ಸೂರ್ಯಕುಮಾರ್ ಯಾದವ್ ಬಗ್ಗೆ ನಟಿಯ ಹೇಳಿಕೆ – ಕ್ರಿಕೆಟ್ ವಲಯದಲ್ಲಿ ಚರ್ಚೆ
- sathyapathanewsplu
- Dec 30, 2025
- 1 min read

ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಕಳೆದ ಒಂದು ವರ್ಷದಿಂದ ಫಾರ್ಮ್ ಸಮಸ್ಯೆ ಎದುರಿಸುತ್ತಿರುವ ಅವರ ಕುರಿತು ಬಾಲಿವುಡ್ ನಟಿ ಹಾಗೂ ಮಾಡೆಲ್ ಖುಷಿ ಮುಖರ್ಜಿ ನೀಡಿರುವ ಹೇಳಿಕೆಗಳು ಕ್ರಿಕೆಟ್ ಹಾಗೂ ಮನರಂಜನಾ ವಲಯಗಳಲ್ಲಿ ಚರ್ಚೆಗೆ ಗ್ರಾಸವಾಗಿವೆ.
ನಟಿ ಖುಷಿ ಮುಖರ್ಜಿ ಮಾತನಾಡುತ್ತಾ,
“ಹಲವು ಕ್ರಿಕೆಟಿಗರು ನನ್ನ ಹಿಂದೆ ಬಿದ್ದಿದ್ದರು. ಈ ಪೈಕಿ ಸೂರ್ಯಕುಮಾರ್ ಯಾದವ್ ಸಾಕಷ್ಟು ಬಾರಿ ಮೆಸೇಜ್ ಮಾಡುತ್ತಿದ್ದರು. ಆದರೆ ನಮ್ಮಿಬ್ಬರ ನಡುವೆ ಹೆಚ್ಚಿನ ಮಾತುಕತೆ ನಡೆದಿಲ್ಲ. ನಾನು ಅವರ ಜತೆ ಸಂಪರ್ಕ ಹೊಂದಲು ಬಯಸಲಿಲ್ಲ. ಯಾರೊಂದಿಗೂ ಲಿಂಕ್ ಆಗುವುದು ನನಗೆ ಇಷ್ಟವಿಲ್ಲ. ಹೀಗಾಗಿ ನಮ್ಮ ನಡುವೆ ಯಾವುದೇ ರೀತಿಯ ಸಂಬಂಧವೂ ಇಲ್ಲ,”
ಎಂದು ಸ್ಪಷ್ಟಪಡಿಸಿದ್ದಾರೆ.
ಈ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಡುತ್ತಿದ್ದು, ಅಭಿಮಾನಿಗಳು ವಿಭಿನ್ನ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ. ಇದುವರೆಗೆ ಸೂರ್ಯಕುಮಾರ್ ಯಾದವ್ ಈ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.





Comments