;
top of page

ರಾಜ್ಯದ ಹಲವೆಡೆ ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆ ಮುನ್ಸೂಚನೆ

  • Mar 16
  • 1 min read

ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಾರ್ಚ್ 16ರಿಂದಲೇ ಮಳೆ ಆರಂಭವಾಗಲಿದ್ದು, ಮಾ. 21ರಂದು ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಚಿಕ್ಕಮಗಳೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ವರ್ಷಧಾರೆಯಾಗಲಿದ್ದು, ಕೊಪ್ಪಳ, ವಿಜಯಪುರ ಹಾಗೂ ದಾವಣಗೆರೆ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ.

ಮಾರ್ಚ್ 18ರಿಂದ ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಮಳೆಯ ನಿರೀಕ್ಷೆಯಿದ್ದು, ಮಾ. 19ರಿಂದ ಚಿತ್ರದುರ್ಗದಲ್ಲಿ ಸಾಧಾರಣ ಮಳೆಯಾಗಲಿದೆ. ಇದರೊಂದಿಗೆ ಬೀದರ್, ಕಲಬುರಗಿ, ರಾಯಚೂರು ಸೇರಿದಂತೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ವಾತಾವರಣದಲ್ಲಿನ ಬದಲಾವಣೆಯಿಂದಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಅಂದಾಜಿಸಲಾಗಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page