;
top of page

ಶಬರಿಮಲೆ ಯಾತ್ರೆ ಪ್ರಾರಂಭ ಮೊದಲ ದಿನವೇ 1.36 ಲಕ್ಷ ಭಕ್ತರಿಂದ ಅಯ್ಯಪ್ಪನ ದರ್ಶನ

  • Writer: sathyapathanewsplu
    sathyapathanewsplu
  • Nov 18
  • 1 min read
ree

ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ವಾರ್ಷಿಕ ಮಂಡಲ ಯಾತ್ರೆ ಸೋಮವಾರದಿಂದ ವಿಧ್ಯುಕ್ತ ವಾಗಿ ಆರಂಭವಾಯಿತು. ಮೊದಲ ದಿನವೇ 1.36 ಲಕ್ಷ ಭಕ್ತರು ಅಯ್ಯಪ್ಪನ ದರ್ಶನ ಪಡೆದರು.

ಸೋಮವಾರ ಶಬರಿಮಲೆ ಋತುವಿನ ಆರಂಭದ ದಿನವಾದ್ದರಿಂದ ಪ್ರಧಾನ ಆರ್ಚಕರ ನೇತೃತ್ವದಲ್ಲಿ ಸಕಲ ಧಾರ್ಮಿಕ ವಿಧಿ ವಿಧಾನಗಳು ನೆರವೇ ರಿದವು. ಭಾನುವಾರ ಸಂಜೆಯೇ ದೇಗುಲದ ಬಾಗಿಲು ತೆರೆಯಲಾಗಿದ್ದು, ಸೋಮವಾರದಿಂದ 41 ದಿನಗಳ ಮಂಡಲ ಯಾತ್ರೆಗೆ ಚಾಲನೆ ನೀಡಲಾ ಯಿತು. ಈ ಸಮಯದಲ್ಲಿ ಬೇರೆ ಬೇರೆ ರಾಜ್ಯಗಳ ಲಕ್ಷಾಂತರ ಮಂದಿ ಯಾತ್ರೆ ಕೈಗೊಂಡು “ದೇಗುಲಕ್ಕೆ ಭೇಟಿ ನೀಡಲಿದ್ದಾರೆ.

ಶಬರಿಮಲೆ ದೇಗುಲದ ದ್ವಾರಪಾಲಕ ವಿಗ್ರಹಗಳ ಚಿನ್ನಲೇಪಿತ ಕವಚಗಳ ಚಿನ್ನಕ್ಕೆ ಕನ್ನ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ವೈಜ್ಞಾನಿಕ ಪರೀಕ್ಷೆಗಾಗಿ ಕವಚಗಳನ್ನು ಸೋಮವಾರ ಕಳಚಿದ್ದಾರೆ. ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಅಧಿಕಾರಿಗಳ ಸಮ್ಮುಖದಲ್ಲಿ ಸೋಮವಾರ ಮಧ್ಯಾಹ್ನ 1.15ಕ್ಕೆ ಕವಚಗಳನ್ನು ಕಳಚಲಾಯಿತು. 3 ಗಂಟೆವರೆಗೂ ಈ ಕಾರ್ಯ ಮುಂದುವರಿಯಿತು. ಆ ಬಳಿಕ ಅವುಗಳನ್ನು ಮತ್ತೊಂದು ಕೋಣೆಗೆ ಸ್ಥಳಾಂತರಿಸಿ, ತೂಕ ಮಾಡಲಾ ಯಿತು. ನಂತರ ಅವುಗಳ ಮಾದರಿಯನ್ನು ವಿಧಿವಿಜ್ಞಾನ ಪರೀಕ್ಷೆಗಾಗಿ ಕಳಿಸಲಾಯಿತು.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page