top of page
News Articles
Sathyapatha News Plus


ಕರ್ನಾಟಕ ಶಾಸನಸಭೆಗೆ ನೂತನ ಪದಾಧಿಕಾರಿಗಳ ನೇಮಕ: ಉಪಾಸಭಾಪತಿಯಾಗಿ ನಟಿ ಉಮಾಶ್ರೀ
ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆಗಿ ರೋಣ ಕ್ಷೇತ್ರದ ಶಾಸಕ ಜಿ. ಎಸ್. ಪಾಟೀಲ್ ಹಾಗೂ ಡೆಪ್ಯೂಟಿ ಸ್ಪೀಕರ್ ಆಗಿ ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ತಿನ ಸಭಾಪತಿಯಾಗಿ ಸಲೀಂ ಅಹ್ಮದ್ ಮತ್ತು ಉಪಸಭಾಪತಿಯಾಗಿ ಉಮಾಶ್ರೀ ಅವರನ್ನು ನಿಯೋಜಿಸಲಾಗಿದ್ದು, ಉಭಯ ಸದನಗಳಿಗೆ ಹೊಸ ಸಾರಥ್ಯ ಲಭಿಸಿದೆ.
Aug 31 min read


ಮಲೆನಾಡು-ಕರಾವಳಿಯಲ್ಲಿ ಮುಂದುವರಿದ ವರುಣನ ಆರ್ಭಟ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!
ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕಾಫಿನಾಡಿನಲ್ಲಿ ನಿರಂತರ ಮಳೆಯಿಂದಾಗಿ ಕೊಪ್ಪ ಮತ್ತು ಶೃಂಗೇರಿ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಆದೇಶಿಸಿದ್ದಾರೆ. ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಮತ್ತೊಂದೆಡೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಮಂಗಳೂರು, ಬಂಟ್ವಾಳ, ಉಳ್ಳಾಲ ಸೇರಿದಂತೆ ವಿವಿಧ ತಾಲೂಕುಗಳಲ್ಲಿ 10ನೇ ತರಗ
Aug 31 min read


ತಡರಾತ್ರಿ ಭೂಕುಸಿತ: ಪ್ರಯಾಣಿಕರ ನೆರವಿಗೆ ಧಾವಿಸಿ ಸೈ ಎನಿಸಿಕೊಂಡ ಸಂಸದ ಬ್ರಿಜೇಶ್ ಚೌಟ
ಸುಬ್ರಹ್ಮಣ್ಯ - ಸಕಲೇಶಪುರ ಮಧ್ಯೆ ತಡರಾತ್ರಿ ಭೂಕುಸಿತ ಸಂಭವಿಸಿ ರೈಲು ಸಂಚಾರ ಸಂಪೂರ್ಣ ಅಡಚಣೆಗೊಂಡಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ರೈಲ್ವೆ ಸಚಿವಾಲಯ ಮತ್ತು ನೈಋತ್ಯ ರೈಲ್ವೆ ಅಧಿಕಾರಿಗಳ ಗಮನಕ್ಕೆ ವಿಚಾರ ತಂದರು. ಪ್ರಯಾಣಿಕರು ಸುರಕ್ಷಿತವಾಗಿ ತಮ್ಮ ಊರುಗಳನ್ನು ತಲುಪಲು ಬದಲಿ ಸಾರಿಗೆ ವ್ಯವಸ್ಥೆ ಕಲ್ಪಿಸಿದರು. ಕೊನೆಯವರೆಗೆ ಸ್ಥಳದಲ್ಲೇ ನಿಂತು ಆಪತ್ಭಾಂದವನಂತೆ ಸಹಾಯ ಮಾಡಿದ ಅವರ ಕಾರ್ಯ ಅತ್ಯಂತ ಶ್ಲಾಘನೀಯವಾಗಿದೆ. ಸಂಸದರ ಈ ತ್ವರಿತ ಸ್ಪಂದನೆಗೆ ಪ್ರಯಾಣಿಕರು ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದು, 'ನಮ್ಮ ಸಂಸದರು ನಮ್ಮ ಹೆಮ್ಮೆ' ಎಂದು ಹಾರ
Aug 21 min read


ಕುಕ್ಕೆ ಸುಬ್ರಹ್ಮಣ್ಯ: ಭಾರೀ ಮಳೆಗೆ ಗುಡ್ಡ ಕುಸಿತ, ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಕಾಂಪೌಂಡ್ ಹಾನಿ
ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಇಂದು ಭಾರೀ ಮಳೆಯಾಗಿದೆ. ಮಳೆಯ ರಭಸಕ್ಕೆ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಹಿಂಬಾಗದ ಗುಡ್ಡ ಜರಿದು ಬಿದ್ದಿದೆ. ಗುಡ್ಡ ಜರಿತದ ಜೊತೆಗೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮವಾಗಿ, ದೈವಸ್ಥಾನದ ಕಾಂಪೌಂಡ್ ಸಂಪೂರ್ಣವಾಗಿ ಹಾನಿಗೀಡಾಗಿದೆ. ಅದೃಷ್ಟವಶಾತ್ ದೊಡ್ಡ ಮಟ್ಟದ ಅನಾಹುತವೊಂದು ತಪ್ಪಿದಂತಾಗಿದೆ. ಈ ಪ್ರದೇಶದಲ್ಲಿ ಗುಡ್ಡ ಇನ್ನೂ ಜರಿಯುವ ಅಪಾಯವಿದ್ದು, ಸ್ಥಳದಲ್ಲಿ ಅನೇಕ ಮರಗಳು ಅಪಾಯಕಾರಿ ಸ್ಥಿತಿಯಲ್ಲಿವೆ. ಇದರಿಂದಾಗಿ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
Aug 21 min read


ಮಂಗಳೂರು-ಬೆಂಗಳೂರು ರೈಲು ಸಂಚಾರ ಸಂಪೂರ್ಣ ಸ್ಥಗಿತ: ಭೂಕುಸಿತದಿಂದ ಪ್ರಯಾಣಿಕರ ಪರದಾಟ
ಘಟ್ಟ ಪ್ರದೇಶ ಹಾಗೂ ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸಕಲೇಶಪುರ ಬಳಿಯ ಎಡಕುಮೇರಿ ಮತ್ತು ಸಿರಿಬಾಗಿಲು ನಡುವೆ ರೈಲು ಹಳಿಯ ಮೇಲೆ ಭಾರಿ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಮಂಗಳೂರು ಹಾಗೂ ಬೆಂಗಳೂರು ನಡುವೆ ಸಂಚರಿಸುವ ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದ್ದು, ಹಲವು ರೈಲುಗಳನ್ನು ಆಂಶಿಕವಾಗಿ ರದ್ದುಗೊಳಿಸಲಾಗಿದೆ. ಬೆಂಗಳೂರು, ಮುರುಡೇಶ್ವರ, ಕೋಝಿಕ್ಕೋಡ್, ವಿಜಯಪುರ ಹಾಗೂ ಕಾರವಾರ ಕಡೆಗೆ ಸಂಚರಿಸುತ್ತಿದ್ದ ರೈಲುಗಳನ್ನು ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ಹಾಗೂ ಕಬಕ ಪುತ್ತೂರು ನಿಲ್ದಾಣಗಳಲ್ಲೇ ತಡೆಯಲಾಗಿದೆ. ಇದರಿಂದಾಗಿ ಸಾವಿರಾರು ಪ್ರಯಾಣಿಕರು ತೀ
Aug 21 min read


ಮಳೆ ಕೊರತೆ ಬಿಸಿ: ರಾಜ್ಯದಲ್ಲಿ ಅಕ್ಕಿ ದರ ಶೇ.35ರಷ್ಟು ಭಾರೀ ಏರಿಕೆ, ಗ್ರಾಹಕರು ಕಂಗಾಲು!
ರಾಜ್ಯದಲ್ಲಿ ಉಂಟಾಗಿರುವ ತೀವ್ರ ಮಳೆ ಕೊರತೆಯು ಜನರ ದೈನಂದಿನ ಜೀವನದ ಮೇಲೆ ನೇರ ಪರಿಣಾಮ ಬೀರಿದೆ. ಭತ್ತದ ಬಿತ್ತನೆ ಗಣನೀಯವಾಗಿ ಕುಂಠಿತಗೊಂಡ ಹಿನ್ನೆಲೆಯಲ್ಲಿ ಅಕ್ಕಿ ಬೆಲೆ ಕಳೆದ ಒಂದು ದಶಕದಲ್ಲೇ ಕಾಣದಷ್ಟು ಹೆಚ್ಚಳವಾಗಿದೆ. ಸ್ಟೀಮ್ ಹಾಗೂ ಸೋನಾ ಮಸೂರಿ ಸೇರಿದಂತೆ ಪ್ರಮುಖ ವಿಧದ ಅಕ್ಕಿ ದರಗಳು ಕಳೆದ ಎರಡು ತಿಂಗಳಲ್ಲಿ ಶೇ.35ರಷ್ಟು ಏರಿಕೆಯಾಗಿದ್ದು, ಗ್ರಾಹಕರಿಗೆ ಭಾರೀ ಆಘಾತ ತಂದಿದೆ. ಶೇ.50ರಷ್ಟು ಮಳೆ ಕೊರತೆಯಿಂದಾಗಿ ರೈತರು ಬಿತ್ತನೆ ಮುಂದೂಡಿದ್ದು, ಉತ್ಪಾದನೆ ಕುಸಿಯುವ ಆತಂಕ ಮಾರುಕಟ್ಟೆಯಲ್ಲಿ ಸೃಷ್ಟಿಯಾಗಿದೆ. ಪೂರೈಕೆಯಲ್ಲೂ ತೀವ್ರ ವ್ಯತ್ಯಯ ಉಂಟಾಗಿದ್ದು, ಬೆಂಗಳೂರಿನ ಯಶವಂತಪುರ ಎಪಿ
Aug 21 min read


ಪುತ್ತೂರು: ಕುಮಾರಧಾರ ನದಿ ಪ್ರವಾಹಕ್ಕೆ ಮುಳುಗಿದ ಮಹಾಲಿಂಗೇಶ್ವರ ದೇವರ ಸ್ನಾನದ ಕಟ್ಟೆ
ಕಳೆದ ಎರಡು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಕುಮಾರಧಾರ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮವಾಗಿ ವೀರಮಂಗಲದಲ್ಲಿರುವ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನದ ಕಟ್ಟೆ ಸಂಪೂರ್ಣ ಜಲಾವೃತಗೊಂಡಿದೆ. ನದಿಯ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದ್ದು, ತೀರದ ಪಕ್ಕದಲ್ಲಿರುವ ಕೆಲವು ತೋಟಗಳಿಗೂ ಪ್ರವಾಹದ ನೀರು ನುಗ್ಗಿದೆ. ಇದು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಕೃಷಿಕರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಮಳೆ ಮುಂದುವರಿದರೆ ನೀರಿನ ಮಟ್ಟ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ನದಿ ತೀರದ ನಿವಾಸಿಗಳು ಹಾಗೂ ಭಕ್ತರು ಅನಗತ್ಯವಾಗಿ
Aug 21 min read


ಬೆಳ್ತಂಗಡಿ: ಕಾಡಾನೆ ದಾಳಿಗೆ ವ್ಯಕ್ತಿ ಬಲಿ – ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ದುರಂತ
ಬೆಳ್ತಂಗಡಿ, ಆ. 2: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಶನಿವಾರ ಸಂಜೆ ಸಂಭವಿಸಿದೆ. ಮೃತರನ್ನು ಇಡಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಮಾಹಿತಿಯಂತೆ, ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸಕ್ಕೆ ತೆರಳಿದ್ದು, ಸಂಜೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ರಾತ್ರಿ ತಡವಾದರೂ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸ್ಥಳೀಯರು ಅವರನ್ನು ಹುಡುಕಾಟ ಆರಂಭಿಸಿದರು. ಹುಡುಕಾಟದ ವೇಳೆ ಅವರು ಧರಿಸಿದ್ದ ಪ್ಲಾಸ್ಟಿಕ
Aug 21 min read


ಮಂಗಳೂರಿನಿಂದ ಕ್ರೂಸ್ ಪ್ರವಾಸೋದ್ಯಮಕ್ಕೆ ಹೊಸ ಚಾಲನೆ: ರಾಜ್ಯ ಸರ್ಕಾರದಿಂದ ಮಹತ್ವದ ಹೆಜ್ಜೆ
ಕರ್ನಾಟಕದ ಕರಾವಳಿ ಭಾಗದಲ್ಲಿ ಕ್ರೂಸ್ ಪ್ರವಾಸೋದ್ಯಮವನ್ನು ಉತ್ತೇಜಿಸಲು ರಾಜ್ಯ ಪ್ರವಾಸೋದ್ಯಮ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರ ಸೂಚನೆಯಂತೆ, ಮಂಗಳೂರಿನಿಂದ ಕ್ರೂಸ್ ಸೇವೆ ಆರಂಭಿಸಲು ಪ್ರಮುಖ ಸಂಸ್ಥೆಯಾದ ವಾಟರ್ವೇಸ್ ಲೀಷರ್ ಟೂರಿಸಂ ಲಿಮಿಟೆಡ್ ತಾತ್ವಿಕ ಅನುಮೋದನೆ ನೀಡಿದೆ ಎಂದು ಇಲಾಖೆಯ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ. ಇತ್ತೀಚೆಗೆ ಮುಂಬೈನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಮಂಗಳೂರಿನ ಮೂಲಸೌಕರ್ಯ, ಮಾರುಕಟ್ಟೆ ಅವಕಾಶಗಳು ಹಾಗೂ ಕಾರ್ಯಾಚರಣೆಯ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಮುಂದಿನ ತಿಂಗಳು ಸಂಸ್ಥೆಯ
Aug 11 min read


ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರ ನದಿ ಭರ್ತಿ, ಸ್ನಾನಘಟ್ಟ ಮುಳುಗಡೆ – ಭಕ್ತರಿಗೆ ಪರ್ಯಾಯ ಸ್ನಾನದ ವ್ಯವಸ್ಥೆ
ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮತ್ತು ಸುತ್ತಮುತ್ತಲಿನ ಪರಿಸರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಹಠಾತ್ತನೆ ಏರಿಕೆಯಾಗಿದೆ. ನದಿಯ ಭಾರಿ ಹರಿವಿಗೆ ಮುಖ್ಯ ಸ್ನಾನಘಟ್ಟವು ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಅಲ್ಲಿದ್ದ ಶೌಚಾಲಯ ಹಾಗೂ ಡ್ರೆಸ್ಸಿಂಗ್ ರೂಮ್ಗಳು ನೀರಿನಲ್ಲಿ ಜಲಾವೃತಗೊಂಡಿವೆ. ನದಿಯಲ್ಲಿ ನೀರು ಅಪಾಯಕಾರಿ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಭಕ್ತಾದಿಗಳಿಗೆ ನದಿಯಲ್ಲಿ ಇಳಿದು ತೀರ್ಥಸ್ನಾನ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ನದಿಯ ದಂಡೆಗೆ ಬೇ
Jul 311 min read


ಕಡಬ: ಭಾರಿ ಗಾಳಿ-ಮಳೆಗೆ ಅಡಿಕೆ ಮರ ಬಿದ್ದು ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ದುರಂತ ಸಾವು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಗಾಳಿಯ ರಭಸಕ್ಕೆ ಅಡಿಕೆ ಮರವೊಂದು ಮುರಿದು ಬಿದ್ದು ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ದುರಂತ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಕೇವಳದಲ್ಲಿ ಶುಕ್ರವಾರ ನಡೆದಿದೆ. ಕೇವಳ ನಿವಾಸಿ ಯಾದವ ಗೌಡ (೬೬) ಮೃತಪಟ್ಟ ದುರದೃಷ್ಟಕರ ವ್ಯಕ್ತಿಯಾಗಿದ್ದಾರೆ. ಯಾದವ ಗೌಡ ಅವರು ತಮ್ಮ ಅಡಿಕೆ ತೋಟದಲ್ಲಿ ದೈನಂದಿನ ಕೆಲಸದಲ್ಲಿ ತೊಡಗಿದ್ದಾಗ ಏಕಾಏಕಿ ಭಾರಿ ಗಾಳಿ-ಮಳೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಬಲವಾದ ಗಾಳಿಗೆ ಅಡಿಕೆ ಮರವೊಂದು ಸಡನ್ನಾಗಿ ಮುರಿದು ಅವರ ಮೇಲೆ ಬಿದ್ದಿದೆ. ಪರಿಣಾಮವಾಗಿ ತಲೆ ಹಾಗೂ ದೇಹಕ
Jul 311 min read


11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿ ಮಂಗಳೂರು ಸಿಸಿಬಿ ವಶಕ್ಕೆ
೨೦೧೫ರಲ್ಲಿ ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಳೆದ ೧೧ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂකಿನ ಮಲ್ಲೇನಹಳ್ಳಿ ನಿವಾಸಿ ಚುಂಕಿ ಆಕಾಶಭವನ ಅಲಿಯಾಸ್ ಸಂತೋಷ್ ಎಸ್ (೩೪) ಬಂಧಿತ ಆರೋಪಿಯಾಗಿದ್ದಾನೆ. ೨೦೧೫ರಲ್ಲಿ ಆಕಾಶಭವನದಲ್ಲಿ ನಡೆದ ಮದುವೆಯ ಮದರಂಗಿ ಶಾಸ್ತ್ರದ ವೇಳೆ ಅಶೋಕ ಕುಮಾರ ಕೊಟ್ಟಾರಿ ಎಂಬವರ ಮೇಲೆ ಆರೋಪಿ ಸಂತೋಷ್ ತನ್ನ ಸಹಚರರೊಂದಿಗೆ ಸೇರಿ ತಲವಾರಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದನು. ಈ ಭೀಕರ
Jul 311 min read


ಧರ್ಮಸ್ಥಳ ಅಸ್ಥಿಪಂಜರ ಪ್ರಕರಣ: ಮೂವರ ಡಿಎನ್ಎ ದೃಢ, ಮೂವರೂ ಪುರುಷರು
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿ (SIT) ನಡೆಸಿದ ಉತ್ಖನನದ ವೇಳೆ ಪತ್ತೆಯಾಗಿದ್ದ ಅಸ್ಥಿಪಂಜರಗಳ ಪೈಕಿ ಮೂರು ಅಸ್ಥಿಪಂಜರಗಳ ಗುರುತು ಡಿಎನ್ಎ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಜುಲೈ 15ರಂದು ಎಸ್ಐಟಿ ಸಲ್ಲಿಸಿದ್ದ ತನಿಖಾ ವರದಿಯಲ್ಲಿ ಈ ಡಿಎನ್ಎ ಫಲಿತಾಂಶದ ವಿವರಗಳನ್ನು ಉಲ್ಲೇಖಿಸಲಾಗಿದೆ. ವಿಶೇಷವೆಂದರೆ, ಹತ್ಯೆಗೊಳಗಾದವರೆಲ್ಲರೂ ಮಹಿಳೆಯರು ಎಂಬ ಆರೋಪಗಳ ನಡುವೆ, ಪ್ರಸ್ತುತ ಪರೀಕ್ಷೆಯಿಂದ ಮೂವರೂ ಪುರುಷರು ಎಂಬುದು ದೃಢಪಟ್ಟಿದೆ. ಕೊಡಗಿನ ಯು.ಬಿ. ಅಯ್ಯಪ್ಪ (70), ತುಮಕೂರಿನ ಆದಿಶೇಷ (27) ಹಾಗೂ ಕೋಲಾರದ ಕೃಷ್ಣಪ್ಪ (85) ಅವರ ಕುಟುಂಬ
Jul 311 min read


ಪರೀಕ್ಷಾ ಅಕ್ರಮ ತಡೆಗೆ ಕಠಿಣ ಕಾನೂನು: ಪೇಪರ್ ಸೋರಿಕೆ ಮಾಫಿಯಾಗೆ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ
ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯರಾತ್ರಿ ಬಿಡುಗಡೆ ಮಾಡಿದ ಹೊಸ ಸೆಲ್ಫಿ ವಿಡಿಯೋದಲ್ಲಿ, ಪರೀಕ್ಷಾ ಅಕ್ರಮ ತಡೆ ವಿಧೇಯಕ ಅಂಗೀಕಾರಗೊಂಡಿರುವುದನ್ನು ಭಾರತದ ಇತಿಹಾಸದಲ್ಲಿ ಒಂದು ಪ್ರಮುಖ ಮತ್ತು ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದ್ದಾರೆ. ಈ ಹೊಸ ಕಾನೂನಿನ ಮೂಲಕ ದೇಶದ ಶಿಕ್ಷಣ ವ್ಯವಸ್ಥೆಗೆ ಹೊಸ ಬಲ ಸಿಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಯುವಜನರ ಭವಿಷ್ಯದ ಜೊತೆ ಆಟವಾಡುವ ಪ್ರಶ್ನೆ ಪತ್ರಿಕೆ ಸೋರಿಕೆ ಮಾಫಿಯಾ ಮತ್ತು ವಂಚನೆ ಅಕ್ರಮಗಳಲ್ಲಿ ಭಾಗಿಯಾಗಿರುವ ಗ್ಯಾಂಗ್ಗಳಿಗೆ ಯಾವುದೇ ಕಾರಣಕ್ಕೂ ಕ್ಷಮೆ ಇಲ್ಲ ಎಂದು ಪ್ರಧಾನಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ದಶಕಗಳಿಂದ ದೇಶವನ್ನು ಕಾ
Jul 311 min read


ಅಂತರರಾಷ್ಟ್ರೀಯ ಕ್ರಿಕೆಟ್ಗೆ ಅಜಿಂಕ್ಯ ರಹಾನೆ ದಿಢೀರ್ ವಿದಾಯ: ‘ಕ್ಯಾಪ್ 278’ ಪಯಣ ಅಂತ್ಯ!
ಭಾರತೀಯ ಕ್ರಿಕೆಟ್ ತಂಡದ ಹಿರಿಯ ಆಟಗಾರ ಹಾಗೂ ಬಾರ್ಡರ್-ಗವಾಸ್ಕರ್ ಟ್ರೋಫಿ ವಿಜೇತ ನಾಯಕ ಅಜಿಂಕ್ಯ ರಹಾನೆ ಅವರು ಅಂತರರಾಷ್ಟ್ರೀಯ ಕ್ರಿಕೆಟ್ನ ಎಲ್ಲಾ ಮಾದರಿಗಳಿಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಮುಂಬೈ ಮೂಲದ ಈ ಅನುಭವಿ ಬ್ಯಾಟರ್ ತಮ್ಮ ಸುದೀರ್ಘ ಕ್ರಿಕೆಟ್ ಪಯಣಕ್ಕೆ ಅಧಿಕೃತವಾಗಿ ತೆರೆ ಎಳೆದಿದ್ದಾರೆ. ನಿವೃತ್ತಿ ಕುರಿತು ಕೃತಜ್ಞತೆ ಸಲ್ಲಿಸಿರುವ ರಹಾನೆ, ಸಾಮಾನ್ಯ ಹಿನ್ನೆಲೆಯಿಂದ ಬಂದು ಜಗತ್ತಿನ ಬೃಹತ್ ವೇದಿಕೆಯಲ್ಲಿ ದೇಶವನ್ನು ಪ್ರತಿನಿಧಿಸಿದ್ದು ನನ್ನ ಪಾಲಿನ ದೊಡ್ಡ ಸೌಭಾಗ್ಯ. ನನ್ನ ಬೆಳವಣಿಗೆಗೆ ಶ್ರಮಿಸಿದ ಎಲ್ಲ
Jul 301 min read


ಮಾದಕ ದ್ರವ್ಯ ವಿರೋಧಿ ಅಭಿಯಾನ ನಡೆಸುತ್ತಿದ್ದವರೇ ಡ್ರಗ್ಸ್ ದಂಧೆಯಲ್ಲಿ..! ಮೂವರು ಶಿಕ್ಷಕಿಯರು ಸೇರಿ ಐವರ ಬಂಧನ
ಕೋಝಿಕ್ಕೋಡ್ (ಕೇರಳ): ಕೇರಳದ ಕೋಝಿಕ್ಕೋಡ್ ಜಿಲ್ಲೆಯ ವಡಕರ ಪ್ರದೇಶದಲ್ಲಿ ಡ್ರಗ್ಸ್ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಮೂವರು ಶಿಕ್ಷಕಿಯರು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವು ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿರುವವರೇ ಮಾದಕ ದ್ರವ್ಯ ಜಾಲದಲ್ಲಿ ಭಾಗಿಯಾಗಿರುವ ಆರೋಪ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಪೊಲೀಸರ ಮಾಹಿತಿ ಪ್ರಕಾರ, ಬಂಧಿತ ಶಿಕ್ಷಕಿಯರು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ತಿಂಗಳಿಗೆ ಸುಮಾರು ₹12,000 ರಿಂದ ₹13,000 ವೇತನ ಪಡೆಯುತ್ತಿದ್ದರು. ಆದರೆ, ಅವರ ಬ್ಯಾಂಕ್
Jul 301 min read


ಕರಡು ಮತದಾರರ ಪಟ್ಟಿಯಿಂದ 20 ಲಕ್ಷ ಹೆಸರುಗಳು ಶಾಶ್ವತ ಡಿಲೀಟ್: ಆಯೋಗದ ಸಮೀಕ್ಷೆಯಲ್ಲಿ ಬಹಿರಂಗ
ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಈಗ ಅಂತಿಮ ಹಂತ ತಲುಪಿದೆ. ಜೂನ್ 30ರಿಂದ ಆರಂಭಗೊಂಡಿದ್ದ ಮನೆ-ಮನೆ ಸಮೀಕ್ಷೆ ಆಗಸ್ಟ್ 8ಕ್ಕೆ ಮುಕ್ತಾಯಗೊಳ್ಳಲಿದ್ದು, ಆಗಸ್ಟ್ 17ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ. ಒಟ್ಟು 5.54 ಕೋಟಿ ಮತದಾರರಲ್ಲಿ ಬಿಎಲ್ಒ ನಡೆಸಿದ ಪರಿಶೀಲನೆಯಲ್ಲಿ ಬೃಹತ್ ಸಂಖ್ಯೆಯ ಅಂದರೆ ಸುಮಾರು 86.64 ಲಕ್ಷ ಮತದಾರರನ್ನು ‘ಎಎಸ್ಡಿಡಿಒ’ (ಸ್ಥಳಾಂತರ/ಮೃತ/ದ್ವಿಪ್ರತಿ) ಎಂದು ವರ್ಗೀಕರಿಸಲಾಗಿದೆ. ಇದರಿಂದ ಪ್ರಕ್ರಿಯೆಯ ಅಂತ್ಯಕ್ಕೆ ಶೇ.15.63ರಷ್ಟು ಹೆಸರುಗಳು ಪಟ್ಟಿಯಿಂದ ಹೊರಗುಳಿಯುವ ಆತಂಕ ಎದುರಾಗಿದೆ. ಪತ್
Jul 301 min read
Archive
bottom of page









