ರೈತರ ಪ್ರತಿಭಟನೆಯ ಕಿಚ್ಚು ತೀವ್ರಗೊಂಡ ಹಿನ್ನೆಲೆಯಲ್ಲಿ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಶುಕ್ರವಾರ ಸಭೆ ನಡೆಸಿ, ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಪಡಿಸುವ ಮೂಲಕ ಬಿಕ್ಕಟ್ಟಿಗೆ ತಾತ್ಕಾಲಿಕ ತೆರೆ ಎಳೆದಿದ್ದಾರೆ. ಬೆಂಬಲ ಬೆಲೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು. ರೈತರ ಬೇಡಿಕೆ ಈಡೇರಿಸಲು ಕಾರ್ಖಾನೆ ಮಾಲೀಕರು ಸಿದ್ಧರಿರಲಿಲ್ಲ; ₹3,500 ನೀಡಿದರೆ ಭಾರಿ ನಷ್ಟವಾಗುತ್ತದೆ ಎಂದು ಅವರು ವಾ
"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.