ಅಮೆರಿಕದಿಂದ ಭಾರತದ ಸರಕುಗಳ ಮೇಲಿನ ಸುಂಕ ಭಾರಿ ಕಡಿತ: ಮೋದಿಯವರಿಂದ ಟ್ರಂಪ್‌ಗೆ ಧನ್ಯವಾದ
- sathyapathanewsplu
- 2 days ago
- 1 min read

ವಾಷಿಂಗ್ಟನ್/ನವದೆಹಲಿ: ಯುರೋಪಿಯನ್ ಒಕ್ಕೂಟದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಭಾರತ ಸಹಿ ಹಾಕಿದ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತೀಯ ಸರಕುಗಳ ಮೇಲಿನ ಆಮದು ಸುಂಕವನ್ನು ಗಣನೀಯವಾಗಿ ಕಡಿತಗೊಳಿಸಿದ್ದಾರೆ. ರಷ್ಯಾದಿಂದ ಕಚ್ಚಾತೈಲ ಆಮದು ಮಾಡುತ್ತಿದ್ದ ಹಿನ್ನೆಲೆಯಲ್ಲಿ ಈ ಹಿಂದೆ ವಿಧಿಸಲಾಗಿದ್ದ ದಂಡವೂ ಸೇರಿ ಒಟ್ಟು 50% ರಷ್ಟಿದ್ದ ಸುಂಕವನ್ನು ಈಗ ಕೇವಲ 18% ಕ್ಕೆ ಇಳಿಸಲಾಗಿದೆ.
ಈ ಐತಿಹಾಸಿಕ ತೀರ್ಮಾನದಿಂದಾಗಿ ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳಿಗೆ ಹೋಲಿಸಿದರೆ ಭಾರತಕ್ಕೆ ಅಮೆರಿಕ ಮಾರುಕಟ್ಟೆಯಲ್ಲಿ ಹೆಚ್ಚಿನ ಆದ್ಯತೆ ಲಭಿಸಿದಂತಾಗಿದೆ. ಈ ನಿರ್ಧಾರವನ್ನು ಸ್ವಾಗತಿಸಿರುವ ಪ್ರಧಾನಿ ನರೇಂದ್ರ ಮೋದಿ, ಟ್ವೀಟ್ ಮೂಲಕ ಟ್ರಂಪ್‌ಗೆ ಧನ್ಯವಾದ ಅರ್ಪಿಸಿದ್ದಾರೆ. ಈ ತೆರಿಗೆ ಕಡಿತವು ಉಭಯ ದೇಶಗಳ ಆರ್ಥಿಕತೆಗೆ ವರದಾನವಾಗಲಿದ್ದು, ವ್ಯಾಪಾರ ವಹಿವಾಟು ವೃದ್ಧಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಶುಭ ಸುದ್ದಿಯ ಬೆನ್ನಲ್ಲೇ ಭಾರತೀಯ ಷೇರು ಮಾರುಕಟ್ಟೆ ಪುಟಿದೇಳುವ ಮೂಲಕ ಧನಾತ್ಮಕ ಪ್ರತಿಕ್ರಿಯೆ ನೀಡಿದೆ.






Comments