top of page
News Articles
Sathyapatha News Plus


ಆರು ದಿನಗಳ ನಂತರ ಪುನರಾರಂಭಗೊಂಡ ಅಮರನಾಥ ಯಾತ್ರೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ಸುರಿಯುತ್ತಿದ್ದ ನಿರಂತರ ಮಳೆ, ಭೂಕುಸಿತ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಪವಿತ್ರ ಅಮರನಾಥ ಯಾತ್ರೆಯನ್ನು ಶನಿವಾರದಂದು ಆಡಳಿತ ಮಂಡಳಿಯು ಅಧಿಕೃತವಾಗಿ ಪುನರಾರಂಭಿಸಿದೆ. ಉಧಮ್ಪುರ ಮತ್ತು ರಾಂಬನ್ ಮಾರ್ಗದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿದ್ದ ಬಂಡೆ ಹಾಗೂ ಮಣ್ಣಿನ ಅವಶೇಷಗಳನ್ನು ಯಶಸ್ವಿಯಾಗಿ ತೆರವುಗೊಳಿಸಿದ ನಂತರ, ಭಗವತಿ ನಗರದ ಮೂಲ ಶಿಬಿರದಿಂದ ಹೊಸ ಯಾತ್ರಿಕರ ತಂಡಕ್ಕೆ ಅಧಿಕಾರಿಗಳು ಚಾಲನೆ ನೀಡಿದ್ದಾರೆ. ಈ 18 ನೇ ಬ್ಯಾಚ್ನಲ್ಲಿ 1,470 ಮಹಿಳೆಯರು, 25 ಮಕ್ಕಳು ಹಾಗೂ 54 ಸಾಧುಗಳು ಸೇರಿದಂತೆ ಒಟ್ಟು 6
Jul 251 min read


ಭಾರೀ ಮಳೆ ಹಿನ್ನೆಲೆ: ಜು. 25ರಂದು ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ರಜೆ
ಮಂಗಳೂರು, ಜು. 24: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ, ಜುಲೈ 25 (ಶನಿವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಶಾಲೆಗಳು, ಪದವಿಪೂರ್ವ (ಪಿಯು) ಕಾಲೇಜುಗಳು, ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.
Jul 241 min read


ಅಸ್ತ್ರ ಲಕ್ಕಿ ಸ್ಕೀಮ್ ದಂದೆ: ಕೋಟ್ಯಂತರ ರೂಪಾಯಿ ವಂಚಿಸಿ ಲಂಚುಲಾಲ್ ನಾಪತ್ತೆ!
ಜನರ ಕಣ್ಣಿಗೆ ಮಣ್ಣೆರಚಿ ಹಣ ಗಳಿಸುತ್ತಿದ್ದ 'ಅಸ್ತ್ರ' ಸಂಸ್ಥೆಯ ಮಾಲೀಕ ಲಂಚುಲಾಲ್ ಕೊನೆಗೂ ವಂಚನೆ ಎಸಗಿ ನಾಪತ್ತೆಯಾಗಿದ್ದಾನೆ. ಮಂಗಳೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಸುಮಾರು 50 ಸಾವಿರಕ್ಕೂ ಹೆಚ್ಚು ಜನರಿಂದ ಲಕ್ಕಿ ಸ್ಟೀಮ್ ಹಾಗೂ ಕುರಿ ಫಂಡ್ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಸಂಗ್ರಹಿಸಿದ್ದ ಈತ, ಈಗ ಗ್ರಾಹಕರಿಗೆ ಹಣ ಹಿಂತಿರುಗಿಸದೇ ಪರಾರಿಯಾಗಿದ್ದಾನೆ. ಬ್ಯಾಂಕ್ ಖಾತೆ ಫ್ರೀಜ್ ಆಗಿದೆ ಎಂದು ಏಜಂಟರನ್ನು ನಂಬಿಸುತ್ತಿದ್ದ ಈತ, ಪ್ರಸ್ತುತ ದುಬೈಗೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇಂದು ಮಂಗಳೂರಿನ ನವಭಾರತ್ ಸರ್ಕಲ್ನಲ್ಲಿರುವ ಅಸ್ತ್ರ ಗ್ರೂಪ್ ಕಚೇರಿಗೆ ನೂರಾರು ವಂಚಿತ ಗ್ರಾ
Jul 241 min read


ಪ್ಲಿಪ್ಕಾರ್ಟ್ನಿಂದ ಶೀಘ್ರವೇ ಫುಡ್ ಡೆಲಿವರಿ ಸೇವೆ ಶುರು: ಝೊಮ್ಯಾಟೋ, ಸ್ವಿಗ್ಗಿಗೆ ಟಕ್ಕರ್!
ವಾಲ್ಮಾರ್ಟ್ ಒಡೆತನದ ಇ-ಕಾಮರ್ಸ್ ದೈತ್ಯ ಪ್ಲಿಪ್ಕಾರ್ಟ್ ಶೀಘ್ರದಲ್ಲೇ ಭಾರತದಲ್ಲಿ ಫುಡ್ ಡೆಲಿವರಿ ಸೇವೆ ಆರಂಭಿಸಲು ಮುಂದಾಗಿದೆ. ವರದಿಗಳ ಪ್ರಕಾರ, ಮುಂದಿನ ಒಂದು ತಿಂಗಳೊಳಗೆ ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಈ ಸೇವೆಗೆ ಚಾಲನೆ ನೀಡುವ ಸಾಧ್ಯತೆಯಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಹೊಂದಿರುವ ಝೊಮ್ಯಾಟೋ ಮತ್ತು ಸ್ವಿಗ್ಗಿಗೆ ಪ್ರಬಲ ಸ್ಪರ್ಧೆ ನೀಡಲು ಕಂಪನಿ ಯೋಜನೆ ರೂಪಿಸಿದೆ. ಆದರೆ, ಈ ಸೇವೆಯ ಅಧಿಕೃತ ಚಾಲನೆಯ ದಿನಾಂಕ ಹಾಗೂ ಇತರೆ ಪ್ರಮುಖ ವಿವರಗಳನ್ನು ಪ್ಲಿಪ್ಕಾರ್ಟ್ ಇನ್ನೂ ಅಧಿಕೃತವಾಗಿ ಬಹಿರಂಗಪಡಿಸಿಲ್ಲ.
Jul 241 min read


ಕಾಮನ್ವೆಲ್ತ್ ಗೇಮ್ಸ್ 2026: ಉದ್ಘಾಟನೆಗೂ ಮುನ್ನವೇ ಭಾರತಕ್ಕೆ ಒಲಿದ ಮೊದಲ ಪದಕ!
2026ರ ಗ್ಲಾಸ್ಗೋ ಕಾಮನ್ವೆಲ್ತ್ ಗೇಮ್ಸ್ ಅಧಿಕೃತವಾಗಿ ಉದ್ಘಾಟನೆಗೊಳ್ಳುವ ಮುನ್ನವೇ ಭಾರತ ತನ್ನ ಪದಕದ ಖಾತೆಯನ್ನು ತೆರೆದಿದೆ. ಪ್ರಮುಖ ಕ್ರೀಡೆಗಳ ಕಡಿತದ ನಡುವೆಯೂ 124 ಕ್ರೀಡಾಪಟುಗಳೊಂದಿಗೆ ಕಣಕ್ಕಿಳಿದಿರುವ ಭಾರತೀಯ ತಂಡಕ್ಕೆ ಈ ಸುದ್ದಿ ದೊಡ್ಡ ಆಶಾಭಾವನೆ ತಂದಿದೆ. ಮಹಿಳೆಯರ 75 ಕೆಜಿ ಬಾಕ್ಸಿಂಗ್ ವಿಭಾಗದಲ್ಲಿ ಒಲಿಂಪಿಕ್ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್ ‘ಬೈ’ (Bye) ಪಡೆಯುವ ಮೂಲಕ ನೇರವಾಗಿ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಬಾಕ್ಸಿಂಗ್ ನಿಯಮಗಳ ಪ್ರಕಾರ ಸೆಮಿಫೈನಲ್ ತಲುಪಿದ ಸ್ಪರ್ಧಿಗಳಿಗೆ ಕನಿಷ್ಠ ಕಂಚಿನ ಪದಕ ಖಾತರಿಯಾಗುವುದರಿಂದ, ಭಾರತಕ್ಕೆ ಮೊದಲ ಪದಕ ನಿಶ್ಚಿತವಾಗಿದೆ. ಈ ವಿಭ
Jul 241 min read


ಅಮೆರಿಕದಿಂದ ಪ್ರಮುಖ ನಿರ್ಧಾರ: ಭಾರತ ಸೇರಿ 17 ದೇಶಗಳ ಉತ್ಪನ್ನಗಳ ಮೇಲೆ ಹೆಚ್ಚುವರಿ ಸುಂಕ ಹೇರಿಕೆ
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಬಲವಂತದ ದುಡಿಮೆಯ ಮೂಲಕ ತಯಾರಾಗುವ ಉತ್ಪನ್ನಗಳ ನಿಯಂತ್ರಣದಲ್ಲಿ ವಿಫಲವಾಗಿರುವ ಭಾರತ ಸೇರಿದಂತೆ 17 ದೇಶಗಳ ಸರಕುಗಳ ಮೇಲೆ ಅಮೆರಿಕ ಹೆಚ್ಚುವರಿಯಾಗಿ ಶೇಕಡಾ 10 ರಷ್ಟು ಸುಂಕವನ್ನು ವಿಧಿಸಿದೆ. ಈ ನೂತನ ನಿಯಮವು ಶುಕ್ರವಾರದಿಂದಲೇ ಜಾರಿಗೆ ಬರಲಿದೆ. ಯುಎಸ್ಟಿಆರ್ ನಡೆಸಿದ 60 ವ್ಯಾಪಾರ ಪಾಲುದಾರ ರಾಷ್ಟ್ರಗಳ ಪರಿಶೀಲನೆಯ ನಂತರ 'ಸೆಕ್ಷನ್ 301' ರ ಅಡಿಯಲ್ಲಿ ಈ ಕಠಿಣ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆ ತಡೆಯುವುದು ಮತ್ತು ಅನ್ಯಾಯದ ವ್
Jul 241 min read


ಸುಳ್ಯ: ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ, ಲೈಂಗಿಕ ದೌರ್ಜನ್ಯ ಎಸಗಿದ ಯುವಕನ ಬಂಧನ
ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ ತಿಂಗಳಲ್ಲಿ ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿಯನ್ನು ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ಮೇ 7ರಂದು ಮಂಗಳೂರಿಗೆ ಕೆಲಸಕ್ಕೆಂದು ತೆರಳಿದ್ದ ಬಾಲಕಿ ಮನೆಗೆ ಮರಳದಿದ್ದಾಗ, ಕುಟುಂಬದವರು ಮೇ 11ರಂದು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಾಲಕಿ ಪತ್ತೆಯಾದ ನಂತರ ಆಕೆಯಿಂದ ಮಾಹಿತಿ ಪಡೆದ ಪೊಲೀಸರು, ಪ್ರಕರಣಕ್ಕೆ ಬಿಎನ್ಎಸ್ ಹಾಗೂ ಪೋಕ್ಸೋ (POCSO) ಕಾಯ್ದೆಯಡಿ ಹೆಚ್ಚುವರಿ ಲೈಂಗಿಕ ದೌರ್ಜನ್ಯದ ಕಲಂಗಳನ್ನು ಸೇರ್ಪಡೆಗೊಳಿಸಿದ್ದಾರೆ. ಬಾಲಕಿ ನೀಡಿದ ಹೇಳಿಕೆಯ ಆಧಾರದ ಮೇಲೆ ತನಿಖೆ ಚುರುಕುಗೊಳಿಸಲಾಗಿದೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಕಡಬ ಮೂ
Jul 241 min read


ದೆಹಲಿಯಲ್ಲಿ ತೀವ್ರಗೊಂಡ ವಿದ್ಯಾರ್ಥಿ ಪ್ರತಿಭಟನೆ: ಮೊಬೈಲ್ ಇಂಟರ್ನೆಟ್ ಸ್ಥಗಿತ, ಬಿಗಿ ಪೊಲೀಸ್ ಬಂದೋಬಸ್ತ್
ರಾಜಧಾನಿ ನವದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಭಾರಿ ಜನಬೆಂಬಲ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಜಂತರ್ ಮಂತರ್ನ 1.5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಸುತ್ತಮುತ್ತ ಬಿಎನ್ಎಸ್ಎಸ್ ಸೆಕ್ಷನ್ 163 ಜಾರಿಗೊಳಿಸಿ ಕಟ್ಟೆಚ್ಚರ ವಹಿಸಲಾಗಿದೆ. ಪ್ರತಿಭಟನೆಯು 34ನೇ ದಿನಕ್ಕೆ ಕಾಲಿಟ್ಟಿದ್ದರೂ ಸರ್ಕಾರ ಮತ್ತು ಪ್ರತಿಭಟನಾಕಾರರ ನಡುವಿನ ಮಾತುಕತೆಗಳು ವಿಫಲಗೊಂಡಿವೆ. ಕೇಂದ್ರ ಸಚಿವ ಜಿತೇಂದ್ರ ಸಿಂ
Jul 241 min read


ನಾಳೆ (ಜು. 24) ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೊ ಅಲರ್ಟ್
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಮತ್ತು ಜಿಲ್ಲೆಯ ಎಲ್ಲಾ ITI ಮತ್ತು Diploma ಕಾಲೇಜುಗಳು (ಎಲ್ಲಾ ವಸತಿ ಕಾಲೇಜುಗಳೂ ಸೇರಿದಂತೆ)ನಾಳೆ ಜುಲೈ 24ರಂದು ರಜೆ ಘೋಷಿಸಿದ್ದಾರೆ.
Jul 241 min read


ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ 'ಫಾಸ್ಟ್ ಟ್ರ್ಯಾಕ್ ಕೋರ್ಟ್': ಪ್ರಧಾನಿ ಮೋದಿ ಅಭಯ
ದೇಶದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಪರೀಕ್ಷಾ ಅಕ್ರಮ ಹಾಗೂ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದ ಅಪರಾಧಿಗಳಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆ ಖಾತರಿಪಡಿಸಲು 'ತ್ವರಿತಗತಿ ನ್ಯಾಯಾಲಯಗಳನ್ನು' (Fast-Track Courts) ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಅವರು ಪ್ರಕಟಿಸಿದ್ದಾರೆ. ಸಾಮಾಜಿಕ ಜಾಲತಾಣ 'ಎಕ್ಸ್' (X) ನಲ್ಲಿ ಈ ಕುರಿತು ಸಂದೇಶ ಹಂಚಿಕೊಂಡಿರುವ ಪ್ರಧಾನಿಯವರು, ದೇಶದ ಯುವಜನತೆಯ ಹಿತಾಸಕ್ತಿ ಮತ್ತು ಭವಿಷ್ಯವೇ ತಮ್ಮ ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದಿದ್ದಾರೆ.
Jul 231 min read


ಕೌಟುಂಬಿಕ ಕಿರುಕುಳಕ್ಕೆ ವಿವಾಹಿತೆ ಬಲಿ: ಅತ್ತೆ, ಮಾವ, ನಾದಿನಿ ಬಂಧನ!
ಸುಳ್ಯ ತಾಲೂಕಿನಲ್ಲಿ ಕೌಟುಂಬಿಕ ಕಿರುಕುಳದಿಂದಾಗಿ ಫಾತಿಮತ್ ನಿಶಾನ ಎಂಬ ವಿವಾಹಿತೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಮಾವ ಸಿ.ಪಿ. ಅಳವಿ, ಅತ್ತೆ ಅಯಿಷಾ ಹಾಗೂ ನಾದಿನಿ ಫಸಿಲಾ ಅವರನ್ನು ಸುಳ್ಯ ಠಾಣೆ ಪೊಲೀಸರು ಜುಲೈ 22ರಂದು ಬಂಧಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದ ಫಾತಿಮತ್ ನಿಶಾನ ಅವರು ಜುಲೈ 18ರ ರಾತ್ರಿ ತಾಯಿಗೆ ಕರೆ ಮಾಡಿ, ಗಂಡನ ಮನೆಯವರಿಂದ ತಮಗೆ ಸತತವಾಗಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದರೆಂದು ದೂರಿನಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೃತರ ಕುಟುಂಬದವರು ಸುಳ್ಯ ಪೊಲೀಸ್ ಠಾಣ
Jul 231 min read


ವಾಟ್ಸಪ್ನಲ್ಲಿ ಮದುವೆ ಕಾರ್ಡ್ ಬಂತಾ? ಎಚ್ಚರ, ಅರಣ್ಯ ಅಧಿಕಾರಿಗೆ 9.96 ಲಕ್ಷ ರೂ. ವಂಚನೆ!
ವಾಟ್ಸಪ್ನಲ್ಲಿ ಅಪರಿಚಿತ ಸಂಖ್ಯೆಯಿಂದ ಬಂದ ಮದುವೆ ಆಹ್ವಾನ ಪತ್ರಿಕೆಯ ಫೈಲ್ ಓಪನ್ ಮಾಡಿದ ಸರ್ಕಾರಿ ಅಧಿಕಾರಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ 9.96 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಅರಣ್ಯ ಇಲಾಖೆಯ ಉದ್ಯೋಗಿ ರಮೇಶ್ ಬಾಬು ಅವರಿಗೆ ಜುಲೈ 14ರಂದು ವಾಟ್ಸಪ್ನಲ್ಲಿ ಅಪರಿಚಿತ ಸಂಖ್ಯೆಯಿಂದ ಆಹ್ವಾನ ಪತ್ರಿಕೆಯ ಸಂದೇಶ ಬಂದಿತ್ತು. ಅದನ್ನು ಪರಿಚಿತರದ್ದು ಎಂದು ನಂಬಿ ಅವರು ಫೈಲ್ ಡೌನ್ಲೋಡ್ ಮಾಡಿದ್ದಾರೆ. ಈ ರೀತಿಯ 'ಎಪಿಕೆ ಫೈಲ್' (APK File) ಕ್ಲಿಕ್ ಮಾಡುತ್ತಿದ್ದಂತೆ ಸೈಬರ್ ಕಳ್ಳರು ಮೊಬೈಲ್ ಹ್ಯಾಕ್ ಮಾಡಿ ಹಣ ದೋಚಿದ್ದಾರೆ. ಅಪರಿಚಿತ ಲಿಂಕ್ ಹಾಗೂ ಫೈಲ್ಗಳ ಕುರಿತು ಜ
Jul 231 min read


ಸೌಜನ್ಯ ಕೊಲೆ ಪ್ರಕರಣ: ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ತರಾಟೆ, ಆದೇಶ ಕಾಯ್ದಿರಿಸಿಕೆ
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ 14 ವರ್ಷಗಳ ಹಿಂದೆ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸುದೀರ್ಘ ವಿಚಾರಣೆ ನಡೆಸಿ ತನ್ನ ಆದೇಶವನ್ನು ಕಾಯ್ದಿರಿಸಿದೆ. ವಿಚಾರಣೆ ವೇಳೆ ಸಿಬಿಐ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೀಠವು, ಸರಿಯಾದ ತನಿಖೆ ನಡೆಸದೆ ಸಿಬ್ಬಂದಿ ಮತ್ತು ಹಣಕಾಸಿನ ಅಭಾವದ ನೆಪ ಹೇಳುತ್ತಿರುವುದನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಪ್ರಕರಣವನ್ನು ಎಸ್ಐಟಿಗೆ ವಹಿಸಲು ರಾಜ್ಯ ಸರ್ಕಾರ ಸಮ್ಮತಿಸಿದ್ದು, ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಗೆ ಅರ್ಜಿದಾರರು ಕೋರಿದ್ದಾರೆ. ತನಿಖಾ ಏಜೆನ್ಸಿ ಕುರಿತ
Jul 231 min read


ನಾಳೆ (ಜು. 23) ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ನಾಳೆ ಜುಲೈ 23ರಂದು ರಜೆ ಘೋಷಿಸಿದ್ದಾರೆ. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಜಿಲ್ಲಾಡಳಿತದ ಸೂ ಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.
Jul 221 min read


ಬಂಟ್ವಾಳದಲ್ಲಿ ಖಾಸಗಿ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು ಮೂವರಿಗೆ ಗಾಯ
ಮಂಗಳೂರು, ಜುಲೈ 22: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ಸಮೀಪ ಬುಧವಾರ ಖಾಸಗಿ ಶಾಲೆಯ ಬಸ್ ಮೇಲೆ ಬೃಹತ್ ಗಾತ್ರದ ಮರ ಏಕಾಏಕಿ ಉರುಳಿಬಿದ್ದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡವರಲ್ಲಿ ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು, ಓರ್ವ ವಿದ್ಯಾರ್ಥಿಯ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಕಲ್ಲಡ್ಕದ ಖಾಸಗಿ ಶಾಲೆಗೆ ಸೇರಿದ ಬಸ್ ವಿದ್ಯಾರ್ಥಿಗಳನ್ನು ಕರೆದುಕೊಂಡು ತೆರಳುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಏಕಾಏಕಿ ಬಸ್ ಮೇಲೆ ಉರುಳಿಬಿದ್ದಿದೆ. ಮರ ಬಿದ್ದ ರಭಸಕ್ಕೆ ಬಸ್ನ ಮೇ
Jul 221 min read


ವಾಟ್ಸಪ್ಗೆ ಮದುವೆ ಆಹ್ವಾನ: APK ಫೈಲ್ ತೆರೆದ ಸರ್ಕಾರಿ ಅಧಿಕಾರಿಯ ₹9.96 ಲಕ್ಷ ಮಾಯ!
ವಾಟ್ಸಪ್ಗೆ ಮದುವೆ ಆಹ್ವಾನ: APK ಫೈಲ್ ತೆರೆದ ಸರ್ಕಾರಿ ಅಧಿಕಾರಿ ₹9.96 ಲಕ್ಷ ಕಳೆದುಕೊಂಡರು ಬೆಂಗಳೂರು, ಜು. 22: ವಾಟ್ಸಪ್ನಲ್ಲಿ ಅಪರಿಚಿತ ಸಂಖ್ಯೆಯಿಂದ ಬಂದ ಮದುವೆ ಆಹ್ವಾನದ ಹೆಸರಿನ APK ಫೈಲ್ ಅನ್ನು ತೆರೆದ ಪರಿಣಾಮ ಅರಣ್ಯ ಇಲಾಖೆಯ ಸರ್ಕಾರಿ ಅಧಿಕಾರಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಸುಮಾರು ₹9.96 ಲಕ್ಷ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮಾಹಿತಿಯ ಪ್ರಕಾರ, ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಮೇಶ್ ಬಾಬು ಅವರಿಗೆ ಜುಲೈ 14ರ ಸಂಜೆ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ವಾಟ್ಸಪ್ನಲ್ಲಿ ಮದುವೆ ಆಹ್ವಾನದ ಸಂದೇಶ ಬಂದಿದೆ. ಅದು ಸ್ನೇಹಿತ ಅಥವಾ ಪರಿಚಿತರದ್
Jul 221 min read


2026-27ರ ಕಂಬಳ ವೇಳಾಪಟ್ಟಿ ಬಿಡುಗಡೆ: ಅಕ್ಟೋಬರ್ 18ರಿಂದ ಮೈಸೂರು ದಸರಾ ಕಂಬಳದೊಂದಿಗೆ ಸೀಸನ್ ಆರಂಭ!
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ 2026-27ನೇ ಸಾಲಿನ ಅಧಿಕೃತ ಕಂಬಳ ವೇಳಾಪಟ್ಟಿಯನ್ನು ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಬಿಡುಗಡೆ ಮಾಡಿದ್ದಾರೆ. ಈ ಬಾರಿಯ ಕಂಬಳ ಋತುವು ಅಕ್ಟೋಬರ್ 18 ಮತ್ತು 19ರಂದು ಸಾಂಸ್ಕೃತಿಕ ನಗರಿ ಮೈಸೂರು ದಸರಾ ಅಂಗವಾಗಿ ನಡೆಯುವ ಕಂಬಳದೊಂದಿಗೆ ಆರಂಭಗೊಳ್ಳಲಿದೆ. ನವೆಂಬರ್ 7ರಂದು ಪಣಪಿಲ, ನವೆಂಬರ್ 14ರಂದು ಸಾಣೂರು, ಡಿಸೆಂಬರ್ 19ರಂದು ಮಂಗಳೂರು ಹಾಗೂ ಜನವರಿ 23ರಂದು ಮೂಡುಬಿದಿರೆಯಲ್ಲಿ ಕಂಬಳ ಕೂಟಗಳು ನಡೆಯಲಿವೆ. 2027ರ ಜನವರಿ 30ರಂದು ಪುತ್ತೂರಿನ ಪ್ರಸಿದ್ಧ ಕೋಟಿಚೆನ್ನಯ ಜೋಡುಕರೆ ಕಂಬಳ ಹಾಗೂ ಮಾರ್ಚ್ 27ರಂದು ಉಪ್ಪಿ
Jul 221 min read


ತಿರುಮಲ ಭಕ್ತರಿಗೆ ಶೀಘ್ರ ಪ್ರಸಾದ: ಕ್ಯೂಲೈನ್ಗಳಲ್ಲಿ 'ಕನ್ವೇಯರ್ ಬೆಲ್ಟ್' ತಂತ್ರಜ್ಞಾನ ಜಾರಿ!
ತಿರುಮಲಕ್ಕೆ ಆಗಮಿಸುವ ಲಕ್ಷಾಂತರ ಭಕ್ತಾದಿಗಳಿಗೆ ಶೀಘ್ರ ಹಾಗೂ ಸುಲಭವಾಗಿ ಆಹಾರ-ಪಾನೀಯ ತಲುಪಿಸಲು ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (TTD) ಹೊಸ ತಂತ್ರಜ್ಞಾನಾಧಾರಿತ ಹೆಜ್ಜೆಯನ್ನಿಟ್ಟಿದೆ. ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ಕಾಯುವ ಭಕ್ತರಿಗೆ ‘ಆಹಾರ ಪೂರೈಸುವ ಕನ್ವೇಯರ್ ವ್ಯವಸ್ಥೆ’ಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. ಪ್ರಸ್ತುತ ಟಿಟಿಡಿಯ ಆಕ್ಟೋಪಸ್ ಕಟ್ಟಡದಿಂದ ಕೃಷ್ಣ ತೇಜ ಅತಿಥಿ ಗೃಹದವರೆಗೆ 3.5 ಕಿ.ಮೀ. ಉದ್ದದ ಸಾಲಿನಲ್ಲಿ ನಿರಂತರವಾಗಿ ಅನ್ನಪ್ರಸಾದ ವಿತರಿಸಲಾಗುತ್ತಿದೆ. ಮಾನವ ಶ್ರಮವನ್ನು ಕಡಿಮೆ ಮಾಡಿ, ಯಂತ್ರಗಳ ನೆರವಿನಿಂದ ಪ್ರಸಾದ ವಿತರಣೆಯನ್ನು ಇನ್ನಷ್ಟು ವೇಗಗೊಳಿಸಲು
Jul 211 min read


ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ; ಗರ್ಭಿಣಿಯಾದ ಪ್ರಕರಣದಲ್ಲಿ ಆಟೋ ಚಾಲಕ ಬಂಧನ
ಬೆಳ್ತಂಗಡಿ, ಜು. 21: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದಡಿ ಆಟೋ ರಿಕ್ಷಾ ಚಾಲಕನನ್ನು ಬೆಳ್ತಂಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಪ್ಪಿನಂಗಡಿ ಮೂಲದ ಶುಭರಾಜ್ (28) ಎಂದು ಗುರುತಿಸಲಾಗಿದೆ. ಆರೋಪಿಯು ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಪರಿಚಯ ಬೆಳೆಸಿ, ಆಕೆಯನ್ನು ಪುಸಲಾಯಿಸಿ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಅಲ್ಲದೆ, ಈ ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದನೆಂಬ ಆರೋಪವೂ ಕೇಳಿಬಂದಿದೆ. ಇತ್ತೀಚೆಗೆ ಬಾಲಕಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನ
Jul 211 min read


ಸುಳ್ಯ: ವಿವಾಹಿತೆ ಅನುಮಾನಾಸ್ಪದ ಸಾವು; ಅತ್ತೆ, ಮಾವನ ವಿರುದ್ಧ ಕೊಲೆ ಆರೋಪ
ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದ ಪುತ್ತೂರು ಕೆದಂಬಾಡಿಯ ಫಾತಿಮತ್ ನಿಶಾನ ಎಂಬುವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಜುಲೈ 18ರ ರಾತ್ರಿ ತಾಯಿಗೆ ಕರೆ ಮಾಡಿದ್ದ ನಿಶಾನಾ, ತನಗೆ ಗಂಡನ ಮನೆಯವರು ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿರುವುದಾಗಿ ತಿಳಿಸಿದ್ದರು. ಇದೇ ವೇಳೆ ಫೋನ್ ಕಸಿದುಕೊಂಡ ಮಾವ ಅಲವಿ, ಆಕೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರೆಂದು ಆರೋಪಿಸಲಾಗಿದೆ. ಪೋಷಕರು ಸ್ಥಳಕ್ಕೆ ತೆರಳುವಷ್ಟರಲ್ಲಿ ನಿಶಾನಾ ಮೃತಪಟ್ಟಿದ್ದರು. ಕೌಟುಂಬಿಕ ಕಿರುಕುಳ ಹಾಗೂ ಹತ್ಯೆ ಆರೋಪದಡಿ ಮೃತರ ಮಾವ ಅಲವಿ, ಅತ್ತೆ ಆಯಿಷ ಮತ್ತು ನಾದಿನಿ ಫಸೀಲಾ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ (
Jul 211 min read
Archive
bottom of page



