108 ಆ್ಯಂಬುಲೆನ್ಸ್ ಸೇವೆಗೆ ಮುಷ್ಕರದ ಬಿಸಿ?; ಇಂದು ರಾತ್ರಿ 8ರಿಂದ ಸೇವೆ ಸ್ಥಗಿತದ ಎಚ್ಚರಿಕೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 108 ಆ್ಯಂಬುಲೆನ್ಸ್ ಸಿಬ್ಬಂದಿ ಇಂದು ರಾತ್ರಿ 8 ಗಂಟೆಯಿಂದ ಸೇವೆ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ್ದಾರೆ. ಬೇಡಿಕೆಗಳಿಗೆ ಸ್ಪಂದನೆ ದೊರೆಯದಿದ್ದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಸಿಬ್ಬಂದಿ ಘೋಷಿಸಿದ್ದಾರೆ.

ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ 108 ಆ್ಯಂಬುಲೆನ್ಸ್ ಸೇವೆ ಅತ್ಯಂತ ಮಹತ್ವದ್ದಾಗಿರುವ ಹಿನ್ನೆಲೆಯಲ್ಲಿ, ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಸಿಬ್ಬಂದಿಯ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ಆಗ್ರಹಿಸಿದ್ದಾರೆ.
“ಸಾರ್ವಜನಿಕರ ಜೀವಕ್ಕೆ ಸಂಬಂಧಿಸಿದ ತುರ್ತು ಸೇವೆ ಸ್ಥಗಿತವಾಗದಂತೆ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಅವರು ಒತ್ತಾಯಿಸಿದ್ದಾರೆ.







Comments