;
top of page

ಕುಕ್ಕೆ ಸುಬ್ರಹ್ಮಣ್ಯ: ಚಂಪಾಷಷ್ಟಿ ಮಹೋತ್ಸವ ಹಿನ್ನಲೆ ಮದ್ಯದಂಗಡಿ ಮುಚ್ಚಲು ಡಿಸಿ ಆದೇಶ

  • Writer: sathyapathanewsplu
    sathyapathanewsplu
  • Nov 25
  • 1 min read
ree

ಸುಬ್ರಹ್ಮಣ್ಯ:

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಪ್ರಸಿದ್ಧ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಡಿಸೆಂಬರ್ 2 ರವರೆಗೆ ನಡೆಯಲಿದ್ದು, ಜಾತ್ರೆಯ ಮುಖ್ಯ ಕಾರ್ಯಕ್ರಮಗಳ ಅಂಗವಾಗಿ ನವೆಂಬರ್ 25 ರಂದು ಪಂಚಮಿ ರಥೋತ್ಸವ ಹಾಗೂ ತೈಲಾಭ್ಯಂಜನ, 26 ರಂದು ಚಂಪಾಷಷ್ಠಿ ಮಹಾರಥೋತ್ಸವ ಆಯೋಜಿಸಲಾಗಿದೆ.


ಈ ಎರಡು ದಿನಗಳಲ್ಲಿ ಸುಮಾರು 50 ರಿಂದ 60 ಸಾವಿರ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆಯಿದೆ. ಭಕ್ತರ ಭದ್ರತೆ, ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನವೆಂಬರ್ 25 ಬೆಳಿಗ್ಗೆ 6 ಗಂಟೆಯಿಂದ 26ರ ರಾತ್ರಿ 12 ಗಂಟೆಯವರೆಗೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ ವ್ಯಾಪ್ತಿಯಲ್ಲಿರುವ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.


ಜಾತ್ರೆಯ ಸಂದರ್ಭದಲ್ಲಿ ಸಮಾಜ ವಿರೋಧಿ ಅಂಶಗಳು ಹಾಗೂ ಮದ್ಯಪಾನದಿಂದ ಉಂಟಾಗುವ ಅಶಾಂತಿಯನ್ನು ತಡೆಯುವುದು ಈ ಆದೇಶದ ಮುಖ್ಯ ಉದ್ದೇಶವಾಗಿದ್ದು, ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತೆಯೊಂದಿಗೆ ಕರ್ತವ್ಯ ನಿರ್ವಹಿಸಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page