top of page
News Articles
Sathyapatha News Plus


ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಕರಾವಳಿ ಅಭಿವೃದ್ಧಿಗೆ ಮಹತ್ವದ ನಿರ್ಧಾರ
ಬೆಂಗಳೂರು: ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮಂಗಳವಾರ ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು. ಕೇರಳ ಮತ್ತು ಗೋವಾ ರಾಜ್ಯಗಳು ತಮ್ಮ ಕರಾವಳಿ ಪ್ರದೇಶಗಳನ್ನು ಪ್ರವಾಸೋದ್ಯಮಕ್ಕೆ ಪರಿಣಾಮಕಾರಿಯಾಗಿ ಬಳಸಿಕೊಂಡಿರುವ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಪ್ರತ್ಯೇಕ ಪ್
Aug 191 min read


ಬಸ್ಸಿನಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯ ಬಂಧನ
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದ ಮೇಲೆ ಕೊಂಡಗಾಯಿ ನಿವಾಸಿ ಉಮೇಶ್ (53) ಎಂಬಾತನನ್ನು ವಿಟ್ಲ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಆಗಸ್ಟ್ 15 ರಂದು ಸಂತ್ರಸ್ತ ಬಾಲಕನು ಅಳಿಕೆಯಿಂದ ಪುತ್ತೂರಿಗೆ ಬಸ್ಸಿನಲ್ಲಿ ಹೋಗುತ್ತಿದ್ದಾಗ, ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸನ್ನೇರಿದ ಆರೋಪಿಯು ಬಾಲಕನ ಪಕ್ಕದಲ್ಲಿ ಕುಳಿತು ಅನುಚಿತವಾಗಿ ವರ್ತಿಸಿದ್ದನು. ಇಷ್ಟಕ್ಕೇ ನಿಲ್ಲಿಸದ ಆರೋಪಿಯು, ಬಾಲಕನು ಮನೆಗೆ ತೆರಳಿದಾಗ ಆತನನ್ನು ಹಿಂಬಾಲಿಸಿಕೊಂಡು ಮನೆಗೇ ಬಂದು ಲೈಂಗಿಕ ಕಿರು
Aug 191 min read


ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಚಾಲ್ತಿಯಲ್ಲಿರುವ ‘ಗಲ್ಲಿಗೇರಿಸುವ’ ಪದ್ಧತಿಯನ್ನೇ ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಗಲ್ಲಿಗೇರಿಸುವ ಬದಲಿಗೆ ಮಾರಣಾಂತಿಕ ಇಂಜೆಕ್ಷನ್ ಅಥವಾ ಗುಂಡಿಕ್ಕುವಿಕೆಯಂತಹ ಕಡಿಮೆ ನೋವಿನ ವಿಧಾನಗಳನ್ನು ಬಳಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿದೆ. ವಕೀಲ ರಿಷಿ ಮಲ್ಹೋತ್ರಾ ಅವರು ಸಲ್ಲಿಸಿದ್ದ ಈ ಅರ್ಜಿಯಲ್ಲಿ, ಗಲ್ಲಿಗೇರಿಸುವಿಕೆಯು ಅತ್ಯಂತ ಕ್ರೂರ ಹಾಗೂ ನೋವಿನಿಂದ ಕೂಡಿದ್ದು, ವ್ಯಕ್ತಿಯ ಘನತೆಗೆ ಕುಂದು ತರುತ್ತದೆ ಎಂದು ವಾದಿಸಿದ್ದರು. ಅಲ್ಲದೆ, ಗ್ಯಾಸ್ ಚೇಂಬರ
Aug 181 min read


ಮಂಗಳೂರಿನ KFC ಔಟ್ಲೆಟ್ನಲ್ಲಿ ಕೊಳೆತ ಚಿಕನ್ ಪತ್ತೆ: ಆರೋಗ್ಯಾಧಿಕಾರಿಗಳ ದಾಳಿ
ಮಂಗಳೂರು: ನಗರದ ಸಿಟಿ ಸೆಂಟರ್ ಮಾಲ್ನಲ್ಲಿರುವ KFC ಔಟ್ಲೆಟ್ನಲ್ಲಿ ಕೊಳೆತ ಚಿಕನ್ ನೀಡಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ತಿಂಗಳ ಹಿಂದೆ ಪ್ಯಾಕ್ ಮಾಡಲಾಗಿದ್ದ ಚಿಕನ್ ಮಾಂಸ ಪತ್ತೆಯಾಗಿದೆ. ಮಾಜಿ ಮೇಯರ್ ಹಾಗೂ ಬಿಜೆಪಿ ನಾಯಕಿ ಕವಿತಾ ಸನಿಲ್ ಅವರು ತಮ್ಮ 10 ವರ್ಷದ ಮಗುವಿಗಾಗಿ ಸ್ವಿಗ್ಗಿ ಮೂಲಕ KFCಯ ‘ಫೆರಿ ಫೆರಿ’ ಚಿಕನ್ ಆರ್ಡರ್ ಮಾಡಿದ್ದರು ಎನ್ನಲಾಗಿದೆ. ಆಹಾರ ಸೇವಿಸುತ್ತಿದ್ದ ವೇಳೆ ಚಿಕನ್ ಕಪ್ಪು ಬಣ್ಣಕ್ಕೆ ತಿರುಗಿರುವುದು ಹಾಗೂ ದುರ್ವಾಸನೆ ಬರುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ, ಅವರು ಬಿಲ್ ಸಮೇತ ಸಿಟಿ ಸೆಂಟರ್
Aug 162 min read


ಕೆಯ್ಯರಿನಲ್ಲಿ ಭೀಕರ ಅಪಘಾತ: KSRTC ಬಸ್–ಬೈಕ್ ಮುಖಾಮುಖಿ ಡಿಕ್ಕಿ, ಸವಾರ ಸ್ಥಳದಲ್ಲೇ ಮೃತ್ಯು
ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಬಳಿ ಇಂದು (ಆ.15) KSRTC ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಡಾವು ಕಟ್ಟೆಯಿಂದ ಸವಣೂರು ಕಡೆಗೆ ತೆರಳುತ್ತಿದ್ದ KSRTC ಬಸ್ ಹಾಗೂ ಸವಣೂರಿನಿಂದ ಪುತ್ತೂರು ಕಡೆಗೆ ಸಾಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರ ಕುಮಾರಮಂಗಿಲ ಸಮೀಪದ ಬಂಬಿಲ ನಿವಾಸಿ ಅಭಿಲಾಷ್ (24) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಸ್ಥಳದಲ್ಲಿ ಜನರು ಜಮಾಯಿಸಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮೃತರು ತಂದೆ, ತಾಯಿ ಹಾಗೂ ಅಣ್
Aug 151 min read


ಬಂಟ್ವಾಳದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹4.90 ಲಕ್ಷ ಮೌಲ್ಯದ ಎಂ.ಡಿ.ಎಂ.ಎ, ಗಾಂಜಾ, ಕಾರು–ಮೊಬೈಲ್ಗಳು ವಶ
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತುಗಳಾದ ಎಂ.ಡಿ.ಎಂ.ಎ ಹಾಗೂ ಗಾಂಜಾ ಸೇರಿದಂತೆ ಒಟ್ಟು ₹4.90 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆಗಸ್ಟ್ 12ರಂದು ಬಂಟ್ವಾಳ ಕಾವಳಪಡೂರು ವ್ಯಾಪ್ತಿಯಲ್ಲಿ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮಾ, ಐಪಿಎಸ್ ಅವರ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ದಾಳಿಯ ವೇಳೆ ಸುಮಾರು ₹2.25 ಲಕ್ಷ ಮೌಲ್ಯದ 22.57 ಗ್ರಾಂ ಎಂ.ಡಿ.ಎಂ.ಎ, 30.34 ಗ್ರಾಂ ಗಾಂಜಾ, ಮಾದಕ ವಸ್ತುಗಳ ಸಾಗಾಟಕ್ಕೆ ಬಳಸಲಾಗುತ್ತಿದ್ದ ಕಾರ
Aug 141 min read


ರಾಜ್ಯದಲ್ಲಿ ಗುಟ್ಕಾ–ಪಾನ್ ಮಸಾಲಾ ನಿಷೇಧ ಆದೇಶಕ್ಕೆ ಬ್ರೇಕ್: ಎರಡೇ ದಿನಕ್ಕೆ ವಾಪಸ್ ಪಡೆಯಲು ಸಿಎಂ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಹೇರಲಾಗಿದ್ದ ಒಂದು ವರ್ಷದ ನಿಷೇಧ ಆದೇಶವನ್ನು ಇದೀಗ ವಾಪಸ್ ಪಡೆಯಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ. ಕೆಲವೇ ದಿನಗಳ ಹಿಂದೆ ಆಹಾರ ಸುರಕ್ಷತಾ ಆಯುಕ್ತರು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಒಳಗೊಂಡ ಗುಟ್ಕಾ ಮತ್ತು ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ದಾಸ್ತಾನು, ವಿತರಣೆ, ಸಾಗಣೆ ಹಾಗೂ ಮಾರಾಟವನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿ ಆದೇಶ ಹೊರಡಿಸಿದ್ದರು. ಆದರೆ, ಈ ಆದೇಶವನ್ನು ತಮ್ಮ ಗಮನಕ್ಕೆ ತರದೆ ಹೊರಡಿಸಲಾಗಿ
Aug 141 min read


ಹಾಸ್ಟೆಲ್–ಪಿಜಿಗಳ ಕಳಪೆ ಆಹಾರಕ್ಕೆ ಬ್ರೇಕ್: ಕಠಿಣ ಕ್ರಮಕ್ಕೆ ಯು.ಟಿ. ಖಾದರ್ ಖಡಕ್ ವಾರ್ನಿಂಗ್!
ಬೆಂಗಳೂರು, ಆ.13: ಹೋಟೆಲ್ಗಳಲ್ಲಿ ಆಹಾರದ ಗುಣಮಟ್ಟ ಹಾಗೂ ಸ್ವಚ್ಛತೆ ಪರಿಶೀಲನೆ ನಡೆಯುತ್ತಿರುವ ಬೆನ್ನಲ್ಲೇ, ರಾಜ್ಯದ ಹಾಸ್ಟೆಲ್ಗಳು, ಪಿಜಿಗಳು ಹಾಗೂ ಕ್ಯಾಂಟೀನ್ಗಳಲ್ಲಿನ ಆಹಾರ ವ್ಯವಸ್ಥೆಯ ಮೇಲೂ ಆರೋಗ್ಯ ಇಲಾಖೆ ನಿಗಾ ವಹಿಸಲು ಮುಂದಾಗಿದೆ. ರಾಜ್ಯದ ವಿವಿಧೆಡೆ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ, ಖಾಸಗಿ ಹಾಗೂ ಸಹಕಾರಿ ಹಾಸ್ಟೆಲ್ಗಳಲ್ಲಿ ಆಹಾರ ತಯಾರಿಕೆ ಮತ್ತು ಪೂರೈಕೆ ವ್ಯವಸ್ಥೆಯನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆಹಾರದ ಗುಣಮಟ್ಟ, ಅಡುಗೆಮನೆಯ ಸ್ವಚ್ಛತೆ ಹಾಗೂ ಆಹಾರ ಪದಾರ್ಥಗಳ ಸಂಗ್ರಹಣೆ ಸೇರಿದಂತೆ ಹಲವು ಅಂಶಗಳನ್ನು ತಪಾಸಣೆ ಮಾಡಲಾಗುತ್ತದೆ. ಪಿಜಿಗಳಲ್ಲಿಯೂ
Aug 131 min read


ಡಿಗ್ರಿ ಪಾಸಾದವರಿಗೆ ಸುವರ್ಣಾವಕಾಶ: ಕರ್ನಾಟಕ ಹೈಕೋರ್ಟ್ನಲ್ಲಿ SDA ಹುದ್ದೆಗಳ ನೇಮಕಾತಿ
ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಪದವೀಧರರಿಗೆ ಕರ್ನಾಟಕ ಹೈಕೋರ್ಟ್ ಸಿಹಿಸುದ್ದಿ ನೀಡಿದೆ. ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 20 ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 13, 2026ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಸೆಪ್ಟೆಂಬರ್ 11, 2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,500ರಿಂದ ₹81,100ರವರೆಗೆ ವೇತನ ದೊರೆಯಲಿದೆ. ಹುದ್ದೆಗಳ ವಿವರ ಇಲಾಖೆ: ಕರ್ನಾಟಕ ಉಚ್ಚ ನ್ಯಾಯಾಲಯ ಹುದ್ದೆ: ದ್ವಿತೀಯ ದರ್ಜೆ ಸಹಾಯಕರು (SDA) ಒಟ್ಟು ಹುದ್ದೆಗಳು: 20 ಉಳ
Aug 132 min read


K-SET 2026: ಪ್ರಾಧ್ಯಾಪಕರಾಗುವ ಕನಸು ಕಂಡವರಿಗೆ ಗುಡ್ ನ್ಯೂಸ್; ಅರ್ಜಿ ಆಹ್ವಾನಿಸಿದ KEA
ಬೆಂಗಳೂರು: ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗುವ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುಡ್ ನ್ಯೂಸ್ ನೀಡಿದೆ. ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (K-SET) 2026ಕ್ಕೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 5ರೊಳಗೆ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಕೆ ಆರಂಭ: ಆಗಸ್ಟ್ 10, 2026 ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 5, 2026 ಶುಲ್ಕ ಪಾವತಿಗೆ ಕೊನೆಯ ದಿನ: ಸೆಪ್ಟೆಂಬರ್ 6, 2026 ಪ್ರವೇಶ ಪತ್ರ ಬಿಡುಗಡೆ: ಅಕ್ಟೋಬರ್ 1, 2026ರಿಂದ K-SET ಪರ
Aug 121 min read


ಮಂಗಳೂರು: ಚಲಿಸುತ್ತಿದ್ದ ರೈಲಿನಡಿ ಸಿಲುಕುತ್ತಿದ್ದ ವೃದ್ಧನ ರಕ್ಷಣೆ; ಪಾಯಿಂಟ್ಸ್ಮ್ಯಾನ್ ಸಮಯಪ್ರಜ್ಞೆಗೆ ಮೆಚ್ಚುಗೆ
ಮಂಗಳೂರು: ಚಲಿಸುತ್ತಿದ್ದ ರೈಲನ್ನು ಹತ್ತಲು ಮುಂದಾಗಿ ಹಳಿಗೆ ಬಿದ್ದ ವೃದ್ಧ ಪ್ರಯಾಣಿಕರೊಬ್ಬರನ್ನು ರೈಲ್ವೆ ಪಾಯಿಂಟ್ಸ್ಮ್ಯಾನ್ ಸಮಯಪ್ರಜ್ಞೆಯಿಂದ ರಕ್ಷಿಸಿದ ಘಟನೆ ಸೋಮವಾರ ಸುರತ್ಕಲ್ ರೈಲು ನಿಲ್ದಾಣದಲ್ಲಿ ನಡೆದಿದೆ. ಮುಂಬೈನಿಂದ ಮಂಗಳೂರು ಕಡೆಗೆ ಬರುತ್ತಿದ್ದ ರೈಲು ಸುರತ್ಕಲ್ ನಿಲ್ದಾಣದಲ್ಲಿ ನಿಂತಿದ್ದ ವೇಳೆ ವೃದ್ಧ ಪ್ರಯಾಣಿಕರೊಬ್ಬರು ಕೆಳಗಿಳಿದು ಅಂಗಡಿಗೆ ತೆರಳಿದ್ದರು. ಅವರು ವಾಪಸ್ ಬರುವಷ್ಟರಲ್ಲಿ ರೈಲು ಚಲಿಸಲು ಆರಂಭಿಸಿತ್ತು. ಅಂಗಡಿಯಲ್ಲಿ ಬಿಟ್ಟು ಬಂದಿದ್ದ ವಸ್ತುವನ್ನು ತರಲು ಅವಸರದಲ್ಲಿ ಚಲಿಸುತ್ತಿದ್ದ ರೈಲನ್ನು ಹತ್ತಲು ಯತ್ನಿಸಿದಾಗ ಆಯತಪ್ಪಿ ಹಳಿಗೆ ಬಿದ್ದಿದ್ದಾರೆ. ಈ ವೇಳ
Aug 111 min read


ನೀಟ್ ವಿಚಾರಕ್ಕೆ ತಂಗಿ ಆತ್ಮಹತ್ಯೆ: ಮಂಗಳೂರಿನಲ್ಲಿ ಸಹೋದರ ಶವವಾಗಿ ಪತ್ತೆ
ಮಂಗಳೂರು, ಆ.11: ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೇರಳದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆನ್ನಲ್ಲೇ, ಆಕೆಯ ಸಹೋದರ ಮಂಗಳೂರಿನ ಲಾಡ್ಜ್ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಕೇರಳದ ಬೇಕಲ್ನ ಪಳ್ಳಿಕ್ಕರ ಮುಕೂಡ್ ನಿವಾಸಿ ಮಹೇಶ್ ಅವರ ಪುತ್ರ ಅರ್ಜುನ್ ಮಹೇಶ್ (24) ಮೃತಪಟ್ಟವರು. ಕಳೆದ ಜೂನ್ನಲ್ಲಿ ಅರ್ಜುನ್ ಅವರ ಸಹೋದರಿ ಐಜಾ ಆರ್. ಮಹೇಶ್ ಅವರು ತರಬೇತಿ ಕೇಂದ್ರದ ಹಾಸ್ಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಐಜಾ ಮಾನ
Aug 111 min read


ಕಡಬ : ಮರ್ದಾಳದಲ್ಲಿ ಅವಘಡ: ಚರಂಡಿಗೆ ಉರುಳಿದ ಸಿಮೆಂಟ್ ಇಟ್ಟಿಗೆ ತುಂಬಿದ ಲಾರಿ
ಕಡಬ, ಆ.10: ಮೆಲ್ಕಾರ್ನಿಂದ ಸುಬ್ರಹ್ಮಣ್ಯಕ್ಕೆ ಸಿಮೆಂಟ್ ಇಟ್ಟಿಗೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ರವಿವಾರ ಕಡಬ ಸಮೀಪದ ಮರ್ದಾಳದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ ರಸ್ತೆ ಬದಿಗೆ ಚಲಿಸಿ ಚರಂಡಿಗೆ ಬಿದ್ದಿದೆ. ಅದೃಷ್ಟವಶಾತ್ ಲಾರಿ ಚಾಲಕ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಬಳಿಕ ಲಾರಿಯಲ್ಲಿದ್ದ ಸಿಮೆಂಟ್ ಇಟ್ಟಿಗೆಗಳನ್ನು ಮತ್ತೊಂದು ಲಾರಿಗೆ ಸ್ಥಳಾಂತರಿಸಿ ಸುಬ್ರಹ್ಮಣ್ಯಕ್ಕೆ ಕಳುಹಿಸಲಾಯಿತು. ಬಳಿಕ ಕ್ರೇನ್ನ್ನು ಸ್ಥಳಕ್ಕೆ ಕರೆಸಿ ಚರಂಡಿಗೆ ಬಿದ್ದಿದ್ದ ಲಾರಿಯನ್ನು ಮೇಲಕ್ಕೆತ್ತ
Aug 101 min read


ಉಳ್ಳಾಲದಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರ ಬಂಧನ
ಉಳ್ಳಾಲ: ಮಧ್ಯರಾತ್ರಿ ಮದ್ಯಪಾನದ ಮತ್ತಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರೌಡಿಶೀಟರ್ ಸೇರಿ ಇಬ್ಬರನ್ನು ಮಂಗಳೂರು ಪೊಲೀಸರು ಶನಿವಾರ ತಡರಾತ್ರಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಾರ್ಗತಲೆ ಉಳ್ಳಾಲ ನಿವಾಸಿ ಹಾಗೂ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಮಹಮ್ಮದ್ ಶಕೀರ್ (31) ಮತ್ತು ಮಂಚಿಲ ಉಳ್ಳಾಲ ನಿವಾಸಿ, ಆಟೋ ಚಾಲಕ ಅಶ್ಫಾಕ್ (28) ಎಂದು ಗುರುತಿಸಲಾಗಿದೆ. ಶನಿವಾರ ತಡರಾತ್ರಿ ಸುಮಾರು 12ರಿಂದ 12.20ರ ನಡುವೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಮ್ಮದ್ ಶಕೀರ್ ಮದ್ಯ ಸೇವಿಸಿ ಕತ್ತಿ ಹಿಡಿದು ಸಾರ್ವಜನಿಕರ ಮೇ
Aug 101 min read


ಆಗಸ್ಟ್ 16ರೊಳಗೆ LPG ಇ-ಕೆವೈಸಿ ಕಡ್ಡಾಯ: ಸಬ್ಸಿಡಿ ಪಡೆಯಲು ಗ್ರಾಹಕರಿಗೆ ಸೂಚನೆ
ನವದೆಹಲಿ: ದೇಶದ ತೈಲ ಮಾರುಕಟ್ಟೆ ಕಂಪೆನಿಗಳು (OMCs) ಗೃಹ ಬಳಕೆಯ LPG ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದ್ದು, ಆಗಸ್ಟ್ 16ರೊಳಗೆ ಇ-ಕೆವೈಸಿ (E-KYC) ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪೂರ್ಣಗೊಳಿಸುವಂತೆ ತಿಳಿಸಿವೆ. ಕೇಂದ್ರ ಸರ್ಕಾರದಿಂದ ಸಿಗುವ LPG ಸಬ್ಸಿಡಿಯನ್ನು ಮುಂದುವರಿಸಿಕೊಂಡು ಹೋಗಲು ಈ ಪ್ರಕ್ರಿಯೆ ಅವಶ್ಯಕ ಎಂದು ತಿಳಿಸಲಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOCL), ಭಾರತ್ ಗ್ಯಾಸ್ ಹಾಗೂ ಹಿಂದೂಸ್ಥಾನ್ ಪೆಟ್ರೋಲಿಯಂ ಸಂಸ್ಥೆಗಳು ಈಗಾಗಲೇ ತಮ್ಮ ಗ್ರಾಹಕರಿಗೆ SMS ಹಾಗೂ ಇತರೆ ಮಾಧ್ಯಮಗಳ ಮೂಲಕ ಮಾಹಿತಿ ನೀಡಿವೆ. ನಿಗದಿತ ದಿನಾಂಕದೊಳಗೆ ಇ-ಕೆವೈಸಿ ಪೂರ್ಣಗೊಳಿಸದಿದ್ದಲ್ಲಿ LPG
Aug 101 min read


ವಿಟ್ಲದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಪವಾಡ ಸದೃಶವಾಗಿ ಪಾರಾದ ಕುಟುಂಬ, ಮನೆ ಸಂಪೂರ್ಣ ಹಾನಿ
ವಿಟ್ಲ: ಕಸಬಾ ಗ್ರಾಮದ ಕುರುಂಬಳ ನಿವಾಸದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮನೆ ಸಂಪೂರ್ಣವಾಗಿ ಜಖಂಗೊಂಡು ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ದುರಂತ ಘಟನೆ ನಡೆದಿದೆ. ಕುರುಂಬಳ ನಿವಾಸಿ ಇಸುಬು ಬ್ಯಾರಿ ಅವರ ಪುತ್ರ ಕೆ. ಹಮೀದ್ (49) ಅವರ ಮನೆಯಲ್ಲಿ ಬೆಳಿಗ್ಗೆ ಸುಮಾರು 11 ಗಂಟೆಯ ವೇಳೆಗೆ ಈ ಅವಘಡ ಸಂಭವಿಸಿದೆ. ಘಟನೆ ಸಂಭವಿಸಿದ ವೇಳೆ ಹಮೀದ್ ಅವರು ಪೇಟೆಗೆ ತೆರಳಿದ್ದರೆ, ಅವರ ಪತ್ನಿ ಖೈರುನ್ನಿಸಾ ಅವರು ಅಡುಗೆಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಗ್ಯಾಸ್ ಸಿಲಿಂಡರ್ನ ರೆಗ್ಯುಲೇಟರ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣುತ್ತಿದ್ದಂತೆಯೇ ಖ
Aug 91 min read


ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಯುಪಿಸಿಎಲ್ ಗುತ್ತಿಗೆ ವೈಮನಸ್ಸೇ ಕೊಲೆಗೆ ಕಾರಣ? ಸುಪಾರಿ ಕಿಂಗ್ ಪತ್ತೆಗೆ ಜಾಲ!
ಉಡುಪಿಯ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜ ಅವರ ಬರ್ಬರ ಹತ್ಯೆ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಉತ್ತರ ಭಾರತದ ವ್ಯಕ್ತಿಯೊಬ್ಬ ಹತ್ಯೆಗೆ ಸುಪಾರಿ ನೀಡಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಯುಪಿಸಿಎಲ್ ಗುತ್ತಿಗೆಗೆ ಸಂಬಂಧಿಸಿದಂತೆ ಉಂಟಾದ ಆರ್ಥಿಕ ವೈಮನಸ್ಸೇ ಈ ಕೊಲೆಗೆ ಪ್ರಮುಖ ಕಾರಣವಾಗಿರಬಹುದು ಎಂಬ ಬಲವಾದ ಅನುಮಾನ ವ್ಯಕ್ತವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರು, ಡೇವಿಡ್ ಹಾಗೂ ಮತ್ತೊಬ್ಬ ಗುತ್ತಿಗೆದಾರನ ನಡುವೆ ಕೋಟಿಗಟ್ಟಲೆ ಮೌಲ್ಯದ ಗುತ್ತಿಗೆ ವಿಚಾರದಲ್ಲಿ ತೀವ್ರ ವೈಮನಸ್ಸು ಉಂಟಾಗಿತ್
Aug 91 min read


ಫಾರ್ಮಸಿ, ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಫಾರ್ಮಸಿ ಆಫೀಸರ್ ಮತ್ತು ನರ್ಸಿಂಗ್ ಆಫೀಸರ್ ಸೇರಿದಂತೆ 233 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆಗಸ್ಟ್ 30ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೇಮಕಾತಿಗೆ ಸಂಬಂಧಿಸಿದ ಅಂತಿಮ ಮತ್ತು ಅಧಿಕೃತ ಮಾಹಿತಿಗಾಗಿ KEA ವೆಬ್ಸೈಟ್ನಲ್ಲಿರುವ ಅಧಿಸೂಚನೆಯನ್ನೇ ಪರಿಗಣಿಸುವುದು ಸೂಕ್ತ. *233 ಹುದ್ದೆಗಳಿಗೆ ನೇಮಕಾತಿ:* ಈ ನೇಮಕಾತಿಯಲ್ಲಿ ಕರ್ನಾಟಕದ ಉಳಿದ ವೃಂದ (RPC) ಹಾಗೂ ಕಲ್ಯಾಣ ಕರ್ನಾಟಕ (KK) ವೃಂದದ ಹುದ್ದೆಗಳು ಸೇರಿವೆ. ಒಟ್ಟು 233 ಹುದ್ದೆಗಳಲ್ಲಿ 98 ಫಾರ್ಮಸಿ ಆಫೀಸರ್ RPC, 90 ನರ್ಸಿಂಗ್ ಆಫೀಸರ್ RPC, 1
Aug 82 min read


ಭೂಮಾಪಕರ 750 ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಭೂ ದಾಖಲೆಗಳ ಇಲಾಖೆಯಲ್ಲಿ 750 ಭೂಮಾಪಕ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಗಡುವನ್ನು ಆಗಸ್ಟ್ 20 ರವರೆಗೆ ವಿಸ್ತರಿಸಲಾಗಿದ್ದು, ಆಯ್ಕೆಯಾದವರಿಗೆ 76,100 ರೂ.ವರೆಗೆ ವೇತನ ದೊರೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಆರಂಭಿಕ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಆಗಸ್ಟ್ 7 ಕೊನೆಯ ದಿನವಾಗಿತ್ತು. ಇದೀಗ ಅಭ್ಯರ್ಥಿಗಳಿಗೆ ಹೆಚ್ಚುವರಿ ಅವಕಾಶ ನೀಡಲು ಅರ್ಜಿ ಸಲ್ಲಿಕೆ ಗಡುವನ್ನು ಆಗಸ್ಟ್ 20 ರವರೆಗೆ ವಿಸ್ತರಿಸಲಾಗಿದೆ. *ಒಟ್ಟು 750 ಭೂಮಾಪಕ ಹುದ್ದೆಗಳು:* KEA ನೇಮಕಾತಿಯಲ್ಲಿ ಒ
Aug 82 min read


ಹಣಕಾಸು ವೈಷಮ್ಯಕ್ಕೆ ಕಾಂಗ್ರೆಸ್ ಮುಖಂಡನ ಹತ್ಯೆ: ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು!
ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜಾ ಅವರ ಹಾಡಹಗಲಿನ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಮೂವರು ಶಾರ್ಪ್ ಶೂಟರ್ಗಳನ್ನು ಬಂಧಿಸಿದ್ದಾರೆ. ಹಣಕಾಸಿನ ವೈಷಮ್ಯದ ಹಿನ್ನೆಲೆಯಲ್ಲಿ ಉತ್ತರ ಭಾರತದ ಸುಪಾರಿ ಕಿಲ್ಲರ್ಗಳಿಗೆ ಗುತ್ತಿಗೆ ನೀಡಿ ಈ ಕೊಲೆ ಮಾಡಿಸಲಾಗಿದೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಗಳನ್ನು ಉತ್ತರ ಪ್ರದೇಶ, ಜಾರ್ಖಂಡ್ ಹಾಗೂ ಬಿಹಾರ ಮೂಲದ ಶಾರ್ಪ್ ಶೂಟರ್ಗಳು ಎಂದು ಗುರುತಿಸಲಾಗಿದೆ. ಹತ್ಯೆಯ ನಂತರ ಪರಾರಿಯಾಗಲು ಯತ್ನಿಸುತ್ತಿದ್ದ ಆ
Aug 81 min read
Archive
bottom of page



