ಬೆಳ್ತಂಗಡಿ: ಅಪ್ರಾಪ್ತ ಬಾಲಕರ ಮೇಲೆ ಹಲ್ಲೆ ಆರೋಪ - ಜುವೆಲ್ಲರಿ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು
- sathyapathanewsplu
- 1 day ago
- 1 min read

ಬೆಳ್ತಂಗಡಿ: ಪಟ್ಟಣದ ಜುವೆಲ್ಲರಿಯೊಂದರ ಹಿಂಭಾಗದಲ್ಲಿ ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತ ಬಾಲಕರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿಸೆಂಬರ್ 15, 2025 ರಂದು ಸಂಜೆ ಈ ಘಟನೆ ಸಂಭವಿಸಿದೆ. ದೂರಿನ ಪ್ರಕಾರ, ಅಪ್ರಾಪ್ತ ವಯಸ್ಸಿನ ಪಿರ್ಯಾದಿದಾರರು ತಮ್ಮ ಇಬ್ಬರು ಸ್ನೇಹಿತರೊಂದಿಗೆ ಬೆಳ್ತಂಗಡಿ ಪಟ್ಟಣದ ಜುವೆಲ್ಲರಿಯೊಂದರ ಹಿಂಭಾಗದ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ಅಲ್ಲಿಗೆ ಬಂದ ಜುವೆಲ್ಲರಿ ಸಿಬ್ಬಂದಿ, "ನೀವು ವಿಡಿಯೋ ಮಾಡುತ್ತಿದ್ದೀರಿ" ಎಂದು ಆರೋಪಿಸಿ ಮೂವರು ಬಾಲಕರನ್ನು ತಡೆದು ನಿಲ್ಲಿಸಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸ್ ಕ್ರಮ:
ಬಾಲಕರು ನೀಡಿದ ದೂರಿನ ಆಧಾರದ ಮೇಲೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
* ಅಕ್ರಮ ಸಂಖ್ಯೆ: 143/2025 ಭಾರತೀಯ ನ್ಯಾಯ ಸಂಹಿತೆ (BNS-2023) ಅಡಿಯಲ್ಲಿ ಕಲಂ 126(2) (ಅಕ್ರಮ ತಡೆ) ಮತ್ತು 115(1) (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಪ್ರತಿ ದೂರು ಸಲ್ಲಿಕೆ:
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜುವೆಲ್ಲರಿ ಸಿಬ್ಬಂದಿಯವರು ಕೂಡ ಬಾಲಕರ ವಿರುದ್ಧ ಡಿಸೆಂಬರ್ 17 ರಂದು ಪ್ರತ್ಯೇಕ ದೂರನ್ನು ನೀಡಿದ್ದಾರೆ. ಈ ಎರಡೂ ದೂರುಗಳ ಕುರಿತು ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.






Comments