;
top of page

11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿ ಮಂಗಳೂರು ಸಿಸಿಬಿ ವಶಕ್ಕೆ

Jul 31
1 min read

೨೦೧೫ರಲ್ಲಿ ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಳೆದ ೧೧ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂකಿನ ಮಲ್ಲೇನಹಳ್ಳಿ ನಿವಾಸಿ ಚುಂಕಿ ಆಕಾಶಭವನ ಅಲಿಯಾಸ್ ಸಂತೋಷ್ ಎಸ್ (೩೪) ಬಂಧಿತ ಆರೋಪಿಯಾಗಿದ್ದಾನೆ.

​೨೦೧೫ರಲ್ಲಿ ಆಕಾಶಭವನದಲ್ಲಿ ನಡೆದ ಮದುವೆಯ ಮದರಂಗಿ ಶಾಸ್ತ್ರದ ವೇಳೆ ಅಶೋಕ ಕುಮಾರ ಕೊಟ್ಟಾರಿ ಎಂಬವರ ಮೇಲೆ ಆರೋಪಿ ಸಂತೋಷ್ ತನ್ನ ಸಹಚರರೊಂದಿಗೆ ಸೇರಿ ತಲವಾರಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದನು. ಈ ಭೀಕರ ದಾಳಿಯ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು. ಅಂದಿನಿಂದ ಆರೋಪಿಯು ಬಂಧನದಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದನು.

​ಆರೋಪಿಯ ವಿರುದ್ಧ ನ್ಯಾಯಾಲಯ ಎಲ್ಪಿಸಿ ವಾರಂಟ್ ಹೊರಡಿಸಿತ್ತು. ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ಜುಲೈ ೨೯ ರಂದು ಹಾವೇರಿ ಜಿಲ್ಲೆಯ ಚಿಕ್ಕೆರೂರು ಎಂಬಲ್ಲಿ ಆತನನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮಕ್ಕಾಗಿ ಕಾವೂರು ಠಾಣೆಗೆ ಹಸ್ತಾಂತರಿಸಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page