ಕರ್ತವ್ಯದ ವೇಳೆ ಮದ್ಯಪಾರ್ಟಿ: 6 ಪಿಡಿಒ ಸೇರಿ ಸಿಬ್ಬಂದಿ ಅಮಾನತು

ಕರ್ತವ್ಯದ ಸಮಯದಲ್ಲಿ ಸಿದ್ದರಬೆಟ್ಟದ ತಪ್ಪಲಿನಲ್ಲಿ ಮದ್ಯ ಹಾಗೂ ಮಾಂಸ ಸೇವಿಸಿ ಮೋಜು-ಮಸ್ತಿ ಮಾಡಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 6 ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಸೇರಿದಂತೆ ಒಟ್ಟು 9 ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಮಾಧ್ಯಮಗಳಲ್ಲಿ ಈ ವರದಿ ಪ್ರಸಾರವಾದ ಬೆನ್ನಲ್ಲೇ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಅವರ ಸೂಚನೆಯಂತೆ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಾಸಂತಿ ಅಮರ್ ಅವರು ಕಾರಣ ಕೇಳಿ ನೋಟಿಸ್ ನೀಡಿದ ನಂತರ ಈ ಅಮಾನತು ಆದೇಶ ಹೊರಡಿಸಿದ್ದಾರೆ. ಅಮಾನತುಗೊಂಡವರಲ್ಲಿ ಶಿವಗಂಗೆ, ಅಗಳಕುಪ್ಪೆ, ಗೊಲ್ಲಹಳ್ಳಿ, ಮಣ್ಣೆ, ಸೋಂಪುರ ಮತ್ತು ಬೆಟ್ಟಕೋಟೆ ಗ್ರಾ.ಪಂ.ಗಳ ಪಿಡಿಒಗಳು, ಇಬ್ಬರು ಕಾರ್ಯದರ್ಶಿಗಳು ಹಾಗೂ ಒಬ್ಬ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಸೇರಿದ್ದಾರೆ.
ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು 2021 ಅನ್ನು ಉಲ್ಲಂಘಿಸಿ, ಕಚೇರಿ ವೇಳೆಯಲ್ಲಿ ಸಾರ್ವಜನಿಕರಿಗೆ ಲಭ್ಯವಿಲ್ಲದೆ ಬೇಜವಾಬ್ದಾರಿತನ ತೋರಿದ್ದಕ್ಕಾಗಿ ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಈ ಕ್ರಮ ಜರುಗಿಸಲಾಗಿದೆ.







Comments