ನಟ ವಿಜಯ್‌ಗೆ ನಾಮಪತ್ರ ಸಂಕಷ್ಟ: 105 ಕೋಟಿ ರೂ. ಆಸ್ತಿ ವಿವರದಲ್ಲಿ ವ್ಯತ್ಯಾಸ!

ನಟ ಮತ್ತು ತಮಿಳಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ವಿಜಯ್ ಅವರಿಗೆ ಸಂಕಷ್ಟ ಎದುರಾಗಿದ್ದು, ಅವರ ನಾಮಪತ್ರ ತಿರಸ್ಕೃತಗೊಳ್ಳುವ ಭೀತಿ ಎದುರಾಗಿದೆ. ಪೆರಂಬೂರ್ ಮತ್ತು ತಿರುಚ್ಚಿ ಪೂರ್ವ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಆಸ್ತಿ ವಿವರಗಳಲ್ಲಿ ಸುಮಾರು 105 ಕೋಟಿ ರೂಪಾಯಿಗಳ ಬೃಹತ್ ವ್ಯತ್ಯಾಸ ಕಂಡುಬಂದಿದೆ. ಈ ಲೋಪವನ್ನು ಮದ್ರಾಸ್ ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು, ಇದನ್ನು ಅಕ್ರಮ ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿದೆ.

ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿರುವುದು ಮಾತ್ರವಲ್ಲದೆ, ತಮ್ಮ ಮೇಲಿರುವ ಕ್ರಿಮಿನಲ್ ಪ್ರಕರಣಗಳನ್ನು ಮರೆಮಾಚಿರುವ ಆರೋಪವೂ ವಿಜಯ್ ಅವರ ಮೇಲಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಚುನಾವಣಾ ಆಯೋಗ ಮತ್ತು ಆದಾಯ ತೆರಿಗೆ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ. ಒಂದು ವೇಳೆ ಆಸ್ತಿ ವ್ಯತ್ಯಾಸ ದೃಢಪಟ್ಟರೆ ವಿಜಯ್ ಅವರ ರಾಜಕೀಯ ಜೀವನದ ಆರಂಭದಲ್ಲೇ ದೊಡ್ಡ ಹಿನ್ನಡೆಯಾಗುವ ಸಾಧ್ಯತೆಯಿದೆ.







Comments