾರಿ ಕಲ್ಯಾಣ ಯೋಜನೆಗಳು ವಿಳಂಬವಿಲ್ಲದೆ ತಲುಪಬೇಕು ಮತ್ತು ಯುವಕರಿಗೆ ಉದ್ಯೋಗಾವಕಾಶ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
Aug 311 min read


ಇನ್ಮುಂದೆ ಯಾವ ಚುನಾವಣೆಯಲ್ಲೂ ಸ್ಪರ್ಧಿಸಲ್ಲ: ಸಿದ್ದರಾಮಯ್ಯ ಬಾಂಬ್!
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂಬರುವ ಯಾವುದೇ ಲೋಕಸಭೆ ಅಥವಾ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ದಿವಂಗತ ವೀರಣ್ಣನವರ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ನಿರ್ಧಾರಕ್ಕೆ ವಯಸ್ಸಿನ ಕಾರಣಕ್ಕಿಂತ ಇಂದಿನ ದುಬಾರಿ ಚುನಾವಣಾ ವ್ಯವಸ್ಥೆಯೇ ಮುಖ್ಯ ಕಾರಣ ಎಂದಿದ್ದಾರೆ. "ಈಗ ಚುನಾವಣೆ ಎದುರಿಸಲು ಟನ್ ಗಟ್ಟಲೆ ಹಣ ಬೇಕು. ವ್ಯವಸ್ಥೆ ಸುಧಾರಿಸದಿದ್ದರೆ ಪ್ರಾಮಾಣಿಕವಾಗಿ ರಾಜಕಾರಣ ಮಾಡಲು ಸಾಧ್ಯವಿಲ್ಲ" ಎಂದು ಕಳವಳ ವ್ಯಕ್ತಪಡಿಸಿದರು. 1991ರ ಕೊಪ್ಪಳ ಲೋಕಸಭಾ ಸೋಲನ್ನು ನೆನಪಿಸಿಕೊಂಡ ಅವರು, ರಾಜಕಾರಣದಲ್ಲಿ ಸಕ್ರಿಯವಾಗಿರುತ್ತೇನೆ ಆದ
Aug 311 min read


ಕಾರವಾರ: ಅರಬ್ಬಿ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್; 24 ಮೀನುಗಾರರ ಸಾಹಸಿಕ ರಕ್ಷಣೆ!
ಕಾರವಾರ: ಇಲ್ಲಿನ ಅಂಜದೀವ್ ದ್ವೀಪದ ಸಮೀಪ ಮೀನುಗಾರಿಕೆಗೆ ತೆರಳಿದ್ದ ಬೆಳಂಬರ್ ಮೂಲದ ನೀಲಕಂಠ ಖಾರ್ವಿ ಅವರಿಗೆ ಸೇರಿದ 'ಶ್ರೀ ಮಾತಾ' ಎಂಬ ಮೀನುಗಾರಿಕಾ ಬೋಟ್ ಅರಬ್ಬಿ ಸಮುದ್ರದಲ್ಲಿ ಅವಘಡಕ್ಕೀಡಾಗಿ ಮುಳುಗಡೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸಮೀಪದಲ್ಲಿದ್ದ ಐದಾರು ಬೋಟ್ಗಳ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ, ಹಗ್ಗದ ನೆರವಿನಿಂದ ಬೋಟ್ನಲ್ಲಿದ್ದ ಎಲ್ಲಾ 24 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಬೋಟ್ ಅನ್ನು ಉಳಿಸಲು ಯತ್ನಿಸಿದರೂ ಅದು ಸಂಪೂರ್ಣವಾಗಿ ಸಮುದ್ರದ ಪಾಲಾಗಿದೆ. ಘಟನೆಯಲ್ಲಿ ಸುಮಾರು 50 ಲಕ್ಷ ರೂಪಾಯಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
Aug 301 min read


ಮನ್ ಕೀ ಬಾತ್: ಕರ್ನಾಟಕದ ನಿಂಗಮ್ಮ, ಚಿಕ್ಕಮಗಳೂರಿನ ರೈತರ ಸಾಧನೆಗೆ ಪ್ರಧಾನಿ ಮೋದಿ ಶ್ಲಾಘನೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮದಲ್ಲಿ ದೇಶದ ನವೀನ ಆಲೋಚನೆಗಳು ಹಾಗೂ ಕರ್ನಾಟಕದ ಯಶೋಗಾಥೆಗಳನ್ನು ವಿಶೇಷವಾಗಿ ಪ್ರಸ್ತಾಪಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಪಿಎಂ ಸ್ವನಿಧಿ’ ಯೋಜನೆಯಡಿ ಸಾಲ ಪಡೆದು ಸ್ವಾವಲಂಬಿ ಬದುಕು ಕಟ್ಟಿಕೊಂಡ ಬೆಂಗಳೂರಿನ ಬೀದಿಬದಿ ವ್ಯಾಪಾರಿ ನಿಂಗಮ್ಮ ಅವರ ಸಾಧನೆಯನ್ನು ಮೋದಿ ಶ್ಲಾಘಿಸಿದರು. ಹಾಗೆಯೇ, ಕಾಫಿ ತೋಟಗಳ ನಡುವೆ ಪರ್ಯಾಯ ಬೆಳೆಯಾಗಿ ಅವಕಾಡೊ ಬೆಳೆದು ಯಶಸ್ಸು ಕಂಡ ಚಿಕ್ಕಮಗಳೂರಿನ ರೈತರ ನೂತನ ಕೃಷಿ ಪದ್ಧತಿಯನ್ನು ಪ್ರಶಂಸಿದರು. ಭಾರತದ ರಾಜವಂಶಗಳ ಇತಿಹಾಸ ತಿಳಿಸುವ ‘Bharat Rajya’ ವೆಬ್ಸೈಟ್, ಮಾದಕ ದ್ರ
Aug 301 min read


ಗೃಹಲಕ್ಷ್ಮಿ ಯೋಜನೆಗೆ 3 ವರ್ಷದ ಸಂಭ್ರಮ: 1.2 ಕೋಟಿ ಮಹಿಳೆಯರಿಗೆ ಆರ್ಥಿಕ ಬಲ ಎಂದ ಡಿಕೆ ಶಿವಕುಮಾರ್
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ 'ಗೃಹಲಕ್ಷ್ಮಿ' ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತೀವ್ರ ಸಂತಸ ಮತ್ತು ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಂದೇಶ ಹಂಚಿಕೊಂಡಿರುವ ಅವರು, "ನಮ್ಮ ಸರ್ಕಾರದ ಈ ಪ್ರಮುಖ ಯೋಜನೆಯು ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದು ಅತ್ಯಂತ ಸಂತೋಷದ ಸಂಗತಿ. ರಾಜ್ಯದ 1.2 ಕೋಟಿಗೂ ಹೆಚ್ಚು ಕುಟುಂಬಗಳ ಯಜಮಾನಿಯರಿಗೆ ಈ ಯೋಜನೆ ಆರ್ಥಿಕ ಭದ್ರತೆಯ ಜೊತೆಗೆ ಸ್ವಾಭಿಮಾನ ಹಾಗೂ ಆತ್ಮಸ್ಥೈರ್ಯವನ್ನು ತಂದುಕೊಟ್ಟಿದೆ," ಎಂದು ಹೇಳಿದ್ದಾರೆ. ಗೃಹಲಕ್ಷ್ಮಿಯು ಕೇವಲ ಒಂದು ಸರ್ಕಾರಿ ಸ
Aug 301 min read


ಚೀನಾ-ನೇಪಾಳ ಗಡಿಯಲ್ಲಿ ಭೀಕರ ಭೂಕುಸಿತ: 49 ಭಾರತೀಯರು ಸೇರಿ 546 ಜನ ನಾಪತ್ತೆ, 16 ಸಾವು
ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದ ಬೆನ್ನಲ್ಲೇ, ಚೀನಾ-ನೇಪಾಳ ಗಡಿಯಲ್ಲಿರುವ ಟಿಬೆಟ್ನ ಗೈರಾಂಗ್ ಭೂ ಬಂದರು ಪ್ರದೇಶದಲ್ಲಿ ಭಾರೀ ಭೂಕುಸಿತ ಮತ್ತು ಹಿಮಕುಸಿತ ಸಂಭವಿಸಿದೆ. ಈ ದುರಂತದಲ್ಲಿ ಕನಿಷ್ಠ 16 ಮಂದಿ ಮೃತಪಟ್ಟಿದ್ದು, 546 ಜನರು ನಾಪತ್ತೆಯಾಗಿದ್ದಾರೆ ಎಂದು ಚೀನಾದ ಪ್ರಾದೇಶಿಕ ಸರ್ಕಾರ ತಿಳಿಸಿದೆ. ನಾಪತ್ತೆಯಾದವರಲ್ಲಿ 23 ದೇಶಗಳ 261 ವಿದೇಶಿ ಪ್ರಜೆಗಳು ಸೇರಿದ್ದಾರೆ. ಇವರಲ್ಲಿ ಕೈಲಾಸ-ಮಾನಸ ಸರೋವರ ಯಾತ್ರೆಗೆ ತೆರಳಿದ್ದ 49 ಭಾರತೀಯ ಯಾತ್ರಿಕರು ಸೇರಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಜೊತೆಗೆ ನೇಪಾಳದ 104, ಲಾಟ್ವಿಯಾದ 33, ಅಮೆರಿಕದ 18 ಹಾಗೂ ಬ್ರಿಟನ್ನ 15 ಪ್ರಜೆಗಳು
Aug 301 min read


ರೈಲ್ವೆ ಇಲಾಖೆಯಲ್ಲಿ ಬಂಪರ್ ನೇಮಕಾತಿ: 4,029 ಹುದ್ದೆಗಳಿಗೆ ಅರ್ಜಿ ಆಹ್ವಾನ, ಸೆಪ್ಟೆಂಬರ್ 13 ಕೊನೆಯ ದಿನ!
ಕೇಂದ್ರ ಸರ್ಕಾರದ ಉದ್ಯೋಗ ಗಿಟ್ಟಿಸಿಕೊಳ್ಳಲು ಕಾಯುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ಲಭಿಸಿದೆ. ಭಾರತೀಯ ರೈಲ್ವೆ ಸಚಿವಾಲಯದ ರೈಲ್ವೆ ನೇಮಕಾತಿ ಮಂಡಳಿಯು (RRB) ಜೂನಿಯರ್ ಎಂಜಿನಿಯರ್ (JE) ಹಾಗೂ ಡಿಪೋಟ್ ಮೆಟೀರಿಯಲ್ ಸೂಪರಿಟೆಂಡೆಂಟ್ (DMS) ಸೇರಿದಂತೆ ಒಟ್ಟು 4,029 ಖಾಲಿ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಇವುಗಳಲ್ಲಿ ಆರ್ಆರ್ಬಿ ಬೆಂಗಳೂರು ವಲಯವೊಂದರಲ್ಲೇ 299 ಹುದ್ದೆಗಳು ಲಭ್ಯವಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 13 ಕೊನೆಯ ದಿನವಾಗಿದೆ. ವಿದ್ಯಾರ್ಹತೆ ಮತ್ತು ವಯೋಮಿತಿ: ಅಂಗೀಕೃತ ವಿಶ್ವವಿದ್ಯಾನಿಲ
Aug 291 min read


ಬೆಲೆ ಏರಿಕೆ ಬಿಸಿ: ಸಕ್ಕರೆ, ಬೆಲ್ಲದ ದರ ಏಕಾಏಕಿ ಜಿಗಿತ, ಜನಸಾಮಾನ್ಯರು ಕಂಗಾಲು!
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ಜೇಬಿಗೆ ಕತ್ತರಿ ಬಿದ್ದಿದ್ದು, ಸಕ್ಕರೆ ಮತ್ತು ಬೆಲ್ಲದ ದರ ಏಕಾಏಕಿ ಹೆಚ್ಚಾಗಿ ಗ್ರಾಹಕರಿಗೆ ಕಹಿಯಾಗಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಕೆ.ಜಿಗೆ 66 ರೂಪಾಯಿ ಇದ್ದ ಸಕ್ಕರೆ ದರ ಈಗ 70 ರೂಪಾಯಿಗೆ ತಲುಪಿದೆ. ಇನ್ನು ಬೆಲ್ಲದ ಬೆಲೆಯಲ್ಲಿ ಭಾರಿ ಜಿಗಿತ ಕಂಡಿದ್ದು, ನಾಲ್ಕು ದಿನಗಳ ಹಿಂದೆ ಕೆ.ಜಿಗೆ 68 ರೂಪಾಯಿ ಇದ್ದದ್ದು ಈಗ ಬರೋಬ್ಬರಿ 12 ರೂಪಾಯಿ ಹೆಚ್ಚಳವಾಗಿ 80 ರೂಪಾಯಿಗೆ ಏರಿಕೆಯಾಗಿದೆ. ಈ ದಿಢೀರ್ ದರ ಏರಿಕೆ ಮಧ್ಯಮ ವರ್ಗ ಹಾಗೂ ಬಡಜನರ ಮಾಸಿಕ ಆಯವ್ಯಯದ ಮೇಲೆ ಗಂಭೀರ ಪರಿಣಾಮ ಬೀರಿದೆ.
Aug 291 min read


ಚೀನಾದ ಸಿಚುವಾನ್ನಲ್ಲಿ 5.1 ತೀವ್ರತೆಯ ಭೂಕಂಪ: ಪ್ರವಾಹದ ಭೀತಿ
ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ ಪ್ರವಾಹದ ಬೆನ್ನಲ್ಲೇ, ನೈಋತ್ಯ ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಶುಕ್ರವಾರ ಮಧ್ಯಾಹ್ನ 5.1 ತೀವ್ರತೆಯ ಭೂಕಂಪ ಸಂಭವಿಸಿದೆ. ಲಾಂಗ್ಚಾಂಗ್ ಸಮೀಪ 13 ಕಿ.ಮೀ ಆಳದಲ್ಲಿ ಇದು ದಾಖಲಾಗಿದೆ. ಮಣ್ಣು ಕುಸಿತದಿಂದ ನದಿಗೆ ಅಡ್ಡಲಾಗಿ ಸೃಷ್ಟಿಯಾಗಿದ್ದ ಕೃತಕ ಸರೋವರ ಒಡೆದು ಪ್ರವಾಹ ಉಂಟಾಗುವ ಆತಂಕ ಎದುರಾಗಿದೆ. ಇದರಿಂದಾಗಿ ಟಿಬೆಟ್ ಭಾಗದಲ್ಲಿ ಪ್ರಸ್ತುತ ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪ್ರವಾಹದ ಬೆದರಿಕೆಯಿಂದ ತುರ್ತು ಪಡೆಗಳನ್ನು 1 ಕಿ.ಮೀ ಹಿಂದಕ್ಕೆ ಸರಿಯಲು ಸೂಚಿಸಲಾಗಿದೆ. ಮುನ್ನೆಚ್ಚರಿಕೆಯಾಗಿ ಕಣಿವೆ ಪ್ರದ
Aug 291 min read
Archive
bottom of page



