ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದಲ್ಲಿ ತೆಂಗಿನ ಮರವೇರಿ ಶೇಂದಿ ಇಳಿಸುತ್ತಿದ್ದ ಕೇರಳ ಮೂಲದ ವ್ಯಕ್ತಿಯೋರ್ವರು ಮರದಲ್ಲೇ ಮೃತಪಟ್ಟ ದಾರುಣ ಘಟನೆ ಸೋಮವಾರ ನಡೆದಿದೆ. ಕೊಲ್ಲಮೊಗ್ರು ಸಮೀಪದ ಪನ್ನೆಯಲ್ಲಿ ವ್ಯಕ್ತಿಯೊಬ್ಬರ ಜಾಗದಲ್ಲಿ ಕೇರಳ ಮೂಲದ ಈ ವ್ಯಕ್ತಿಯು ಶೇಂದಿ ಮೂರ್ತೆ (ಶೇಂದಿ ಇಳಿಸುವ ಕಾಯಕ) ನಡೆಸುತ್ತಿದ್ದರು. ಎಂದಿನಂತೆ, ಸೋಮವಾರದಂದು ಕೂಡಾ ಶೇಂದಿ ಇಳಿಸುವ ಸಲುವಾಗಿ ಅವರು ತೆಂಗಿನ ಮರವನ್ನು ಏರಿದ್ದರು. ಆದರೆ, ಮರದ ಮೇಲೆ ಇರುವಾಗಲೇ ಅವರು ತೀವ್ರ ಅಸ್ವಸ್ಥಗೊಂಡಿದ್ದು, ಸಹಾಯಕ್ಕಾಗಿ ಕೂಗಿಕೊಂಡಿದ್ದರೆಂದು ಸ್ಥಳೀಯರು ತಿಳಿಸಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳೀಯ
ಪತ್ನಿಯೊಂದಿಗೆ ಉಂಟಾಗಿದ್ದ ಮನಸ್ತಾಪದಿಂದ ಬೇಸತ್ತ ಪತಿಯೊಬ್ಬರು ತನ್ನ ನಾಲ್ಕು ವರ್ಷದ ಪುತ್ರಿಯೊಂದಿಗೆ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿ, ಬಳಿಕ ಮನೆಗೆ ಬಂದು ನೇಣು ಹಾಕಿಕೊಳ್ಳಲು ಸಿದ್ಧವಾಗಿದ್ದ ಘಟನೆ ಮಂಗಳೂರಿನ ಕಾವೂರಿನಲ್ಲಿ ನಡೆದಿದೆ. ಸಾವಿಗೆ ಮುನ್ನ ವಿಡಿಯೋ ಮಾಡಿ ಅದನ್ನು ವಾಟ್ಸಪ್ ಗ್ರೂಪ್ಗಳಲ್ಲಿ ಹಂಚಿಕೊಂಡಿದ್ದು, ಈ ವಿಡಿಯೋ ಪಣಂಬೂರು ಪೊಲೀಸರಿಗೆ ತಲುಪಿದ ಕೂಡಲೇ ಅವರು ಸಮಯ ಪ್ರಜ್ಞೆ ಮೆರೆದು ತಂದೆ-ಮಗಳನ್ನು ಸಾವಿನ ದವಡೆಯಿಂದ ಪಾರು ಮಾಡಿದ್ದಾರೆ. ರಕ್ಷಿಸಲ್ಪಟ್ಟ ವ್ಯಕ್ತಿಯು ಕಾವೂರು ಶಾಂತಿನಗರ ನಿವಾಸಿ ರಾಜೇಶ್ ಎಂದು ಗುರುತಿಸಲಾಗಿದೆ. ಏಳು ವರ್ಷಗಳ ಹಿಂದೆ
"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.