top of page
News Articles
Sathyapatha News Plus


ಸಾಲ ತೀರಿಸಲು ಕಿಡ್ನ್ಯಾಪ್ ನಾಟಕ; ತಂದೆಯಿಂದ ₹90 ಲಕ್ಷಕ್ಕೆ ಡಿಮ್ಯಾಂಡ್
ಬೆಂಗಳೂರಿನಲ್ಲಿ ಸಿನಿಮೀಯ ರೀತಿಯಲ್ಲಿ ಕಿಡ್ನ್ಯಾಪ್ ಕಥೆ ಕಟ್ಟಿದ 40 ವರ್ಷದ ವ್ಯಕ್ತಿ; ಇಬ್ಬರು ಸ್ನೇಹಿತರ ಜೊತೆ ಬಂಧನ ಬೆಂಗಳೂರು: ಸಾಲದ ಸುಳಿಯಲ್ಲಿ ಸಿಲುಕಿದ್ದ ವ್ಯಕ್ತಿಯೊಬ್ಬ ಸಾಲ ತೀರಿಸಲು ತನ್ನದೇ ಕಿಡ್ನ್ಯಾಪ್ ನಾಟಕವಾಡಿ, ತಂದೆಯಿಂದಲೇ ₹90 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಬೆಂಗಳೂರಿನ ಆರ್.ಆರ್.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮನೀಷ್ (40) ಎಂಬಾತ ತನ್ನ ತಂದೆ ಮನೋಹರ್ ಪಟೇಲ್ (62) ಅವರಿಗೆ ಹೆದರಿಕೆ ಹುಟ್ಟಿಸುವಂತೆ ಕಿಡ್ನ್ಯಾಪ್ ಕಥೆ ಕಟ್ಟಿದ್ದಾನೆ. ಸ್ನೇಹಿತರ ಮೂಲಕ ಮನೀಷ್ನದೇ ಮೊಬೈಲ್ ಸಂಖ್ಯೆಯಿಂದ ತಂದೆಗೆ ವಾಟ್ಸಾಪ್ ಕರೆ ಮಾಡಿಸಿ, “ನಿಮ್ಮ ಮಗನನ್ನು ಕಿಡ್ನ್ಯ
Oct 21 min read


ಬ್ಯಾಂಕ್ಗಳಿಗೆ ಪ್ರತಿ ಶನಿವಾರ ರಜೆ? ಸಾಮಾಜಿಕ ಜಾಲತಾಣದ ಪೋಸ್ಟ್ನ ಅಸಲಿಯತ್ತು ಏನು?
ನವದೆಹಲಿ: ಬ್ಯಾಂಕ್ಗಳಿಗೆ ಇನ್ನು ಮುಂದೆ ಪ್ರತಿ ಶನಿವಾರ ಹಾಗೂ ಭಾನುವಾರ ರಜೆ ಇರಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೇಂದ್ರ ಹಣಕಾಸು ಇಲಾಖೆ ಹೊರಡಿಸಿರುವ ಗೆಜೆಟ್ ಆದೇಶ ಎಂದು ಹೇಳಲಾಗುತ್ತಿರುವ ದಾಖಲೆಯೊಂದನ್ನು ಹಂಚಿಕೊಳ್ಳಲಾಗುತ್ತಿದ್ದು, ಇದರಿಂದ ಬ್ಯಾಂಕ್ ಗ್ರಾಹಕರಲ್ಲಿ ಗೊಂದಲ ಉಂಟಾಗಿದೆ. ಆದರೆ, ಈ ವೈರಲ್ ಪೋಸ್ಟ್ಗೆ ಸಂಬಂಧಿಸಿದಂತೆ ಪ್ರೆಸ್ ಇನ್ಫಾರ್ಮೇಷನ್ ಬ್ಯೂರೊ (PIB) ಫ್ಯಾಕ್ಟ್ಚೆಕ್ ಸ್ಪಷ್ಟನೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆದೇಶದ ಪ್ರತಿ ನಕಲಿ ಎಂದು ತಿಳಿಸಿದೆ. ಪ್ರತಿ ಶನಿವಾರ ಬ್ಯಾಂಕ್ ರಜೆ ಘೋಷಣೆಯಾಗಿದೆಯೇ? PIB
Oct 11 min read


MRPL ಘಟಕದಲ್ಲಿ ಸ್ಫೋಟ: ಓರ್ವನಿಗೆ ಗಂಭೀರ ಸುಟ್ಟ ಗಾಯ, ಆರು ಮಂದಿಗೆ ಸಣ್ಣಪುಟ್ಟ ಗಾಯ
ಮಂಗಳೂರು: ನಗರದ ಹೊರವಲಯದ ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಆವರಣದಲ್ಲಿರುವ CHT (Hydrogen Sulphur Treatment) ಘಟಕದಲ್ಲಿ ಬುಧವಾರ (ಸೆ.30) ಸ್ಫೋಟ ಸಂಭವಿಸಿ ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಸ್ಫೋಟದ ಬಳಿಕ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ದಟ್ಟ ಹೊಗೆ ಆವರಿಸಿತ್ತು. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟಕದಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ ಬ್ಯಾಪ್ಟಿಸ್ಟ್ ಅವರಿಗೆ ಸುಮಾರು 35% ಸುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗ
Sep 301 min read


ಅಕ್ಟೋಬರ್ 1ರಿಂದ ಬದಲಾಗಲಿದೆ ಈ 10 ಪ್ರಮುಖ ನಿಯಮಗಳು: ಸಾರ್ವಜನಿಕರೇ ಗಮನಿಸಿ!
ಬೆಂಗಳೂರು: ಅಕ್ಟೋಬರ್ 1, 2026ರಿಂದ ದೇಶದ ಜನರ ದೈನಂದಿನ ಜೀವನ ಮತ್ತು ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದಂತೆ ಹಲವು ಪ್ರಮುಖ ಬದಲಾವಣೆಗಳು ಜಾರಿಗೆ ಬರಲಿವೆ. ಎಲ್ಪಿಜಿ ಸಿಲಿಂಡರ್ ದರದಿಂದ ಹಿಡಿದು ಬ್ಯಾಂಕಿಂಗ್, ಎಫ್ಡಿ, ಟಿಡಿಎಸ್ ಹಾಗೂ ಬ್ಯಾಂಕ್ ರಜೆಗಳವರೆಗೆ ಹಲವು ನಿಯಮಗಳಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ. 1. ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಬದಲಾವಣೆ ಪ್ರತಿ ತಿಂಗಳ ಮೊದಲ ದಿನ ತೈಲ ಮಾರುಕಟ್ಟೆ ಕಂಪನಿಗಳು ಎಲ್ಪಿಜಿ ಸಿಲಿಂಡರ್ ದರಗಳನ್ನು ಪರಿಷ್ಕರಿಸುತ್ತವೆ. ಹೀಗಾಗಿ ಅಕ್ಟೋಬರ್ 1ರಂದು ಗೃಹಬಳಕೆ ಮತ್ತು ವಾಣಿಜ್ಯ ಸಿಲಿಂಡರ್ಗಳ ಬೆಲೆಯಲ್ಲಿ ಬದಲಾವಣೆ ಆಗುವ ಸಾಧ್ಯತೆಯಿದೆ. 2. ಎಲ್
Sep 302 min read


ಬ್ಯಾಂಕ್ ಮುಷ್ಕರ ರದ್ದು; ಎಂದಿನಂತೆ ಕಾರ್ಯನಿರ್ವಹಿಸಲಿವೆ ಬ್ಯಾಂಕ್ಗಳು
ನವದೆಹಲಿ: ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಸೆಪ್ಟೆಂಬರ್ 28ರಿಂದ 30ರವರೆಗೆ ಕರೆ ನೀಡಿದ್ದ ಮೂರು ದಿನಗಳ ದೇಶವ್ಯಾಪಿ ಬ್ಯಾಂಕ್ ಮುಷ್ಕರವನ್ನು ರದ್ದುಗೊಳಿಸಿದೆ. ಒಕ್ಕೂಟಗಳು ದಿಢೀರ್ ಈ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಬ್ಯಾಂಕ್ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ವಾರಾಂತ್ಯದ ರಜೆಗಳೊಂದಿಗೆ ಸತತ ಮೂರು ದಿನಗಳ ಮುಷ್ಕರ ನಡೆದರೆ ಸಾರ್ವಜನಿಕರಿಗೆ ಬ್ಯಾಂಕಿಂಗ್ ಸೇವೆಗಳಲ್ಲಿ ನಿರಂತರ ವ್ಯತ್ಯಯ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 27ರ ಭಾನುವಾರದಂದು ಸಾರ್ವಜನಿಕ ವಲಯದ ಬ್ಯಾಂಕ್ಗಳು ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳು (RRB) ಸಹ..
Sep 281 min read


LPG ಗ್ರಾಹಕರೇ ಗಮನಿಸಿ! ಅಕ್ಟೋಬರ್ 1ರಿಂದ ಬದಲಾಗಲಿದೆ ನಿಯಮ; KYC ಮಾಡದಿದ್ದರೆ ಸಬ್ಸಿಡಿ ದರದ ಸಿಲಿಂಡರ್ಗೆ ಬ್ರೇಕ್!
LPG ಗ್ರಾಹಕರಿಗೆ ಹೊಸ ನಿಯಮ: ಅಕ್ಟೋಬರ್ 1ರಿಂದ ಸಬ್ಸಿಡಿ ಪಡೆಯಲು ಬಯೋಮೆಟ್ರಿಕ್ KYC ಕಡ್ಡಾಯ ನವದೆಹಲಿ: ದೇಶದ ಗೃಹಬಳಕೆಯ LPG ಗ್ರಾಹಕರಿಗೆ ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೆ ತರಲು ಮುಂದಾಗಿದೆ. 2026ರ ಅಕ್ಟೋಬರ್ 1ರಿಂದ ಸಬ್ಸಿಡಿ ಸಹಿತ ನಿಯಂತ್ರಿತ ದರದಲ್ಲಿ LPG ಸಿಲಿಂಡರ್ ರಿಫಿಲ್ ಬುಕ್ ಮಾಡಲು ಬಯೋಮೆಟ್ರಿಕ್ ಆಧಾರ್ ದೃಢೀಕರಣ (BAA) ಪೂರ್ಣಗೊಳಿಸಿರುವುದು ಅಗತ್ಯವಾಗಲಿದೆ. ಈಗಾಗಲೇ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಪೂರ್ಣಗೊಳಿಸಿರುವ ಗ್ರಾಹಕರು ಮತ್ತೆ ಯಾವುದೇ ಪ್ರಕ್ರಿಯೆ ಮಾಡುವ ಅಗತ್ಯವಿಲ್ಲ. ಅವರ LPG ರಿಫಿಲ್ ಸೇವೆ ಎಂದಿನಂತೆ ಮುಂದುವರಿಯಲಿದೆ. KYC ಮಾಡದವರಿಗೆ ಏನಾಗಲಿದೆ? ಅಕ್ಟೋ
Sep 231 min read


ಉಮರ್ ಖಾಲಿದ್ ರಾಷ್ಟ್ರೀಯವಾದಿ ಎಂದ ಹೇಳಿಕೆಗೆ ಹರಿಪ್ರಸಾದ್ ಸಮರ್ಥನೆ; ಆರ್ಎಸ್ಎಸ್ ವಿರುದ್ಧ ವಾಗ್ದಾಳಿ
ಬೆಂಗಳೂರು: ಉಮರ್ ಖಾಲಿದ್ ಅವರನ್ನು ‘ರಾಷ್ಟ್ರೀಯವಾದಿ’ ಎಂದು ಬಣ್ಣಿಸಿದ್ದ ತಮ್ಮ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ. ಇದೇ ವೇಳೆ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಉಮರ್ ಖಾಲಿದ್ ಕುರಿತು ತಮ್ಮ ಹೇಳಿಕೆಗೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಹರಿಪ್ರಸಾದ್, ಯಾವುದೇ ವ್ಯಕ್ತಿಯ ದೇಶಪ್ರೇಮ ಅಥವಾ ದೇಶದ್ರೋಹದ ಬಗ್ಗೆ ತೀರ್ಪು ನೀಡುವ ಅಧಿಕಾರ ರಾಜಕೀಯ ಪಕ್ಷಗಳಿಗೆ ಇಲ್ಲ. ಇಂತಹ ವಿಚಾರಗಳನ್ನು ಸಂವಿಧಾನ ಮತ್ತು ನ್ಯಾಯಾಂಗದ ಚೌಕಟ್ಟಿನಲ್ಲಿ ನೋಡಬೇಕು ಎಂದು ಹೇಳಿದ್ದಾರೆ. ಉಮರ್ ಖಾ
Sep 171 min read


ಮಂಗಳೂರು ಜೈಲಿನಲ್ಲಿ ಭಾಸ್ಕರ ಶೆಟ್ಟಿ ಕೊಲೆ ಆರೋಪಿಗಳ ಮೇಲೆ ಹಲ್ಲೆ ಪ್ರಕರಣ : 14 ಮಂದಿ ದೋಷಿಗಳು
ಮಂಗಳೂರು: ಉಡುಪಿಯ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ನವನೀತ್ ಶೆಟ್ಟಿ ಹಾಗೂ ಜ್ಯೋತಿಷಿ ನಿರಂಜನ್ ಭಟ್ ಮೇಲೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲೇ ದಾಳಿ ನಡೆಸಿದ ಪ್ರಕರಣದಲ್ಲಿ 14 ಮಂದಿ ಆರೋಪಿಗಳು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ. ದೋಷಿಗಳ ಶಿಕ್ಷೆಯ ಪ್ರಮಾಣವನ್ನು ಸೆಪ್ಟೆಂಬರ್ 16ರಂದು ಪ್ರಕಟಿಸಲಾಗುವುದು. 2017ರ ಸೆಪ್ಟೆಂಬರ್ 11ರಂದು ಮಧ್ಯಾಹ್ನ ಸುಮಾರು 12.30ರ ವೇಳೆಗೆ ಮಂಗಳೂರು ಜಿಲ್ಲಾ ಕಾರಾಗೃಹದ ಹೊಸ ಕಟ್ಟಡದ ‘ಬಿ’ ಬ್ಲಾಕ್ನ ವರಾಂಡದಲ್ಲಿ ಈ ದಾಳಿ ನಡೆದಿತ್ತು. ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನವನೀತ್ ಶೆಟ್ಟಿ ಮತ್ತು ನಿರಂಜನ್ ಭಟ್ ಅ
Sep 121 min read


ಬೆಳ್ತಂಗಡಿಯಲ್ಲಿ ಲೋಕಾಯುಕ್ತ ದಾಳಿ: ಕುವೆಟ್ಟು, ಮಡಂತ್ಯಾರು ಗ್ರಾ.ಪಂ. ಕಚೇರಿಗಳಲ್ಲಿ ಕಡತಗಳ ಪರಿಶೀಲನೆ
ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಮತ್ತು ಮಡಂತ್ಯಾರು ಗ್ರಾಮ ಪಂಚಾಯತ್ ಕಚೇರಿಗಳ ಮೇಲೆ ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಗ್ರಾಮ ಪಂಚಾಯತ್ಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಲೋಕಾಯುಕ್ತ ಕೇಂದ್ರ ಕಚೇರಿಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಉಡುಪಿ ಜಿಲ್ಲೆಯ ಲೋಕಾಯುಕ್ತ ಇನ್ಸ್ಪೆಕ್ಟರ್ ಮಂಜುನಾಥ್ ಶಂಕರಹಳ್ಳಿ ನೇತೃತ್ವದಲ್ಲಿ ರಾಘವೇಂದ್ರ ಸಾಲಿಗ್ರಾಮ, ಆದರ್ಶ್, ಅರುಣ್ ಕುಮಾರ್, ಸೂರಜ್ ಕಾಪು ಸೇರಿದಂತೆ ಒಟ್ಟು ಎಂಟು ಮಂದಿಯ ತಂಡ ಬೆಳಗ್ಗೆ ಸುಮ
Sep 91 min read


ಕರ್ನಾಟಕದ 90,000 ವಿದ್ಯಾರ್ಥಿಗಳಿಗೆ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ; ಅರ್ಜಿ ಸಲ್ಲಿಕೆ ಮಾಹಿತಿ ಇಲ್ಲಿದೆ
ಕರ್ನಾಟಕದ 90,000 ವಿದ್ಯಾರ್ಥಿಗಳಿಗೆ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ; ಅರ್ಜಿ ಸಲ್ಲಿಕೆ ಮಾಹಿತಿ ಇಲ್ಲಿದೆ ಬೆಂಗಳೂರು: ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ಯುವಜನತೆಗೆ ರಾಜ್ಯ ಸರ್ಕಾರ ಮಹತ್ವದ ಅವಕಾಶವೊಂದನ್ನು ಕಲ್ಪಿಸಿದೆ. ಕಾಲೇಜು ಶಿಕ್ಷಣ ಇಲಾಖೆಯ ವತಿಯಿಂದ ರಾಜ್ಯದ ಸುಮಾರು 90,000 ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಆನ್ಲೈನ್ ತರಬೇತಿ ನೀಡುವ ಯೋಜನೆ ರೂಪಿಸಲಾಗಿದೆ. ಈ ಯೋಜನೆಗೆ ಅಂದಾಜು 9 ಕೋಟಿ ರೂ. ವೆಚ್ಚವಾಗಲಿದೆ. ಆರ್ಥಿಕವಾಗಿ ಹಿಂದುಳಿದ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಖಾಸಗಿ ತರಬೇತಿ ಕೇಂದ್ರಗಳ ದುಬಾರಿ ಶುಲ್ಕದ ಹೊರೆಯಿಂ
Sep 82 min read


ವಿವಾಹಿತ, ವಯಸ್ಕ ಮಕ್ಕಳಿಗೂ ವಿಮೆ ಪರಿಹಾರ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ಅಪಘಾತದಲ್ಲಿ ಪೋಷಕರು ಮೃತಪಟ್ಟ ಸಂದರ್ಭದಲ್ಲಿ ಅವರ ವಯಸ್ಕ, ವಿವಾಹಿತ ಹಾಗೂ ಉದ್ಯೋಗಸ್ಥ ಮಕ್ಕಳು ಕೂಡ ವಿಮೆ ಪರಿಹಾರ ಪಡೆಯಲು ಅರ್ಹರು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಎನ್. ಕೋಟೀಶ್ವರ್ ಸಿಂಗ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠ ಈ ತೀರ್ಪು ನೀಡಿದೆ. ಮೃತ ವ್ಯಕ್ತಿಯ ಮೇಲೆ ಸಂಪೂರ್ಣವಾಗಿ ಆರ್ಥಿಕವಾಗಿ ಅವಲಂಬಿತರಾಗಿರುವವರು ಮಾತ್ರವಲ್ಲದೆ, ಅವರ ಆಸ್ತಿಯಲ್ಲಿ ಕಾನೂನುಬದ್ಧ ಹಕ್ಕು ಹೊಂದಿರುವವರು ಹಾಗೂ ಮೃತರನ್ನು ಕಾನೂನುಬದ್ಧವಾಗಿ ಪ್ರತಿನಿಧಿಸುವವರೂ ಮೋಟಾರ್ ಅಪಘಾತ ಪರಿಹಾರಕ್ಕೆ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಪೀಠ ಸ್ಪಷ್ಟಪಡಿ
Aug 161 min read


ಪರೀಕ್ಷೆಗೆ ಬಂದ ತಾಯಿಗೆ ಆಸರೆಯಾದ ಮಹಿಳಾ ಪೊಲೀಸ್; ಮಗುವಿಗೆ ಜೋಗುಳ ಹಾಡಿ ಮಾನವೀಯತೆ ಮೆರೆದ ಸಿಬ್ಬಂದಿ
ಬೆಂಗಳೂರು, ಆ. 3: ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿ ಪರೀಕ್ಷೆಗೆ ಎಂಟು ತಿಂಗಳ ಮಗುವಿನೊಂದಿಗೆ ಆಗಮಿಸಿದ್ದ ತಾಯಿಯೊಬ್ಬರಿಗೆ ಮಹಿಳಾ ಪೊಲೀಸ್ ಸಿಬ್ಬಂದಿ ಮಾನವೀಯತೆ ಮೆರೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ ತಾಯಿ ಪರೀಕ್ಷಾ ಕೊಠಡಿಗೆ ತೆರಳುವ ವೇಳೆ ಮಗು ಅಳಲು ಆರಂಭಿಸಿತು. ಇದರಿಂದ ತಾಯಿ ಆತಂಕಕ್ಕೊಳಗಾದಾಗ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಿಬ್ಬಂದಿ ಮಗುವನ್ನು ತಮ್ಮ ಆರೈಕೆಯಲ್ಲಿ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು. ಬಳಿಕ ಮಗುವಿಗೆ ಜೋಗುಳ ಹಾಡಿ ಸಮಾಧಾನಪಡಿಸಿದ ಅವರು, ಮಗು ಶಾಂತವಾಗುವಂತೆ ನೋಡಿಕೊಂಡರು. ಇದರಿಂದ ತಾಯಿ ಯಾವುದೇ ಆತಂಕವಿಲ್ಲದೆ ಪರೀಕ್
Aug 31 min read


ಗಣರಾಜ್ಯೋತ್ಸವ–2026ಕ್ಕೆ ಹೊಸ ಇತಿಹಾಸ: 140 ಪುರುಷರ CRPF ಪಡೆಯ ನೇತೃತ್ವ ವಹಿಸಲಿರುವ ಮಹಿಳಾ ಅಧಿಕಾರಿ ಸಿಮ್ರನ್ ಬಾಲಾ
ನವದೆಹಲಿ: ಗಣರಾಜ್ಯೋತ್ಸವ–2026ರ ಪಥಸಂಚಲನದಲ್ಲಿ ಇತಿಹಾಸ ನಿರ್ಮಾಣವಾಗಲಿದೆ. ಕೇಂದ್ರ ಮೀಸಲು ಪೊಲೀಸ್ ಪಡೆ (CRPF)ಯ 140 ಮಂದಿ ಪುರುಷರನ್ನೊಳಗೊಂಡ ಪಥಸಂಚಲನ ಪಡೆಯನ್ನು ಮೊದಲ ಬಾರಿಗೆ ಮಹಿಳಾ ಅಧಿಕಾರಿ ಸಿಮ್ರನ್ ಬಾಲಾ (Simran Bala) ನೇತೃತ್ವ ವಹಿಸಲಿದ್ದಾರೆ. CRPFನಲ್ಲಿ ಸೇವೆ ಸಲ್ಲಿಸುತ್ತಿರುವ ಸಿಮ್ರನ್ ಬಾಲಾ, ಗಣರಾಜ್ಯೋತ್ಸವದ ಪ್ರಮುಖ ಕಾರ್ಯಕ್ರಮದಲ್ಲಿ ಪುರುಷರ ಪಥಸಂಚಲನ ಪಡೆಗೆ ಕಮಾಂಡ್ ನೀಡುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಲಿದ್ದಾರೆ. ಇದು ಕೇವಲ ವೈಯಕ್ತಿಕ ಸಾಧನೆ ಮಾತ್ರವಲ್ಲದೆ, ಮಹಿಳೆಯರ ಸಾಮರ್ಥ್ಯ ಮತ್ತು ಸಮಾನತೆಯ ಸಂಕೇತವಾಗಿಯೂ ಗುರುತಿಸಲಾಗಿದೆ. ರಾಷ್ಟ್ರೀಯ ಮಟ್ಟದ ಈ ಗೌರವ
Jan 241 min read


ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ – ಜೈಲಿನಲ್ಲಿ ದರ್ಶನ್ ಗಲಾಟೆ ವದಂತಿ, ಅಧಿಕಾರಿಗಳ ಖಂಡನೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇತರೆ ಆರೋಪಿಗಳ ಜೊತೆ ರಂಪಾಟ ನಡೆಸಿದ್ದಾರೆ ಎನ್ನುವ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ದರ್ಶನ್, ಆರ್. ನಾಗರಾಜ್, ಚಾಲಕ ಲಕ್ಷ್ಮಣ್, ಉದ್ಯಮಿ ಪ್ರದೂಷ್ ರಾವ್ ಹಾಗೂ ಆಟೋ ಚಾಲಕರು ಅನುಕುಮಾರ್ (ಅನು), ಜಗದೀಶ್ (ಜಗ್ಗ) – ಎಲ್ಲರೂ ಒಂದೇ ಬ್ಯಾರಕ್ನಲ್ಲಿ ಇರಿಸಿರುವುದು ತಿಳಿದುಬಂದಿದೆ. ದರ್ಶನ್ ಅವರು ಆರ್. ನಾಗರಾಜ್ ಹೊರತುಪಡಿಸಿ ಉಳಿದವರ ಜೊತೆ ಗಲಾಟೆ, ಅವಾಚ್ಯ ಶಬ್ದ ಬಳಕೆ ಹಾಗೂ ಕಾಲಿನಿಂದ ಒದ್ದಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿದ್ದರೂ, ಕಾರಾಗೃಹದ ಎಸ್ಪಿ
Dec 9, 20251 min read
Archive
bottom of page









