ಮುಂಡಗೋಡು: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಪೊಲೀಸರು ಮಾದಕ ದ್ರವ್ಯ ಮಾರಾಟ ಜಾಲದ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಸುಮಾರು 8 ಲಕ್ಷ ರೂಪಾಯಿ ಮೌಲ್ಯದ 781 ಗ್ರಾಂ ನಿಷೇಧಿತ ಮಾದಕ ವಸ್ತು 'ಚರಸ್' ಅನ್ನು ವಶಪಡಿಸಿಕೊಂಡು, ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮುಂಡಗೋಡಿನ ಸುಭಾಷ್ ನಗರದ ನಿವಾಸಿ, ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಸಚಿನ್ ಟೇಕಬಹುದ್ದೂರ್ ಗೋರ್ಖಾ (26) ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆಗಿಳಿದ ಮುಂಡಗೋಡು ಠಾಣೆಯ ಸಿ.ಪಿ.ಐ ರಂಗನಾಥ್ ನೀಲಮ್ಮನವರ್ ಹಾ
ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಫರೀದಾಬಾದ್ ಸ್ಫೋಟಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಜಂಟಿ ಭದ್ರತಾ ಪಡೆಗಳು ಮೌಲ್ವಿ ದಂಪತಿಯನ್ನು ಬಂಧಿಸಿವೆ. ಶ್ರೀನಗರ ಪೊಲೀಸ್ ಮತ್ತು ಕೌಂಟರ್ ಇಂಟೆಲಿಜೆನ್ಸ್ ಕಾಶ್ಮೀರ (CIK) ಜಂಟಿ ಕಾರ್ಯಾಚರಣೆ ನಡೆಸಿ, ಮೌಲ್ವಿ ಇಮಾಮ್ ಇರ್ಫಾನ್ ಅಹ್ಮದ್ ವಾಗೆಯನ್ನು ವಶಕ್ಕೆ ಪಡೆದಿದ್ದು, ಆತನ ಮನೆಯಿಂದ ಐದು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆತನ ಪತ್ನಿಯು ಕೂಡ ಮೂಲಭೂತವಾದಿಗಳೊಂದಿಗೆ ಸಂಪರ್ಕ ಹೊಂದಿರುವ ಶಂಕೆಯ ಮೇಲೆ ಆಕೆಯನ್ನು ಬಂಧಿಸಲಾಗಿದೆ. ಈ ಬಂಧನವು ಈಶಾನ್ಯ ಭಾರತದಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಹೊಸ ನಂಟ
ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಗೊಂಡು ಕಂಗೊಳಿಸುತ್ತಿರುವ ಮಂಗಳೂರಿನ ಕದ್ರಿ ಪಾರ್ಕ್ ರಸ್ತೆಗೆ ಇನ್ಮುಂದೆ 'ಟೋಲ್' ಮಾದರಿಯ ಪಾರ್ಕಿಂಗ್ ಶುಲ್ಕ ವಿಧಿಸಲು ಸ್ಮಾರ್ಟ್ ಸಿಟಿ ನಿರ್ಧರಿಸಿದೆ. ಸಾವಿರಾರು ಮಂದಿ ಪ್ರತಿದಿನ ವಾಯು ವಿಹಾರ ಹಾಗೂ ವಿಶ್ರಾಂತಿಗಾಗಿ ಭೇಟಿ ನೀಡುವ ಕಡಲ ತಡಿಯ ಈ ಫೇವರೇಟ್ ಸ್ಪಾಟ್ಗೆ ಜನವರಿಯಿಂದ ಶುಲ್ಕದ ಬಿಸಿ ತಟ್ಟಲಿದೆ. ಪಾರ್ಕ್ನ ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಟೋಲ್ ಮಾದರಿಯ ವ್ಯವಸ್ಥೆ ಜಾರಿಗೆ ತರಲು ತೀರ್ಮಾನಿಸಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧಕ್ಕೆ ಕಾರಣವಾಗಿದೆ. ಕದ್ರಿ ಪಾರ್ಕ್ ರಸ್ತೆಯಲ್ಲಿ ನೂತ
"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.