ಶಿವಮೊಗ್ಗ: ರೌಡಿಶೀಟರ್ ಕೊಲೆ ಆರೋಪಿ ಮೇಲೆ ಪೊಲೀಸ್ ಫೈರಿಂಗ್, ಮೆಗ್ಗಾನ್‌ಗೆ ದಾಖಲು

ಶಿವಮೊಗ್ಗದ ರಾಮಿನಕೊಪ್ಪದಲ್ಲಿ ರೌಡಿಶೀಟರ್ ಕಿರಣ್ ಅಲಿಯಾಸ್ ಕುಳ್ಳಿ ಕಿರಣ್‌ನನ್ನು ಭಾನುವಾರ ಸಂಜೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಉಮೇಶ್ ನಾಯ್ಕ್ (27) ಬಂಧನಕ್ಕೆ ಲಿಂಗಾಪುರಕ್ಕೆ ತೆರಳಿದ್ದ ಪೊಲೀಸರ ಮೇಲೆಯೇ ಆರೋಪಿ ಹಲ್ಲೆಗೆತ್ನಿಸಿದ್ದಾನೆ.

ಆರೋಪಿ ಉಮೇಶ್, ಪೊಲೀಸ್ ಸಿಬ್ಬಂದಿ ತಮ್ಮಣ್ಣ ಜಂಬಗಿ ಅವರ ಮೇಲೆ ದಾಳಿ ನಡೆಸಿದಾಗ ತುಂಗಾನಗರ ಇನ್ಸ್‌ಪೆಕ್ಟರ್ ಗುರುರಾಜ್ ಕರ್ಕಿ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದರು. ಆದಾಗ್ಯೂ ಆರೋಪಿ ಮತ್ತೆ ಹಲ್ಲೆಗೆ ಮುಂದಾದಾಗ, ಆತ್ಮರಕ್ಷಣೆಗಾಗಿ ಇನ್ಸ್‌ಪೆಕ್ಟರ್ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.
ಗುಂಡೇಟಿನಿಂದ ಗಾಯಗೊಂಡ ಉಮೇಶ್ ಹಾಗೂ ಗಾಯಗೊಂಡ ಪೊಲೀಸ್ ಸಿಬ್ಬಂದಿ ತಮ್ಮಣ್ಣ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







Comments