20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರ ಬಂಧನ

ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹೆಚ್ಚಿನ ಲಾಭದ ಆಮಿಷ ಒಡ್ಡಿ ಕೇರಳದ ಯುವಕರನ್ನು ಬೆಂಗಳೂರಿಗೆ ಕರೆಸಿ 20 ಲಕ್ಷ ರೂ. ದೋಚಿದ್ದ ಸಿಐಡಿ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ಸೇರಿದಂತೆ ಮೂವರು ಆರೋಪಿಗಳನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಯುವಕರು 25 ಲಕ್ಷ ಹಣದೊಂದಿಗೆ ಮಡಿವಾಳದ ಹೋಟೆಲ್‌ಗೆ ಬಂದಾಗ, ಆರೋಪಿಗಳು ಪೊಲೀಸ್ ಜೀಪ್‌ನಲ್ಲಿ ಬಂದು ಬೆದರಿಕೆ ಹಾಕಿದ್ದಾರೆ. ನಂತರ ಯುವಕರ ಮೇಲೆ ಹಲ್ಲೆ ನಡೆಸಿ ಹಣದೊಂದಿಗೆ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬಾಧಿತ ಯುವಕರು ನೀಡಿದ ದೂರಿನನ್ವಯ ಡಕಾಯಿತಿ ಮತ್ತು ಒಳಸಂಚು ಪ್ರಕರಣ ದಾಖಲಾಗಿದ್ದು, ಮಡಿವಾಳ ಎಸಿಪಿ ವಾಸುದೇವ್ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ. ಆರೋಪಿಗಳ ಹಳೆಯ ಕೃತ್ಯಗಳ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.







Comments