;
top of page

ಮೈಸೂರು: ಬಲೂನ್ ತುಂಬಿಸುವ ನೈಟ್ರೋಜನ್ ಗ್ಯಾಸ್ ಸಿಲಿಂಡರ್ ಸ್ಫೋಟ; ಓರ್ವ ಸಾವು, ಮೂವರಿಗೆ ಗಂಭೀರ ಗಾಯ

  • Writer: sathyapathanewsplu
    sathyapathanewsplu
  • Dec 26, 2025
  • 1 min read

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಅರಮನೆಯ ಮುಂಭಾಗದಲ್ಲಿ ಗುರುವಾರ (ಡಿ.25) ರಾತ್ರಿ ಭೀಕರ ದುರಂತವೊಂದು ಸಂಭವಿಸಿದೆ. ಬಲೂನ್‌ಗಳಿಗೆ ನೈಟ್ರೋಜನ್ ಗ್ಯಾಸ್ ತುಂಬಿಸುವ ಸಂದರ್ಭದಲ್ಲಿ ಸಿಲಿಂಡರ್ ಸ್ಫೋಟಗೊಂಡು ಬಲೂನ್ ವ್ಯಾಪಾರಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಫೋಟದ ತೀವ್ರತೆಗೆ ಸಿಲಿಂಡರ್ ಛಿದ್ರ ಛಿದ್ರವಾಗಿದ್ದು, ಸುತ್ತಮುತ್ತಲಿದ್ದ ಪ್ರವಾಸಿಗರು ಹಾಗೂ ಸಾರ್ವಜನಿಕರು ತೀವ್ರ ಆತಂಕಕ್ಕೊಳಗಾಗಿದ್ದಾರೆ.

ಅರಮನೆಯ ಜಯ ಮಾರ್ತಾಂಡ ಗೇಟ್ ಬಳಿ ಈ ಘಟನೆ ನಡೆದಿದ್ದು, ಬಲೂನ್ ಮಾರಾಟಗಾರ ಗ್ಯಾಸ್ ತುಂಬಿಸುತ್ತಿದ್ದಾಗ ಆಕಸ್ಮಿಕವಾಗಿ ಈ ಸ್ಫೋಟ ಸಂಭವಿಸಿದೆ. ಮೃತ ವ್ಯಕ್ತಿಯ ದೇಹವು ಸ್ಫೋಟದ ಭೀಕರತೆಗೆ ಗುರುತು ಸಿಗದಂತೆ ಛಿದ್ರಗೊಂಡಿದೆ. ಇದೇ ವೇಳೆ ಸ್ಥಳದಲ್ಲಿದ್ದ ಬೆಂಗಳೂರು ಮೂಲದ ಲಕ್ಷ್ಮಿ ಎಂಬವರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ನಂಜನಗೂಡಿನ ಮಂಜುಳಾ, ಕೋಲ್ಕತ್ತಾ ಮೂಲದ ಶಾಹಿನಾ ಶಬ್ಬಿರ್ ಮತ್ತು ರಾಣೆಬೆನ್ನೂರಿನ ಕೊಟ್ರೇಶ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ನಡೆದ ಸ್ಥಳಕ್ಕೆ ಕೂಗಳತೆ ದೂರದಲ್ಲಿದ್ದ ಕೆ.ಆರ್. ಠಾಣೆಯ ಪೊಲೀಸರು ತಕ್ಷಣವೇ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದ ಪೊಲೀಸರು, ಸ್ಫೋಟದ ಸ್ಥಳವನ್ನು ಪರಿಶೀಲನೆ ನಡೆಸಿದ್ದಾರೆ. ಜನನಿಬಿಡ ಪ್ರದೇಶವಾದ ಅರಮನೆಯ ಸುತ್ತಮುತ್ತ ಇಂತಹ ನೈಟ್ರೋಜನ್ ಬಲೂನ್ ಮಾರಾಟ ಮಾಡುವುದು ಎಷ್ಟು ಸುರಕ್ಷಿತ ಎಂಬ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page