;
top of page

ಒಂದನೇ ತರಗತಿ ದಾಖಲಾತಿ ವಯೋಮಿತಿ ಆದೇಶ ಮರುಪರಿಶೀಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

  • May 21
  • 1 min read

ಒಂದನೇ ತರಗತಿ ದಾಖಲಾತಿಯ ವಯೋಮಿತಿಗೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿದ್ದ ಆದೇಶವನ್ನು ಮರುಪರಿಶೀಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಮಹತ್ವದ ಆದೇಶ ನೀಡಿದೆ. ಶಿಕ್ಷಣ ಇಲಾಖೆಯು ಹೊರಡಿಸಿದ್ದ ಹೊಸ ವಯೋಮಿತಿ ನಿಯಮವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ರಜಾಕಾಲೀನ ಏಕಸದಸ್ಯ ಪೀಠವು ಈ ನಿರ್ದೇಶನ ನೀಡಿದೆ.

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಸರ್ಕಾರದ ಈ ನಿರ್ಧಾರದಿಂದ ಸುಮಾರು 5 ಲಕ್ಷ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಈಗಾಗಲೇ ಪೂರ್ವ ಪ್ರಾಥಮಿಕ ಶಿಕ್ಷಣ ಪೂರೈಸಿರುವ ಮಕ್ಕಳು ಹೊಸ ನಿಯಮದಿಂದಾಗಿ ಮತ್ತೆ ಯುಕೆಜಿ ಓದಬೇಕಾದ ಪರಿಸ್ಥಿತಿ ಬಂದಿದೆ. ಆದ್ದರಿಂದ 5 ವರ್ಷ 5 ತಿಂಗಳು ತುಂಬಿರುವ ಮಕ್ಕಳಿಗೂ ಒಂದನೇ ತರಗತಿ ದಾಖಲಾತಿಗೆ ಅವಕಾಶ ನೀಡಬೇಕು ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಅಡ್ವಕೇಟ್ ಜನರಲ್, ಸಮಯಾವಕಾಶ ನೀಡಿದರೆ ವಯೋಮಿತಿ ವಿಚಾರವನ್ನು ಮರುಪರಿಶೀಲಿಸಿ ಹೊಸ ಆದೇಶ ಹೊರಡಿಸುವುದಾಗಿ ತಿಳಿಸಿದರು. ಈ ಹಿನ್ನೆಲೆಯಲ್ಲಿ, ವಯೋಮಿತಿ ಸಡಿಲಿಕೆ ಕುರಿತು ಪರಿಶೀಲನೆ ನಡೆಸಿ ಒಂದು ವಾರದೊಳಗೆ ಸೂಕ್ತ ಆದೇಶ ಪ್ರಕಟಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ಸೂಚಿಸಿದ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page