top of page
News Articles
Sathyapatha News Plus


ಗಡೀಪಾರು ಆದೇಶಕ್ಕೆ ಸುಪ್ರೀಂ ಅಸ್ತು: ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ತೀವ್ರ ಹಿನ್ನಡೆ
ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಹೊರಡಿಸಲಾಗಿದ್ದ ಈ ಆದೇಶವನ್ನು ಪ್ರಶ್ನಿಸಿ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸುವ ಮೂಲಕ ಅವರಿಗೆ ತೀವ್ರ ಹಿನ್ನಡೆಯುಂಟಾಗಿದೆ. ಈ ಹಿಂದೆ ಹೈಕೋರ್ಟ್ನ ಏಕಸದಸ್ಯ ಪೀಠ ಮತ್ತು ಮುಖ್ಯ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ಪೀಠಗಳು ಸಹ ಈ ಗಡೀಪಾರು ಆದೇಶದಲ್ಲಿ ಮಧ್ಯಪ್ರವೇಶಿಸಲು
Jul 131 min read


ಪುತ್ರಿಯರ ಅಕ್ರಮ ನೇಮಕ ಆರೋಪ: ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತು
ಬೆಂಗಳೂರು, ಜುಲೈ 13: ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷರಾದ ಶಿವಶಂಕರಪ್ಪ ಎಸ್. ಸಾಹುಕಾರ ಅವರನ್ನು ತಮ್ಮ ಪುತ್ರಿಯರ ಅಕ್ರಮ ನೇಮಕಾತಿಗೆ ನೆರವಾದ ಆರೋಪದ ಹಿನ್ನೆಲೆ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್ ಆದೇಶ ಹೊರಡಿಸಿದ್ದಾರೆ. ಶಿವಶಂಕರಪ್ಪ ವಿರುದ್ಧದ ಗಂಭೀರ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಲು ಶಿಫಾರಸು ಮಾಡಲಾಗಿದ್ದು, ಈ ವಿಚಾರವನ್ನು ಸುಪ್ರೀಂ ಕೋರ್ಟ್ಗೆ ಉಲ್ಲೇಖಿಸಲು ರಾಷ್ಟ್ರಪತಿಗಳಿಗೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ. ಮುಂದಿನ ಆದೇಶ ಬರುವವರೆಗೆ ಕೆಪಿಎಸ್ಸಿಯ ಹಿರಿಯ ಸದಸ್ಯರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹ
Jul 131 min read


ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಎನ್ಐಎ ವಶಕ್ಕೆ
ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದಾರೆ. ಬೆಳ್ತಂಗಡಿಯ ನೌಶಾದ್ (32) ಮತ್ತು ಕೊಡಗಿನ ಅಬ್ದುಲ್ ನಾಸಿರ್ (41) ಬಂಧಿತ ಆರೋಪಿಗಳಾಗಿದ್ದಾರೆ. ಇವರಿಬ್ಬರ ಸುಳಿವು ನೀಡಿದವರಿಗೆ ಎನ್ಐಎ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿತ್ತು. ಈ ಆರೋಪಿಗಳು ಕೊಲೆಗೈದಿದ್ದ ಮುಖ್ಯ ಅಪರಾಧಿಗಳಿಗೆ ಮೈಸೂರು, ಚಾಮರಾಜನಗರ ಹಾಗೂ ತಮಿಳುನಾಡಿನ ಈರೋಡ್ನಲ್ಲಿ ಅಡಗಿಕೊಳ್ಳಲು ಆಶ್ರಯ ನೀಡಿ ಸಹಾಯ ಮಾಡಿದ್ದರು. ತೀವ್ರ ಶೋಧ ನಡೆಸಿದ
Jul 121 min read


ರಾಜ್ಯದಲ್ಲಿ 32 ಅತ್ಯಾಧುನಿಕ ಮೊಬೈಲ್ ಫೊರೆನ್ಸಿಕ್ ಲ್ಯಾಬ್ಗಳಿಗೆ ಚಾಲನೆ
ಕರ್ನಾಟಕದಲ್ಲಿ ಅಪರಾಧ ತನಿಖಾ ವ್ಯವಸ್ಥೆಯನ್ನು ಮತ್ತಷ್ಟು ವೈಜ್ಞಾನಿಕ ಹಾಗೂ ವೇಗವಾಗಿ ರೂಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ 32 ಅತ್ಯಾಧುನಿಕ ಮೊಬೈಲ್ ಫೊರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿಗಳಿಗೆ (MFSL) ಚಾಲನೆ ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ಮೆಟ್ಟಿಲುಗಳ ಬಳಿ ಈ ಚಲಿಸುವ ಮಿನಿ ಪ್ರಯೋಗಾಲಯಗಳಿಗೆ ಹಸಿರು ನಿಶಾನೆ ತೋರಿದರು. ಈ ಮೊಬೈಲ್ ಲ್ಯಾಬ್ಗಳು ಅಪರಾಧ ನಡೆದ ಸ್ಥಳಕ್ಕೇ ತ್ವರಿತವಾಗಿ ತಲುಪಿ, ಸ್ಥಳದಲ್ಲೇ ವೈಜ್ಞಾನಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ ಪ್ರಾಥಮಿಕ ಪರೀಕ್ಷೆ ನಡೆಸಲು ನೆರವಾಗಲಿವೆ. ಇದರಿಂದ ಪ್ರಮುಖ ಸಾಕ್ಷ್ಯಗಳು ನಾಶವಾಗುವುದು ತಪ್ಪಲಿದ್ದು, ತನಿ
Jul 121 min read


ಖ್ಯಾತ ಹಿನ್ನೆಲೆ ಗಾಯಕಿ, ‘ಗಾನ ಕೋಗಿಲೆ’ ಎಸ್. ಜಾನಕಿ ವಿಧಿವಶ
ಭಾರತೀಯ ಚಿತ್ರರಂಗದ ದಂತಕಥೆ, ‘ದಕ್ಷಿಣ ಭಾರತದ ನೈಟಿಂಗೇಲ್’ ಖ್ಯಾತಿಯ ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ (88) ಅವರು ಮೈಸೂರಿನ ಅಪೊಲೊ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಅವರು ಮೈಸೂರಿನಲ್ಲಿಯೇ ನೆಲೆಸಿದ್ದರು. 1938ರ ಏಪ್ರಿಲ್ 23ರಂದು ಜನಿಸಿದ ಜಾನಕಿ ಅಮ್ಮ ಅವರು 1957ರಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ತಮ್ಮ ಸುಮಧುರ ಧ್ವನಿಯ ಮೂಲಕ ‘ಅಭಿವ್ಯಕ್ತಿ ಮತ್ತು ಸಮನ್ವಯತೆಯ ರಾಣಿ’ ಎಂದು ಪ್ರಸಿದ್ಧರಾಗಿದ್ದ ಅವರು,
Jul 111 min read


ಔಷಧಿ ಬೆಲೆ ಇಳಿಕೆ: ಬಡ, ಮಧ್ಯಮ ವರ್ಗದವರಿಗೆ ಕೇಂದ್ರದ ಸಿಹಿ ಸುದ್ದಿ!
ಪ್ರತಿ ತಿಂಗಳು ಔಷಧಿಗಳಿಗೆ ಸಾವಿರಾರು ರೂಪಾಯಿ ವೆಚ್ಚ ಮಾಡುತ್ತಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಕಾಯಿಲೆಗಳು ಸೇರಿದಂತೆ ವಿವಿಧ ದೀರ್ಘಕಾಲೀನ ಕಾಯಿಲೆಗಳಿಗೆ ಬಳಸುವ ಒಟ್ಟು 39 ಅಗತ್ಯ ಔಷಧಿಗಳ ಚಿಲ್ಲರೆ ಬೆಲೆಗೆ ಗರಿಷ್ಠ ಮಿತಿಯನ್ನು ನಿಗದಿಪಡಿಸಿ ರಾಷ್ಟ್ರೀಯ ಔಷಧ ದರ ನಿಯಂತ್ರಣ ಪ್ರಾಧಿಕಾರ (NPPA) ಮಹತ್ವದ ಆದೇಶ ಹೊರಡಿಸಿದೆ. ಈ ಹೊಸ ನಿಯಮವನ್ನು ಡ್ರಗ್ಸ್ ಆದೇಶ–2013 (DPCO) ಅಡಿಯಲ್ಲಿ ಜಾರಿಗೆ ತರಲಾಗಿದ್ದು, ಔಷಧ ಕಂಪನಿಗಳು ಇನ್ನು ಮುಂದೆ ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗ
Jul 111 min read


ಭ್ರಷ್ಟಾಚಾರ ಮುಕ್ತ ತಮಿಳುನಾಡು: ಕರೂರ್ನಲ್ಲಿ ಕಟ್ಟುನಿಟ್ಟಿನ ಸಂದೇಶ ರವಾನಿಸಿದ ಸಿಎಂ ವಿಜಯ್
ತಮಿಳುನಾಡಿನ ಕರೂರ್ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ವಿಜಯ್ ಅವರು ಲಂಚ ಮತ್ತು ಭ್ರಷ್ಟಾಚಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಯಾವುದೇ ಕಾರಣಕ್ಕೂ ಯಾರದೇ ಒತ್ತಡಕ್ಕೂ ಮಣಿಯದೆ ಸಾರ್ವಜನಿಕರು ಲಂಚ ನೀಡುವುದನ್ನು ಕಟ್ಟುನಿಟ್ಟಾಗಿ ನಿರಾಕರಿಸಬೇಕು ಎಂದು ಅವರು ಕರೆ ನೀಡಿದರು. ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುವ ಪ್ರತಿಯೊಬ್ಬ ನಾಗರಿಕನ ಪರವಾಗಿ ರಾಜ್ಯದ ಮುಖ್ಯಮಂತ್ರಿಯಾಗಿ ತಾವೂ ಸಂಪೂರ್ಣ ಬೆಂಬಲವಾಗಿ ನಿಲ್ಲುವುದಾಗಿ ಭರವಸೆ ನೀಡಿದರು. ತಮ್ಮ 55 ದಿನಗಳ ಆಡಳಿತ ಅವಧಿಯಲ್ಲಿ ತಂದಿರುವ ಆಡಳಿತಾತ್ಮಕ ಬದಲಾವಣೆಗಳನ್ನು ಪಟ್ಟಿ ಮಾಡಿದ ಸಿಎಂ, ಭ್ರಷ್ಟಾಚಾರ ನಮ್ಮ ರಕ್ತದಲ್ಲ
Jul 111 min read


ಚೀನಾದಲ್ಲಿ ಪ್ರವಾಹ: ವಸತಿ ಪ್ರದೇಶಗಳಿಗೆ ನುಗ್ಗಿದ 900 ವಿಷಕಾರಿ ಹಾವುಗಳು, ಜನರಲ್ಲಿ ಆತಂಕ
ಚೀನಾದ ಗುವಾಂಗ್ಕ್ಸಿ ಪ್ರಾಂತ್ಯದಲ್ಲಿ ಸುರಿದ ಭಾರೀ ಮಳೆ ಹಾಗೂ ಭೀಕರ ಪ್ರವಾಹದಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಪ್ರವಾಹದ ನೀರು ವಾಣಿಜ್ಯ ಹಾವು ಸಾಕಣೆ ಕೇಂದ್ರಗಳಿಗೆ ನುಗ್ಗಿದ ಪರಿಣಾಮ, ಸುಮಾರು 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ಪಂಜರಗಳಿಂದ ತಪ್ಪಿಸಿಕೊಂಡು ವಸತಿ ಪ್ರದೇಶಗಳಿಗೆ ನುಗ್ಗಿವೆ. ಪ್ರವಾಹದ ನೀರಿನಲ್ಲೇ ಹಾವುಗಳು ಈಜಾಡುತ್ತಿರುವುದು ಕಂಡುಬಂದಿದ್ದು, ರಸ್ತೆ ಹಾಗೂ ಮನೆಗಳಿಗೂ ನುಗ್ಗುತ್ತಿರುವುದರಿಂದ ಸ್ಥಳೀಯ ಜನರಲ್ಲಿ ತೀವ್ರ ಆತಂಕ ಮೂಡಿಸಿದೆ. ಹೆಂಗ್ಝೌ ನಗರದಲ್ಲಿ ಹಾವಿನ ಕಡಿತಕ್ಕೊಳಗಾದ ಮಹಿಳೆಯೊಬ್ಬರು ಸಕಾಲದಲ್ಲಿ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ. ಗುವಾಂಗ್
Jul 101 min read


ಕೊಡಿಯಾಲಬೈಲು ಜೈಲಿನಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ
ಮಂಗಳೂರಿನ ಕೊಡಿಯಾಲಬೈಲು ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಅಕ್ರಮವಾಗಿ ಮೊಬೈಲ್ ಫೋನ್ಗಳು ಪತ್ತೆಯಾಗಿದ್ದು, ಜೈಲಿನ ಭದ್ರತೆಯ ಬಗ್ಗೆ ತೀವ್ರ ಆತಂಕ ಮೂಡಿಸಿದೆ. ಜುಲೈ 7ರಂದು ರಾತ್ರಿ ಜೈಲಿನ ಅಧೀಕ್ಷಕ ಶರಣ ಬಸಪ್ಪ ಸಿಬಂದಿಯೊಂದಿಗೆ ‘ಎ‘ ಬ್ಲಾಕ್ನಲ್ಲಿ ದಿಢೀರ್ ತಪಾಸಣೆ ನಡೆಸಿದಾಗ, ಕೈದಿಗಳಾದ ಮೊಹಮ್ಮದ್ ಅಜ್ಮಲ್ ಮತ್ತು ಮೊಹಮ್ಮದ್ ಇಕ್ಬಾಲ್ ಬಳಿ ಮೊಬೈಲ್ ಪತ್ತೆಯಾಗಿವೆ. ಜೈಲಿನ ನಿಯಮ ಉಲ್ಲಂಘಿಸಿ ಮೊಬೈಲ್ ಬಳಸುತ್ತಿದ್ದ ಈ ಇಬ್ಬರು ಆರೋಪಿಗಳ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಸದ್ಯ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Jul 101 min read


ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಜನನ-ಮರಣ ಪ್ರಮಾಣಪತ್ರಕ್ಕಾಗಿ ನಾಗರಿಕರ ಪರದಾಟ
ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಎಸ್ಐಆರ್ ಪ್ರಕ್ರಿಯೆಗೆ ನಿಯೋಜಿಸಿರುವುದರಿಂದ, ಜನನ ಮತ್ತು ಮರಣ ಪ್ರಮಾಣಪತ್ರ ನೋಂದಣಿ ಸೇವೆಯ ಮೇಲೆ ತೀವ್ರ ಪರಿಣಾಮ ಬೀರಿದೆ. ಸಾಮಾನ್ಯವಾಗಿ ದಿನವಿಡೀ ಲಭ್ಯವಿರುತ್ತಿದ್ದ ಅರ್ಜಿ ಸಲ್ಲಿಕೆ ವ್ಯವಸ್ಥೆಯನ್ನು ಇದೀಗ ಜೂನ್ 30 ರಿಂದ ಜುಲೈ 29 ರವರೆಗೆ ಕೇವಲ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಮಾತ್ರ ಸೀಮಿತಗೊಳಿಸಲಾಗಿದೆ. ಇದರಿಂದಾಗಿ ಪ್ರತಿದಿನ ನೂರಾರು ನಾಗರಿಕರು ಕಚೇರಿಯ ಹೊರಗೆ ಸುದೀರ್ಘ ಸಾಲಿನಲ್ಲಿ ಗಂಟೆಗಟ್ಟಲೆ ನಿಲ್ಲುವಂತಾಗಿದೆ. ನವಜಾತ ಶಿಶುಗಳ ಜನನ ಪ್ರಮಾಣಪತ್ರಕ್ಕಾಗಿ ಪೋಷಕರು ಹಾಗೂ ಮರಣ ಪ್ರಮಾಣಪತ್ರಕ್ಕಾಗಿ
Jul 91 min read


ದೊಡ್ಡಬಳ್ಳಾಪುರ ಮರಕ್ಕೆ ಢಿಕ್ಕಿ ಹೊಡೆದು ಧಗಧಗನೆ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್!
ಚಿಕ್ಕಬಳ್ಳಾಪುರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ 11ನೇ ಮೈಲಿ ಸಮೀಪ ಪೆಟ್ರೋಲ್ ಟ್ಯಾಂಕರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪೆಟ್ರೋಲ್ ಟ್ಯಾಂಕರ್ ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದ್ದು, ಬೆಂಕಿಯ ಜ್ವಾಲೆ ತೀವ್ರವಾಗಿ ಹರಡಿದೆ. ಇದೇ ವೇಳೆ ಅದರ ಸಮೀಪದಲ್ಲೇ ರಿವರ್ಸ್ ತೆಗೆಯುತ್ತಿದ್ದ ಹಾಲಿನ ಟ್ಯಾಂಕರ್ಗೂ ಆಕಸ್ಮಿಕವಾಗಿ ಬೆಂಕಿ ವ್ಯಾಪಿಸಿದೆ. ಘಟನೆಯ ತೀವ್ರತೆಗೆ ಎರಡೂ ಟ್ಯಾಂಕರ್ ವಾಹನಗಳು ಸಂಪೂರ್ಣವಾಗಿ ಧಗಧಗನೆ ಹೊತ್ತಿ ಉರಿದಿವೆ. ಅದೃಷ್ಟವಶಾತ್, ಎರಡೂ ಲಾರಿಗಳ ಚಾಲಕರು ತಕ್ಷಣವೇ ಸಮಯಪ್ರಜ್ಞೆ ಮೆರೆದು ವಾಹನಗಳಿಂದ ಹೊರಗೆ
Jul 91 min read


ಅಮೆರಿಕ-ಇರಾನ್ ಐತಿಹಾಸಿಕ ಒಪ್ಪಂದ ಕೇವಲ ಮೂರೇ ವಾರಗಳಲ್ಲಿ ಧೂಳೀಪಟ!
ಟರ್ಕಿಯ ಅಂಕಾರಾದಲ್ಲಿ ನಡೆಯುತ್ತಿರುವ ನಾಟೋ ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಜೊತೆಗಿನ ಒಪ್ಪಂದ ಅಧಿಕೃತವಾಗಿ ಮುಕ್ತಾಯವಾಗಿದೆ ಎಂದು ಘೋಷಿಸಿದ್ದಾರೆ. ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲಿನ ಇರಾನ್ ದಾಳಿಗೆ ಪ್ರತಿಯಾಗಿ ಅಮೆರಿಕವು ಇರಾನ್ನ ೮೦ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಭೀಕರ ವಾಯುದಾಳಿ ನಡೆಸಿದೆ. ಇರಾನ್ ಸಹ ಗಲ್ಫ್ ರಾಷ್ಟ್ರಗಳಲ್ಲಿರುವ ೮೫ ಅಮೆರಿಕನ್ ನೆಲೆಗಳ ಮೇಲೆ ಬೃಹತ್ ಕ್ಷಿಪಣಿ ದಾಳಿ ನಡೆಸುವ ಮೂಲಕ ತಿರುಗೇಟು ನೀಡಿದೆ. ಜೂನ್ ೧೭ ರಂದು ಜಿ೭ ಶೃಂಗಸಭೆಯಲ್ಲಿ ಅಮೆರಿಕ ಮತ್ತು ಇರಾನ್ ನಾಯಕರು ೧೪ ಅಂಶಗಳ ‘ಇಸ್ಲಾಮಾಬಾದ್ ಒಪ್ಪಂದ’ಕ್ಕೆ ಸ
Jul 91 min read


ವಯನಾಡ್ ಸುರಂಗ ರಸ್ತೆ ದುರಂತ: ಮೂವರ ಸಾವು, ಐವರಿಗಾಗಿ ಹುಡುಕಾಟ
ಕೇರಳದ ಮೆಪ್ಪಾಡಿ ಕಲ್ಲಾಡಿ ಬಳಿಯ ಸುರಂಗ ರಸ್ತೆ ಕಾಮಗಾರಿ ಸ್ಥಳದಲ್ಲಿ ಸಂಭವಿಸಿದ ಭೀಕರ ಗುಡ್ಡಕುಸಿತದಲ್ಲಿ ಮೂವರು ಸಾವನ್ನಪ್ಪಿದ್ದು, ಐವರು ನಾಪತ್ತೆಯಾಗಿದ್ದಾರೆ. ಮೃತರನ್ನು ಚಂದ್ರಬಾನ್, ಬಿಕಾಶ್ ಕುಮಾರ್ ಮತ್ತು ಅನ್ಮೋಲ್ ಎಂದು ಗುರುತಿಸಲಾಗಿದ್ದು, ಘಟನೆಗೆ ಸಂಬಂಧಿಸಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ನಾಪತ್ತೆಯಾಗಿರುವ ವಿಕ್ರಮ್ ರಾಣಾ, ರಾಹುಲ್, ಮೊಹಮ್ಮದ್ ಇಮ್ರಾನ್, ರಾಕೇಶ್ ಹಾಗೂ ಅಜರುದ್ದೀನ್ ಅವರಿಗಾಗಿ ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ನ 200ಕ್ಕೂ ಹೆಚ್ಚು ಸಿಬ್ಬಂದಿ ಬಿರುಸಿನ ಶೋಧ ನಡೆಸುತ್ತಿದ್ದಾರೆ. ಆದರೆ, ನಿರಂತರ ಮಳೆಯು ರಕ್ಷಣಾ ಕಾರ್ಯಾಚರಣೆಗೆ ತೀವ್ರ ಅಡ್ಡಿಪಡಿಸುತ
Jul 81 min read


UPSC ನೇಮಕಾತಿ 2026: ಡ್ರಗ್ ಇನ್ಸ್ಪೆಕ್ಟರ್, ಅಸಿಸ್ಟೆಂಟ್ ಎಂಜಿನಿಯರ್ ಸೇರಿ 450 ಹುದ್ದೆಗಳ ಭರ್ತಿಗೆ ಅರ್ಜಿ
ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಡ್ರಗ್ ಇನ್ಸ್ಪೆಕ್ಟರ್, ಅಸಿಸ್ಟೆಂಟ್ ಎಂಜಿನಿಯರ್, ಲೀಗಲ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಒಟ್ಟು 450 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಜುಲೈ 17, 2026 ಸಂಜೆ 6 ಗಂಟೆಯೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಈ ನೇಮಕಾತಿ ಅಭಿಯಾನವು ಎಂಜಿನಿಯರಿಂಗ್, ಕಾನೂನು, ಔಷಧಾಲಯ, ವಿಜ್ಞಾನ ಮತ್ತು ಆಡಳಿತ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ನೀಡುತ್ತಿರುವ ಪ್ರಮುಖ ಅವಕಾಶವಾಗಿದೆ. ಹೆಚ್ಚಿನ ಹುದ್ದೆಗಳ
Jul 82 min read


ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು, ಜು. 7: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ನೀಡಿರುವ ಮುನ್ಸೂಚನೆಯ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. ಇದರ ಹಿನ್ನೆಲೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹಲವು ತುರ್ತು ಕ್ರಮಗಳನ್ನು ಜಾರಿಗೆ ತಂದಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು, ವಸತಿ ಶಾ
Jul 71 min read


ಮಾಣಿಯಲ್ಲಿ ಭಾರಿ ಮಳೆಗೆ ರಸ್ತೆಗೆ ಬಿದ್ದ ಮರ: ಸಂಚಾರ ಅಸ್ತವ್ಯಸ್ತ
ಬಂಟ್ವಾಳ ತಾಲೂಕಿನ ಮಾಣಿ ಬಳಿ ಮಂಗಳವಾರ ಬೆಳಿಗ್ಗೆ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಗೆ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದಿದೆ. ಇದರಿಂದಾಗಿ ಮಾಣಿ-ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡು, ಕೆಲಕಾಲ ತೀವ್ರ ಅಸ್ತವ್ಯಸ್ತ ಉಂಟಾಯಿತು. ಮರ ಬಿದ್ದ ಪರಿಣಾಮ ಶಾಲಾ-ಕಾಲೇಜುಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳು, ಕಚೇರಿ ನೌಕರರು ಹಾಗೂ ಸಾರ್ವಜನಿಕ ಪ್ರಯಾಣಿಕರು ರಸ್ತೆಯಲ್ಲೇ ಸಿಲುಕಿಕೊಂಡು ತೀವ್ರ ತೊಂದರೆ ಅನುಭವಿಸುವಂತಾಯಿತು. ರಸ್ತೆಯ ಇಕ್ಕೆಲಗಳಲ್ಲಿ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಿಷಯ ತಿಳಿಯುತ್ತಿದ್ದಂತೆ ಸಂಬಂಧಪಟ್ಟ ಇಲಾಖ
Jul 71 min read


ವಯನಾಡ್ನಲ್ಲಿ ಭಾರಿ ಭೂಕುಸಿತ: ಹಲವರು ಸಿಲುಕಿರುವ ಶಂಕೆ
ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಸಮೀಪದ ಕಲ್ಲಾಡಿಯಲ್ಲಿ ಮಂಗಳವಾರ ಭಾರಿ ಭೂಕುಸಿತ ಸಂಭವಿಸಿದೆ. ಸುರಂಗ ಮಾರ್ಗದ ಕಾಮಗಾರಿ ನಡೆಯುತ್ತಿದ್ದ ಮೀನಾಕ್ಷಿ ಸೇತುವೆ ಬಳಿ ಈ ದುರಂತ ಸಂಭವಿಸಿದ್ದು, ಅವಶೇಷಗಳ ಅಡಿಯಲ್ಲಿ ಕೆಲವರು ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿನ ತಾತ್ಕಾಲಿಕ ಕ್ಯಾಂಪ್ಗಳಲ್ಲಿದ್ದ ಮೂವರು ಕಾರ್ಮಿಕರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಘಟನೆಯಿಂದಾಗಿ ಕಾರ್ಮಿಕರ ವಾಹನಗಳು ಹಾಗೂ ಸಮೀಪದ ಕೆಲವು ಮನೆಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ. ಕಲ್ಪೆಟ್ಟಾದಿಂದ ಅಗ್ನಿಶಾಮಕ ದಳವು ತಕ್ಷಣವೇ ಸ್ಥಳಕ್ಕೆ ಧಾವಿಸಿದೆ. ಪ್ರಸ್ತುತ ಪೊಲೀಸರು ಮತ್ತು ಎನ್ಡಿ
Jul 71 min read


ಕೊಡಗು: ಮಲ್ಲಳ್ಳಿ ಜಲಪಾತದಲ್ಲಿ ಪ್ರವಾಹಕ್ಕೆ ಸಿಲುಕಿದ್ದ ಆಂಧ್ರದ ಇಬ್ಬರು ವಿದ್ಯಾರ್ಥಿಗಳ ಸಾಹಸಮಯ ರಕ್ಷಣೆ
ಕೊಡಗು ಜಿಲ್ಲೆಯ ಪ್ರಸಿದ್ಧ ಮಲ್ಲಳ್ಳಿ ಜಲಪಾತದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ಅಪಾಯದಲ್ಲಿದ್ದ ಆಂಧ್ರಪ್ರದೇಶದ ಇಬ್ಬರು ಕಾಲೇಜು ವಿದ್ಯಾರ್ಥಿಗಳನ್ನು ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ರಕ್ಷಿಸಲ್ಪಟ್ಟವರನ್ನು ಗಣೇಶ್ ನಾಯಕ್ ಮತ್ತು ಸಂತೋಷ್ ಕುಮಾರ್ ಎಂದು ಗುರುತಿಸಲಾಗಿದೆ. ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಇವರು, ಜಲಪಾತದಲ್ಲಿ ನೀರಿನ ಪ್ರಮಾಣ ಕಡಿಮೆ ಇದೆ ಎಂದು ಭಾವಿಸಿ ರಕ್ಷಣಾ ಬೇಲಿ ದಾಟಿ ಇಳಿದಿದ್ದರು. ಇದೇ ವೇಳೆ ಮೇಲ್ಭಾಗದ ವಿದ್ಯುತ್ ಘಟಕದಿಂದ ಏಕಾಏಕಿ ನೀರು ಬಿಟ್ಟಿದ್ದರಿಂದ, ಇಬ್ಬರೂ ಒಂದು ಗಂಟೆಗೂ ಹೆಚ್ಚು ಕಾಲ ಬಂಡೆಯೊಂದನ್ನು ಹಿಡಿದು ಜೀವನ್ಮರಣ ಹೋರಾಟ
Jul 71 min read


ಕೊಲಂಬೊ ಜೈಲಿನಲ್ಲಿ ಕೈದಿಗಳ ಭೀಕರ ಜಗಳ: 25 ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ
ಶ್ರೀಲಂಕಾದ ಕೊಲಂಬೊದ ನೆಗೊಂಬೊ ಜೈಲಿನಲ್ಲಿ ಕೈದಿಗಳ ಎರಡು ಗುಂಪುಗಳ ನಡುವೆ ಭೀಕರ ಘರ್ಷಣೆ ಸಂಭವಿಸಿದೆ. ಈ ಗಲಾಟೆಯ ತೀವ್ರ ಪರಿಣಾಮವಾಗಿ ಕನಿಷ್ಠ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಕೈದಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ. ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳು ಹಾಗೂ ವಿಚಾರಣಾಧೀನ ಕೈದಿಗಳ ನಡುವೆ ಭಾನುವಾರವೇ ಈ ಗಲಾಟೆ ಆರಂಭವಾಗಿತ್ತು. ಆದರೆ, ಇಷ್ಟೊಂದು ದೊಡ್ಡ ಮಟ್ಟದ ರಕ್ತಸಿಕ್ತ ಘರ್ಷಣೆಗೆ ನಿಖರವಾದ ಕಾರಣ ಏನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಘಟನೆಯ ನಂತರ ಜೈಲಿನ ಮುಖ್ಯ ದ್ವಾರದ ಹೊರಗೆ ಭಾರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಗಾಯಗೊಂಡವರನ್ನು ಪೊಲೀಸ್
Jul 71 min read


ನಿಂತಿಕಲ್ಲು: ಹೃದಯಾಘಾತದಿಂದ ೯ನೇ ತರಗತಿ ವಿದ್ಯಾರ್ಥಿ, ಯಕ್ಷಗಾನ ಕಲಾವಿದ ಶಿಶಿಲ್ ನಿಧನ
ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕರಿಂಬಿಲದಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಎಣ್ಮೂರು ಹೈಸ್ಕೂಲಿನ ೯ನೇ ತರಗತಿ ವಿದ್ಯಾರ್ಥಿಯಾಗಿದ್ದ ಶಿಶಿಲ್ (೧೪) ಎಂಬ ಬಾಲಕ ಭಾನುವಾರ ತಡರಾತ್ರಿ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಮೃತ ಬಾಲಕ ಇಲ್ಲಿನ ನಿವಾಸಿ ಪೂರ್ಣಚಂದ್ರ ಅವರ ಪುತ್ರನಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ತೀವ್ರ ಅಸೌಖ್ಯದಿಂದ ಬಳಲುತ್ತಿದ್ದ ಶಿಶಿಲ್ನನ್ನು ಕಾಣಿಯೂರು, ಪುತ್ತೂರು ಹಾಗೂ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಜುಲೈ ೬ರಂದು ಬೆಂಗಳೂರಿಗೆ ಕರೆದೊಯ್ಯಲು ಕುಟುಂಬಸ್ಥರು ನಿರ್ಧರಿಸಿದ್ದರು. ಆದರೆ ಜುಲೈ ೫ರ ರಾತ್ರಿ ಇದ್ದ
Jul 61 min read
Archive
bottom of page



