top of page
News Articles
Sathyapatha News Plus


ಮಂಗಳೂರು ಜೈಲಿನಲ್ಲಿ ಭಾಸ್ಕರ ಶೆಟ್ಟಿ ಕೊಲೆ ಆರೋಪಿಗಳ ಮೇಲೆ ಹಲ್ಲೆ ಪ್ರಕರಣ : 14 ಮಂದಿ ದೋಷಿಗಳು
ಮಂಗಳೂರು: ಉಡುಪಿಯ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ನವನೀತ್ ಶೆಟ್ಟಿ ಹಾಗೂ ಜ್ಯೋತಿಷಿ ನಿರಂಜನ್ ಭಟ್ ಮೇಲೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲೇ ದಾಳಿ ನಡೆಸಿದ ಪ್ರಕರಣದಲ್ಲಿ 14 ಮಂದಿ ಆರೋಪಿಗಳು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ. ದೋಷಿಗಳ ಶಿಕ್ಷೆಯ ಪ್ರಮಾಣವನ್ನು ಸೆಪ್ಟೆಂಬರ್ 16ರಂದು ಪ್ರಕಟಿಸಲಾಗುವುದು. 2017ರ ಸೆಪ್ಟೆಂಬರ್ 11ರಂದು ಮಧ್ಯಾಹ್ನ ಸುಮಾರು 12.30ರ ವೇಳೆಗೆ ಮಂಗಳೂರು ಜಿಲ್ಲಾ ಕಾರಾಗೃಹದ ಹೊಸ ಕಟ್ಟಡದ ‘ಬಿ’ ಬ್ಲಾಕ್ನ ವರಾಂಡದಲ್ಲಿ ಈ ದಾಳಿ ನಡೆದಿತ್ತು. ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನವನೀತ್ ಶೆಟ್ಟಿ ಮತ್ತು ನಿರಂಜನ್ ಭಟ್ ಅ
3 days ago1 min read




ಬೆಳ್ತಂಗಡಿಯಲ್ಲಿ ಲೋಕಾಯುಕ್ತ ದಾಳಿ: ಕುವೆಟ್ಟು, ಮಡಂತ್ಯಾರು ಗ್ರಾ.ಪಂ. ಕಚೇರಿಗಳಲ್ಲಿ ಕಡತಗಳ ಪರಿಶೀಲನೆ
ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಮತ್ತು ಮಡಂತ್ಯಾರು ಗ್ರಾಮ ಪಂಚಾಯತ್ ಕಚೇರಿಗಳ ಮೇಲೆ ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಗ್ರಾಮ ಪಂಚಾಯತ್ಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಲೋಕಾಯುಕ್ತ ಕೇಂದ್ರ ಕಚೇರಿಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಉಡುಪಿ ಜಿಲ್ಲೆಯ ಲೋಕಾಯುಕ್ತ ಇನ್ಸ್ಪೆಕ್ಟರ್ ಮಂಜುನಾಥ್ ಶಂಕರಹಳ್ಳಿ ನೇತೃತ್ವದಲ್ಲಿ ರಾಘವೇಂದ್ರ ಸಾಲಿಗ್ರಾಮ, ಆದರ್ಶ್, ಅರುಣ್ ಕುಮಾರ್, ಸೂರಜ್ ಕಾಪು ಸೇರಿದಂತೆ ಒಟ್ಟು ಎಂಟು ಮಂದಿಯ ತಂಡ ಬೆಳಗ್ಗೆ ಸುಮ
6 days ago1 min read


ಕರ್ನಾಟಕದ 90,000 ವಿದ್ಯಾರ್ಥಿಗಳಿಗೆ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ; ಅರ್ಜಿ ಸಲ್ಲಿಕೆ ಮಾಹಿತಿ ಇಲ್ಲಿದೆ
ಕರ್ನಾಟಕದ 90,000 ವಿದ್ಯಾರ್ಥಿಗಳಿಗೆ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ; ಅರ್ಜಿ ಸಲ್ಲಿಕೆ ಮಾಹಿತಿ ಇಲ್ಲಿದೆ ಬೆಂಗಳೂರು: ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ಯುವಜನತೆಗೆ ರಾಜ್ಯ ಸರ್ಕಾರ ಮಹತ್ವದ ಅವಕಾಶವೊಂದನ್ನು ಕಲ್ಪಿಸಿದೆ. ಕಾಲೇಜು ಶಿಕ್ಷಣ ಇಲಾಖೆಯ ವತಿಯಿಂದ ರಾಜ್ಯದ ಸುಮಾರು 90,000 ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಆನ್ಲೈನ್ ತರಬೇತಿ ನೀಡುವ ಯೋಜನೆ ರೂಪಿಸಲಾಗಿದೆ. ಈ ಯೋಜನೆಗೆ ಅಂದಾಜು 9 ಕೋಟಿ ರೂ. ವೆಚ್ಚವಾಗಲಿದೆ. ಆರ್ಥಿಕವಾಗಿ ಹಿಂದುಳಿದ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಖಾಸಗಿ ತರಬೇತಿ ಕೇಂದ್ರಗಳ ದುಬಾರಿ ಶುಲ್ಕದ ಹೊರೆಯಿಂ
Sep 82 min read


ವಿವಾಹಿತ, ವಯಸ್ಕ ಮಕ್ಕಳಿಗೂ ವಿಮೆ ಪರಿಹಾರ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ಅಪಘಾತದಲ್ಲಿ ಪೋಷಕರು ಮೃತಪಟ್ಟ ಸಂದರ್ಭದಲ್ಲಿ ಅವರ ವಯಸ್ಕ, ವಿವಾಹಿತ ಹಾಗೂ ಉದ್ಯೋಗಸ್ಥ ಮಕ್ಕಳು ಕೂಡ ವಿಮೆ ಪರಿಹಾರ ಪಡೆಯಲು ಅರ್ಹರು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಎನ್. ಕೋಟೀಶ್ವರ್ ಸಿಂಗ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠ ಈ ತೀರ್ಪು ನೀಡಿದೆ. ಮೃತ ವ್ಯಕ್ತಿಯ ಮೇಲೆ ಸಂಪೂರ್ಣವಾಗಿ ಆರ್ಥಿಕವಾಗಿ ಅವಲಂಬಿತರಾಗಿರುವವರು ಮಾತ್ರವಲ್ಲದೆ, ಅವರ ಆಸ್ತಿಯಲ್ಲಿ ಕಾನೂನುಬದ್ಧ ಹಕ್ಕು ಹೊಂದಿರುವವರು ಹಾಗೂ ಮೃತರನ್ನು ಕಾನೂನುಬದ್ಧವಾಗಿ ಪ್ರತಿನಿಧಿಸುವವರೂ ಮೋಟಾರ್ ಅಪಘಾತ ಪರಿಹಾರಕ್ಕೆ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಪೀಠ ಸ್ಪಷ್ಟಪಡಿ
Aug 161 min read


ಪರೀಕ್ಷೆಗೆ ಬಂದ ತಾಯಿಗೆ ಆಸರೆಯಾದ ಮಹಿಳಾ ಪೊಲೀಸ್; ಮಗುವಿಗೆ ಜೋಗುಳ ಹಾಡಿ ಮಾನವೀಯತೆ ಮೆರೆದ ಸಿಬ್ಬಂದಿ
ಬೆಂಗಳೂರು, ಆ. 3: ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿ ಪರೀಕ್ಷೆಗೆ ಎಂಟು ತಿಂಗಳ ಮಗುವಿನೊಂದಿಗೆ ಆಗಮಿಸಿದ್ದ ತಾಯಿಯೊಬ್ಬರಿಗೆ ಮಹಿಳಾ ಪೊಲೀಸ್ ಸಿಬ್ಬಂದಿ ಮಾನವೀಯತೆ ಮೆರೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ ತಾಯಿ ಪರೀಕ್ಷಾ ಕೊಠಡಿಗೆ ತೆರಳುವ ವೇಳೆ ಮಗು ಅಳಲು ಆರಂಭಿಸಿತು. ಇದರಿಂದ ತಾಯಿ ಆತಂಕಕ್ಕೊಳಗಾದಾಗ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಿಬ್ಬಂದಿ ಮಗುವನ್ನು ತಮ್ಮ ಆರೈಕೆಯಲ್ಲಿ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು. ಬಳಿಕ ಮಗುವಿಗೆ ಜೋಗುಳ ಹಾಡಿ ಸಮಾಧಾನಪಡಿಸಿದ ಅವರು, ಮಗು ಶಾಂತವಾಗುವಂತೆ ನೋಡಿಕೊಂಡರು. ಇದರಿಂದ ತಾಯಿ ಯಾವುದೇ ಆತಂಕವಿಲ್ಲದೆ ಪರೀಕ್
Aug 31 min read


ಗಣರಾಜ್ಯೋತ್ಸವ–2026ಕ್ಕೆ ಹೊಸ ಇತಿಹಾಸ: 140 ಪುರುಷರ CRPF ಪಡೆಯ ನೇತೃತ್ವ ವಹಿಸಲಿರುವ ಮಹಿಳಾ ಅಧಿಕಾರಿ ಸಿಮ್ರನ್ ಬಾಲಾ
ನವದೆಹಲಿ: ಗಣರಾಜ್ಯೋತ್ಸವ–2026ರ ಪಥಸಂಚಲನದಲ್ಲಿ ಇತಿಹಾಸ ನಿರ್ಮಾಣವಾಗಲಿದೆ. ಕೇಂದ್ರ ಮೀಸಲು ಪೊಲೀಸ್ ಪಡೆ (CRPF)ಯ 140 ಮಂದಿ ಪುರುಷರನ್ನೊಳಗೊಂಡ ಪಥಸಂಚಲನ ಪಡೆಯನ್ನು ಮೊದಲ ಬಾರಿಗೆ ಮಹಿಳಾ ಅಧಿಕಾರಿ ಸಿಮ್ರನ್ ಬಾಲಾ (Simran Bala) ನೇತೃತ್ವ ವಹಿಸಲಿದ್ದಾರೆ. CRPFನಲ್ಲಿ ಸೇವೆ ಸಲ್ಲಿಸುತ್ತಿರುವ ಸಿಮ್ರನ್ ಬಾಲಾ, ಗಣರಾಜ್ಯೋತ್ಸವದ ಪ್ರಮುಖ ಕಾರ್ಯಕ್ರಮದಲ್ಲಿ ಪುರುಷರ ಪಥಸಂಚಲನ ಪಡೆಗೆ ಕಮಾಂಡ್ ನೀಡುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಲಿದ್ದಾರೆ. ಇದು ಕೇವಲ ವೈಯಕ್ತಿಕ ಸಾಧನೆ ಮಾತ್ರವಲ್ಲದೆ, ಮಹಿಳೆಯರ ಸಾಮರ್ಥ್ಯ ಮತ್ತು ಸಮಾನತೆಯ ಸಂಕೇತವಾಗಿಯೂ ಗುರುತಿಸಲಾಗಿದೆ. ರಾಷ್ಟ್ರೀಯ ಮಟ್ಟದ ಈ ಗೌರವ
Jan 241 min read


ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ – ಜೈಲಿನಲ್ಲಿ ದರ್ಶನ್ ಗಲಾಟೆ ವದಂತಿ, ಅಧಿಕಾರಿಗಳ ಖಂಡನೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇತರೆ ಆರೋಪಿಗಳ ಜೊತೆ ರಂಪಾಟ ನಡೆಸಿದ್ದಾರೆ ಎನ್ನುವ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ದರ್ಶನ್, ಆರ್. ನಾಗರಾಜ್, ಚಾಲಕ ಲಕ್ಷ್ಮಣ್, ಉದ್ಯಮಿ ಪ್ರದೂಷ್ ರಾವ್ ಹಾಗೂ ಆಟೋ ಚಾಲಕರು ಅನುಕುಮಾರ್ (ಅನು), ಜಗದೀಶ್ (ಜಗ್ಗ) – ಎಲ್ಲರೂ ಒಂದೇ ಬ್ಯಾರಕ್ನಲ್ಲಿ ಇರಿಸಿರುವುದು ತಿಳಿದುಬಂದಿದೆ. ದರ್ಶನ್ ಅವರು ಆರ್. ನಾಗರಾಜ್ ಹೊರತುಪಡಿಸಿ ಉಳಿದವರ ಜೊತೆ ಗಲಾಟೆ, ಅವಾಚ್ಯ ಶಬ್ದ ಬಳಕೆ ಹಾಗೂ ಕಾಲಿನಿಂದ ಒದ್ದಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿದ್ದರೂ, ಕಾರಾಗೃಹದ ಎಸ್ಪಿ
Dec 9, 20251 min read
Archive
bottom of page





