ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಸಾಲುಸಾಲು ಹತ್ಯೆ: ಭಾರತದಿಂದ ತೀವ್ರ ಕಳವಳ
- sathyapathanewsplu
- Jan 8
- 1 min read

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲೆ ಹಿಂಸಾಚಾರ ತೀವ್ರಗೊಂಡಿರುವುದು ಗಂಭೀರ ಆತಂಕಕ್ಕೆ ಕಾರಣವಾಗಿದೆ. ಜನವರಿ 5ರಂದು ಒಂದೇ ದಿನ ಕೇವಲ ನಾಲ್ಕು ಗಂಟೆಗಳ ಅಂತರದಲ್ಲಿ ಇಬ್ಬರು ಹಿಂದೂಗಳನ್ನು ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ.
ಲಭ್ಯವಿರುವ ಮಾಹಿತಿಯಂತೆ, ಕಳೆದ 35 ದಿನಗಳ ಅವಧಿಯಲ್ಲಿ ಒಟ್ಟು 11 ಹಿಂದೂಗಳು ಹತ್ಯೆಯಾಗಿದ್ದಾರೆ. ಇದರ ಜೊತೆಗೆ ಹಿಂದೂ ಸಮುದಾಯದ ಮೇಲೆ ದೌರ್ಜನ್ಯ, ಹಲ್ಲೆ ಮತ್ತು ಬೆದರಿಕೆ ಪ್ರಕರಣಗಳು ಹೆಚ್ಚುತ್ತಿರುವುದು ತಿಳಿದುಬಂದಿದೆ. ಇತ್ತೀಚೆಗೆ ವಿಧವೆ ಮಹಿಳೆಯೊಬ್ಬರ ಮೇಲೆ ಗುಂಪು ಅತ್ಯಾಚಾರ ನಡೆದಿರುವ ಘಟನೆ ಕೂಡ ವರದಿಯಾಗಿದ್ದು, ಮಾನವ ಹಕ್ಕುಗಳ ಸ್ಥಿತಿಗತಿಗಳ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸಿವೆ.
ಈ ಎಲ್ಲಾ ಘಟನೆಗಳ ಹಿನ್ನೆಲೆಯಲ್ಲಿ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಅಲ್ಪಸಂಖ್ಯಾತರ ಭದ್ರತೆ ಹಾಗೂ ಮಾನವ ಹಕ್ಕುಗಳ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಂತಾರಾಷ್ಟ್ರೀಯ ಸಮುದಾಯದಿಂದಲೂ ಒತ್ತಡ ಹೆಚ್ಚುತ್ತಿರುವುದು ಗಮನಾರ್ಹ.





Comments