ಮದ್ಯಪ್ರಿಯರಿಗೆ ಶಾಕ್: ಮದ್ಯದ ಬೆಲೆ ಏರಿಕೆಗೆ ಹೊಸ ಸೂತ್ರ ಪತ್ತೆ ಹಚ್ಚಿದ ಸರ್ಕಾರ
- Mar 6
- 1 min read

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್‌ನಲ್ಲಿ ಅಬಕಾರಿ ಇಲಾಖೆಯ ಆದಾಯ ಹೆಚ್ಚಿಸಲು ಹೊಸ ತಂತ್ರವೊಂದನ್ನು ರೂಪಿಸಿದ್ದಾರೆ. ಇನ್ನು ಮುಂದೆ ಮದ್ಯದ ಬೆಲೆಯ ಮೇಲೆ ನೇರವಾಗಿ ತೆರಿಗೆ ವಿಧಿಸುವ ಬದಲು, ಮದ್ಯದಲ್ಲಿರುವ ಆಲ್ಕೋಹಾಲ್ ಅಂಶದ ಆಧಾರದ ಮೇಲೆ ತೆರಿಗೆಯನ್ನು ಲೆಕ್ಕ ಹಾಕಲು ಸರ್ಕಾರ ನಿರ್ಧರಿಸಿದೆ. ಈ ಹೊಸ ವ್ಯವಸ್ಥೆಯು ರಾಜ್ಯದ ರಾಜಸ್ವ ಸಂಗ್ರಹಣೆಯಲ್ಲಿ ಮಹತ್ವದ ಬದಲಾವಣೆ ತರುವ ನಿರೀಕ್ಷೆಯಿದೆ.

ರಾಜ್ಯಾದ್ಯಂತ ಏಕರೂಪದ ಅಬಕಾರಿ ಸುಂಕವನ್ನು ಜಾರಿಗೆ ತರಲು ಉದ್ದೇಶಿಸಲಾಗಿದ್ದು, ಎಕ್ಸ್-ಫ್ಯಾಕ್ಟರಿ ದರಪಟ್ಟಿಯ ಆಧಾರದ ಮೇಲೆ ತೆರಿಗೆಯನ್ನು ಹಂತ-ಹಂತವಾಗಿ ಏರಿಕೆ ಮಾಡಲಾಗುತ್ತದೆ. ಮದ್ಯದ ಬೆಲೆಯನ್ನು ಒಮ್ಮೆಲೇ ಹೆಚ್ಚಿಸಿ ಗ್ರಾಹಕರಿಗೆ ಹೊರೆಯಾಗದಂತೆ ನೋಡಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ. ಈ ಮೂಲಕ ಮದ್ಯದ ಮಾರಾಟ ಮತ್ತು ತೆರಿಗೆಯ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ.
ಕಳೆದ ವರ್ಷ ಫೆಬ್ರವರಿ ಅಂತ್ಯದ ವೇಳೆಗೆ ಅಬಕಾರಿ ಇಲಾಖೆಯು 36,492 ಕೋಟಿ ರೂಪಾಯಿಗಳ ಆದಾಯವನ್ನು ಸಂಗ್ರಹಿಸಿ ಶೇ. 12.7 ರಷ್ಟು ಬೆಳವಣಿಗೆ ಸಾಧಿಸಿತ್ತು. ಆದರೆ, ಪ್ರಸಕ್ತ ಸಾಲಿನಲ್ಲಿ ಈ ಗುರಿಯನ್ನು ಮತ್ತಷ್ಟು ಹೆಚ್ಚಿಸಲಾಗಿದ್ದು, 2026-27ನೇ ಸಾಲಿಗೆ ಬರೋಬ್ಬರಿ 45,000 ಕೋಟಿ ರೂಪಾಯಿ ರಾಜಸ್ವ ಸಂಗ್ರಹಿಸುವ ಬೃಹತ್ ಗುರಿಯನ್ನು ಸರ್ಕಾರ ಹಾಕಿಕೊಂಡಿದೆ.







Comments