;
top of page

ಕರ್ನಾಟಕದಲ್ಲಿ 15,000 ಶಿಕ್ಷಕರ ನೇಮಕಾತಿ: ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ

Aug 13
1 min read

ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಶಿಕ್ಷಣ ಇಲಾಖೆ ಭರ್ಜರಿ ಅವಕಾಶ ನೀಡಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 15,000 ಶಿಕ್ಷಕರ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆಗಸ್ಟ್ 18, 2026ರಿಂದ ಸೆಪ್ಟೆಂಬರ್ 7, 2026ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.



ಹುದ್ದೆಗಳ ವಿವರ


ಕಲ್ಯಾಣ ಕರ್ನಾಟಕ – 6,967 ಹುದ್ದೆಗಳು

ಪದವೀಧರ ಪ್ರಾಥಮಿಕ ಶಿಕ್ಷಕರು (GPT): 3,228

ಪ್ರೌಢಶಾಲಾ ಸಹ ಶಿಕ್ಷಕರು (HSTR): 2,214

ಪ್ರಾಥಮಿಕ ಶಾಲಾ ಶಿಕ್ಷಕರು (PST): 800

ದೈಹಿಕ ಶಿಕ್ಷಣ ಶಿಕ್ಷಕರು: 425

ಗಣಕಯಂತ್ರ ವಿಜ್ಞಾನ ಶಿಕ್ಷಕರು: 300

ಉಳಿದ ಮೂಲ ವೃಂದ – 8,033 ಹುದ್ದೆಗಳು

ಪದವೀಧರ ಪ್ರಾಥಮಿಕ ಶಿಕ್ಷಕರು (GPT): 5,272

ಪ್ರೌಢಶಾಲಾ ಸಹ ಶಿಕ್ಷಕರು: 2,286

ಪ್ರಾಥಮಿಕ ಶಾಲಾ ಶಿಕ್ಷಕರು (PST): 100

ದೈಹಿಕ ಶಿಕ್ಷಣ ಶಿಕ್ಷಕರು: 175

ಗಣಕಯಂತ್ರ ವಿಜ್ಞಾನ ಶಿಕ್ಷಕರು: 200


ಪ್ರಮುಖ ದಿನಾಂಕಗಳು


ಅರ್ಜಿ ಆರಂಭ: 18-08-2026

ಅರ್ಜಿ ಸಲ್ಲಿಸಲು ಕೊನೆಯ ದಿನ: 07-09-2026

ಸ್ಪರ್ಧಾತ್ಮಕ ಪರೀಕ್ಷೆ: 05-10-2026ರಿಂದ ಆರಂಭ; ಜಿಲ್ಲಾವಾರು ದಿನಾಂಕಗಳಲ್ಲಿ ಪರೀಕ್ಷೆ ನಡೆಯಲಿದೆ.

ಅರ್ಹತೆ ಮತ್ತು ವಯೋಮಿತಿ

ಅಭ್ಯರ್ಥಿಗಳು ತಾವು ಹೊಂದಿರುವ ಶೈಕ್ಷಣಿಕ ಅರ್ಹತೆ ಹಾಗೂ ವಿಷಯಕ್ಕೆ ಅನುಗುಣವಾಗಿ ಹುದ್ದೆ ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಬೇಕು. ಕನಿಷ್ಠ 21 ವರ್ಷ ವಯಸ್ಸು ಕಡ್ಡಾಯವಾಗಿದ್ದು, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ಇದೆ. ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದಂತೆ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಹಿಂದುಳಿದ ವರ್ಗ: ₹750

ಎಸ್‌ಸಿ, ಎಸ್‌ಟಿ ಮತ್ತು ವಿಶೇಷ ಚೇತನ ಅಭ್ಯರ್ಥಿಗಳು: ₹500

ಅರ್ಜಿ ಸಲ್ಲಿಸುವ ವಿಧಾನ

ಅರ್ಹ ಅಭ್ಯರ್ಥಿಗಳು ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಬೇಕು. ಅಂಚೆ ಅಥವಾ ಖುದ್ದಾಗಿ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಅರ್ಜಿ ಸಲ್ಲಿಸುವ ವೇಳೆ ರಚಿಸುವ User Name ಮತ್ತು Password ಅನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು. ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಇದು ಅಗತ್ಯವಾಗಿರುತ್ತದೆ.

ಅರ್ಜಿ ಶುಲ್ಕವನ್ನು Internet Banking, Credit Card, Debit Card ಅಥವಾ ನೆಟ್‌ವರ್ಕಿಂಗ್ ಚಲನ್ ಮೂಲಕ ಪಾವತಿಸಬಹುದು.

ಒಬ್ಬ ಅಭ್ಯರ್ಥಿಯು ಒಂದು ವೃಂದದ ಒಂದು ಹುದ್ದೆಗೆ ಒಂದು ಜಿಲ್ಲೆಯಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು. ಆದರೆ ಅರ್ಹತೆ ಹೊಂದಿದ್ದರೆ PST, GPSTR, HSTR ಸೇರಿದಂತೆ ಬೇರೆ ಬೇರೆ ವೃಂದಗಳ ಹುದ್ದೆಗಳಿಗೆ ಪ್ರತ್ಯೇಕ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಲು ಅವಕಾಶವಿದೆ.

ಅಭ್ಯರ್ಥಿಗಳು ಕೊನೆಯ ದಿನದವರೆಗೆ ಕಾಯದೆ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಉತ್ತಮ. ಜಿಲ್ಲಾವಾರು ಅಧಿಸೂಚನೆಗಳನ್ನು ಕರ್ನಾಟಕ ಸರ್ಕಾರದ ಇ-ರಾಜ್ಯಪತ್ರದ ಅಧಿಕೃತ ಪೋರ್ಟಲ್‌ನಲ್ಲಿ ಪರಿಶೀಲಿಸಬಹುದು.



ಜಿಲ್ಲಾವಾರು Notification ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: https://erajyapatra.karnataka.gov.in/(S(nqx2j5bupd24y5umblxhrwe2))/RecentUploads.aspx?Category=6

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page