ರಾಜ್ಯಕ್ಕೆ 4ನೇ ರ‍್ಯಾಂಕ್ ಪಡೆದಿದ್ದ ಪ್ರತಿಭಾನ್ವಿತ ವಿದ್ಯಾರ್ಥಿನಿ ಅಭಿಜ್ಞಾ ಭಟ್ ನಿಧನ

ಸುಳ್ಯದ ಖ್ಯಾತ ಇಎನ್‌ಟಿ ತಜ್ಞ ವೈದ್ಯರಾದ ಡಾ. ರವಿಶಂಕರ್ ಅವರ ಹಿರಿಯ ಪುತ್ರಿ ಅಭಿಜ್ಞಾ ಭಟ್ ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 10ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅಭಿಜ್ಞಾ ಭಟ್ ಅವರು ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 596 ಅಂಕಗಳನ್ನು ಪಡೆದಿದ್ದರು. ಆ ಮೂಲಕ ರಾಜ್ಯಕ್ಕೆ 4ನೇ ರ‍್ಯಾಂಕ್ ಗಳಿಸಿ, ಸುಳ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತಂದಿದ್ದರು.
ಅತ್ಯುತ್ತಮ ಶೈಕ್ಷಣಿಕ ಸಾಧನೆಯ ಮೂಲಕ ಭವಿಷ್ಯದ ಭರವಸೆಯಾಗಿದ್ದ ಅಭಿಜ್ಞಾ ಅವರ ಅಕಾಲಿಕ ನಿಧನಕ್ಕೆ ಕುಟುಂಬಸ್ಥರು, ಶಿಕ್ಷಕರು ಹಾಗೂ ಸ್ನೇಹಿತರು ತೀವ್ರ ಸಂತಾಪ ಸೂಚಿಸಿದ್ದಾರೆ.







Comments