top of page
News Articles
Sathyapatha News Plus


ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಸಸ್ಪೆಂಡ್ : ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆ ಕ್ರಮ
ಮೂಡುಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಕೇಳಿಬಂದ ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಡಿಯೋ ಮತ್ತು ವಿಡಿಯೋ ತುಣುಕುಗಳು ಇಲಾಖೆಯ ಘನತೆಗೆ ಧಕ್ಕೆ ತಂದಿವೆ ಎಂದು ಪ್ರಾಥಮಿಕ ತನಿಖೆಯಲ್ಲಿ ಗುರುತಿಸಲಾಗಿದೆ. ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಮೇಲ್ನೋಟಕ್ಕೆ ದೃಢಪಟ್ಟ ಹಿನ್ನೆಲೆಯಲ್ಲಿ ಈ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ಎಸಿಪಿ ಮಟ್ಟ
Mar 181 min read


ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ
ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು, ಒಟ್ಟು 2,871 ಕೇಂದ್ರಗಳಲ್ಲಿ 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ದಕ್ಷಿಣ ಕನ್ನಡದಲ್ಲಿ 29,397 ಹಾಗೂ ಉಡುಪಿಯಲ್ಲಿ 14,151 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷಾ ಮಂಡಳಿಯು ಸುಸೂತ್ರ ನಿರ್ವಹಣೆಗೆ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಎಲ್ಲಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಣಾವಲು ಅಳವಡಿಸಲಾಗಿದ್ದು, ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಎದುರಿಸಲು ಪೂರಕ ವ
Mar 181 min read


ಇಸ್ರೇಲ್ ದಾಳಿಗೆ ಇರಾನ್ ನಾಯಕ ಅಲಿ ಲಾರಿಜಾನಿ ಬಲಿ
ಇಸ್ರೇಲ್ ಮಂಗಳವಾರ ಮುಂಜಾನೆ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ ಇರಾನ್ನ ಹಿರಿಯ ಭದ್ರತಾ ನಾಯಕ ಅಲಿ ಲಾರಿಜಾನಿ ಮೃತಪಟ್ಟಿದ್ದಾರೆ ಎಂದು ಇರಾನ್ ಸರ್ಕಾರ ಅಧಿಕೃತವಾಗಿ ದೃಢಪಡಿಸಿದೆ. ಇಸ್ರೇಲ್ ಈ ಹತ್ಯೆಯ ಜವಾಬ್ದಾರಿಯನ್ನು ಹೊತ್ತುಕೊಂಡ ಬೆನ್ನಲ್ಲೇ, ಇರಾನ್ನ ರಾಷ್ಟ್ರೀಯ ಭದ್ರತಾ ಮಂಡಳಿಯು ಲಾರಿಜಾನಿ ಅವರ ಸಾವಿನ ಸುದ್ದಿಯನ್ನು ಪ್ರಕಟಿಸಿ ಅವರಿಗೆ ಗೌರವ ಸಲ್ಲಿಸಿದೆ. ದೇಶದ ಅಭಿವೃದ್ಧಿ ಮತ್ತು ಇಸ್ಲಾಮಿಕ್ ಕ್ರಾಂತಿಗಾಗಿ ಲಾರಿಜಾನಿ ಸಲ್ಲಿಸಿದ ಸೇವೆ ಅಪಾರವೆಂದು ಬಣ್ಣಿಸಿರುವ ಇರಾನ್ ಸರ್ಕಾರ, ಅವರನ್ನು 'ಹುತಾತ್ಮ' ಎಂದು ಕರೆದಿದೆ. ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಲಾರ
Mar 181 min read


ಕಾಬೂಲ್ ಆಸ್ಪತ್ರೆ ಮೇಲೆ ಪಾಕ್ ವಾಯುಪಡೆ ಭೀಕರ ದಾಳಿ: 400 ಮಂದಿ ಸಾವು?
ಅಫ್ಘಾನಿಸ್ತಾನದ ಕಾಬೂಲ್ನಲ್ಲಿರುವ ಪುನರ್ವಸತಿ ಆಸ್ಪತ್ರೆಯ ಮೇಲೆ ಪಾಕಿಸ್ತಾನ ವಾಯುಪಡೆ ದಾಳಿ ನಡೆಸಿದೆ. ನೂರಾರು ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಆಸ್ಪತ್ರೆಯ ಬಹುಭಾಗ ಭಸ್ಮಗೊಂಡಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ಪಾಕಿಸ್ತಾನ ವಾಯುಪಡೆ ತನ್ನ ಜೆಎಫ್-17 ಮತ್ತು ಎಫ್-16 ಯುದ್ಧ ವಿಮಾನಗಳನ್ನು ಬಳಸಿ ಕಾಬೂಲ್ನ ಐದು ಸ್ಥಳಗಳ ಮೇಲೆ ದಾಳಿ ಮಾಡಿದೆ. ಅಫ್ಘಾನಿಸ್ತಾನದ ಆರೋಪಗಳನ್ನು ಪಾಕಿಸ್ತಾನ ತಳ್ಳಿ ಹಾಕಿದೆ. ಈ ಬಗ್ಗೆ ಯಾವುದೇ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡಿಲ್ಲ ಎಂದು ಹೇಳಿಕೊಂಡಿದೆ.
Mar 171 min read


ಯುದ್ಧ ಭೀತಿ ನಡುವೆ ನೆಮ್ಮದಿ ಸುದ್ದಿ: ಅಡುಗೆ ಅನಿಲ ಹೊತ್ತ 'ಶಿವಾಲಿಕ್' ಹಡಗು ಸುರಕ್ಷಿತವಾಗಿ ಭಾರತಕ್ಕೆ ಆಗಮನ!
ಮಧ್ಯಪ್ರಾಚ್ಯದ ಯುದ್ಧ ಭೀತಿಯ ನಡುವೆಯೂ ಅಡುಗೆ ಅನಿಲ ಪೂರೈಕೆಯ ಆತಂಕ ದೂರವಾಗಿದೆ. ಎಲ್ಪಿಜಿ ಹೊತ್ತ ‘ಶಿವಾಲಿಕ್’ ಹಡಗು ಹೊರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿ ಗುಜರಾತ್ನ ಮುಂದ್ರಾ ಬಂದರನ್ನು ತಲುಪಿದೆ. ಇದು ದೇಶದ ಇಂಧನ ಭದ್ರತೆಗೆ ನೆಮ್ಮದಿ ತಂದಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOCL) ಉದ್ದೇಶಿತ 46 ಸಾವಿರ ಮೆಟ್ರಿಕ್ ಟನ್ ಅನಿಲದಲ್ಲಿ, ಮೊದಲ ಹಂತವಾಗಿ ಮುಂದ್ರಾ ಬಂದರಿನಲ್ಲಿ 20 ಸಾವಿರ ಟನ್ ಇಳಿಸಲಾಗುವುದು. ಅಲ್ಲಿನ ಪ್ರಕ್ರಿಯೆ ಮುಗಿದ ನಂತರ ಹಡಗು ಮಂಗಳೂರಿನತ್ತ ಪಯಣ ಬೆಳೆಸಲಿದೆ. ಉಳಿದ 26 ಸಾವಿರ ಟನ್ ಎಲ್ಪಿಜಿಯೊಂದಿಗೆ ಶಿವಾಲಿಕ್ ಹಡಗು ಮೂರ್ನಾಲ್ಕು ದಿನಗಳಲ್ಲಿ ನವಮಂ
Mar 171 min read


ಖಾಕಿ ಪಡೆಗೆ ಕಪ್ಪುಚುಕ್ಕೆ: ಮೂಡುಬಿದಿರೆ ಇನ್ಸ್ಪೆಕ್ಟರ್ನಿಂದ ಮಹಿಳೆಯರಿಗೆ ಲೈಂಗಿಕ ಕಿರುಕುಳ, ಹಣಕ್ಕಾಗಿ ಸುಲಿಗೆ!
ಖಾಕಿ ಪಡೆಗೆ ಮತ್ತೊಂದು ಕಪ್ಪು ಚುಕ್ಕೆ ಬಂದಿದೆ. ಮೂಡುಬಿದಿರೆ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಸಾಲು ಸಾಲು ಲೈಂಗಿಕ ಕಿರುಕುಳ ಹಾಗೂ ಸುಲಿಗೆಯ ಗಂಭೀರ ಆರೋಪಗಳು ಕೇಳಿಬಂದಿವೆ. ಗಂಡನನ್ನು ಬಂಧಿಸಿದ ನೆಪದಲ್ಲಿ ಮಹಿಳೆಯರಿಗೆ ಲೈಂಗಿಕ ಟಾರ್ಚರ್ ನೀಡುತ್ತಿದ್ದ ಎನ್ನಲಾಗಿದೆ. ಪೋಸ್ಟಿಂಗ್ಗಾಗಿ ತಾವು 50 ಲಕ್ಷ ರೂ. ಲಂಚ ನೀಡಿರುವುದಾಗಿ ಹೇಳಿಕೊಳ್ಳುತ್ತಿದ್ದ ಇನ್ಸ್ಪೆಕ್ಟರ್, ಸಾರ್ವಜನಿಕರಿಂದ ಹಣಕ್ಕಾಗಿ ಸುಲಿಗೆ ಮಾಡುತ್ತಿದ್ದರು. ಹಣ ನೀಡದಿದ್ದರೆ ರೌಡಿಶೀಟ್ ತೆರೆಯುವ ಬೆದರಿಕೆ ಹಾಕುತ್ತಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಕ್ರಮ ಕೈಗ
Mar 171 min read


ರಾಜ್ಯದ ಹಲವೆಡೆ ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆ ಮುನ್ಸೂಚನೆ
ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಾರ್ಚ್ 16ರಿಂದಲೇ ಮಳೆ ಆರಂಭವಾಗಲಿದ್ದು, ಮಾ. 21ರಂದು ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಚಿಕ್ಕಮಗಳೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ವರ್ಷಧಾರೆಯಾಗಲಿದ್ದು, ಕೊಪ್ಪಳ, ವಿಜಯಪುರ ಹಾಗೂ ದಾವಣಗೆರೆ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ. ಮಾರ್ಚ್ 18ರಿಂದ ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಮಳೆಯ ನಿರೀಕ್ಷೆಯಿದ್ದು, ಮಾ. 19ರಿಂದ ಚಿತ್ರದುರ್ಗದಲ್ಲ
Mar 161 min read


ಸುಳ್ಯ: ಬಾರ್ ಮುಂಭಾಗ ಯುವಕನಿಗೆ ಚೂರಿ ಇರಿತ; ಬೀರಮಂಗಲದ ಹರೀಶ್ಗೆ ಗಾಯ
ಸುಳ್ಯದ ಶ್ರೀರಾಮ ಪೇಟೆಯಲ್ಲಿರುವ ಬಾರೊಂದರ ಎದುರು ನಿಂತಿದ್ದ ಯುವಕನ ಮೇಲೆ ಚೂರಿಯಿಂದ ಹಲ್ಲೆ ನಡೆಸಿದ ಘಟನೆ ಮಾರ್ಚ್ 14ರ ಶನಿವಾರ ರಾತ್ರಿ ವರದಿಯಾಗಿದೆ. ಚೂರಿ ಇರಿತಕ್ಕೆ ಒಳಗಾದ ಯುವಕನನ್ನು ಬೀರಮಂಗಲ ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ. ಈ ದಾಳಿಯ ವೇಳೆ ಹರೀಶ್ ಅವರೊಂದಿಗೆ ಇದ್ದ ಸ್ನೇಹಿತ ನೀತು ಎಂಬುವವರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಸುಳ್ಯ ಪೊಲೀಸರು ತಕ್ಷಣ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಈ ಕೃತ್ಯ ನಡೆದಿದೆಯೇ ಅಥವಾ ಹಳೆಯ ದ್ವೇಷವೇ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿ
Mar 151 min read


ಮಂಗಳೂರು: ದೈವಾರಾಧನೆ ಸಂಪ್ರದಾಯಕ್ಕೆ ಅಪಚಾರ; ದೈವ ನರ್ತನದ ಬಗ್ಗೆ ಹೊಸ ವಿವಾದ!
ಮಂಗಳೂರಿನ ಪ್ರಸಿದ್ಧ ದೈವಸ್ಥಾನದಲ್ಲಿ ಇತ್ತೀಚೆಗೆ ನಡೆದ ನೇಮೋತ್ಸವದ ವೇಳೆ ಸಂಪ್ರದಾಯ ಉಲ್ಲಂಘನೆಯಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಜಾರಂದಾಯ ಮತ್ತು ಬಂಟ ದೈವಕ್ಕೆ ನಡೆದ ನೇಮೋತ್ಸವದಲ್ಲಿ ಬಂಟ ದೈವದ ನರ್ತನವನ್ನು ಕ್ರೈಸ್ತ ಧರ್ಮದ ಯುವಕನೊಬ್ಬನಿಂದ ಮಾಡಿಸಲಾಗಿದೆ ಎಂದು ಪಂಬದ ಸಮುದಾಯದ ಸಂಶೋಧಕಿ ಡಾ. ರತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ತುಳುನಾಡಿನ ದೈವಾರಾಧನೆಯ ಪದ್ಧತಿಯಂತೆ ಕೇವಲ ನಲಿಕೆ, ಪರವ ಹಾಗೂ ಪಂಬದ ಸಮುದಾಯದವರು ಮಾತ್ರ ಈ ಪವಿತ್ರ ಸೇವೆಯನ್ನು ಸಲ್ಲಿಸಬೇಕೆಂಬ ಕಟ್ಟುನಿಟ್ಟಿನ ನಿಯಮವಿದೆ. ನರ್ತನ ಮಾಡಿದ ಯುವಕನ ತಂದೆ ಪಂಬದ ಸಮುದಾಯದವರಾಗಿದ್ದರೂ, ತಾಯಿ ಕ್ರೈಸ್ತ ಧರ್ಮದವರಾಗಿರು
Mar 151 min read


ಪಿಯುಸಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಮರುಪರೀಕ್ಷೆ ಬರೆಯಲು ಇನ್ನು ಎರಡೇ ವರ್ಷ ಅವಕಾಶ!
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಅಥವಾ ಫಲಿತಾಂಶ ಸುಧಾರಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಕರ್ನಾಟಕ ಶಿಕ್ಷಣ ಇಲಾಖೆ ಹೊಸ ನಿಯಮ ಜಾರಿಗೊಳಿಸಿದೆ. ಇನ್ಮುಂದೆ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡ ವರ್ಷ ಮತ್ತು ಅದರ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮಾತ್ರ ಮರುಪರೀಕ್ಷೆ ಬರೆಯಲು ಅವಕಾಶವಿರುತ್ತದೆ. ಈ ಎರಡು ವರ್ಷಗಳ ಕಾಲಮಿತಿಯ ನಂತರ ಪರೀಕ್ಷೆ ಬರೆಯುವ ಹಕ್ಕನ್ನು ವಿದ್ಯಾರ್ಥಿಗಳು ಕಳೆದುಕೊಳ್ಳಲಿದ್ದಾರೆ. ಪ್ರಸ್ತುತ ವರ್ಷಕ್ಕೆ ಮೂರು ಪರೀಕ್ಷೆಗಳಂತೆ (Exam 1, 2, 3) ಎರಡು ವರ್ಷಗಳಲ್ಲಿ ಒಟ್ಟು ಆರು ಅವಕಾಶಗಳು ಸಿಗಲಿವೆ. ಈ ಹಿಂದೆ ಆರು ಬಾರಿ ಪರೀಕ್ಷೆ ಬರೆಯಲು ಯಾ
Mar 151 min read


ಸುಳ್ಯ: ಚಹಾ ಇಡಲು ಹೋದಾಗ ಸೀರೆಗೆ ತಗುಲಿದ ಬೆಂಕಿ: ತಾಯಿಯನ್ನು ರಕ್ಷಿಸಲು ಹೋದ ಮಗನಿಗೂ ಗಾಯ, ಆಸ್ಪತ್ರೆಗೆ ದಾಖಲು
ಕೊಲ್ಲಮೊಗ್ರು ಗ್ರಾಮದ ಶಿರೂರು ಬಳಿ ಮಾರ್ಚ್ 10ರಂದು ನಡೆದ ದುರ್ಘಟನೆಯಲ್ಲಿ ಸುಬ್ರಹ್ಮಣ್ಯ ಬೊಳಿಯಾನ ಎಂಬುವವರ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಮನೆಯ ಅಡುಗೆ ಕೋಣೆಯಲ್ಲಿ ಸುಬ್ರಹ್ಮಣ್ಯ ಅವರ ತಾಯಿ ತಿಲಕ ಅವರು ಚಹಾ ಮಾಡುತ್ತಿದ್ದಾಗ, ಅನಿರೀಕ್ಷಿತವಾಗಿ ಅವರ ಸೀರೆಗೆ ಬೆಂಕಿ ತಗುಲಿದೆ. ಕ್ಷಣಾರ್ಧದಲ್ಲಿ ಬೆಂಕಿ ಮೈತುಂಬಾ ವ್ಯಾಪಿಸಿದ್ದು, ಮಹಿಳೆಯು ತೀವ್ರವಾಗಿ ಕಿರುಚಾಡಿದ್ದಾರೆ. ತಾಯಿಯ ಕಿರುಚಾಟ ಕೇಳಿ ತಕ್ಷಣ ಸ್ಥಳಕ್ಕೆ ಧಾವಿಸಿದ ಮಗ ಸುಬ್ರಹ್ಮಣ್ಯ, ಪ್ರಾಣಾಪಾಯದಿಂದ ರಕ್ಷಿಸಲು ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟಿದ್ದಾರೆ. ಈ ಭೀಕರ ಪ್ರಯತ್ನದಲ್ಲಿ ಸುಬ್ರಹ್ಮಣ್ಯ ಅವರ ಕೈಗ
Mar 151 min read


ನೆಲಮಂಗಲ: ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಎಲ್ಪಿಜಿ ಗ್ಯಾಸ್ ತುಂಬಿದ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಸೋಲೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ ಮಾಗಡಿಯ ಅಗ್ನಿಶಾಮಕ ದಳ, ಕುದೂರು ಪೊಲೀಸರು ಹಾಗೂ ಟೋಲ್ ಸಿಬ್ಬಂದಿ ಕೂಡಲೇ ಧಾವಿಸಿದರು. ಎರಡು ಬೃಹತ್ ಕ್ರೇನ್ಗಳ ಸಹಾಯದಿಂದ ಪಲ್ಟಿಯಾದ ಟ್ಯಾಂಕರ್ ಅನ್ನು ರಸ್ತೆಯಿಂದ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಟ್ಯಾಂಕರ್ನಿಂದ ಗ್ಯಾಸ್ ಸೋರಿಕೆಯಾಗಿದ್ದರೆ ದೊಡ್ಡ ಮಟ್ಟದ ಅನಾಹುತ ಸಂಭವಿಸುವ ಸಾಧ್ಯತೆಯಿತ್ತು. ಆದರೆ, ಅಧಿಕಾರಿಗಳ ಸಮಯಪ್ರಜ್ಞೆ ಮತ್ತು ಜಾಗರೂಕತೆಯಿಂದ ಯಾವುದೇ ಅಪಾಯ
Mar 151 min read


ನೌಕಾಪಡೆ ಬೆಂಗಾವಲಿನಲ್ಲಿ ಭಾರತದ ಎಲ್ಪಿಜಿ ಹಡಗುಗಳ ಸುರಕ್ಷಿತ ಸಂಚಾರ
ಮದ್ಯಪ್ರಾಚ್ಯದ ಪ್ರಕ್ಷುಬ್ಧತೆಯ ನಡುವೆ, ಭಾರತೀಯ ನೌಕಾಪಡೆಯ ಬೆಂಗಾವಲಿನೊಂದಿಗೆ 40,000 ಮೆಟ್ರಿಕ್ ಟನ್ಗೂ ಹೆಚ್ಚು ಎಲ್ಪಿಜಿ ಹೊತ್ತ 'ಶಿವಾಲಿಕ್' ಹಡಗು ಹಾರ್ಮುಜ್ ಜಲಸಂಧಿಯನ್ನು ಯಶಸ್ವಿಯಾಗಿ ದಾಟಿದೆ. ಇರಾನ್ ಈ ಜಲಸಂಧಿಯನ್ನು ಬಂದ್ ಮಾಡಿದ್ದರೂ, ಭಾರತದ ಮನವಿಗೆ ಸ್ಪಂದಿಸಿ ನಮ್ಮ ಹಡಗುಗಳ ಸಂಚಾರಕ್ಕೆ ವಿಶೇಷ ಅನುಮತಿ ನೀಡಿದೆ. ಶಿವಾಲಿಕ್ ಜೊತೆಗೆ 'ನಂದಾದೇವಿ' ಎಂಬ ಮತ್ತೊಂದು ಅನಿಲ ಹೊತ್ತ ಹಡಗು ಕೂಡ ಸುರಕ್ಷಿತವಾಗಿ ಜಲಸಂಧಿ ದಾಟಿದ್ದು, ಮುಂದಿನ ಎರಡು ದಿನಗಳಲ್ಲಿ ಮುಂಬೈ ಅಥವಾ ಕಾಂಡ್ಲಾ ಬಂದರು ತಲುಪುವ ಸಾಧ್ಯತೆಯಿದೆ. ಭಾರತೀಯ ಹಡಗುಗಳು ಅಪಾಯದ ವಲಯದಿಂದ ಹೊರಬರುವವರೆಗೆ ನೌಕಾಪಡೆಯು ರಕ್
Mar 141 min read


ಉಡುಪಿ ಅಬಕಾರಿ ಡಿಸಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ: ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ
ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ. ಅವರ ನಿವಾಸ ಸೇರಿದಂತೆ ರಾಜ್ಯದ 15 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಮಂಗಳೂರು ವಿಭಾಗದ ಎಸ್ಪಿ ದಿನೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ, ಅಕ್ರಮವಾಗಿ ಗಳಿಸಿದ ಎನ್ನಲಾದ ಬರೋಬ್ಬರಿ 6.90 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ಪತ್ತೆಹಚ್ಚಲಾಗಿದೆ. ಇದರಲ್ಲಿ 11 ನಿವೇಶನಗಳು ಮತ್ತು 31 ಎಕರೆ ಕೃಷಿ ಭೂಮಿ ಸೇರಿವೆ. ಕೇವಲ ಸ್ಥಿರಾಸ್ತಿಯಷ್ಟೇ ಅಲ್ಲದೆ, 2.66 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿಗಳೂ ಲೋಕಾಯುಕ್ತರ ಕೈಗೆ ಸಿಕ್ಕಿವೆ. ದಾಳಿಯ ವೇಳೆ ಒಂದೂವರೆ ಕೋಟಿಗೂ ಅಧಿಕ ನಗದು ಹಾಗೂ ಚಿನ್ನಾ
Mar 141 min read


ಆನ್ಲೈನ್ ಗ್ಯಾಸ್ ಬುಕ್ಕಿಂಗ್: ಸೈಬರ್ ವಂಚಕರ ಜಾಲದ ಬಗ್ಗೆ ಎಚ್ಚರ
ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ಉಂಟಾಗಿರುವ ಗ್ಯಾಸ್ ಅಭಾವವನ್ನು ಸೈಬರ್ ವಂಚಕರು ಬಂಡವಾಳ ಮಾಡಿಕೊಳ್ಳುತ್ತಿದ್ದಾರೆ. ಗ್ಯಾಸ್ ಏಜೆನ್ಸಿಗಳ ಹೆಸರಿನಲ್ಲಿ ನಕಲಿ ಲಿಂಕ್ಗಳನ್ನು ಸೃಷ್ಟಿಸಿ, ತುರ್ತು ಬುಕ್ಕಿಂಗ್ ಆಮಿಷವೊಡ್ಡಿ ಸಾರ್ವಜನಿಕರ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕುವ ಪ್ರಯತ್ನಗಳು ನಡೆಯುತ್ತಿವೆ. ಬೆಂಗಳೂರಿನಲ್ಲಿ ಗ್ಯಾಸ್ಗಾಗಿ ಪರದಾಡುತ್ತಿರುವ ಜನರನ್ನು ಗುರಿಯಾಗಿಸಿಕೊಂಡು ಈ ಜಾಲ ಸಕ್ರಿಯವಾಗಿದೆ. ಅಧಿಕೃತ ಆ್ಯಪ್ ಅಥವಾ ವೆಬ್ಸೈಟ್ಗಳನ್ನು ಹೊರತುಪಡಿಸಿ ಅಪರಿಚಿತರು ಕಳುಹಿಸುವ ಲಿಂಕ್ಗಳ ಮೂಲಕ ಹಣ ಪಾವತಿಸದಂತೆ ಪೊಲೀಸ್ ಇಲಾಖೆ ಎಚ್ಚರಿಸಿದೆ. ಗ್ಯಾಸ್ ಏಜೆನ್ಸಿಗಳ ನಕಲಿ ಪ್ರತಿ
Mar 141 min read


ಹೋಟೆಲ್ ಬಿಲ್ನಲ್ಲಿ 'ಗ್ಯಾಸ್ ಶುಲ್ಕ'ದ ಹೊರೆ
ಬೆಂಗಳೂರು ಮತ್ತು ಚೆನ್ನೈನ ಹೋಟೆಲ್ಗಳಲ್ಲಿ ಜಿಎಸ್ಟಿ ಜೊತೆಗೆ ಹೆಚ್ಚುವರಿ 'ಗ್ಯಾಸ್ ಶುಲ್ಕ' ವಿಧಿಸುತ್ತಿರುವುದು ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ. ವಾಣಿಜ್ಯ ಸಿಲಿಂಡರ್ ಪೂರೈಕೆ ವ್ಯತ್ಯಯದ ನೆಪವೊಡ್ಡಿ, ತಿಂಡಿಯ ಬಿಲ್ ಮೇಲೆ ₹9 ರಿಂದ ₹30 ರವರೆಗೆ ಈ ವಿಲಕ್ಷಣ ಶುಲ್ಕವನ್ನು ವಸೂಲಿ ಮಾಡಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಬಿಲ್ಗಳು ಸಾರ್ವಜನಿಕರಲ್ಲಿ ಚರ್ಚೆ ಹುಟ್ಟುಹಾಕಿವೆ. ಅಧಿಕೃತವಾಗಿ ಗ್ಯಾಸ್ ಶುಲ್ಕ ನಮೂದಿಸದ ಹೋಟೆಲ್ಗಳೂ ಸಹ ಪರೋಕ್ಷವಾಗಿ ಗ್ರಾಹಕರಿಂದ ಹೆಚ್ಚಿನ ಹಣ ಪಡೆಯುತ್ತಿವೆ ಎಂಬ ದೂರುಗಳು ಕೇಳಿಬಂದಿವೆ.
Mar 141 min read


ಮುಟ್ಟಿನ ರಜೆ ನೀತಿ: ಸುಪ್ರೀಂ ಕೋರ್ಟ್ ಕಳವಳ
ಮುಟ್ಟಿನ ರಜೆಯನ್ನು ಕಾನೂನುಬದ್ಧಗೊಳಿಸುವುದು ಮಹಿಳೆಯರ ವೃತ್ತಿಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಸುಪ್ರೀಂ ಕೋರ್ಟ್ ಆತಂಕ ವ್ಯಕ್ತಪಡಿಸಿದೆ. ಇಂತಹ ಕಡ್ಡಾಯ ರಜೆ ನೀತಿಯಿಂದ ಮಾಲೀಕರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಹಿಂಜರಿಯಬಹುದು. ಇದು ಮಹಿಳೆಯರು ಉದ್ಯೋಗ ಮಾರುಕಟ್ಟೆಯಿಂದ ಹೊರಗುಳಿಯುವಂತೆ ಮಾಡುವ ಸಾಧ್ಯತೆಯಿದೆ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ. ಅಲ್ಲದೆ, ಇಂತಹ ಅರ್ಜಿಗಳು ಮಹಿಳೆಯರನ್ನು 'ದುರ್ಬಲರು' ಎಂದು ಬಿಂಬಿಸುವ ಅಪಾಯವಿದೆ ಎಂದು ನ್ಯಾಯಾಲಯ ಹೇಳಿದೆ. ಮುಟ್ಟಿನ ವಿಚಾರವನ್ನು ಕೀಳರಿಮೆಯಿಂದ ನೋಡಬಾರದು ಮತ್ತು ಈ ಬಗ್ಗೆ ರಾಷ್ಟ್ರವ್ಯಾಪಿ ನೀತಿ ರೂಪಿಸು
Mar 141 min read


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡುಗೆ ಅನಿಲ ಪೂರೈಕೆ ಬಗ್ಗೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸ್ಪಷ್ಟನೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ (LPG) ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಿಲ್ಲ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಗಾಬರಿಗೊಂಡು ಅನಗತ್ಯವಾಗಿ ಸಿಲಿಂಡರ್ ಬುಕ್ ಮಾಡುವ ಅಗತ್ಯವಿಲ್ಲ. 25 ದಿನಗಳ ನಿಯಮದಂತೆ ಪೂರೈಕೆ ಸುಗಮವಾಗಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ಬಾಟ್ಲಿಂಗ್ ಘಟಕಗಳು ಹಾಗೂ ದಾಸ್ತಾನು ಕೇಂದ್ರಗಳಿಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಎಂಆರ್ಪಿಎಲ್ ಮತ್ತು ತೈಲ ಕಂಪನಿಗಳೊಂದಿಗೆ ಸಭೆ ನಡೆಸಲಾಗಿದ್ದು, ಉತ್ಪಾದನೆ ಮತ್ತು ಆಮದಿನಲ್ಲಿ ಕುಸಿತ ಕಂಡುಬಂದಿಲ್ಲ. ಸಾರ್ವಜನಿಕ ಸಂಸ್ಥೆಗಳು, ಹಾಸ್ಟೆ
Mar 131 min read


ಕುಮಾರ ಪರ್ವತ ಚಾರಣ ಸಮಯ ಬದಲಾವಣೆ
ಕುಮಾರ ಪರ್ವತ ಚಾರಣವನ್ನು ಮೊದಲಿನಂತೆ ಬೆಳಿಗ್ಗೆ 5:30ಕ್ಕೆ ಆರಂಭಿಸಲು ಅವಕಾಶ ನೀಡಬೇಕೆಂದು ಶಾಸಕಿ ಭಾಗೀರಥಿ ಮುರುಳ್ಯ ವಿಧಾನಸಭೆಯಲ್ಲಿ ಆಗ್ರಹಿಸಿದ್ದಾರೆ. ಪ್ರಸ್ತುತ ಬೆಳಿಗ್ಗೆ 6 ಗಂಟೆಗೆ ಚಾರಣಕ್ಕೆ ಬಿಡುತ್ತಿರುವುದರಿಂದ ಶಿಖರ ತಲುಪಲು ವಿಳಂಬವಾಗುತ್ತಿದೆ ಎಂದು ಅವರು ಸರ್ಕಾರದ ಗಮನ ಸೆಳೆದರು. ಈ ಮನವಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಪೂರಕವಾಗಿ ಸ್ಪಂದಿಸಿದ್ದು, ಚಾರಣಿಗರ ಹಿತದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಶೇಷಗಿರಿ ಪರ್ವತಕ್ಕೆ ಹೋಗಲು ಇರುವ ನಿರ್ಬಂಧ ತೆರವುಗೊಳಿಸಿ ಹಳೆಯ ವ್ಯವಸ್ಥೆಯನ್ನೇ ಮುಂದುವರಿಸುವಂತೆ ಶಾಸಕರು ಸದನದಲ್ಲಿ ಒತ್ತಾಯಿಸಿದರು.
Mar 131 min read


ದಕ್ಷಿಣ ಕನ್ನಡದ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರಕ್ಕಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಗ್ರಹ
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ-ಸೋಮೇಶ್ವರ ಸೇರಿದಂತೆ ಸುಮಾರು 17.74 ಕಿ.ಮೀ ಕರಾವಳಿ ತೀರವು ತೀವ್ರ ಕಡಲ್ಕೊರೆತಕ್ಕೆ ತುತ್ತಾಗುತ್ತಿದ್ದು, ಲೋಕಸಭೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಶೇ. 48.40 ರಷ್ಟು ಭಾಗವು ಕೊರೆತಕ್ಕೆ ಒಳಗಾಗುತ್ತಿದ್ದು, ಇದು ರಾಷ್ಟ್ರೀಯ ಸರಾಸರಿಗಿಂತ ಅಧಿಕವಾಗಿದೆ. ಕೇವಲ ಶೇ. 21.9 ರಷ್ಟು ತೀರ ಮಾತ್ರ ಸುರಕ್ಷಿತವಾಗಿದ್ದು, ಮೀನುಗಾರರ ಜೀವನೋಪಾಯಕ್ಕೆ ಇದು ದೊಡ್ಡ ಮಟ್ಟದ ಭೌಗೋಳಿಕ ಮತ್ತು ಆರ್ಥಿಕ ಸವಾಲಾಗಿ ಪರಿಣಮಿಸಿದೆ ಎಂದು ಅವರು ಸದನದ ಗಮನ ಸೆಳೆದರು. ಬದಲಾಗುತ್ತಿರುವ ಹವಾಮಾನ ವೈಪರೀತ್ಯ, ಮುಂಗಾರಿನ ಅಲೆ
Mar 131 min read
Archive
bottom of page



