;
top of page

ಕಡಬ: ನೇಣಿಗೆ ಕೊರಳೊಡ್ಡಿದ 14ರ ಬಾಲಕ

  • Nov 6, 2025
  • 1 min read

ಶಾಲಾ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದಲ್ಲಿ ನ.6 ರಂದು ನಡೆದಿದೆ.


ನೂಜಿಬಾಳ್ತಿಲ ಗ್ರಾಮದ ಖಂಡಿಗ‌ದ ಲೋಕೇಶ್ ಎಂಬವರ ಪುತ್ರ ಗಗನ್(14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಒಂಭತ್ತನೇ ತರಗತಿಯಲ್ಲಿ ಓದುತ್ತಿದ್ದ ಗಗನ್ ಗುರುವಾರ ದಿನ ಎಂದಿನಂತೆ ಶಾಲೆಗೆ ತೆರಳಿದ್ದ . ಸಂಜೆ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.


ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page