top of page
News Articles
Sathyapatha News Plus


ಕುಕ್ಕೆ ಸುಬ್ರಹ್ಮಣ್ಯ: ಚಂಪಾಷಷ್ಟಿ ಮಹೋತ್ಸವ ಹಿನ್ನಲೆ ಮದ್ಯದಂಗಡಿ ಮುಚ್ಚಲು ಡಿಸಿ ಆದೇಶ
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಪ್ರಸಿದ್ಧ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಡಿಸೆಂಬರ್ 2 ರವರೆಗೆ ನಡೆಯಲಿದ್ದು, ಜಾತ್ರೆಯ ಮುಖ್ಯ ಕಾರ್ಯಕ್ರಮಗಳ ಅಂಗವಾಗಿ ನವೆಂಬರ್ 25 ರಂದು ಪಂಚಮಿ ರಥೋತ್ಸವ ಹಾಗೂ ತೈಲಾಭ್ಯಂಜನ, 26 ರಂದು ಚಂಪಾಷಷ್ಠಿ ಮಹಾರಥೋತ್ಸವ ಆಯೋಜಿಸಲಾಗಿದೆ. ಈ ಎರಡು ದಿನಗಳಲ್ಲಿ ಸುಮಾರು 50 ರಿಂದ 60 ಸಾವಿರ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆಯಿದೆ. ಭಕ್ತರ ಭದ್ರತೆ, ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನವೆಂಬರ್ 25 ಬೆಳಿಗ್ಗೆ 6 ಗಂಟೆಯಿಂದ 26ರ ರಾತ್ರಿ 12 ಗಂಟೆಯವರೆಗೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ
Nov 25, 20251 min read


ಪಡೀಲ್-ಕಣ್ಣೂರು ಮುಖ್ಯ ಪೈಪ್ಲೈನ್ ಹಾನಿ: ಮಂಗಳೂರು ನಗರಕ್ಕೆ ಎರಡು ದಿನದಿಂದ ನೀರು ಪೂರೈಕೆ ಸ್ಥಗಿತ
ಮಂಗಳೂರು: ನಗರದ ವಿವಿಧ ಪ್ರದೇಶಗಳಿಗೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ಲೈನ್ ಪಡೀಲ್-ಕಣ್ಣೂರು ಬಳಿ ಕಾಮಗಾರಿಯ ವೇಳೆ ಹಾನಿಗೊಳಗಾದ ಕಾರಣ ಸೋಮವಾರ ಮತ್ತು ಮಂಗಳವಾರ ನಗರದಲ್ಲಿ ನೀರು ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ. ಈ ಅನಿರೀಕ್ಷಿತ ಅಡಚಣೆಯಿಂದಾಗಿ ಮಂಗಳೂರು ನಗರದಾದ್ಯಂತ ತೀವ್ರ ನೀರಿನ ಸಮಸ್ಯೆ ತಲೆದೋರಿದ್ದು, ಜನಜೀವನ ಅಸ್ತವ್ಯಸ್ತಗೊಂಡು ಜನರು ಪರದಾಡುವಂತಾಗಿದೆ. ತುಂಬೆ ಡ್ಯಾಂನಿಂದ ಪಡೀಲ್ ಟ್ಯಾಂಕ್ಗೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ಲೈನ್ 18 ಅಡಿ ಆಳದಲ್ಲಿ ಹಾದುಹೋಗಿದ್ದು, ಈ ಪೈಪ್ಲೈನ್ಗೆ ಹಾನಿಯಾಗಿರುವುದು ಸಮಸ್ಯೆಗೆ ಮೂಲ ಕಾರಣವಾಗಿದೆ. ಪಡೀಲ್ ಪಂಪೌಸ್ನಿಂದ ನೀರು ಪಡೆಯ
Nov 19, 20251 min read


ಕಡಬ: ಪೊಲೀಸ್ ಉಪನಿರೀಕ್ಷಕರ ವರ್ಗಾವಣೆ
ಕಡಬ: ಮಂಗಳೂರು ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ (ಐಜಿಪಿ) ಅಮಿತ್ ಸಿಂಗ್ ಐಪಿಎಸ್ ಅವರು ನವೆಂಬರ್ 14 ರಂದು ಆದೇಶ ಹೊರಡಿಸಿದ್ದು, ಕಡಬ ಪೊಲೀಸ್ ಠಾಣೆಯ ಎಸ್.ಐ. ಅಭಿನಂದನ್ ಎ.ಎಸ್. ಸೇರಿದಂತೆ ಮೂವರು ಪೊಲೀಸ್ ಉಪನಿರೀಕ್ಷಕರನ್ನು (ಪಿಎಸ್ಐ) ವರ್ಗಾವಣೆಗೊಳಿಸಿದ್ದಾರೆ. ಈ ವರ್ಗಾವಣೆಯು ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಕೂಡಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಬಂಟ್ವಾಳ ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐ ಗುಣಪಾಲ ಜೆ. ಅವರನ್ನು ಪುತ್ತೂರು ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದ್ದು, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿದ್ದ ಎಸ್.ಐ. ಜ
Nov 14, 20251 min read


ಕುದ್ಮಾರು ಗ್ರಾಮದ ಶಾಂತಿಮೊಗೇರು ಅಣೆಕಟ್ಟಿನ ಹಲಗೆಗಳ ನಿರ್ವಹಣೆಗೆ ಸ್ಥಳೀಯರ ಆಕ್ರೋಶ
ಕುದ್ಮಾರು ಗ್ರಾಮದ ಶಾಂತಿಮೊಗೇರು ಹೊಳೆಗೆ ಅಡ್ಡಲಾಗಿ ನಿರ್ಮಿಸಲಾದ ಅಣೆಕಟ್ಟಿನ ನಿರ್ವಹಣೆಯ ಬಗ್ಗೆ ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಣೆಕಟ್ಟಿನ ಪ್ರಮುಖ ಭಾಗವಾಗಿರುವ, ನೀರನ್ನು ನಿಯಂತ್ರಿಸಲು ಬಳಸುವ ಮರದ ಅಡ್ಡ ಹಲಗೆಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸುತ್ತಿಲ್ಲ ಮತ್ತು ಅವುಗಳ ಜೋಪಾನದ ವ್ಯವಸ್ಥೆಯು ಸಮರ್ಪಕವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹಲಗೆಗಳು ತುಕ್ಕು ಹಿಡಿದು ಹಾಳಾಗುತ್ತಿದ್ದು, ಇದರಿಂದ ಅಣೆಕಟ್ಟಿನ ಮೂಲ ಉದ್ದೇಶಕ್ಕೆ ಧಕ್ಕೆಯಾಗುತ್ತಿದೆ ಎಂಬುದು ಗ್ರಾಮಸ್ಥರ ಪ್ರಮುಖ ಅಳಲಾಗಿದೆ. ಅಣೆಕಟ್ಟಿಗೆ ಅಳವಡಿಸಬೇಕಾದ ಹಲಗೆಗಳ ಪೈಕಿ ಬಹುತೇಕ ಹಲಗೆಗ
Nov 14, 20251 min read


ಮಂಗಳೂರು ನಂತೂರ್ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಅಪಾಯ ತಪ್ಪಿಸಿದ ಸ್ಥಳೀಯರು
ಮಂಗಳೂರು ನಗರದ ನಂತೂರ್ ಜಂಕ್ಷನ್ ಸಮೀಪ ಚಲಿಸುತ್ತಿದ್ದ ಬೆಂಗಳೂರು ಆರ್ಟಿಒ ನೋಂದಣಿಯ ಬಿಳಿ ಬಣ್ಣದ ಹುಂಡೈ ವೆರ್ನಾ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಇಂದು (ಶುಕ್ರವಾರ) ಮಧ್ಯಾಹ್ನ ಸಂಭವಿಸಿದೆ. ಕಾರು ರಸ್ತೆಯಲ್ಲಿ ಸಾಗುತ್ತಿದ್ದಾಗ ಅದರ ಎಂಜಿನ್ನಿಂದ ದಟ್ಟವಾದ ಹೊಗೆ ಆವರಿಸಲು ಪ್ರಾರಂಭಿಸಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಧಗಧಗನೆ ಹೊತ್ತಿಕೊಂಡಿದೆ. ತಕ್ಷಣವೇ ಕಾರಿನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸಮಯಪ್ರಜ್ಞೆ ಮೆರೆದು ವಾಹನದಿಂದ ಹೊರಬಂದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಈ ದಿಢೀರ್ ಬೆಂಕಿ ಅವಘಡದಿಂದ ರಸ್
Nov 14, 20251 min read


ಕಡಬ: ಕಾಡಾನೆ ಭೀತಿಯಲ್ಲಿ ಗ್ರಾಮಸ್ಥರು
ಕಡಬ ತಾಲೂಕಿನ ಕೊಣಾಜೆ ಗ್ರಾಮದ ಪಟ್ಟೆ ಸಮೀಪ ಎರಡು ದಿನಗಳ ಹಿಂದೆ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಮತ್ತೆ ಆತಂಕ ಮನೆ ಮಾಡಿದೆ. ಕೋನಡ್ಕ ಅಂಗನವಾಡಿಯ ಹಿಂಭಾಗದ ಮೂಲಕ ಆನೆ ಸಂಚಾರ ಮಾಡಿದ್ದು, ಈ ಬಗ್ಗೆ ತಡವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ಅರಣ್ಯಾಧಿಕಾರಿಗಳು ಈಗಾಗಲೇ ಈ ಪ್ರದೇಶದ ಮೇಲೆ ನಿಗಾ ವಹಿಸಿದ್ದು, ಕಾಡಾನೆಗಳ ಸಂಚಾರದ ಕುರಿತು ಕಾಲಕಾಲಕ್ಕೆ ಜನರಿಗೆ ಮಾಹಿತಿ ನೀಡುವ ಕಾರ್ಯವನ್ನು ಮುಂದುವರಿಸಿದ್ದಾರೆ. ಆದರೂ, ಅರಣ್ಯದಂಚಿನ ಗ್ರಾಮಗಳಲ್ಲಿ ಕಾಡಾನೆಗಳ ನಿರಂತರ ಓಡಾಟದಿಂದಾಗಿ ಗ್ರಾಮದ ನಿವಾಸಿಗಳು ಜೀವ ಭಯದಲ್ಲೇ ತಮ್ಮ ದೈನಂದಿನ ಚಟುವಟಿಕೆಗಳನ್ನು ನ
Nov 12, 20251 min read


ಕಡಬ: ನೇಣಿಗೆ ಕೊರಳೊಡ್ಡಿದ 14ರ ಬಾಲಕ
ಶಾಲಾ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದಲ್ಲಿ ನ.6 ರಂದು ನಡೆದಿದೆ. ನೂಜಿಬಾಳ್ತಿಲ ಗ್ರಾಮದ ಖಂಡಿಗದ ಲೋಕೇಶ್ ಎಂಬವರ ಪುತ್ರ ಗಗನ್(14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಒಂಭತ್ತನೇ ತರಗತಿಯಲ್ಲಿ ಓದುತ್ತಿದ್ದ ಗಗನ್ ಗುರುವಾರ ದಿನ ಎಂದಿನಂತೆ ಶಾಲೆಗೆ ತೆರಳಿದ್ದ . ಸಂಜೆ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ
Nov 6, 20251 min read


ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಸಮರ್ಪಣೆಯಾಗಲಿರುವ ಬೆಳ್ಳಿರಥಕ್ಕೆ ಭವ್ಯ ಸ್ವಾಗತ
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆಯಾಗಲಿರುವ ಭವ್ಯ ಬೆಳ್ಳಿರಥವು ಇಂದು (ನ. 5) ಕುಕ್ಕೆ ಕ್ಷೇತ್ರಕ್ಕೆ ಪುರಪ್ರವೇಶ ಮಾಡಲಿದೆ. ಕುರುಂಜಿಯ ಡಾ. ಕೆ.ವಿ. ರೇಣುಕಾಪ್ರಸಾದ್ ಮತ್ತು ಕುಟುಂಬದವರಿಂದ ಸಮರ್ಪಣೆಯಾಗಲಿರುವ ಈ ರಥವು ಕೋಟೇಶ್ವರದಿಂದ ಹೊರಟು ಮಂಗಳವಾರ ರಾತ್ರಿ ಸುಳ್ಯ ತಲುಪಿದ್ದು, ಅಲ್ಲಿ ರಥಕ್ಕೆ ಭಕ್ತರು ಅದ್ದೂರಿ ಸ್ವಾಗತ ನೀಡಿದ್ದಾರೆ. ಸುಳ್ಯದಲ್ಲಿ ರಾತ್ರಿ ವಾಸ್ತವ್ಯ ಹೂಡಿದ ರಥವು ಇಂದು ಬೆಳಗ್ಗೆ ಸುಳ್ಯದಿಂದ ಸುಬ್ರಹ್ಮಣ್ಯದತ್ತ ಪ್ರಯಾಣ ಮುಂದುವರಿಸಲಿದೆ. ಬೆಳ್ಳಿರಥವು ಇಂದು ಸುಳ್ಯದ ಕಾಂತಮಂಗಲದಿಂದ ಹೊರಟು ಸುಳ್ಯ, ಪೈಚಾರು, ಸೋಣಂಗೇರಿ, ದುಗ್ಗಲಡ್ಕ, ಎಲ
Nov 5, 20251 min read
Archive
bottom of page



